Viral Video | ಆಂಬ್ಯುಲೆನ್ಸ್​​ಗೆ ದಾರಿ ಬಿಡಲು, ತಮ್ಮ ಕಾರನ್ನು ರಸ್ತೆ ಪಕ್ಕ ನಿಲ್ಲಿಸಲು ಹೇಳಿದ ಪ್ರಧಾನಿ ಮೋದಿ - Vistara News

ದೇಶ

Viral Video | ಆಂಬ್ಯುಲೆನ್ಸ್​​ಗೆ ದಾರಿ ಬಿಡಲು, ತಮ್ಮ ಕಾರನ್ನು ರಸ್ತೆ ಪಕ್ಕ ನಿಲ್ಲಿಸಲು ಹೇಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಪ್ರಯಾಣ ಮಾಡುತ್ತಿದ್ದ ಕಾರು ಕೂಡ ರಸ್ತೆ ಬದಿಯಲ್ಲಿ ನಿಂತಿತ್ತು. ಆಗ ಭದ್ರತಾ ಸಿಬ್ಬಂದಿ ಕಾರಿನಿಂದ ಕೆಳಗೆ ಇಳಿದಿದ್ದರು ಎಂದು ಗುಜರಾತ್​ ಬಿಜೆಪಿ ತಿಳಿಸಿದೆ.

VISTARANEWS.COM


on

PM Modi's convoy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹ್ಮದಾಬಾದ್​: ಪ್ರಧಾನಮಂತ್ರಿ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದರೆ ಅವರು ಪ್ರಯಾಣ ಮಾಡುವ ಕಾರಿನ ಮುಂಭಾಗ, ಹಿಂಭಾಗದಲ್ಲೆಲ್ಲ ಬೆಂಗಾವಲು ಪಡೆ ಕಾರುಗಳು ಹೋಗುತ್ತವೆ. ಪ್ರಧಾನಿ ಸಂಚರಿಸುವ ಮಾರ್ಗ ಪೂರ್ವ ನಿರ್ಧರಿತವಾಗುವುದರಿಂದ ಆ ರಸ್ತೆಯಲ್ಲಿ ಇನ್ಯಾವುದೇ ವಾಹನಗಳು ಬಾರದಂತೆ ಕಟ್ಟೆಚ್ಚರ ವಹಿಸಲಾಗುತ್ತದೆ. ಇಡೀ ರಸ್ತೆ ತುಂಬ ಪ್ರಧಾನಿ ಕಾರು ಮತ್ತು ಅವರ ಬೆಂಗಾವಲು ವಾಹನಗಳೇ ವೇಗವಾಗಿ ಹೋಗುವುದನ್ನು ನಾವು ನೋಡಿದ್ದೇವೆ.

ಹೀಗಿರುವಾಗ ಇಂದು ಗುಜರಾತ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆ ವಾಹನಗಳು ರಸ್ತೆ ಪಕ್ಕ ನಿಂತು, ಆಂಬ್ಯುಲೆನ್ಸ್​ವೊಂದಕ್ಕೆ ದಾರಿ ಬಿಟ್ಟುಕೊಟ್ಟಿವೆ. ಪ್ರಧಾನಿ ಮೋದಿ ನಿನ್ನೆಯಿಂದ ಗುಜರಾತ್​ ಪ್ರವಾಸದಲ್ಲಿ ಇದ್ದಾರೆ. ಇಂದು ಪ್ರಧಾನಿ ಮತ್ತು ಇತರ ಅಧಿಕಾರಿಗಳೆಲ್ಲ ಗುಜರಾತ್​​ನ ಅಹ್ಮದಾಬಾದ್​ನಿಂದ ಗಾಂಧಿನಗರಕ್ಕೆ ಹೋಗುತ್ತಿದ್ದರು. ಈ ವೇಳೆ ಆಂಬ್ಯುಲೆನ್ಸ್​​ ಒಂದು ಸೈರನ್​ ಮಾಡುತ್ತ ಬಂದಿದೆ. ಸದ್ದು ಕೇಳುತ್ತಿದ್ದಂತೆ ಪ್ರಧಾನಿ ಮೋದಿ, ಆಂಬ್ಯುಲೆನ್ಸ್​​ಗೆ ದಾರಿ ಬಿಡುವಂತೆ ತಮ್ಮ ಬೆಂಗಾವಲು ಪಡೆಯ ಸಿಬ್ಬಂದಿಗೆ ಸೂಚಿಸಿದ್ದಾರೆ. ಅದರಂತೆ ಕಪ್ಪು ಕಾರುಗಳು ನಿಧಾನವಾಗಿ ರಸ್ತೆಯ ಎಡಭಾಗಕ್ಕೆ ಸಂಚರಿಸಿ, ನಿಂತಿವೆ. ಹೀಗೆ ಪ್ರಧಾನಿ ಪ್ರಯಾಣ ಮಾಡುತ್ತಿದ್ದ ಕಾರು ಕೂಡ ರಸ್ತೆ ಬದಿಯಲ್ಲಿ ನಿಂತ ಕಾರಣ, ಸುತ್ತಲಿನ ಪ್ರದೇಶಗಳ ಮೇಲೆ ಗಮನ ಇಡಲು ಭದ್ರತಾ ಸಿಬ್ಬಂದಿ ಕಾರಿನಿಂದ ಕೆಳಗೆ ಇಳಿದಿದ್ದರು ಎಂದು ಗುಜರಾತ್​ ಬಿಜೆಪಿ ತಿಳಿಸಿದೆ. ಹಾಗೇ, ವಿಡಿಯೋವನ್ನೂ ಶೇರ್​ ಮಾಡಿಕೊಂಡಿದೆ. ‘ಇವರು ನಿಜವಾದ ಜನನಾಯಕ’ ಎಂದು ಕ್ಯಾಪ್ಷನ್​ ಬರೆದಿದೆ.

