PM Narendra Modi: "ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು"- ಪ್ರಧಾನಿ ಮೋದಿ - Vistara News

ದೇಶ

PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

PM Narendra Modi: ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ನಾಲ್ಕನೇ ಹಂತದ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನು ಮೂರು ಹಂತಗಳ ಮತದಾನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೂರನೇ ಬಾರಿಗೆ ಗದ್ದುಗೆ ಏರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಷ್ಟೇ ಅಲ್ಲದೇ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ನೂರು ದಿನಗಳ ಯೋಜನೆ ನೀಲನಕ್ಷೆಯನ್ನು ಬಹಿರಂಗಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮ್ಮ ಮೊದಲ 100 ದಿನಗಳ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದು, ಈ ಬಾರಿ ಯುವಕರನ್ನೇ ಗುರಿಯನ್ನಾಗಿಸಿ ಯೋಜನೆ ರೂಪಿಸಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ನಾನು 100ದಿನಗಳ ಯೋಜನೆ ರೂಪಿಸಿ ಆಗಿದೆ. ಇದೀಗ ನಾನು ಯುವಕರಿಗಾಗಿ ಹೆಚ್ಚುವರಿಯಾಗಿ 25ಗಳವರೆಗೆ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇನೆ. ಒಟ್ಟು 125 ದಿನಗಳಲ್ಲಿ 25 ದಿನಗಳನ್ನು ಯುವಕರಿಗಾಗಿ ಮೀಸಲಿಟ್ಟಿದ್ದೇನೆ. ಈ ಯೋಜನೆಯಲ್ಲಿ ಯುವಕರು ಸಕ್ರಿಯವಾಗಿ ಭಾಗಿಯಾಗಿ ತಮ್ಮ ಅಭಿಪ್ರಾಯ, ಚಿಂತನೆಯನ್ನು ಹಂಚಿಕೊಳ್ಳಬಹುದಾಗಿದೆ. ಈ ಬಗ್ಗೆ 20 ಲಕ್ಷಕ್ಕೂ ಅಧಿಕ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನೂ ಓದಿ: DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

ಪ್ರಧಾನಿ ಮೋದಿ ಇದೇ ವಿಚಾರವನ್ನು ಮುಂಬೈನಲ್ಲಿ ನಡೆದ ರ್ಯಾಲಿ ವೇಳೆಯೂ ಪ್ರಸ್ತಾಪಿಸಿದ್ದರು. ಮೊದಲ 100ದಿನಗಳ ಯೋಜನೆ ಬ್ಲೂ ಪ್ರಿಂಟ್‌ ತಯಾರಾಗಿದೆ. ಜೂ.4ರಿಂದ ಜಾರಿಗೊಳಿಸೋದೆ ನಮ್ಮ ಗುರಿ. ಎಲ್ಲರೂ ಕೇಳುತ್ತಿದ್ದಾರೆ ಇದೇನು ನಿಮ್ಮ ಅತಿಯಾದ ಆತ್ಮವಿಶ್ವಾಸವೇ ಎಂದು. ನಾನು ಹೇಳುವುದು ಇಷ್ಟೇ ಇದು ಓವರ್‌ ಕಾನ್ಫಿಡೆನ್ಸ್‌ ಅಲ್ಲ ಬದಲಾಗಿ ಇದು ಜನರ ಆಶೀರ್ವಾದ ನಮ್ಮ ಮೇಲಿರುವ ನಂಬಿಕೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಈಗಾಗಲೇ ದೇಶದಲ್ಲಿ 4 ಹಂತಗಳ ಮತದಾನ ಪೂರ್ಣಗೊಂಡಿದೆ. ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ.

ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

Arvind Kejriwal : ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಅಥವಾ ಇತರ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತನಿಖಾ ಸಂಸ್ಥೆ ಹೈಕೋರ್ಟ್​​ಗೆ ತಿಳಿಸಿತ್ತು.

