PM Modi Rozgar Mela: ಯುಪಿಎ ಸರ್ಕಾರಕ್ಕಿಂತ 1.5 ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇವೆ: ಪಿಎಂ ನರೇಂದ್ರ ಮೋದಿ - Vistara News

ದೇಶ

PM Modi Rozgar Mela: ಯುಪಿಎ ಸರ್ಕಾರಕ್ಕಿಂತ 1.5 ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇವೆ: ಪಿಎಂ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶಾದ್ಯಂತ ನಡೆದ ರೋಜ್‌ಗಾರ್‌ ಮೇಳದಲ್ಲಿ (PM Modi Rozgar Mela) ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿ ಸಂದೇಶ ನೀಡಿದರು.

VISTARANEWS.COM


on

PM Modi Rozgar Mela
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ತಮ್ಮ ಸರ್ಕಾರ ಕಳೆದ 10 ವರ್ಷಗಳ ಅವಧಿಯಲ್ಲಿ ತಮ್ಮ ಹಿಂದಿನ ಯುಪಿಎ ಸರ್ಕಾರ ನೀಡಿದ್ದಕ್ಕಿಂತ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ಯುವಜನತೆಗೆ ಒದಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ರೋಜ್‌ಗಾರ್‌ ಮೇಳ (PM Modi Rozgar Mela) ಉದ್ಘಾಟಿಸಿ ಹೇಳಿದ್ದಾರೆ.

ಇಂದು ದೇಶಾದ್ಯಂತ ನಡೆದ ರೋಜ್‌ಗಾರ್ ಮೇಳ (Rozgar Mela) ಕಾರ್ಯಕ್ರಮವೊಂದರಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದು ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ಹಸ್ತಾಂತರಿಸಿದರು. ಉದ್ಯೋಗ ನೇಮಕಾತಿಗಳನ್ನು ಪೂರ್ಣಗೊಳಿಸಲು ಹಿಂದಿನ ಸರ್ಕಾರ ತುಂಬಾ ವಿಳಂಬ ಮಾಡಿದೆ ಹಾಗೂ ಲಂಚದ ರೂಢಿಯನ್ನು ಬೆಳೆಸಿದೆ ಎಂದು ಪ್ರಧಾನಿ ಆರೋಪಿಸಿದರು.

ತಮ್ಮ ಸರ್ಕಾರವು ಪಾರದರ್ಶಕತೆಯನ್ನು ತಂದಿದೆ. ನೇಮಕಾತಿಯನ್ನು ಕಾಲಮಿತಿಯಲ್ಲಿ ಮಾಡಲಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲಾಗುತ್ತಿದೆ. ಈಗ ಎಲ್ಲರಿಗೂ ಸಮಾನ ಅವಕಾಶವಿದೆ ಎಂಬುದು ಯುವಜನತೆಯ ಅರಿವಿಗೆ ಬಂದಿದೆ. ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಮೂಲಕ ಸರ್ಕಾರಿ ವ್ಯವಸ್ಥೆಯಲ್ಲಿ ತಮಗಾಗಿ ಸ್ಥಾನವನ್ನು ಕಂಡುಕೊಳ್ಳಬಹುದು ಎಂದು ಮೋದಿ ಹೇಳಿದರು.

ಒಂದು ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಯೋಜನೆಯಾಗಿರಲಿ, ಅಥವಾ ಮೂಲಸೌಕರ್ಯದಲ್ಲಿ ಬೃಹತ್ ಹೂಡಿಕೆಯಾಗಿರಲಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳು ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ. 1.25 ಲಕ್ಷಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳೊಂದಿಗೆ, ಭಾರತವು ಈ ವಲಯದಲ್ಲಿ ಮೂರನೇ ಅತಿದೊಡ್ಡ ಉದ್ಯೋಗ ವ್ಯವಸ್ಥೆಯಾಗಿದೆ. ಯುವಜನ ಇನ್ನೂ ಸಣ್ಣ ನಗರಗಳಲ್ಲಿ ಹೊಸ ಸಂಸ್ಥೆಗಳನ್ನು ಪ್ರಾರಂಭಿಸುತ್ತಿದ್ದಾರೆ. ಇದು ಲಕ್ಷಗಟ್ಟಲೆ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು.

