ವಾಷಿಂಗ್ಟನ್: ನಾವು ಪ್ರಜಾಪ್ರಭುತ್ವವಾದಿಗಳು(Democracy). ಅಮೆರಿಕ (America) ಮತ್ತ ಭಾರತದ (India) ಡಿಎನ್‌ಎನಲ್ಲಿ ಪ್ರಜಾಪ್ರಭುತ್ವವಿದೆ. ಪ್ರಜಾಪ್ರಭುತ್ವವು ನಮ್ಮ ಅಧ್ಯಾತ್ಮದಲ್ಲಿದೆ ಮತ್ತು ನಾವು ಅದನ್ನೇ ಬದುಕುತ್ತಿದ್ದೇವೆ ಮತ್ತು ಅದನ್ನು ನಮ್ಮ ಸಂವಿಧಾನದಲ್ಲೂ ಬರೆಯಲಾಗಿದೆ. ಹಾಗಾಗಿ ಭಾರತದಲ್ಲಿ ಜಾತಿ, ವರ್ಗ, ಧರ್ಮದ ಆಧಾರದ ಮೇಲೆ ತಾರತಮ್ಯದ (discriminations) ಪ್ರಶ್ನೆಯ ಉದ್ಭವಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು(PM Modi Visit US).
Addressing the press meet with @POTUS @JoeBiden. https://t.co/qWx0tH82HH
— Narendra Modi (@narendramodi) June 22, 2023
ಅಮೆರಿಕದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಶ್ವೇತಭವನದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಬಳಿಕ ಜಂಟಿ ಪತ್ರಿಕಾ ಹೇಳಿಕೆ ನೀಡಿದ ಮೋದಿ ಅವರು, ಭಾರತವು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ನೀತಿಯಲ್ಲಿ ಕೆಲಸ ಮಾಡುತ್ತಿದೆ. ಇದರೊಂದಿಗೆ ಭಾರತವು ಮುನ್ನಡೆಯುತ್ತಿದೆ ಎಂದು ಹೇಳಿದರು. ಭಾರತದಲ್ಲಿನ ಅಲ್ಪಸಂಖ್ಯಾತರ ಹಕ್ಕುಗಳ ಸುಧಾರಣೆಗೆ ಭಾರತ ಸರ್ಕಾರವು ಬದ್ಧವಾಗಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
ಭಾರತ ಮತ್ತು ಅಮೆರಿಕ ಸಂಬಂಧಗಳ ಇತಿಹಾಸದಲ್ಲಿ ಇಂದು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಇಂದು ತೆಗೆದುಕೊಂಡ ಚರ್ಚೆಗಳು ಮತ್ತು ಪ್ರಮುಖ ನಿರ್ಧಾರಗಳೊಂದಿಗೆ, ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಬರೆದಿದೆ. ಇದು ಹೊಸ ದಿಕ್ಕು ಮತ್ತು ಹೊಸ ಶಕ್ತಿಯನ್ನು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ: PM Modi Visit US: ಧಾರ್ಮಿಕ ಬಹುತ್ವವು ಭಾರತ, ಅಮೆರಿಕಕ್ಕೆ ಪ್ರಮುಖ ತತ್ವ; ಮೋದಿಗೆ ಹೇಳಿದ ಬೈಡೆನ್
ನಾವು ಪ್ರಜಾಪ್ರಭುತ್ವದ ಬಗ್ಗೆ ಸಂವಾದ ಮಾಡಿದಾಗಲೇ ಪ್ರಜಾಪ್ರಭುತ್ವವನ್ನು ಜಾರಿ ಮಾಡಲು ಸಾಧ್ಯ. ಹಾಗಾಗಿ, ಯಾವುದೇ ರೀತಿಯಲ್ಲೂ ಪ್ರಜಾಪ್ರಭುತ್ವದಲ್ಲಿ ತಾರತಮ್ಯಕ್ಕೆ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಧ್ಯಕ್ಷ ಜೋ ಬೈಡೆನ್ ಅವರು ಅಮೆರಿಕ-ಭಾರತ ನಡುವಿನ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.