VISTARANEWS.COM


on

Arvind Kejriwal
Koo

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದ ಡೆಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಖಾತರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಸ್ಥಳೀಯ ನ್ಯಾಯಾಲಯವು ಜೂನ್ 5 ಕ್ಕೆ ಕಾಯ್ದಿರಿಸಿದ್ದರಿಂದ ನಾಳೆ (ಜೂನ್ 2) ತಿಹಾರ್ ಜೈಲಿಗೆ ಮರಳಬೇಕಾಗುತ್ತದೆ. ವೈದ್ಯಕೀಯ ಕಾರಣಗಳಿಗಾಗಿ ಒಂದು ವಾರ ಮಧ್ಯಂತರ ಜಾಮೀನು ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದಾಗ್ಯೂ, ಅವರ ಅರ್ಜಿಯನ್ನು ಜಾರಿ ನಿರ್ದೇಶನಾಲಯವು ತೀವ್ರವಾಗಿ ವಿರೋಧಿಸಿತ್ತು. ಎಎಪಿ ಮುಖ್ಯಸ್ಥರು ಸತ್ಯಗಳನ್ನು ಮರೆಮಾಚಿದ್ದಾರೆ ಮತ್ತು ಅವರ ಆರೋಗ್ಯದ ಬಗ್ಗೆ ಸೇರಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅದು ಹೇಳಿದೆ.

ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಅಥವಾ ಇತರ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತನಿಖಾ ಸಂಸ್ಥೆ ಹೈಕೋರ್ಟ್​​ಗೆ ತಿಳಿಸಿತ್ತು.

ಮಧ್ಯಂತರ ಜಾಮೀನು ಸಿಕ್ಕಿತ್ತು

ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಮಧ್ಯಂತರ ಜಾಮೀನು ನೀಡಿತ್ತು. ಅದು ಜೂನ್ 1 ರಂದು ಕೊನೆಗೊಳ್ಳುತ್ತದೆ. ಅವರು ಜೂನ್ 2 ರಂದು (ಭಾನುವಾರ) ತಿಹಾರ್ ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕಾಗಿತ್ತು. ಅವರ ಜಾಮೀನು ಅರ್ಜಿ ಮಾನ್ಯವಾಗದ ಕಾರಣ ಜೈಲಿಗೆ ಹೋಗಲೇಬೇಕಾಗಿದೆ.

ಇದನ್ನೂ ಓದಿ: Narendra Modi : 45 ಗಂಟೆಗಳaಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

ವೈದ್ಯಕೀಯ ಪರೀಕ್ಷೆಗಳಿಗಾಗಿ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವ ಮನವಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದ ನಂತರ ಎಎಪಿ ಮುಖ್ಯಸ್ಥರು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯುವ ಆಯ್ಕೆಯನ್ನು ಹೊಂದಿರುವುದರಿಂದ ಅವರ ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು.

ಹೆಚ್ಚಿನ ಕೀಟೋನ್ ಮಟ್ಟ ಹೆಚ್ಚಳದಿಂದಾಗಿ ತೂಕ ನಷ್ಟ ದಿಂದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವಾರು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ್ದರು. ಈ ರೋಗಲಕ್ಷಣಗಳು ಮೂತ್ರಪಿಂಡದ ಸಮಸ್ಯೆಗಳು, ಗಂಭೀರ ಹೃದಯದ ಪರಿಸ್ಥಿತಿಗಳು ಅಥವಾ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಆಪ್​ ವಕೀಲರು ವಾದಿಸಿದ್ದರು.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್​, ಜೂನ್ 2 ರಂದು ಶರಣಾಗುವುದಾಗಿ ಹೇಳಿದ್ದರು. ನಂತರ ತಮ್ಮ ವಯಸ್ಸಾದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಪೋಷಕರನ್ನು ನೋಡಿಕೊಳ್ಳುವಂತೆ ಜನರನ್ನು ಕೇಳಿಕೊಂಡಿದ್ದರು.

ನಾನು ಶರಣಾಗಲು ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದರು. ದೆಹಲಿಯ ಜನರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆ ಎಂದು ಭರವಸೆ ನೀಡಿದರು.

ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಜೈಲಿನಲ್ಲಿ ನಿಮ್ಮ ಬಗ್ಗೆ ನಾನು ತುಂಬಾ ಚಿಂತೆ ಮಾಡುತ್ತೇನೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ನಡುವೆ ಇರುವುದಿಲ್ಲ, ಆದರೆ ನಿಮ್ಮ ಎಲ್ಲಾ ಕೆಲಸಗಳು ಮುಂದುವರಿಯುತ್ತವೆ. ಹಿಂದಿರುಗಿದ ನಂತರ ನಾನು ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1000 ರೂ.ಗಳನ್ನು ನೀಡಲು ಪ್ರಾರಂಭಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Narendra Modi :2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

VISTARANEWS.COM


on

Narendra Modi
Koo

ಚೆನ್ನೈ: ಹಲವಾರು ತಿಂಗಳ ಲೋಕ ಸಭಾ ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಕೈಗೊಂಡಿದ್ದ 45 ಗಂಟೆಗಳ ಧ್ಯಾನವನ್ನು ಪೂರ್ಣಗೊಳಿಸಿದ್ದಾರೆ. ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾಗಿರುವ ಧ್ಯಾನ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಧ್ಯಾತ್ಮಿಕ ಕೈಂಕರ್ಯ ಮಾಡಿದ್ದರು.

2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

ಇದು ಭಾರತದ ದಕ್ಷಿಣ ತುದಿಯಾಗಿದೆ. ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಪ್ರದೇಶ ಸಂಗಮವಾಗುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳ. ಕನ್ಯಾಕುಮಾರಿಗೆ ಹೋಗುವ ಮೂಲಕ ಮೋದಿ ರಾಷ್ಟ್ರೀಯ ಏಕತೆಯ ಸಂಕೇತವನ್ನು ಸಾರಿದ್ದರು ಎನ್ನಲಾಗಿದೆ.

ಜೂನ್ 1 ರಂದು ನಡೆಯಲಿರುವ 2024 ರ ಲೋಕಸಭಾ ಚುನಾವಣೆಯ ಅಂತಿಮ ಮತ್ತು ಏಳನೇ ಹಂತದ ಹಿನ್ನೆಲೆಯಲ್ಲಿ ಮೋದಿ ಗುರುವಾರ ಪಂಜಾಬ್​​ ಹೋಶಿಯಾರ್​ಪುರದಲ್ಲಿ ತಮ್ಮ ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದರು.

ಸುದೀರ್ಘ ಪ್ರಚಾರ ರ್ಯಾಲಿ

ಮೋದಿ 75 ದಿನಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳು ಸೇರಿದಂತೆ ಸುಮಾರು 206 ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅವರು ವಿವಿಧ ಸುದ್ದಿ ಮತ್ತು ಮಾಧ್ಯಮ ವೇದಿಕೆಗಳೊಂದಿಗೆ ಸುಮಾರು 80 ಸಂದರ್ಶನಗಳನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಆಧ್ಯಾತ್ಮಿಕ ಪ್ರವಾಸಗಳನ್ನು ಕೈಗೊಂಡಿದ್ದರು. 2019ರಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ್ದ ಅವರು, 2014ರಲ್ಲಿ ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮುಖಂಡ ತೇಜಸ್ವಿ ಯಾದವ್ ಅವರು ಶನಿವಾರ ಕನ್ಯಾಕುಮಾರಿಯಲ್ಲಿ ಮೋದಿಯವರ ನಡೆಸುತ್ತಿರುವ ಆಧ್ಯಾತ್ಮಿಕ ಚಟುವಟಿಕೆಯನ್ನು ಫೋಟೋ ಶೂಟ್” ಎಂದು ಲೇವಡಿ ಮಾಡಿದ್ದರು. ಮೋದಿ ಅವರು ಯಾವುದೇ ಧ್ಯಾನ ಮಾಡುತ್ತಿಲ್ಲ, ಫೋಟೋ ಶೂಟ್ ಮಾತ್ರ ನಡೆಯುತ್ತಿದೆ. ಫೋಟೋ ಶೂಟ್ ಮುಗಿದ ನಂತರ, ಅವರು ಹಿಂತಿರುಗುತ್ತಾರೆ” ಎಂದು ತೇಜಸ್ವಿ ಯಾದವ್ ಹೇಳಿದರು.

