ನವದೆಹಲಿ: ಉಕ್ರೇನ್‌ನ ಪ್ರಮುಖ ನಗರಗಳ ಮೇಲೆ ರಷ್ಯಾ ಕ್ಷಿಪಣಿ, ಬಾಂಬ್ ದಾಳಿಯನ್ನು ತೀವ್ರಗೊಳಿಸಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Modi Putin Discuss) ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ, ದ್ವಿಪಕ್ಷೀಯ ಒಪ್ಪಂದ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.
“ಉಕ್ರೇನ್-ರಷ್ಯಾ ಬಿಕ್ಕಟ್ಟಿನ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ರಾಜತಾಂತ್ರಿಕ ಮಾರ್ಗ ಹಾಗೂ ಶಾಂತಿ ಮಾತುಕತೆ ಮೂಲಕ ಬಿಕ್ಕಟ್ಟು ಶಮನ ಮಾಡಿಕೊಳ್ಳಬೇಕು ಎಂಬುದನ್ನು ಪುಟಿನ್ ಅವರಿಗೆ ಮೋದಿ ಮನವರಿಕೆ ಮಾಡಿಕೊಟ್ಟರು” ಎಂದು ಪ್ರಧಾನಮಂತ್ರಿ ಕಚೇರಿ (PMO) ತಿಳಿಸಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲೂ ಮೋದಿ ಇದೇ ವಿಷಯ ಪ್ರಸ್ತಾಪಿಸಿದ್ದರು.
ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಆದ್ಯತೆ
ಪುಟಿನ್ ಅವರ ಜತೆಗಿನ ಮಾತುಕತೆ ವೇಳೆ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಂಬಂಧ ವೃದ್ಧಿ, ವ್ಯಾಪಾರ, ಒಪ್ಪಂದ, ರಕ್ಷಣೆ, ಸಹಕಾರ, ಹೂಡಿಕೆ, ಭದ್ರತಾ ಸಹಕಾರ ಸೇರಿ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಇದಕ್ಕೆ ವ್ಲಾಡಿಮಿರ್ ಪುಟಿನ್ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಪಿಎಂಒ ಮಾಹಿತಿ ನೀಡಿದೆ. ಅದರಲ್ಲೂ, 2023ರ ಜಿ-20 ಸಭೆಯು ಭಾರತದ ಅಧ್ಯಕ್ಷತೆಯಲ್ಲಿಯೇ ನಡೆಯುವುದರಿಂದ, ಸಭೆಯ ಯಶಸ್ಸು, ಸಭೆಯ ಪ್ರಮುಖ ವಿಷಯ, ತೀರ್ಮಾನಗಳ ಕುರಿತು ಕೂಡ ಮಾತುಕತೆ ನಡೆಸಿದರು.
ಇದನ್ನೂ ಓದಿ | G20 Summit | ಯುದ್ಧಕ್ಕೆ ಇದು ಕಾಲವಲ್ಲ, ಪುಟಿನ್‌ಗೆ ಮೋದಿ ಕೊಟ್ಟ ಸಂದೇಶವೇ ಜಿ20 ಶೃಂಗಸಭೆಯ ನಿರ್ಣಯ