ಸರ್ಕಾರವು ಸ್ಟಾರ್ಟ್‌ಅಪ್‌ಗಳಿಗೆ ತೆರಿಗೆ ರಿಯಾಯಿತಿಗಳನ್ನು ವಿಸ್ತರಿಸಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ ₹1 ಲಕ್ಷ ಕೋಟಿ ನಿಧಿಯನ್ನು ಘೋಷಿಸಿದೆ ಎಂದರು. ಹಿಂದಿನ ಸರ್ಕಾರಗಳು ರೈಲ್ವೆಗೆ ಸರಿಯಾದ ಗಮನ ನೀಡಿಲ್ಲ. ಸಾಮಾನ್ಯ ಜನರ ನಿರೀಕ್ಷೆಗಳನ್ನು ಅವರು ನಿರ್ಲಕ್ಷಿಸಿದ್ದರು. ಆದರೆ ಈಗ ಇಡೀ ವಲಯ ಪರಿವರ್ತನೆಯ ಹಾದಿಯಲ್ಲಿದೆ. ಎಂದು ಮೋದಿ ಹೇಳಿದರು.

ಈ ಸಂದರ್ಭದಲ್ಲಿ ಅವರು ರಾಜಧಾನಿಯಲ್ಲಿ ಸಮಗ್ರ ಸಂಕೀರ್ಣ “ಕರ್ಮಯೋಗಿ ಭವನ”ದ 1ನೇ ಹಂತದ ಶಂಕುಸ್ಥಾಪನೆ ಮಾಡಿದರು. ಈ ಸಂಕೀರ್ಣವು ʼಮಿಷನ್ ಕರ್ಮಯೋಗಿ’ಯ ವಿವಿಧ ವಿಭಾಗಗಳ ನಡುವೆ ಸಹಯೋಗವನ್ನು ಉತ್ತೇಜಿಸುತ್ತದೆ.

ರೋಜ್‌ಗಾರ್‌ ಮೇಳದಲ್ಲಿ ನೇಮಕಗೊಂಡವರು ಕಂದಾಯ ಇಲಾಖೆ, ಗೃಹ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಪರಮಾಣು ಶಕ್ತಿ ಇಲಾಖೆ, ರಕ್ಷಣಾ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ರೈಲ್ವೆ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸೇವೆಗೆ ಸೇರಿಕೊಳ್ಳುತ್ತಾರೆ. ಈ ಮೆಗಾ ರೋಜ್‌ಗಾರ್ ಮೇಳ ದೇಶಾದ್ಯಂತ 47 ಸ್ಥಳಗಳಲ್ಲಿ ನಡೆಯಲಿದೆ.

ರೋಜ್‌ಗಾರ್ ಮೇಳವು ದೇಶದಲ್ಲಿ ಉದ್ಯೋಗ ಸೃಷ್ಟಿಯ ಈಡೇರಿಕೆಗೆ ಸರ್ಕಾರದ ಹೆಜ್ಜೆಯಾಗಿದೆ. ಈ ಉದ್ಯೋಗ ಮೇಳಗಳು ಮತ್ತಷ್ಟು ಉದ್ಯೋಗ ಸೃಷ್ಟಿಯ ಮೂಲಕ ಯುವಜನರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಭಾಗವಹಿಸುವಿಕೆಗಾಗಿ ಲಾಭದಾಯಕ ಅವಕಾಶಗಳನ್ನು ಒದಗಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು/UTಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ.

ಇದನ್ನೂ ಓದಿ: Rozgar Mela: ರೋಜಗಾರ್ ಮೇಳದಡಿ 7 ಲಕ್ಷ ಯುವಕರಿಗೆ ಉದ್ಯೋಗ; ಪ್ರಲ್ಹಾದ್‌ ಜೋಶಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

GDP Growth : 2022-23ರ ಮೂರನೇ ತ್ರೈಮಾಸಿಕದಲ್ಲಿ ಶೇ.4.3ರಷ್ಟಿತ್ತು ಹಾಗೂ ಈ ಬಾರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

VISTARANEWS.COM


on

Modi GDP
Koo

ನವದಹೆಲಿ : ಭಾರತದ ಜಿಡಿಪಿಯು 2023-24ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4ರಷ್ಟು ಭರ್ಜರಿ ಪ್ರಗತಿಯಾಗಿರುವುದಕ್ಕೆ (GDP Growth) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟರ್​ ಖಾತೆಯ ಮೂಲಕ ಅವರು ಆರ್ಥಿಕ ಬೆಳವಣಿಗೆಯ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.