Continue Reading

Live News

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿ ಇಲ್ಲಿ ಲಭ್ಯವಿದೆ.

VISTARANEWS.COM


on

Exit Poll Live 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

Continue Reading

ದೇಶ

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

Exit Poll 2024: ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗೆ ಎರಡು ಗಂಟೆ ಅಷ್ಟೇ ಬಾಕಿ ಉಳಿದಿವೆ. ಎಕ್ಸಿಟ್‌ ಪೋಲ್‌ಗಾಗಿ ದೇಶಕ್ಕೆ ದೇಶವೇ ಕಾಯುತ್ತಿದೆ. ಇದರ ಮಧ್ಯೆಯೇ, ಇದುವರೆಗೆ ಮುಂಬೈ ಸಟ್ಟಾ ಬಜಾರ್‌, ಫಲೋಡಿ ಸಟ್ಟಾ ಬಜಾರ್‌, ಪರಿಣತ ಪ್ರಶಾಂತ್‌ ಕಿಶೋರ್‌ ಸೇರಿ ಹಲವರು ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬಹುಮತ ಸಿಗಬಹುದು ಎಂಬ ಸಮೀಕ್ಷಾ ವರದಿಯನ್ನು ಪ್ರಕಟಿಸಿವೆ. ತಜ್ಞರು ಅವರ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯದ ಹಂತಕ್ಕೆ ಬಂದಿದೆ. ಶನಿವಾರ (ಜೂನ್‌ 1) ಲೋಕಸಭೆ ಚುನಾವಣೆಯ ಕೊನೆಯ ಅಥವಾ 7ನೇ ಹಂತದ ಮತದಾನ ಮುಕ್ತಾಯವಾಗಲಿದ್ದು, ಇಂದು ಸಂಜೆಯೇ ಮತಗಟ್ಟೆ ಸಮೀಕ್ಷೆಗಳು ಹೊರಬೀಳಲಿವೆ. ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Results 2024) ಏನಾಗಬಹುದು, ಯಾವ ಪಕ್ಷಕ್ಕೆ ಹೆಚ್ಚು ಕ್ಷೇತ್ರ ಸಿಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಗಳು ದಿಕ್ಸೂಚಿಯಾಗಿರುವ ಕಾರಣ ಎಲ್ಲರ ಗಮನ ವರದಿಗಳ ಮೇಲಿದೆ. ಇನ್ನು ಇದುವರೆಗೆ ಫಲೋಡಿ ಸಟ್ಟಾ ಬಜಾರ್‌, ಮುಂಬೈ ಸಟ್ಟಾ ಬಜಾರ್‌, ಚುನಾವಣಾ ತಜ್ಞರಾದ ಪ್ರಶಾಂತ್‌ ಕಿಶೋರ್‌, ಯೋಗೇಂದ್ರ ಯಾದವ್‌ ಸೇರಿ ಹಲವು ಸಮೀಕ್ಷಾ ವರದಿಗಳು, ಅಭಿಪ್ರಾಯಗಳು ಏನಾಗಿದ್ದವು? ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ‌

ಫಲೋಡಿ ಸಟ್ಟಾ ಬಜಾರ್‌ ವರದಿ ಇಲ್ಲಿದೆ

ಫಲೋಡಿ ಸಟ್ಟಾ ಬಜಾರ್‌ ಕೂಡ ಲೋಕಸಭೆ ಚುನಾವಣೆ ಕುರಿತು ಹಲವು ಸಮೀಕ್ಷೆ ವರದಿಗಳನ್ನು ನೀಡಿದೆ. ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

