ಅಹ್ಮದಾಬಾದ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಾಯಿ ಹೀರಾಬೆನ್ರನ್ನು ನೋಡಲು ಪ್ರಧಾನಿ ನರೇಂದ್ರ ಮೋದಿಯವರು ಅಹ್ಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ಭೇಟಿಕೊಟ್ಟಿದ್ದಾರೆ. ಹಾಗೇ, ಅಮ್ಮನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಅವರ ಪ್ರಧಾನ ಕಾರ್ಯದರ್ಶಿ ಕೆ.ಕೈಲಾಸನಾಥನ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ, ಬಿಜೆಪಿ ಶಾಸಕರಾದ ದರ್ಶನಾಬೆನ್ ವಘೇಲಾ ಮತ್ತು ಕೌಶಿಕ್ ಜೈನ್ ಆಸ್ಪತ್ರೆಯಲ್ಲೇ ಇದ್ದಾರೆ. ಪ್ರಧಾನಿ ಮೋದಿ ಭೇಟಿ ನಿಮಿತ್ತ ಆಸ್ಪತ್ರೆಯಲ್ಲಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ರಾಹುಲ್ ಗಾಂಧಿ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿ, ‘ತಾಯಿ ಹೀರಾಬೆನ್ ಬೇಗ ಚೇತರಿಸಿಕೊಳ್ಳಲಿ’ ಎಂದು ಹಾರೈಸಿದ್ದಾರೆ. ‘ಅಮ್ಮ-ಮಗನ ಬಾಂಧವ್ಯ ಮತ್ತು ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಮತ್ತು ಅದಕ್ಕೊಂದು ಮಿತಿಯೇ ಇಲ್ಲ. ಮೋದಿ ಜೀ, ನಿಮ್ಮ ಈ ನೋವಿನ ಸಂದರ್ಭದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ. ನಿಮ್ಮ ತಾಯಿ ಬೇಗನೇ ಚೇತರಿಸಿಕೊಳ್ಳುತ್ತಾರೆ ಎಂಬ ಆಶಯ ಖಂಡಿತ ಇದೆ’ ಎಂದು ಭಾವನಾತ್ಮಕ ಸಾಲುಗಳನ್ನು ಟ್ವೀಟ್ ಮಾಡಿದ್ದಾರೆ. ಹಾಗೇ, ಮಲ್ಲಿಕಾರ್ಜುನ್ ಖರ್ಗೆಯವರೂ ಟ್ವೀಟ್ ಮಾಡಿ, ಹೀರಾಬೆನ್ ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: Heeraben Modi | ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯ ಕ್ಷೀಣ; ಅಹ್ಮದಾಬಾದ್ನ ಆಸ್ಪತ್ರೆಗೆ ದಾಖಲು