“2023-24ರ ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು ಮತ್ತು ವಿಕಸಿತ್​ ಭಾರತವನ್ನು ರಚಿಸಲು ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

ನವದೆಹಲಿ : ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4 ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ ಎಂದು ಹೇಳಲಾಗಿದೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4 ರಷ್ಟು ಬೆಳವಣಿಗೆಯ ದರವನ್ನು ತೋರಿಸುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ.

ಇದನ್ನೂ ಓದಿ : Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ.

ಇದರ ಪರಿಣಾಮವಾಗಿ, ಸಾಂಖ್ಯಿಕ ಸಚಿವಾಲಯವು ಈಗ ಪೂರ್ಣ ವರ್ಷದ ಜಿಡಿಪಿ ಬೆಳವಣಿಗೆಯು ಅಂದಾಜು ಶೇಕಡಾಕ 7.3ಕ್ಕಿಂತ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಿದೆ.. ಎರಡನೇ ಮುಂಗಡ ಅಂದಾಜಿನ ಪ್ರಕಾರ 2023-24ನೇ ಸಾಲಿಗೆ ಜಿಡಿಪಿ ಬೆಳವಣಿಗೆ ದರ ಶೇ.7.6ರಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ದೃಢಪಡಿಸಿದೆ.

Continue Reading

ದೇಶ

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Nitasha Kaul : ವಿದೇಶಿ ಪ್ರಜೆಗಳನ್ನು ಭಾರತಕ್ಕೆ ಬಿಡುವ ವಿಚಾರವು ಸಾರ್ವಭೌಮತೆಗೆ ಸಂಬಂಧಿಸಿದ ವಿಚಾರ ಎಂದು ಕೇಂದ್ರ ಸರ್ಕಾರ ಹೇಳಿದೆ.

VISTARANEWS.COM


on

Nitasha Kaul
Koo

ನವದೆಹಲಿ: ಕಾಶ್ಮೀರ ಮೂಲದ ಬ್ರಿಟನ್​ ಪ್ರಜೆ ನಿತಾಶಾ ಕೌಲ್ (Nitasha Kaul ) ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್​ ಕಳುಹಿಸಿರುವ ತನ್ನ ನಿರ್ಧಾರವನ್ನು ವಿದೇಶಾಂಗ ಸಚಿವಾಲಯ ಸಮರ್ಥಿಸಿಕೊಂಡಿದ್ದು ಅದಕ್ಕೆ ಕಾರಣವನ್ನು ಇದೀಗ ಬಹಿರಂಗ ಮಾಡಿದೆ. ವಿದೇಶಿ ಪ್ರಜೆಗಳ ಭಾರತೀಯ ಪ್ರವೇಶವು ದೇಶದ ಸಾರ್ವಭೌಮ ನಿರ್ಧಾರ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

ವಿದೇಶಾಂಗ ಸಚಿವಾಲಯದ ವಾರದ ಮಾಧ್ಯಮಗೋಷ್ಠಿಯಲ್ಲಿ, ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್, “ಈ ನಿರ್ದಿಷ್ಟ ಬ್ರಿಟನ್​ ಪ್ರಜೆ (ನಿತಾಶಾ ಕೌಲ್) ಫೆಬ್ರವರಿ 22 ರಂದು ಭಾರತಕ್ಕೆ ಬಂದರು. ನಿಮಗೆ ತಿಳಿದಿರುವಂತೆ, ನಮ್ಮ ದೇಶಕ್ಕೆ ವಿದೇಶಿ ಪ್ರಜೆಗಳ ಪ್ರವೇಶವು ಸಾರ್ವಭೌಮ ನಿರ್ಧಾರವಾಗಿದೆ …” ಎಂದು ಹೇಳಿದ್ದಾರೆ.