ರೋಗಿಗಳನ್ನು ಹೊತ್ತ ಆಂಬ್ಯುಲೆನ್ಸ್​​ ಬಂದಾಗ ಅದು ಮುಂದೆ ಸಾಗಲು ಉಳಿದ ವಾಹನಗಳ ಚಾಲಕರು ದಾರಿ ಮಾಡಿಕೊಡಬೇಕು. ಆದರೆ ಎಷ್ಟೋ ಸಲ ಜನಪ್ರತಿನಿಧಿಗಳ ವಾಹನಗಳಿಂದಾಗಿಯೇ ಆಂಬ್ಯುಲೆನ್ಸ್​​ಗಳು ಮುಂದೆ ಹೋಗಲಾಗದೆ, ಟ್ರಾಫಿಕ್​​ನಲ್ಲಿ ಸಿಕ್ಕು ಪರದಾಡಿದ ಉದಾಹರಣೆಗಳೂ ಇವೆ. ಹೀಗಿರುವಾಗ ಪ್ರಧಾನಿ ಬೆಂಗಾವಲು ಪಡೆ ವಾಹನಗಳೇ ಆ್ಯಂಬುಲೆನ್ಸ್​​ಗೆ ದಾರಿ ಬಿಟ್ಟುಕೊಟ್ಟು ಮಾದರಿಯಾಗಿವೆ.

ಇದನ್ನೂ ಓದಿ: Video | ದೇಶದ 3ನೇ ವಂದೇ ಭಾರತ್​ ರೈಲು ಸಂಚಾರ ಪ್ರಾರಂಭ; ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ!

Murder case: ಗುಜರಾತ್‌ನ ಕಂತ್ರೋಡಿ ತಾಲೂಕಿನ ವಿರಾಮ್‌ಗಮ್‌ನ 34 ವರ್ಷದ ಭಾರತೀಯ ಮೂಲದ ಭದ್ರೇಶ್‌ಕುಮಾರ್ ಸಿ. ಪಟೇಲ್‌ 2015ರ ಏಪ್ರಿಲ್ 12ರಂದು ತನ್ನ ಹೆಂಡತಿಯನ್ನು ಕೊಂದು ಪರಾರಿಯಾಗಿದ್ದು, ಅವನ ಸುಳಿವು ನೀಡಿದವರಿಗೆ ಎಫ್ ಬಿಐ ಬಹುಮಾನ ಘೋಷಿಸಿದೆ.

VISTARANEWS.COM


on

By

murder-case
Koo

ಮೇರಿಲ್ಯಾಂಡ್‌: ಕೊಲೆ ಪ್ರಕರಣದ (murder case) ಆರೋಪಿಯಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಭದ್ರೇಶ್‌ಕುಮಾರ್ ಚೇತನ್‌ಭಾಯ್ ಪಟೇಲ್ ಅಲಿಯಾಸ್ ಭದ್ರೇಶ್‌ಕುಮಾರ್ ಸಿ. ಪಟೇಲ್‌ನ (Bhadreshkumar Chetanbhai Patel alias Bhadreshkumar C. Patel) ಸುಳಿವು ನೀಡಿದವರಿಗೆ 2,50,000 ಡಾಲರ್ (3 ಕೋಟಿ ರೂ.) ಬಹುಮಾನವನ್ನು ಯುನೈಟೆಡ್ ಸ್ಟೇಟ್ಸ್ ನ (United States) ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನ (Federal Bureau of Investigation) ಅಧಿಕಾರಿಗಳು ಘೋಷಿಸಿದ್ದಾರೆ.

ಗುಜರಾತ್‌ನ (gujarat) ಕಂತ್ರೋಡಿ ತಾಲೂಕಿನ ವಿರಾಮ್‌ಗಮ್‌ನ 34 ವರ್ಷದ ಭಾರತೀಯ ಮೂಲದ ಭದ್ರೇಶ್‌ಕುಮಾರ್ ಸಿ. ಪಟೇಲ್‌ 2015ರ ಏಪ್ರಿಲ್ 12ರಂದು ತನ್ನ ಹೆಂಡತಿಯನ್ನು ಕೊಂದು ಪರಾರಿಯಾಗಿದ್ದಾನೆ.

ಯುನೈಟೆಡ್ ಸ್ಟೇಟ್ಸ್‌ನ ಮೇರಿಲ್ಯಾಂಡ್‌ನ ಹ್ಯಾನೋವರ್‌ನಲ್ಲಿರುವ ಭದ್ರೇಶ್‌ಕುಮಾರ್ ಸಿ. ಪಟೇಲ್‌ ಮತ್ತು ಆತನ ಪತ್ನಿ ಪಾಲಕ್ ಪಟೇಲ್ ಡೋನಟ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಟ್ರಯಲ್‌, ಇನ್ನಷ್ಟು ಭೀಕರ ಸ್ಫೋಟಗಳಿಗೆ ಸಿದ್ಧತೆ ಮಾಡಿದ್ದರು ಉಗ್ರರು!

2015ರ ಏಪ್ರಿಲ್ 13ರಂದು ಮೇರಿಲ್ಯಾಂಡ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಹೊರಡಿಸಲಾದ ಬಂಧನ ವಾರಂಟ್ ಪ್ರಕಾರ ಪಟೇಲ್ ವಿರುದ್ಧ ಉದ್ದೇಶಪೂರ್ವಕವಾಗಿ ಹಲ್ಲೆ, ಕೊಲೆ ಮಾಡಿರುವ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಡಿಸ್ಟ್ರಿಕ್ಟ್ ಕೋರ್ಟ್, ಡಿಸ್ಟ್ರಿಕ್ಟ್ ಆಫ್ ಮೇರಿಲ್ಯಾಂಡ್, ಬಾಲ್ಟಿಮೋರ್, ಮೇರಿಲ್ಯಾಂಡ್ 2015 ರಂದು FBI ನ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭದ್ರೇಶ್‌ಕುಮಾರ್ ಸಿ. ಪಟೇಲ್‌ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ.
ನವವಿವಾಹಿತರಾದ ಭದ್ರೇಶಕುಮಾರ್ ಮತ್ತು ಪಾಲಕ್ ಪಟೇಲ್ ಕೊನೆಯ ಬಾರಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ.


ಕೊಲೆ ಮಾಡಿ ಪರಾರಿಯಾಗಿದ್ದು ಹೇಗೆ?

