Site icon Vistara News

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

PM Narendra Modi

Delhi HC rejects plea seeking disqualification of PM Narendra Modi as Varanasi candidate

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ಪರ್ಧೆಯನ್ನು ಅನರ್ಹ(Disqualification)ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌(Delhi high Court) ವಜಾಗೊಳಿಸಿದೆ. ಪ್ರಧಾನಿ ಮೋದಿ ವಿರುದ್ಧ ವಿಮಾನ ಪೈಲಟ್‌(Pilot) ಕ್ಯಾ. ದೀಪಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್‌ ತಿರಸ್ಕರಿಸಿದೆ. ಪ್ರಧಾನಮಂತ್ರಿ ಅವರು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿರುವುದಾಗಿ ಸುಳ್ಳು ಪ್ರಮಾಣ ಮಾಡಿದ್ದಾರೆ ಎಂದು ಆರೋಪಿಸಿ ದೀಪಕ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿದಾರರು ಪ್ರಧಾನಿ ನರೇಂದ್ರ ಮೋದಿ ನಿರಾಧಾರ ಆರೋಪ ಮಾಡಿದ್ದಾರೆ. ಪ್ರಧಾನಿ ವಿರುದ್ಧದ ಆರೋಪ ನಿರಾಧಾರ. ಸುಖಾ ಸುಮ್ಮನೆ ಪ್ರಧಾನಿ ವಿರುದ್ಧ ಹಗರಣದ ಆರೋಪ ಹೊರಿಸುತ್ತಿದ್ದಾರೆ ಎಂದು ಹೇಳಿರುವ ಕೋರ್ಟ್‌ ದೀಪಕ್‌ ಕುಮಾರ್‌ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಪ್ರಧಾನಿ ಮೋದಿ ಮಾತ್ರವಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಅಮಿತ್‌ ಶಾ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯಾ ಸಿಂದಿಯಾ ಅವರ ಸ್ಪರ್ಧೆಯನ್ನೂ ಅನರ್ಹಗೊಳಿಸುವಂತೆ ದೀಪಕ್‌ ಕುಮಾರ್‌ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್‌ ಈ ಹಿಂದೆ ವಜಾಗೊಳಿಸಿತ್ತು. ಆನಂದ್‌ ಎಸ್‌. ಜೋಂದಲ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್‌ ಅದನ್ನು ವಜಾಗೊಳಿಸಿತ್ತು. ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್‌ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಇಂಡಿಯಾ ಒಕ್ಕೂಟ ಸದಾ ದ್ವೇಷಿಸಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದ್ದರೂ ಅದನ್ನು ತಿರಸ್ಕರಿಸಿ ರಾಮಲಲ್ಲಾಗೆ ಅವಮಾನ ಮಾಡಿದ್ದರು. ಅವರ ಪಕ್ಷಗಳಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ʼಶಕ್ತಿʼಯನ್ನು ನಿರ್ಣಾಮ ಮಾಡಬೇಕೆಂದು ಇಂಡಿಯಾ ಪಣತೊಟ್ಟಿದೆ. ಇಡೀ ದೇಶವೇ ಪೂಜಿಸುವ ಶಕ್ತಿಯನ್ನು ಕಾಂಗ್ರೆಸ್‌ ಅವಮಾನಿಸಿದೆ. ಶಕ್ತಿಯನ್ನು ಪೂಜಿಸುವ ದೇಶದ ಜನ ಕಾಂಗ್ರೆಸ್‌ ಅನ್ನು ಎಂದೂ ಕ್ಷಮಿಸಲ್ಲ ಎಂದು ಪಿಲಿಬಿತ್‌ ಅಭ್ಯರ್ಥಿ ಜಿತಿನ್‌ ಪ್ರಸಾದ್‌ ಪರ ಪ್ರಚಾರದ ವೇಳೆ ಪ್ರಧಾನಿ ವಾಗ್ದಾಳಿ ನಡೆಸಿದ್ದರು.

Exit mobile version