ಯುಕೆ ಮೂಲದ ಭಾರತೀಯ ಮೂಲದ ಶಿಕ್ಷಣತಜ್ಞೆ ಮತ್ತು ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಭಾರತದಿಂದ ಗಡೀಪಾರು ಮಾಡಲಾಗಿತ್ತು. ಸಾಂವಿಧಾನಿಕ ಹಕ್ಕುಗಳ ಕುರಿತು ಎರಡು ದಿನಗಳ ಸಮಾವೇಶಕ್ಕೆ ಕರ್ನಾಟಕ ಸರ್ಕಾರವು ತನ್ನನ್ನು ಆಹ್ವಾನಿಸಿದೆ ಎಂದು ಕೌಲ್ ಹೇಳಿಕೊಂಡಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡಬೇಕಿದದ್ದ ನನಗೆ ಪ್ರವೇಶ ನಿರಾಕರಿಸಲಾಗಿದೆ. ಕರ್ನಾಟಕ ಸರ್ಕಾರದ ಗೌರವಾನ್ವಿತ ಪ್ರತಿನಿಧಿಯಾಗಿ ನನ್ನನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರವು ನನಗೆ ಪ್ರವೇಶವನ್ನು ನಿರಾಕರಿಸಿತು. ನನ್ನ ಎಲ್ಲಾ ದಾಖಲೆಗಳು ಅಧಿಕೃತ ಮತ್ತು ಪ್ರಸ್ತುತ (ಯುಕೆ ಪಾಸ್ಪೋರ್ಟ್ ಮತ್ತು ಒಸಿಐ) ” ಎಂದು ಕೌಲ್ ಫೆಬ್ರವರಿ 25 ರಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದರು.

ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ದೆಹಲಿಯಿಂದ ಆದೇಶಗಳನ್ನು ಬಂದಿದೆ ಎಂದು ವಲಸೆ ಅಧಿಕಾರಿಗಳು ತಿಳಿಸಿದ್ದರು. ಪ್ರವೇಶ ನಿರಾಕರಣೆ ಕುರಿತು ನನಗೆ ಯಾವುದೇ ಕಾರಣ ನೀಡಿಲ್ಲ. ನನ್ನ ಪ್ರಯಾಣದ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಮಾಡಿತ್ತು. ನನ್ನ ಬಳಿ ಅಧಿಕೃತ ಪತ್ರವಿತ್ತು. ನನ್ನನ್ನು ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ದೆಹಲಿಯಿಂದ ನನಗೆ ಮುಂಚಿತವಾಗಿ ಯಾವುದೇ ಸೂಚನೆ ಅಥವಾ ಮಾಹಿತಿ ಬಂದಿಲ್ಲ” ಎಂದು ಕೌಲ್ ತಮ್ಮ ಪೋಸ್ಟ್​​ನಲ್ಲಿ ತಿಳಿಸಿದ್ದರು.

ಇದನ್ನೂ ಓದಿ : GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

ನಿತಾಶಾ ಕೌಲ್ ಅವರನ್ನು ಆಹ್ವಾನಿಸಿದ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದ ವಿಶ್ವ ಹಿಂದೂ ಪರಿಷದ್​ ಮುಖಂಡ ಗಿರೀಶ್ ಭಾರದ್ವಾಜ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ನಿತಾಶಾ ಕೌಲ್ ಅವರ ಒಸಿಐ ಕಾರ್ಡ್ ಅನ್ನು ರದ್ದುಗೊಳಿಸುವಂತೆ ಸಚಿವಾಲಯವನ್ನು ಕೋರಿದ್ದರು. “ನಮ್ಮ ದೇಶದ ಹಿತಾಸಕ್ತಿಗಳಿಗೆ ವಿರುದ್ಧವಾದ ದುರುದ್ದೇಶಪೂರಿತ ಕಾರ್ಯಸೂಚಿಯೊಂದಿಗೆ ಅವರು ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಾರೆ. ಭಾರತದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳಿಗೆ ಡಾ. ಕೌಲ್ ಅವರನ್ನು ಅತಿಥಿಯಾಗಿ ಆಹ್ವಾನಿಸದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಬೇಕು” ಎಂದು ಭಾರದ್ವಾಜ್ ಬರೆದಿದ್ದಾರೆ.