ಮದುವೆಯಾದ ಬಳಿಕ ಭದ್ರೇಶ್‌ಕುಮಾರ್ ಸಿ. ಪಟೇಲ್‌ ಪತ್ನಿಯೊಂದಿಗೆ ಯುನೈಟೆಡ್ ಸ್ಟೇಟ್ಸ್‌ನ ಮೇರಿಲ್ಯಾಂಡ್‌ನ ಹ್ಯಾನೋವರ್‌ನಲ್ಲಿ ನೆಲೆಸಿದ್ದರು. ಅಲ್ಲಿ ಅವರಿಬ್ಬರೂ ಡೋನಟ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಪಾಲಕ್ ಅವರು ಕುಟುಂಬ ಸದಸ್ಯರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಅವರು ಭಾರತಕ್ಕೆ ಮರಳಿ ಬರಲು ಬಯಸುವುದಾಗಿ ಹೇಳಿದ್ದಳು. ಬಳಿಕ ಪಾಲಕ್ ಮತ್ತು ಭದ್ರೇಶ್‌ಕುಮಾರ್ ಹಿಂದಿನ ಕೋಣೆಗೆ ತೆರಳಿದ್ದು, ಅಲ್ಲಿ ಅವಳನ್ನು ಆತ ಚಾಕುವಿನಿಂದ ಇರಿದು ಕೊಂದಿದ್ದ. ಬಳಿಕ ಆತ ಕೆಲವೇ ನಿಮಿಷದಲ್ಲಿ ಹೊರಗೆ ಹೋಗಿದ್ದ.
ಪತ್ನಿಯನ್ನು ಕೊಂದ ಅನಂತರ ಪಟೇಲ್ ಹತ್ತಿರದ ಅಪಾರ್ಟ್‌ಮೆಂಟ್‌ಗೆ ಹೋಗಿ ಬಟ್ಟೆ ಬದಲಿಸಿ, ಪಾಸ್‌ಪೋರ್ಟ್ ಮತ್ತು ಸ್ವಲ್ಪ ಹಣವನ್ನು ತೆಗೆದುಕೊಂಡು ನೆವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೊಟೇಲ್ ಗೆ ಟ್ಯಾಕ್ಸಿಯಲ್ಲಿ ತೆರಳಿದ್ದಾನೆ. ಅಲ್ಲಿ ಆತ ಸುಮಾರು 3 ಗಂಟೆಗೆ ಹೊಟೇಲ್ ಗೆ ತೆರಳಿ ಮರುದಿನ ಅಲ್ಲಿಂದ 10 ಗಂಟೆ ಸುಮಾರಿಗೆ ಹೊಟೇಲ್ ನಿಂದ ಚೆಕ್ ಔಟ್ ಮಾಡಿದ್ದಾನೆ. ಅಲ್ಲಿಂದ ನೆವಾರ್ಕ್ ಪೆನ್ ನಿಲ್ದಾಣಕ್ಕೆ ಹೋಗಿದ್ದು, ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ.

Continue Reading

ಚಿನ್ನದ ದರ

Gold Price Explainer: ಚಿನ್ನದ ದರ ಇಷ್ಟೊಂದು ಏರಲು ಏನು ಕಾರಣ? ಬಂಗಾರದ ಮೇಲೆ ಹೂಡಿಕೆಗಿದು ಸಕಾಲವೇ?

Gold Price Explainer: ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಗಗನಕ್ಕೇರುತ್ತಿದೆ. ಆದರೂ ಶುಭ ಸಮಾರಂಭಗಳ ಸೀಸನ್ ಗಳಲ್ಲಿ ಎಲ್ಲರೂ ಚಿನ್ನ ಖರೀದಿಗೆ ಮುಗಿ ಬೀಳುತ್ತಾರೆ. ಚಿನ್ನದ ದರ ನಿರಂತರ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಈ ಕುರಿತ ವಿಸ್ತೃತ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

By

Gold price
Koo

ನವದೆಹಲಿ: ಚಿನ್ನ (gold) ಯಾರಿಗೆ ಪ್ರಿಯವಿಲ್ಲ ಹೇಳಿ? ಆದರೆ ಇತ್ತೀಚೆಗೆ ವಿಪರೀತ ಏರುತ್ತಿರುವ ಚಿನ್ನದ ದರ ಶೀಘ್ರದಲ್ಲೇ ಲಕ್ಷದ ಗಡಿ ದಾಟುವ ಹಾಗೆ ತೋರುತ್ತಿದೆ. ಚಿನ್ನ ಎಷ್ಟೇ ದುಬಾರಿಯಾದರೂ ಮದುವೆ ಇತ್ಯಾದಿ ಶುಭ ಸಂದರ್ಭಗಳಲ್ಲಿ ಇದರ ಖರೀದಿಗೆ (shopping) ಜನ ಮುಗಿಬೀಳುತ್ತಾರೆ. ಜಾಗತಿಕ ಅನಿಶ್ಚಿತತೆ ಪರಿಣಾಮವಾಗಿ ಶೀಘ್ರದಲ್ಲೇ ಫೆಡರಲ್ ರಿಸರ್ವ್ (Federal Reserve) ದರ ಇಳಿಸುವ ನಿರೀಕ್ಷೆ, ಮದುವೆ ಸೀಸನ್ (Wedding season) ಪ್ರಾರಂಭ ಇತ್ಯಾದಿ ಕಾರಣಗಳಿಂದ ಈ ಬಾರಿ ಚಿನ್ನದ ದರ (Gold Price Explainer) ಮಾತ್ರ ಸಾರ್ವಕಾಲಿಕ ದಾಖಲೆ ಬರೆದಿದೆ. 24 ಕ್ಯಾರೆಟ್‌ನ ಪ್ರತಿ ಹತ್ತು ಗ್ರಾಮ್‌ ಚಿನ್ನದ ದರ 71,652 ರೂ. ಗರಿಷ್ಠ ಮಟ್ಟವನ್ನು ತಲುಪಿದೆ.

ಚಿನ್ನ ಎಷ್ಟೇ ದುಬಾರಿಯಾದರೂ ಖರೀದಿ ಮಾಡುವವರು ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿಯೇ ಇದು ಹೂಡಿಕೆ ದಾರರನ್ನು ಸದಾ ಆಕರ್ಷಿಸುತ್ತಿದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ದಾಖಲೆ ಏರಿಕೆ; 10 ಗ್ರಾಂಗೆ 73,000 ಮೀರಿಸಿದ ಬೆಲೆ

1. ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೆಡ್ಜ್ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.


2. ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

3. ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

4. ಕಡಿಮೆ ಬಡ್ಡಿ ದರಗಳು

ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.


5. ಹೂಡಿಕೆ ಮಾಡಬಹುದೆ?

ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

6. ದರ ಹೆಚ್ಚಳದ ಪರಿಣಾಮ ಏನು?

