Site icon Vistara News

PM Modi Russia Visit: ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲವು; ಭಾರತೀಯ ಯೋಧರ ಬಿಡುಗಡೆಗೆ ರಷ್ಯಾ ಸಮ್ಮತಿ

PM Modi Russia Visit

Russia Set To Discharge Indian Recruits Fighting In Ukraine After Modi-Putin Talks

ಮಾಸ್ಕೋ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಷ್ಯಾ ಪ್ರವಾಸ(PM Modi Russia Visit) ಕೈಗೊಂಡಿರುವ ನರೇಂದ್ರ ಮೋದಿ(PM Narendra Modi)ಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌(Vladimir Putin) ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಭೇಟಿಯಿಂದಾಗಿ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದ್ದು, ರಷ್ಯಾ ಸೇನೆಯಲ್ಲಿರುವ ಭಾರತೀಯ ಯೋಧರನ್ನು ಬಿಡುಗಡೆಗೊಳಿಸಲು ರಷ್ಯಾ ಒಪ್ಪಿದೆ.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರನ್ನು ಶೀಘ್ರವೇ ಸೇನೆಯಿಂದ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ. ಇದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದ್ದು, ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ಪುಟಿನ್ ಭರವಸೆ ನೀಡಿದ್ದಾರೆ.

ಉಕ್ರೇನ್ ಯುದ್ಧದಲ್ಲಿ ರಷ್ಯಾದ ಪರವಾಗಿ ಹೋರಾಡುತ್ತಿರುವ ಭಾರತೀಯರ ದುಃಸ್ಥಿತಿಯು ಭಾರತಕ್ಕೆ ಬಹುದೊಡ್ಡ ತಲೆನೋವಾಗಿತ್ತು. ಇತ್ತೀಚಿನ ತಿಂಗಳುಗಳಲ್ಲಿ, ಉದ್ಯೋಗ ವಂಚನೆಗಳಿಗೆ ಬಲಿಯಾದ ಭಾರತೀಯರ ಬಗ್ಗೆ ವರದಿಗಳು ಆಗಾಗ ಹೊರ ಬೀಳುತ್ತಿರುತ್ತವೆ. ಇದರಿಂದ ತೀರ ಕಳವಳಕ್ಕೀಡಾಗಿದ್ದ ಭಾರತ ಅವರನ್ನು ವಾಪಾಸ್‌ ಕರೆಸಿಕೊಳ್ಳಲು ನಾನಾ ಪ್ರಯತ್ನಗಳನ್ನು ನಡೆಸಿತ್ತು. ಇದು ಭಾರತದ ಬಹು ದೀರ್ಘಕಾಲ ಬೇಡಿಕೆ ಆಗಿತ್ತು. ಇದೀಗ ಪ್ರಧಾನಿ ಮೋದಿ ಭೇಟಿಯಿಂದಾಗಿ ಈ ಬೇಡಿಕೆ ಫಲಪ್ರದವಾಗಿದೆ.

ರಷ್ಯಾ-ಉಕ್ರೇನ್‌ ಯುದ್ಧ ಕೊನೆಗೊಳಿಸಲು ಆಗ್ರಹ

ಪ್ರಸ್ತುತ ಎರಡು ದಿನಗಳ ಅಧಿಕೃತ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಂತೆ ನೇರ ಮನವಿ ಮಾಡಿದರು. ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ಅನೌಪಚಾರಿಕ ಸಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರಿಗೆ ಯುದ್ಧಭೂಮಿಯಲ್ಲಿ ಯಾವುದೇ ಪರಿಹಾರವನ್ನು ಕಂಡುಹಿಡಿಯಲಾಗುವುದಿಲ್ಲ ಎಂದು ಹೇಳಿದರು.

“ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವ ಸೇರಿದಂತೆ ಯುಎನ್ ಚಾರ್ಟರ್ ಅನ್ನು ಗೌರವಿಸಲು ಭಾರತ ಯಾವಾಗಲೂ ಕರೆ ನೀಡಿದೆ. ಯುದ್ಧಭೂಮಿಯಲ್ಲಿ ಯಾವುದೇ ಪರಿಹಾರವಿಲ್ಲ. ಮಾತುಕತೆ ಮತ್ತು ರಾಜತಾಂತ್ರಿಕತೆಯು ಮುಂದಿನ ಮಾರ್ಗವಾಗಿದೆ” ಎಂದು ಔತಣಕೂಟದಲ್ಲಿ ಪುಟಿನ್ ಅವರಿಗೆ ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

Exit mobile version