ನಿತಾಶಾ ವಾಪಸ್;‌ ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಬೆಂಗಳೂರಿನಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಲಂಡನ್‌ ಮೂಲದ ಲೇಖಕಿ ನಿತಾಶಾ ಕೌಲ್ (Nitasha Kaul) ಅವರನ್ನು ವಲಸೆ ಅಧಿಕಾರಿಗಳು (Immigration Officers) ಬೆಂಗಳೂರು ವಿಮಾನ ನಿಲ್ದಾಣದಿಂದ ವಾಪಸ್‌ ಕಳುಹಿಸಿದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರ ಶುರುವಾಗಿದೆ. ಭಾರತ ವಿರೋಧಿ ಮನಸ್ಥಿತಿಯ ಲೇಖಕಿಯನ್ನು ವಾಪಸ್‌ ಕಳುಹಿಸಲಾಗಿದೆ ಎಂದ ಬಿಜೆಪಿ (BJP) ಹೇಳಿದರೆ, ಕೇಂದ್ರ ಸರ್ಕಾರವು ರಾಜ್ಯಕ್ಕೆ ಮಾಡಿದ ಅವಮಾನ ಎಂದು ಕಾಂಗ್ರೆಸ್‌ (Congress) ದೂರಿದೆ.

“ನಿತಾಶಾ ಕೌಲ್‌ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ, ಸಮರ್ಪಕವಾದ ಕಾರಣ ನೀಡದೆ ಅವರನ್ನು ವಾಪಸ್‌ ಕಳುಹಿಸಲಾಗಿದೆ. ಭಾರತ ಮೂಲದ ಲೇಖಕಿಯನ್ನು ಒಕ್ಕೂಟ ವ್ಯವಸ್ಥೆಯ ರಾಜ್ಯ ಸರ್ಕಾರವೊಂದು ಆಹ್ವಾನಿಸಿದೆ. ಆದರೆ, ಅವರನ್ನು ವಾಪಸ್‌ ಕಳುಹಿಸಿರುವುದು ಕೇಂದ್ರ ಸರ್ಕಾರವು ರಾಜ್ಯಕ್ಕೆ ಮಾಡಿದ ಅವಮಾನವಾಗಿದೆ. ದೇಶವೀಗ ನಿರಂಕುಶ ಪ್ರಭುತ್ವದಲ್ಲಿದೆಯೇ? ಸಂವಿಧಾನದ ಬಗ್ಗೆ ಚರ್ಚಿಸುವ ಅಭಿವ್ಯಕ್ತಿ ಸ್ವಾತಂತ್ರ್ಯವೂ ದೇಶದಲ್ಲಿಲ್ಲವೇ” ಎಂದು ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ಕಾಂಗ್ರೆಸ್‌ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡಿದೆ. “ಸಿದ್ದರಾಮಯ್ಯನವರಿಗೆ ನಾಚಿಕೆ ಇಲ್ಲವೇ? ನೀವು ಸಂವಿಧಾನಕ್ಕೆ ಸವಾಲು ಹಾಕಲು, ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದೀರಾ? ಕಾಂಗ್ರೆಸ್ ಪಕ್ಷವು ತನ್ನ ವಿಭಜಕ ಅಜೆಂಡಾಗಳಿಗೆ ನೆಲವನ್ನು ಸಿದ್ಧಪಡಿಸಲು ಕರ್ನಾಟಕವನ್ನು ತನ್ನ ಪ್ರಯೋಗಾಲಯವನ್ನಾಗಿ ಬಳಸಿಕೊಳ್ಳುತ್ತಿದೆʼ ಇದು ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುವುದು ಈಗ ಸ್ಪಷ್ಟವಾಗಿದೆ. ಕರ್ನಾಟಕ ತೆರಿಗೆ ಪಾವತಿದಾರರ ವೆಚ್ಚದಲ್ಲಿ, ಕಾಂಗ್ರೆಸ್ ಸರ್ಕಾರವು ಭಯೋತ್ಪಾದಕ ಸಹಾನುಭೂತಿಗಳು, ನಗರ ನಕ್ಸಲರು, ರಾಷ್ಟ್ರವಿರೋಧಿಗಳು, ಗಲಭೆ ಆಪಾದಿತರಿಗೆ ಮಣೆ ಹಾಸುತ್ತಿದ್ದು, ಚುನಾವಣೆಗೆ ಮುಂಚಿತವಾಗಿ ಭಾರತವನ್ನು ಅಸ್ಥಿರಗೊಳಿಸಲು ಹಣವನ್ನು ಹರಿಸುತ್ತಿದೆʼʼ ಎಂದು ಬಿಜೆಪಿ ಟೀಕಿಸಿದೆ.