ಈ ವರ್ಷದ ಆರಂಭದಿಂದಲೂ ಮಾರುಕಟ್ಟೆ ಹೆಚ್ಚು ಸಕ್ರಿಯವಾಗಿದೆ. ಭೌಗೋಳಿಕ-ರಾಜಕೀಯ ಉದ್ವಿಗ್ನತೆಗಳು ಮಾರುಕಟ್ಟೆ ಮೇಲೆ ಪರಿಣಾಮ ಬಿರುತ್ತಿದೆ. ಇದೇ ಬೆಳವಣಿಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಎರಡಕ್ಕೂ ಹೆಚ್ಚಿನ ಲಾಭವಿದೆ. ದರ ಕಡಿತದ ನಿರೀಕ್ಷೆಗಳು ಡಾಲರ್ ಸೂಚ್ಯಂಕ ಮತ್ತು ಯುಎಸ್ ಉತ್ಪಾದನೆಯ ಮೇಲೆ ಚಂಚಲತೆಯನ್ನು ಹೆಚ್ಚಿಸಿದೆ. ಚಿನ್ನದ ಟ್ರೆಂಡ್ ಇನ್ನೂ ಸಕಾರಾತ್ಮಕವಾಗಿದೆ. ಇದು ಮುಂದಿನ ಅವಧಿಯಲ್ಲಿ 72,800 ತಲುಪುವ ನಿರೀಕ್ಷೆ ಇದ್ದು, 70,000 ರೂ. ಗಿಂತ ಕಡಿಮೆ ಕುಸಿಯುವುದಿಲ್ಲ ಎಂದು ನಿರೀಕ್ಷಿಸಲಾಗಿದೆ. ಹಾಗಾಗಿ ಚಿನ್ನದ ಮೇಲೆ ಹಣ ಹೂಡಿದರೆ ನಷ್ಟವಿಲ್ಲ ಎಂಬುದು ಆರ್ಥಿಕ ಪರಿಣತರ ಅಭಿಮತವಾಗಿದೆ.

Continue Reading

ಕರ್ನಾಟಕ

ಇಂಡಿಯಾ ಒಕ್ಕೂಟಕ್ಕೆ ಬಹುಮತ ಸಿಗಲ್ಲ ಎಂದ ಸಿದ್ದರಾಮಯ್ಯ; ಚುನಾವಣೆ ಮೊದಲೇ ಸೋಲೊಪ್ಪಿಗೆ?

ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗುವುದು ಕಷ್ಟ ಸಾಧ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರು ಸೋಲೊಪ್ಪಿಕೊಂಡರೇ ಎಂಬ ಪ್ರಶ್ನೆಗಳು ಮೂಡಿವೆ. ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳದ ಟಿಎಂಸಿ ಸೇರಿ ಹಲವು ಪಕ್ಷಗಳು ಹೊರನಡೆದಿರುವುದೇ ಸಿದ್ದರಾಮಯ್ಯ ಹೇಳಿಕೆಗೆ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಕರ್ನಾಟಕ (Karnataka) ಸೇರಿ ದೇಶಾದ್ಯಂತ ಲೋಕಸಭೆ ಚುನಾವಣೆ (Lok Sabha Election 2024) ಕಾವು ಬೇಸಿಗೆಯ ಬಿಸಿಲಿಗಿಂತ ಜಾಸ್ತಿ ಇದೆ. ಕರ್ನಾಟಕದಲ್ಲಂತೂ ಚುನಾವಣೆಯ ಭರಾಟೆ ದಿನೇದಿನೆ ಜಾಸ್ತಿಯಾಗುತ್ತಲೇ ಇದೆ. ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ, ಕಾಂಗ್ರೆಸ್‌ ರಣತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ, “ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ (India Bloc) ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಕಡಿಮೆ” ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಸಿದ್ದರಾಮಯ್ಯ ಅವರು ಹೀಗೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. “ಲೋಕಸಭೆ ಚುನಾವಣೆ ವೇಳೆ ಇಂಡಿಯಾ ಒಕ್ಕೂಟಕ್ಕೆ ಸ್ಪಷ್ಟ ಬಹುಮತ ಸಿಗುವುದು ಕಷ್ಟಸಾಧ್ಯ. ಹಾಗಂತ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ. ಇಂಡಿಯಾ ಒಕ್ಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್‌ ಪಟ್ನಾಯಕ್‌ ಸೇರಿ ಹಲವು ರಾಜ್ಯಗಳ ಪಕ್ಷಗಳ ಬೆಂಬಲದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸುತ್ತದೆ” ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಬಿಜೆಪಿಯು ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಅವರು ಕೂಡ ಎನ್‌ಡಿಎ ಎಂಬ ಮೈತ್ರಿಕೂಟವನ್ನು ರಚಿಸಿಯೇ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಗಳಿಸುವ ಮತ ಪ್ರಮಾಣವನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, ಬಿಜೆಪಿಯೊಂದೇ ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಗಲು ಸಾಧ್ಯವೇ ಇಲ್ಲ” ಎಂದಿದ್ದಾರೆ.

ಸಿದ್ದು-ಶ್ರೀನಿವಾಸ ಪ್ರಸಾದ್‌ ಭೇಟಿ

ಪ್ರಚಾರದ ಮಧ್ಯೆಯೇ ಸಿದ್ದರಾಮಯ್ಯ ಅವರು ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ತೆರಳಿ ಕೆಲ ಹೊತ್ತು ಚರ್ಚಿಸಿದರು. ಕಳೆದ ಕೆಲವು ವರ್ಷಗಳಿಂದ ಸಿದ್ದರಾಮಯ್ಯ ಅವರಿಂದ ಶ್ರೀನಿವಾಸ ಪ್ರಸಾದ್‌ ಅವರು ದೂರವೇ ಉಳಿದಿದ್ದರು. ಈಗ ಏಕಾಏಕಿ ಸಿದ್ದರಾಮಯ್ಯ ಅವರೇ ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿ ಮಾಡಿದರು. ಭೇಟಿಯ ಬೆನ್ನಲ್ಲೇ, “ನನಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಹಾಗಾಗಿ, ನಾನು ಮೋದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಚಾಮರಾಜನಗರದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ ಇದೆ” ಎಂದು ಹೇಳಿದ್ದಾರೆ. ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು, ಶ್ರೀನಿವಾಸ ಪ್ರಸಾದ್‌ ಅವರು ಬಹುಕಾಲದ ಗೆಳೆಯರು. ರಾಜಕೀಯ ನಿವೃತ್ತಿ ಬಳಿಕ ಭೇಟಿಯಾಗಿರಲಿಲ್ಲ. ಹಾಗಾಗಿ ಭೇಟಿಯಾದೆ ಅಷ್ಟೆ. ಇದು ರಾಜಕೀಯದ ಭೇಟಿ ಅಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