Modi In Karnataka

ರಾಮಮಂದಿರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 63-65 ಕ್ಷೇತ್ರಗಳು ಲಭಿಸಲಿವೆ ಎಂಬುದಾಗಿ ಸಮೀಕ್ಷೆ ತಿಳಿಸಿದೆ. ಇನ್ನು, ಗುಜರಾತ್‌ 25, ಮಧ್ಯಪ್ರದೇಶ 28-29, ದೆಹಲಿ 5-6, ಪಂಜಾಬ್‌ 2-3, ಹಿಮಾಚಲ ಪ್ರದೇಶ 4, ಛತ್ತೀಸ್‌ಗಢ 10-11, ಉತ್ತರಾಖಂಡ 5, ಬಿಹಾರ 28-29, ತೆಲಂಗಾಣ 8-9, ಜಾರ್ಖಂಡ್‌ 10-11 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ಹೆಚ್ಚಿನ ಕ್ಷೇತ್ರಗಳು ಬರಲಿವೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ ಎಂದು ವರದಿ ತಿಳಿಸಿದೆ.

Bharat Jodo Yatra By Rahul Gandhi

ಮುಂಬೈ ಸಟ್ಟಾ ಬಜಾರ್

ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ ಮಾತ್ರ ಜಯಿಸಲಿದೆ. ಇನ್ನು, ರಾಮಮಂದಿರ ಕಾರಣದಿಂದ ಬಿಜೆಪಿಗೆ ಪ್ರಮುಖವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 64-66 ಕ್ಷೇತ್ರಗಳು ಲಭಿಸಲಿವೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಮುಂಬೈ ಸಟ್ಟಾ ಬಜಾರ್‌ ಸಮೀಕ್ಷೆಯು ಬಿಜೆಪಿ 270-280 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಕಾಂಗ್ರೆಸ್‌ 70-80 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ತಿಳಿಸಿತ್ತು.

ಪ್ರಶಾಂತ್‌ ಕಿಶೋರ್

ಚುನಾವಣೆ ತಜ್ಞ, ರಾಜಕೀಯ ಪರಿಣತರಾದ ಪ್ರಶಾಂತ್‌ ಕಿಶೋರ್‌ ಅವರು ಕೂಡ ದೇಶದಲ್ಲಿ ಮೋದಿ ಹ್ಯಾಟ್ರಿಕ್‌ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ತಿಳಿಸಿದ್ದಾರೆ. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

prashant kishor

ಯೋಗೇಂದ್ರ ಯಾದವ್

ಬಿಜೆಪಿಯು ಮತ್ತೊಂದು ಸಾರ್ವತ್ರಿಕ ಚುನಾವಣೆಯ ವಿಜಯವನ್ನು ಪಡೆಯುತ್ತದೆ ಎಂದು ಚುನಾವಣಾ ರಣತಂತ್ರಗಾರ ಯೋಗೇಂದ್ರ ಯಾದವ್‌ ಅವರು ಭವಿಷ್ಯ ನುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಯಾದವ್‌ ಅಚ್ಚರಿ ಮೂಡಿಸಿದ್ದಾರೆ. ಯಾದವ್ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲಬಹುದು. ಅಂದರೆ ಎನ್‌ಡಿಎ (NDA) ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಸುಳಿದಾಡಬಹುದು.

ಅಮೆರಿಕ ರಾಜಕೀಯ ತಜ್ಞ ಇಯಾನ್‌ ಬ್ರೆಮ್ಮರ್

ಬಿಜೆಪಿ 295ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಮೆರಿಕದ ರಾಜಕೀಯ ತಜ್ಞ ಇಯಾನ್ ಬ್ರೆಮ್ಮರ್ ತಿಳಿಸಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಲೋಕಸಭಾ ಸ್ಥಾನಗಳನ್ನು ಗೆದ್ದು, ಹಿಂದಿ ಹೃದಯ ರಾಜ್ಯಗಳಲ್ಲಿ ʼಮೋದಿ ಅಲೆ’ಯ ಮೇಲೆ ಸವಾರಿ ಮಾಡಿತ್ತು. 370 ಸೀಟುಗಳನ್ನು ಗೆಲ್ಲಬೇಕಾದರೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯಗಳಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Continue Reading
Advertisement
Star Saree Fashion
ಫ್ಯಾಷನ್3 mins ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ14 mins ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ31 mins ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ39 mins ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ44 mins ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News50 mins ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್1 hour ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು1 hour ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ1 hour ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು1 hour ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