Continue Reading

ಪ್ರಮುಖ ಸುದ್ದಿ

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

GDP Growth: 2022-2023ರ ಜಿಡಿಪಿ 4.33ರಷ್ಟಿದ್ದರೆ 2023-24ರ ಜಿಡಿಪಿ 8.4ರಷ್ಟು ಬೆಳವಣಿಗೆ ಕಂಡಿದೆ.

VISTARANEWS.COM


on

GDP Growth
Koo

ನವದೆಹಲಿ : ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4 ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ ಎಂದು ಹೇಳಲಾಗಿದೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4 ರಷ್ಟು ಬೆಳವಣಿಗೆಯ ದರವನ್ನು ತೋರಿಸುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ.

ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ.

ಇದನ್ನೂ ಓದಿ : 300 ಯೂನಿಟ್​ ವಿದ್ಯುತ್ ಉಚಿತ ನೀಡುವ ಮೋದಿಯ ಯೋಜನೆ ಏನು? ಯಾರಿಗೆಲ್ಲ ಇದರಿಂದ ಲಾಭ?

ಇದರ ಪರಿಣಾಮವಾಗಿ, ಸಾಂಖ್ಯಿಕ ಸಚಿವಾಲಯವು ಈಗ ಪೂರ್ಣ ವರ್ಷದ ಜಿಡಿಪಿ ಬೆಳವಣಿಗೆಯು ಅಂದಾಜು ಶೇಕಡಾಕ 7.3ಕ್ಕಿಂತ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಿದೆ.. ಎರಡನೇ ಮುಂಗಡ ಅಂದಾಜಿನ ಪ್ರಕಾರ 2023-24ನೇ ಸಾಲಿಗೆ ಜಿಡಿಪಿ ಬೆಳವಣಿಗೆ ದರ ಶೇ.7.6ರಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ದೃಢಪಡಿಸಿದೆ.

Continue Reading

ದೇಶ

ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; ಬ್ಲ್ಯಾಕ್‌ಮೇಲ್‌ಗೆ ಬೆದರಿ ಆತ್ಮಹತ್ಯೆಗೆ ಶರಣಾದ ಸಂತ್ರಸ್ತೆಯರು

Crime News: ಉತ್ತರ ಪ್ರದೇಶದ ಕಾನ್ಪುರ ಘಟಂಪುರ್ ಕೊಟ್ವಾಲಿ ಗ್ರಾಮದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಇದೀಗ ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

crime news
Koo

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಘಟಂಪುರ್ ಕೊಟ್ವಾಲಿ ಗ್ರಾಮದ ಇಟ್ಟಿಗೆ ಗೂಡು ಬಳಿ ಇಬ್ಬರು ಬಾಲಕಿಯರ ದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಟ್ಟಿಗೆ ಗೂಡುಗಳ ಗುತ್ತಿಗೆದಾರ, ಆತನ ಮಗ ಮತ್ತು ಸೋದರಳಿಯ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಕೆಲವು ದಿನಗಳ ನಂತರ ಈ ಬಾಲಕಿಯರ ಮೃತದೇಹ ಪತ್ತೆಯಾಗಿದೆ (Crime News).