Continue Reading

ಪ್ರಮುಖ ಸುದ್ದಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬರ್‌ಗಳಿಗೆ 10 ದಿನ ಎನ್‌ಐಎ ಕಸ್ಟಡಿ; ಮತ್ತಷ್ಟು ಗ್ರಿಲ್‌ ಮಾಡಲು ಪೊಲೀಸರು ಸಜ್ಜು

Rameshwaram Cafe Blast: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಆರೋಪಿಗಳನ್ನು ರಾತ್ರಿ ಮಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯ ಇಂಟರಾಗೇಷನ್ ಸೆಲ್‌ನಲ್ಲಿರಿಸಿ ವಿಚಾರಣೆ ನಡೆಸಲಾಗಿದೆ. ಕೋರಮಂಗಲದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಇವರನ್ನು ಹಾಜರುಪಡಿಸಲಾಯಿತು. ಎನ್‌ಐಎ ಪರ ವಕೀಲ ಪ್ರಸನ್ನ ಕುಮಾರ್‌ ವಾದ ಮಂಡಿಸಿದರು.

VISTARANEWS.COM


on

Rameshwaram cafe Blast Abdul Matheen Taha Mussavir Hussain Shazeb
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿ ನಡೆದ (Blast in Bengaluru) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ  (Abdul Mateen Taha) ಹಾಗೂ ಮುಜಾವಿರ್ ಹುಸೇನ್‌ ಶಜೀಬ್‌ (mussavir shazeeb hussain) ಇಬ್ಬರನ್ನೂ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಇಬ್ಬರನ್ನೂ ನ್ಯಾಯಾಧೀಶರು 10 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ಒಪ್ಪಿಸಿದ್ದಾರೆ.

ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ  (Abdul Mateen Taha) ಹಾಗೂ ಮುಜಾವಿರ್ ಹುಸೇನ್‌ ಶಜೀಬ್‌ರನ್ನು (mussavir shazeeb hussain) ನಿನ್ನೆ ಕೋಲ್ಕತ್ತಾದಲ್ಲಿ ಎನ್‌ಐಎ (NIA) ಬಂಧಿಸಿತ್ತು. ಇಂದು ಮುಂಜಾನೆ ಬೆಂಗಳೂರಿಗೆ ಕರೆತಂದಿದೆ. ಇವರನ್ನು ಬೆಂಗಳೂರಿಗೆ ಕರೆತಂದ ಇಂಡಿಗೋ ವಿಮಾನ ಕೋಲ್ಕತ್ತಾದ ಸುಭಾಷ್‌ಚಂದ್ರ ಬೋಸ್‌ ಏರ್‌ಪೋರ್ಟ್‌ನಿಂದ ಹೊರಟು, ಮಧ್ಯರಾತ್ರಿ 12:45ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿತ್ತು. ಆರೋಪಿಗಳನ್ನು ಕರೆತರುವ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಆರೋಪಿಗಳನ್ನು ರಾತ್ರಿ ಮಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯ ಇಂಟರಾಗೇಷನ್ ಸೆಲ್‌ನಲ್ಲಿರಿಸಿ ವಿಚಾರಣೆ ನಡೆಸಲಾಗಿದೆ. ಪಶ್ಚಿಮ ಬಂಗಾಳದಿಂದ‌ ಇವರನ್ನು ಕರೆತರಲು ಟ್ರಾನ್ಸಿಟ್ ವಾರೆಂಟ್ ಪಡೆಯಲಾಗಿತ್ತು. ಕೋರಮಂಗಲದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಇವರನ್ನು ಹಾಜರುಪಡಿಸಲಾಯಿತು. ಎನ್‌ಐಎ ಪರ ವಕೀಲ ಪ್ರಸನ್ನ ಕುಮಾರ್‌ ವಾದ ಮಂಡಿಸಿದರು.

ಶಂಕಿತ ಉಗ್ರ ಮುಜಾಮೀಲ್ ಷರೀಫ್ ಎಂಬಾತನಿಂದ ಈ ಇಬ್ಬರು ಶಂಕಿತರ ಸುಳಿವು ದೊರೆತಿತ್ತು. ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಬಗ್ಗೆ ಈತ ಬಾಯ್ಬಿಟ್ಟಿದ್ದು, ಇಬ್ಬರ ಟ್ರಾವೆಲ್ ಹಿಸ್ಟರಿ ಸುಳಿವು ನೀಡಿದ್ದ. ಆರೋಪಿಗಳು ಕೋಲ್ಕತ್ತಾ ಕಡೆಗೆ ಹೊರಟಿದ್ದ ಬಗ್ಗೆ ಮಾಹಿತಿ ನೀಡಿದ್ದ. ಬಾಂಬ್ ಸ್ಫೋಟ ಸಂಬಂಧ ಮುಜಾಮೀಲ್ ಷರೀಫ್‌ನನ್ನು ಎನ್‌ಐಎ ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಎರಡನೇ ಬಾರಿ ವಿಚಾರಣೆ ವೇಳೆ ಅಬ್ದುಲ್ ಮತೀನ್ ಹಾಗೂ ಮುಸಾವೀರ್ ಹುಸೇನ್ ಬಗ್ಗೆ ಸುಳಿವು ನೀಡಿದ್ದ.

ಮುಜಾಮೀಲ್ ಮಾಹಿತಿ ಮೇರೆಗೆ ಎನ್ಐಎ ಹಾಗೂ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಪಶ್ಚಿಮ ಬಂಗಾಳದ ದಿಘಾ ಎಂಬಲ್ಲಿದ್ದ ಶಂಕಿತರನ್ನು ಹೆಡೆಮುರಿ ಕಟ್ಟಿದ್ದರು. ಕರ್ನಾಟಕ, ಆಂಧ್ರ, ತೆಲಂಗಾಣ, ಪಶ್ಚಿಮ ಬಂಗಾಳ ಪೊಲೀಸರು ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಝ್‌ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್‌ ಮುನೀರ್‌ ಸೂತ್ರಧಾರನಾಗಿದ್ದು ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.

