Site icon Vistara News

ಆಡ್ವಾಣಿ ಬರ್ತ್‌ಡೇಗೆ ಪಿಎಂ ವಿಶ್, ಸಮಗ್ರತೆ-ಸಮರ್ಪಣೆಯ ದಾರಿದೀಪ ಅಂದ್ರು ಮೋದಿ!

PM Narendra Modi greets LK Advani birth day

ನವದೆಹಲಿ: ಭಾರತೀಯ ಜನತಾ ಪಾರ್ಟಿಯ (BJP) ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಆಡ್ವಾಣಿ (LK Advani) ಅವರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹುಟ್ಟುಹುಬ್ಬದ ಶುಭಾಶಯ (Birth Day Wish) ಕೋರಿ, ಆಡ್ವಾಣಿ ಅವರು ಸಮಗ್ರತೆ ಮತ್ತು ಸಮರ್ಪಣೆಯ ದಾರಿದೀಪವಾಗಿದ್ದಾರೆ ಎಂದು ಹೇಳಿದ್ದಾರೆ. ಆಡ್ವಾಣಿ ಅವರ ನಿವಾಸಕ್ಕೇ ತೆರಳಿ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದರು.

ಆಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ಸಮಗ್ರತೆ ಮತ್ತು ಸಮರ್ಪಣೆಯ ದಾರಿ ದೀಪವಾಗಿದ್ದಾರೆ. ಅವರು ನಮ್ಮ ರಾಷ್ಟ್ರವನ್ನು ಬಲಪಡಿಸಿದ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಯ ದಾರಿದೀಪವಾಗಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬರೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ 96 ವರ್ಷದ ಲಾಲ್ ಕೃಷ್ಣ ಆಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆಡ್ವಾಣಿ ಅವರು ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯ ಶಾಶ್ವತ ಮೂಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಲ್ ಕೃಷ್ಣ ಆಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಆಡ್ವಾಣಿ ಜೀ ಅವರು ತಮ್ಮ ಅವಿರತ ಶ್ರಮ ಮತ್ತು ಸಂಘಟನಾ ಕೌಶಲ್ಯದಿಂದ ಪಕ್ಷವನ್ನು ಬೆಳೆಸಲು ಮತ್ತು ಕಾರ್ಯಕರ್ತರನ್ನು ಕಟ್ಟಲು ಶ್ರಮಿಸಿದ್ದಾರೆ. ಬಿಜೆಪಿಯ ಪ್ರಾರಂಭದಿಂದ ಅಧಿಕಾರಕ್ಕೆ ಬರುವವರೆಗೆ ಆಡ್ವಾಣಿ ಅವರ ಅನುಪಮ ಕೊಡುಗೆಯಾಗಿದೆ. ಪ್ರತಿಯೊಬ್ಬ ಕೆಲಸಗಾರನಿಗೆ ಸ್ಫೂರ್ತಿ ನೀಡಿದ್ದಾರೆ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

1927ರಲ್ಲಿ ಕರಾಚಿಯಲ್ಲಿ ಜನಿಸಿದ ಆಡ್ವಾಣಿ 1998 ಮತ್ತು 2004 ರ ನಡುವೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರದಲ್ಲಿ ಗೃಹ ವ್ಯವಹಾರಗಳ ಸಚಿವರಾಗಿದ್ದರು. ಆಡ್ವಾಣಿ ಅವರು 2002ರಿಂದ 2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಅಡಿಯಲ್ಲಿ ಉಪ ಪ್ರಧಾನ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

96 ವರ್ಷದ ಎಲ್ ಕೆ ಆಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ಮತ್ತು ಕಿರಿಯ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಜತೆಗೆ, ವಿವಿಧ ಪಕ್ಷಗಳ ಮುಖಂಡರು ಕೂಡ ವಿಶ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Karnataka Election 2023: ಬಿಜೆಪಿಯವರು ಎಲ್.ಕೆ ಆಡ್ವಾಣಿಯನ್ನೇ ಮನೆಗೆ ಕಳಿಸಿದ್ದಾರೆ, ಇನ್ನು ಇಲ್ಲಿಯವರು ಯಾವ ಲೆಕ್ಕ: ಎಚ್.ಡಿ. ಕುಮಾರಸ್ವಾಮಿ

Exit mobile version