ಇಟ್ಟಿಗೆ ಗೂಡುಗಳ ಗುತ್ತಿಗೆದಾರ ರಾಮ್ ರೂಪ್ ನಿಷಾದ್ (48), ಆತನ ಮಗ ರಾಜು (18) ಮತ್ತು ಸೋದರಳಿಯ ಸಂಜಯ್ (19) ಕೆಲವು ದಿನಗಳ ಹಿಂದೆ ಈ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಬಾಲಕಿಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಹೆಚ್ಚುವರಿ ಎಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರೀಶ್ ಚಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಬ್ಲ್ಯಾಕ್‌ ಮೇಲ್‌

ಬಾಲಕಿಯರಿಗೆ ಬ್ಲ್ಯಾಕ್‌ಮೇಲ್‌ ಮಾಡಲು ಆರೋಪಿಗಳು ಅತ್ಯಾಚಾರದ ವಿಡಿಯೊ ಮಾಡಿದ್ದರು. ಇದರಿಂದ ಮನನೊಂದ 14 ಮತ್ತು 16 ವರ್ಷದ ಬಾಲಕಿಯರು ಬುಧವಾರ (ಫೆಬ್ರವರಿ 28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಬಾಲಕಿಯರಿಗೆ ಬಲವಂತದಿಂದ ಮದ್ಯಪಾನ ಮಾಡಿಸಿ ಕೃತ್ಯ ಎಸಗಲಾಗಿದೆ ಎಂದು ಅವರು ಅರೋಪಿಸಿದ್ದಾರೆ. ಬುಧವಾರ ಬಾಲಕಿಯರು ನಾಪತ್ತೆಯಾಗಿದ್ದರು. ಗಾಬರಿಗೊಂಡ ಮನೆಯವರು ಹುಡುಕಾಟ ನಡೆಸಿದಾಗ ಸಂಜೆಯ ವೇಳೆಗೆ ಅವರ ಮೃತದೇಹ ಇಟ್ಟಿಗೆ ಗೂಡಿನಿಂದ ಸುಮಾರು 400 ಮೀಟರ್‌ ದೂರದ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಹರೀಶ್ ಚಂದ್ರ ವಿವರಿಸಿದ್ದಾರೆ.

ಘಟನೆಯ ಸಂಬಂಧ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯ ನಿವಾಸಿಗಳಾದ ಎಲ್ಲ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. “ಆರೋಪಿಗಳ ಮೊಬೈಲ್ ಫೋನ್‌ಗಳಿಂದ ಹುಡುಗಿಯರ ವಿಡಿಯೊಗಳು ಮತ್ತು ಫೋಟೊಗಳನ್ನು ವಶಪಡಿಸಿಕೊಂಡಿದ್ದೇವೆ. ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು” ಎಂದು ಹರೀಶ್ ಚಂದ್ರ ಹೇಳಿದ್ದಾರೆ.

ʼʼಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮತ್ತು ಸಾಮೂಹಿಕ ಅತ್ಯಾಚಾರ ಆರೋಪಗಳನ್ನು ಪರಿಶೀಲಿಸಲು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆʼʼ ಎಂದು ಹರೀಶ್ ಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Actor Manoj Rajput: ಅತ್ಯಾಚಾರ ಎಸಗಿದ ಆರೋಪದ ಮೇಲೆ ನಟ ಮನೋಜ್ ರಜಪೂತ್ ಬಂಧನ

ದಕ್ಷಿಣ ವಲಯ ಡಿಸಿಪಿ ರವೀಂದ್ರ ಕುಮಾರ್ ಮಾತನಾಡಿ, “ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆʼʼ ಎಂದು ಗುಡುಗಿದ್ದಾರೆ. ಮೃತರು ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುವ ಇಬ್ಬರು ಕಾರ್ಮಿಕರ ಮಕ್ಕಳಾಗಿದ್ದು, ಇಟ್ಟಿಗೆ ಗೂಡು ಇರುವ ಸ್ಥಳದಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದರು. ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಶೀಘ್ರ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.

Continue Reading
Advertisement
Modi GDP
ಪ್ರಮುಖ ಸುದ್ದಿ50 mins ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ50 mins ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್52 mins ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ1 hour ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ1 hour ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Siddaramaiah plan behind accepting Caste Census Report Sunil Kumar reveals reason
ರಾಜಕೀಯ2 hours ago

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

Rowdy sheeter kidnaps cricket bookie
ಕ್ರಿಕೆಟ್2 hours ago

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

GDP Growth
ಪ್ರಮುಖ ಸುದ್ದಿ2 hours ago

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

film festival
ಸಿನಿಮಾ2 hours ago

Bengaluru Film Festival: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

BJP protest demanding action against those who shouted pro Pak slogan
ಉತ್ತರ ಕನ್ನಡ2 hours ago

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ16 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