ಶಾರಿಕ್ ಜತೆ ಮಂಗಳೂರು ಗೋಡೆ ಬರಹ ಪ್ರಕರಣದ ಆರೋಪಿಯಾಗಿರುವ ಮಾಜ್‌ ಮುನೀರ್ ಸಹ ಹಿಟ್‌ ಲಿಸ್ಟ್‌ನಲ್ಲಿದ್ದಾನೆ. ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದೆ. ಮುಜಾಮಿಲ್ ಷರೀಫ್‌ನನ್ನು ಮತ್ತೆ ಬಂಧಿಸಲಾಗಿದ್ದು, ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮತ್ತಷ್ಟು ಬಾಂಬ್‌ ಸ್ಫೋಟದ ಸಂಚು

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಇನ್ನೂ ಹಲವು ರಾಜ್ಯಗಳಲ್ಲಿ ಮತ್ತಷ್ಟು ಬಾಂಬ್ ಸ್ಫೋಟಿಸುವ ಯೋಜನೆಯನ್ನು ಉಗ್ರರು ಹೆಣೆದಿದ್ದರು. ಬಾಂಬ್ ತಯಾರಿಕೆ ಬಗ್ಗೆ ಟ್ರೇನಿಂಗ್, ತಪ್ಪಿಸಿಕೊಳ್ಳುವ ಪ್ಲಾನ್, ಟ್ರ್ಯಾವೆಲ್ ಮ್ಯಾಪ್ ಮೊದಲೇ ಫಿಕ್ಸ್ ಮಾಡಿಕೊಂಡಿದ್ದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ರಾಜ್ಯದಿಂದ ರಾಜ್ಯಕ್ಕೆ ಎಸ್ಕೇಪ್ ಆಗುತ್ತಾ 43 ದಿನ ತಲೆ ತಪ್ಪಿಸಿಕೊಂಡ ಖತರ್‌ನಾಕ್ ಉಗ್ರರು, ಮತ್ತೊಂದು ಸ್ಫೋಟಕ್ಕೆ ಪ್ಲಾನ್ ಮಾಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಶಂಕಿತ ಉಗ್ರರು ಬಾಂಬ್ ತಯಾರಿಸಿದ ಸ್ಥಳ ಯಾವುದು, ಸಹಾಯ ಮಾಡಿದವರು ಯಾರು, ರಾಮೇಶ್ವರಂ ಕೆಫೆಯನ್ನೇ ಯಾಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು, ಇನ್ನಷ್ಟು ಸ್ಫೋಟಗಳನ್ನು ಎಲ್ಲಿ ಮಾಡಲು ಉದ್ದೇಶಿಸಲಾಗಿತ್ತು, ಎಷ್ಟು ತೀವ್ರತೆಯ ಸ್ಫೋಟಕ ಎಂಬ ಅಂಶಗಳನ್ನು ಎನ್‌ಐಎ ಬಯಲಿಗೆ ಎಳೆಯಲು ಮುಂದಾಗಿದ್ದಾರೆ.

ಬಾಂಬ್‌ ತಯಾರಿಸಿದವನು ತಾಹಾ

ರಾಮೇಶ್ವರಂ ಕೆಫೆ ಬಾಂಬ್ ತಯಾರಿಸಿದ್ದು ಅಬ್ದುಲ್ ಮತೀನ್‌ ತಾಹಾ ಎಂಬುದು ಗೊತ್ತಾಗಿದೆ. ಎಂಜಿನಿಯರಿಂಗ್ ಪದವೀಧರನಾಗಿದ್ದ ಅಬ್ದುಲ್ ತಾಹಾ, ಬಾಂಬ್ ತಯಾರಿಕೆ ಮಾಹಿತಿ ಹೊಂದಿದ್ದ. ಈತ ಇತರರಿಗೂ ಈ ವಿಷಯದಲ್ಲಿ ಟ್ರೇನಿಂಗ್‌ ನೀಡುತ್ತಿದ್ದ. ತಾಹಾ ತಯಾರಿ ಮಾಡಿಕೊಟ್ಟ ಬಾಂಬನ್ನೇ ರಾಮೇಶ್ವರಂ ಕೆಫೆಯಲ್ಲಿ ಮುಸಾವೀರ್ ಇಟ್ಟಿದ್ದ ಎಂದು ಗೊತ್ತಾಗಿದೆ. ಮುಸಾವೀರ್ ಹಾಗೂ ಅಬ್ದುಲ್ ತಾಹಾ ಇಬ್ಬರು ತೀರ್ಥಹಳ್ಳಿಯವರು.

ಪಶ್ಚಿಮ ಬಂಗಾಳದಲ್ಲೇ ಯಾಕೆ?

ಸ್ಫೋಟ ನಡೆಸಿದ ಉಗ್ರರಿಬ್ಬರೂ ಪಶ್ಚಿಮ ಬಂಗಾಳದಲ್ಲಿ ತಲೆ ಮರೆಸಿಕೊಂಡಿದ್ದರು. ಚೆನ್ನೈಯಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ ಮುಂತಾದ ನಕಲಿ ಹೆಸರುಗಳಿಂದ ಮೋಸ್ಟ್ ವಾಂಟೆಡ್ ಅಬ್ದುಲ್ ಮತೀನ್ ತಾಹ ತಲೆ ಮರೆಸಿಕೊಂಡಿದ್ದ. ಇನ್ನು ಬಾಂಬ್ ಇಟ್ಟ ಮುಸಾವೀರ್ ಹುಸೇನ್ ಶಾಜೀಬ್, ಚೆನ್ನೈಯಲ್ಲಿ ಮಹಮ್ಮದ್ ಜುನೈದ್ ಸೈಯದ್, ಕೋಲ್ಕತ್ತಾದಲ್ಲಿ ಯುಶು ಶಹನವಾಜ್ ಪಾಟೀಲ್ ಇತ್ಯಾದಿ ಹೆಸರುಗಳನ್ನಿಟ್ಟುಕೊಂಡು ಓಡಾಡುತ್ತಿದ್ದ. ಹೀಗೆ ಹೀಗೆ ಒಂದೊಂದು ಕಡೆ ಒಂದೊಂದು ಹೆಸರಲ್ಲಿ ಆರೋಪಿಗಳು ಓಡಾಡುತ್ತಿದ್ದರು.

ತಮ್ಮ ಗುರುತು ಮರೆಮಾಚಲು ಇವರು ನಕಲಿ ಅಧಾರ್ ಕಾರ್ಡ್ ಬಳಕೆ ಮಾಡುತ್ತಿದ್ದರು. ಕೊನೆಗೂ ಈ ನಕಲಿ ಕಾರ್ಡ್‌ ಬಳಕೆಯೇ ಆರೋಪಿಗಳ ಬಂಧನದ ಮುಖ್ಯ ಕಾರಣಗಳಲ್ಲಿ ಒಂದಾಗಿದೆ. ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರು ಹೆಚ್ಚಾಗಿ ನಕಲಿ ಆಧಾರ್ ಕಾರ್ಡ್ ಬಳಸುತ್ತಿದ್ದು, ಇದು ವ್ಯಾಪಕವಾಗಿದೆ. ಹೀಗಾಗಿ ಇವರು ಇದೇ ಭಾಗಗಳಲ್ಲಿ ಇರಬಹುದು ಎನ್ನುವ ಶಂಕೆ ಇತ್ತು. ಇದೇ ಶಂಕೆಯ ಆಧಾರದಲ್ಲಿ ಎನ್‌ಐಎ ಕಾರ್ಯಾಚರಣೆ ಮುಂದುವರಸಿತ್ತು.

