Site icon Vistara News

Independence Day 2023: ಸ್ವಾತಂತ್ರ್ಯ ಸಂಭ್ರಮ; ಮನಮೋಹನ್‌ ಸಿಂಗ್‌ ದಾಖಲೆ ಸರಿಗಟ್ಟಲಿದ್ದಾರೆ ಮೋದಿ

Narendra Modi Red Fort

PM Narendra Modi Equals Independence Day Speech Record Of Former PM Dr Manmohan Singh

ನವದೆಹಲಿ: ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯ (Independence Day 2023) ಸಂಭ್ರಮ ಮನೆಮಾಡಿದೆ. ಎಲ್ಲೆಡೆ ತಿರಂಗಾ ಹಾರಿಸುವ ಮೂಲಕ, ಭಾರತ್‌ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕೆಂಪು ಕೋಟೆಯಲ್ಲಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿ, ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದರೊಂದಿಗೆ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ (Dr Manmohan Singh) ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸತತ 10ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡುವ ಮೂಲಕ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಯುಪಿಎ ಮೊದಲ ಹಾಗೂ ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರು ಸತತ 10 ವರ್ಷ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದ್ದರು. ಈ ದಾಖಲೆಯನ್ನು ಮೋದಿ ಸರಿಗಟ್ಟಲಿದ್ದಾರೆ.

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್.‌

ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಿಯಾದ ಬಳಿಕ ಇದುವರೆಗೆ ಸತತವಾಗಿ ಧ್ವಜಾರೋಹಣ ನೆರವೇರಿಸುತ್ತಿದ್ದಾರೆ. ಈಗ ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ, ಭಾಷಣ ಮಾಡುವ ಮೂಲಕ ಮನಮೋಹನ್‌ ಸಿಂಗ್‌ ಅವರ ದಾಖಲೆಯನ್ನು ಸಮಗೊಳಿಸಲಿದ್ದಾರೆ.

ಇದನ್ನೂ ಓದಿ: Achievements of Independence India: ಸ್ವತಂತ್ರ ಭಾರತದ ಸಾಧನೆಯ ಹೆಜ್ಜೆ ಗುರುತುಗಳಿವು

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮಾಧಿ ಸ್ಥಳವಾದ ರಾಜ್‌ಘಾಟ್‌ಗೆ ತೆರಳಲಿರುವ ನರೇಂದ್ರ ಮೋದಿ ಅವರು ಗಾಂಧೀಜಿ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ. ಇದಾದ ಬಳಿಕ ಕೆಂಪುಕೋಟೆಗೆ ಆಗಮಿಸಲಿರುವ ಮೋದಿ, ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ದೇಶದ ಜನರನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.

Exit mobile version