Site icon Vistara News

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

PM Narendra Modi

ಪಾಟ್ನಾ: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.

ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ. ಜೂ.10ರ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನವೀನ್‌ ಬಾಬು ಅವರ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ವಿಶೇಷ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಒಡಿಶಾದಲ್ಲಿ ಬಿಜೆಡಿಯ 25 ವರ್ಷಗಳ ಆಡಳಿತ ಅಂತ್ಯಗೊಳ್ಳುವುದು ಖಚಿತ. ಬಿಜೆಪಿಯ ವ್ಯಕ್ತಿ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಒಡಿಶಾಗೆ ಒಡಿಯಾ ವ್ಯಕ್ತಿಯೇ ಸಿಎಂ ಆದರೆ ಚೆಂದ. ಹೊರಗಿನವರ ಕೈಗೆ ಅಧಿಕಾರ ಕೊಡಲು ಜನರಿಗೂ ಮನಸಿಲ್ಲ ಎಂದು ಪರೋಕ್ಷವಾಗಿ ಬಿಜೆಡಿ ಸಿಎಂ ಸ್ಥಾನದ ಆಕಾಂಕ್ಷಿ ಪಾಂಡಿಯನ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Exit mobile version