ತೀರ್ಥಹಳ್ಳಿಯ ಮುಸಾವೀರ್ ಹುಸೇನ್ ಶಾಜೀಬ್

ಬಾಂಬ್‌ ಇಟ್ಟ ಮುಸಾವೀರ್ ಹುಸೇನ್ ಶಾಜೀಬ್ ತೀರ್ಥಹಳ್ಳಿಯ ಮಧ್ಯಮವರ್ಗದ ಕುಟುಂಬದವನಾಗಿದ್ದಾನೆ. ತೀರ್ಥಹಳ್ಳಿಯಲ್ಲಿ ತಾಯಿ ಮಾತ್ರ ವಾಸವಾಗಿದ್ದು, ಮನೆ ಬಾಡಿಗೆಯೇ ಮುಸಾವೀರ್ ಕುಟುಂಬಕ್ಕೆ ಆಧಾರವಾಗಿದೆ. ಈತ ಸಾಂಪ್ರದಾಯಿಕ ಉದ್ದನೆಯ ಬಿಳಿ ನಿಲುವಂಗಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ. ಈತ ಸ್ಥಳೀಯರ ಜೊತೆ ಹೆಚ್ಚು ಬೆರೆಯುತ್ತಿರಲಿಲ್ಲ. ಸ್ಥಳೀಯರಿಗೆ ಹೆಚ್ಚು ಪರಿಚಯವಿಲ್ಲದ ಈತ ತನ್ನ ಸಮುದಾಯದವರು ಇರುವ ಒಂದೆರಡು ಸ್ಥಳಗಳಲ್ಲಿ ಮಾತ್ರ ಓಡಾಡುತ್ತಿದ್ದ.

ಮತೀನ್‌ ತಾಹನೇ ಮಾಸ್ಟರ್‌ ಮೈಂಡ್‌

ಕೆಫೆ ಬ್ಲಾಸ್ಟ್ ಮಾಸ್ಟರ್ ಮೈಂಡ್ ಆಗಿರುವ ಅಬ್ದುಲ್ ಮತೀನ್ ತಾಹಾನ ತಂದೆ ದೇಶಕ್ಕಾಗಿ ಹೋರಾಡಿದ ಯೋಧರಾಗಿದ್ದವರು. ವರ್ಷದ ಹಿಂದೆ ಅವರು ಮೃತಪಟ್ಟಿದ್ದಾರೆ. ತಾಹ ಅತ್ಯಂತ ಚುರುಕಾದ ಎಂಜಿನಿಯರಿಂಗ್ ಪದವೀಧರನಾಗಿದ್ದು, ತೀರ್ಥಹಳ್ಳಿಯಲ್ಲಿ ಪ್ರೌಡಶಾಲೆ ಮುಗಿಸಿ ಬೆಂಗಳೂರಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದ. ಬೆಂಗಳೂರಿಗೆ ಬಂದ ವೇಳೆ ಉಗ್ರರ ಸಂಪರ್ಕಕ್ಕೆ ಬಂದಿದ್ದ. ಪೋಷಕರಿಗೆ ಒಬ್ಬನೇ ಮಗನಾಗಿರುವ ಈತ ಐಇಡಿ ಬಾಂಬ್ ತಯಾರಿಕೆಯ ಎಕ್ಸ್‌ಪರ್ಟ್ ಆಗಿದ್ದ.

ಮಂಗಳೂರು ಕುಕ್ಕರ್ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ಗಳ ಮಾಸ್ಟರ್ ಮೈಂಡ್ ಕೂಡ ಆಗಿರುವ ಮತೀನ್ ತಾಹ ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ. ಈ ಹಿಂದೆ ಎನ್ಐಎ ತಾಹನ ಪತ್ತೆಗೆ ಮೂರು ಲಕ್ಷ ರಿವಾರ್ಡ್ ಘೋಷಿಸಿತ್ತು. ರಾಮೇಶ್ವರಂ ಕೆಫೆ ಬ್ಲಾಸ್ಟ್ ನಂತರ ಹತ್ತು ಲಕ್ಷ ರಿವಾರ್ಡ್ ಘೋಷಿಸಲಾಗಿತ್ತು. ಇದೀಗ ಮುಸಾವೀರ್‌ ಜೊತೆಗೆ ಸಿಕ್ಕಿಬಿದ್ದಿದ್ದಾನೆ.

ಹಲವು ಲಾಡ್ಜ್‌ಗಳಲ್ಲಿ ವಾಸ

ಕಳೆದ 12 ದಿನಗಳಿಂದ ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು, ಅಲ್ಲೂ ಒಂದೇ ಕಡೆ ಇರದೆ ಲಾಡ್ಜ್‌ಗಳನ್ನು ಬದಲಿಸುತ್ತಿದ್ದರು. ಕೋಲ್ಕತ್ತಾದ ಮಿಧಿನಾಪುರದ ಹಲವು ಲಾಡ್ಜ್‌ಗಳಲ್ಲಿ ತಂಗಿದ್ದ ಆರೋಪಿಗಳು ಪ್ರತಿ ಎರಡು ಮೂರು ದಿನಗಳಿಗೊಮ್ಮೆ ವಾಸ್ತವ್ಯ ಬದಲಿಸುತ್ತಿದ್ದರು. ಎರಡು ದಿನಗಳ ಹಿಂದೆಯಷ್ಟೆ ಮಿದ್ನಾಪುರ ದೀಘಾ ಬಳಿ ಲಾಡ್ಜ್ ಬದಲಾಯಿಸಿದ್ದ ಆರೋಪಿಗಳು ಕೋಲ್ಕತ್ತಾದ ಹೊಟೇಲ್ ಪ್ಯಾರಡೈಸ್, ಲೇನಿನ್ ಸೇರಾನಿ ಸೇರಿ ಹಲವು ಹೊಟೇಲ್‌ಗಳಲ್ಲಿ ತಂಗಿದ್ದರು.

ಸಂಜಯ್ ಅಗರವಾಲ್, ಉದಯ್ ದಾಸ್, ಯಶು ಪಟೇಲ್, ವಿಘ್ನೇಶ ಹೀಗೆ ನಾನಾ ನಕಲಿ ಹೆಸರುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮುಸಾವೀರ್ ಹುಸೇನ್ ಮಹಾರಾಷ್ಟದ ಪಾಲ್ಘಾರ್ ಜಿಲ್ಲೆಯ ನಕಲಿ ಆಧಾರ್ ಕಾರ್ಡ್ ನೀಡಿದ್ದ. ಕರ್ನಾಟಕದ ವಿಘ್ನೇಶ್ ಹಾಗೂ ಅಮೋಲ್ ಕುಲಕರ್ಣಿಣಿ ಹೆಸರಿನಲ್ಲಿ ಮತೀನ್ ತಾಹ ನಕಲಿ ದಾಖಲಾತಿ ನೀಡಿದ್ದ. ಹೊಟೇಲ್‌ ಸಿಬ್ಬಂದಿ ಬಳಿ ತಮ್ಮ ಹೆಸರುಗಳು ಸಂಜಯ್ ಅಗರ್‌ವಾಲ್ ಹಾಗು ಉದಯ್ ದಾಸ್ ಎಂದು, ತಾವು ಜಾರ್ಖಂಡ್ ಹಾಗು ತ್ರಿಪುರಾ ಮೂಲದವರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಟ್ರಯಲ್‌, ಇನ್ನಷ್ಟು ಭೀಕರ ಸ್ಫೋಟಗಳಿಗೆ ಸಿದ್ಧತೆ ಮಾಡಿದ್ದರು ಉಗ್ರರು!

Continue Reading
Advertisement
Terror Attack
ವಿದೇಶ17 mins ago

Terror Attack: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ; 11 ಜನರನ್ನು ಅಪಹರಿಸಿ ಬರ್ಬರ ಹತ್ಯೆ

Urvashi Rautela
ಕ್ರೀಡೆ41 mins ago

Urvashi Rautela: ಕ್ರಿಕೆಟಿಗರಾದ ಪಂತ್​,ನಸೀಮ್​ಗೆ ಕೈಕೊಟ್ಟು ಖ್ಯಾತ ಫುಟ್ಬಾಲರ್​ ಜತೆ ಡೇಟಿಂಗ್ ಆರಂಭಿಸಿದ ಊರ್ವಶಿ ರೌಟೇಲಾ​

murder-case
ಕ್ರೈಂ1 hour ago

Murder Case: ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ!

Gold price
ಚಿನ್ನದ ದರ1 hour ago

Gold Price Explainer: ಚಿನ್ನದ ದರ ಇಷ್ಟೊಂದು ಏರಲು ಏನು ಕಾರಣ? ಬಂಗಾರದ ಮೇಲೆ ಹೂಡಿಕೆಗಿದು ಸಕಾಲವೇ?

Lok Sabha Election 2024
ಬೆಂಗಳೂರು2 hours ago

Lok Sabha Election 2024 : ಮಾವಿನ ಹಣ್ಣಿನ ಬ್ಯಾಗ್‌ ಬಿಡ್ರೀ ಎಂದವರ ಬಳಿ ಗರಿ ಗರಿ ನೋಟು; ಜಯನಗರದಲ್ಲಿ 4 ಕೋಟಿ ರೂ. ಸೀಜ್‌

Sonu Srinivas Gowda shares Jail Experience
ಸಿನಿಮಾ2 hours ago

Sonu Srinivas Gowda: ಸಿಕ್ಕಾಪಟ್ಟೆ ಸೊಳ್ಳೆ ಕಾಟ ಇತ್ತು ಎಂದು ಜೈಲಿನ ಅನುಭವ ಹಂಚಿಕೊಂಡ ಸೋನು ಗೌಡ!

CM Siddaramaiah
ಕರ್ನಾಟಕ2 hours ago

ಇಂಡಿಯಾ ಒಕ್ಕೂಟಕ್ಕೆ ಬಹುಮತ ಸಿಗಲ್ಲ ಎಂದ ಸಿದ್ದರಾಮಯ್ಯ; ಚುನಾವಣೆ ಮೊದಲೇ ಸೋಲೊಪ್ಪಿಗೆ?

Siddaramaiah
ಕರ್ನಾಟಕ2 hours ago

ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

Vinesh Phogat
ಕ್ರೀಡೆ2 hours ago

Vinesh Phogat: ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆದಿದೆ; ಡಬ್ಲ್ಯುಎಫ್‌ಐ ವಿರುದ್ಧ ಗಂಭೀರ ಆರೋಪ ಹೊರಿಸಿದ ವಿನೇಶ್

Salman khan Aayush Sharma recalls his father words marry Arpita
ಸಿನಿಮಾ2 hours ago

Salman Khan: ಬಿಡಿಗಾಸೂ ಕೈಯಲ್ಲಿ ಇಲ್ಲದೇ ಇದ್ದಾಗ ಸಲ್ಮಾನ್‌ ಖಾನ್‌ ಸಹೋದರಿಯನ್ನು ಮದುವೆಯಾಗಿದ್ರಂತೆ ಈ ನಟ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 day ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 day ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ2 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20242 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Ugadi 2024
ಬಾಗಲಕೋಟೆ4 days ago

Ugadi 2024 : ಬೀಳಗಿಯ ಎಕ್ಕೆ ಎಲೆ ಭವಿಷ್ಯ; ಈಶಾನ್ಯ, ಪಶ್ಚಿಮ ಭಾಗದಲ್ಲಿ ಭಾರಿ ಕಂಟಕ!

ugadi 2024
ಧಾರವಾಡ4 days ago

Ugadi 2024 : ಹನುಮನಕೊಪ್ಪದಲ್ಲಿ ಭವಿಷ್ಯ ನುಡಿದ ಬೊಂಬೆ! ಮುಂದಿನ ಪ್ರಧಾನಿ ಯಾರಾಗ್ತಾರೆ?

Dina Bhavishya
ಭವಿಷ್ಯ4 days ago

Dina Bhavishya : ನೂತನ ಸಂವತ್ಸರದಲ್ಲಿ ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ

Dina Bhavishya
ಭವಿಷ್ಯ5 days ago

Dina Bhavishya : ಅತಿರೇಕದ ಮಾತು ಈ ರಾಶಿಯವರಿಗೆ ಒಳ್ಳೆಯದಲ್ಲ

ಟ್ರೆಂಡಿಂಗ್‌