Site icon Vistara News

PM Narendra Modi: ಮೋದಿ ಧ್ಯಾನ ಮಾಡುವುದು ನೀತಿ ಸಂಹಿತೆ ಉಲ್ಲಂಘನೆಯೆ? ಕಾನೂನು ತಜ್ಞರ ಅಭಿಪ್ರಾಯ ಹೀಗಿದೆ

PM Narendra Modi

ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024) ಕೊನೆಯ ಹಂತಕ್ಕೆ ಬಂದು ತಲುಪಿದೆ. ಇಂದು ಏಳನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಚುನಾವಣಾ ಪ್ರಚಾರ ಅಂತ್ಯಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೂರು ದಿನಗಳ ಕಾಲ ಕನ್ಯಾಕುಮಾರಿ(Kanyakumari) ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಸ್ವಾಮಿ ವಿವೇಕಾನಂದ(Swamy Vivekananda)ರ ಗೌರವಾರ್ಥ ನಿರ್ಮಿಸಿರುವ ಕಲ್ಲಿನ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ. ಇನ್ನು ಪ್ರಧಾನಿ ಮೋದಿಯವರ ಈ ಧ್ಯಾನದ ವಿಚಾರಕ್ಕೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದ, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಅರೋಪಿಸಿದ್ದಾರೆ. ಆದರೆ ಪ್ರಧಾನಿ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡುತ್ತಾರೆಯೇ ಹೊರತು ಚುನಾವಣೆ ಬಗ್ಗೆ ಮಾತನಾಡುವುದಿಲ್.‌ ಹಾಗಿರುವ ನೀತಿ ಸಂಹಿತೆ ಉಲ್ಲಂಘನೆ ಹೇಗೆ ತಾನೇ ಆಗಲು ಸಾಧ್ಯ ಎಂದು ಕಾನೂನು ಸಲಹೆಗಾರರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಆರೋಪ ಏನು?

ಸಾರ್ವಜನಿಕ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 126 ಪ್ರಕಾರ, ಮತದಾನಕ್ಕೆ 48 ಗಂಟೆಗಳ ಮೊದಲು ಚುನಾವಣಾ ಪ್ರಚಾರ ಮಾಡುವಂತಿಲ್ಲ. ಮತದಾನಕ್ಕೆ 48 ಗಂಟೆಗಳ ಮೊದಲು ಮೌನ ಅವಧಿ ಪ್ರಾರಂಭವಾಗುತ್ತದೆ. ವಾಸ್ತವವಾಗಿ, ಪ್ರಧಾನಿ ಮೋದಿ ಅವರ ಧ್ಯಾನ ಯಾತ್ರೆಯು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಧಾನಿಯವರ ಧ್ಯಾನ ಯಾತ್ರೆಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಕಾನೂನು ಸಲಹೆಗಾರರು ಹೇಳೋದೇನು?

ಕಾನೂನು ತಜ್ಞರ ಪ್ರಕಾರ, ಧ್ಯಾನದ ನೇರ ಪ್ರಸಾರವು ನೀತಿ ಸಂಹಿತೆಯ ನಿಯಮವನ್ನು ಉಲ್ಲಂಘನೆ ಮಾಡುವುದಿಲ್ಲ. ಏಕೆಂದರೆ ಧ್ಯಾನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಬಹುದಾದ ಯಾವುದೇ ಹೇಳಿಕೆಗಳನ್ನು ಕೊಡುವುದಿಲ್ಲ. 2019 ರ ಚುನಾವಣಾ ಪ್ರಚಾರದ ನಂತರ ಪ್ರಧಾನ ಮಂತ್ರಿ ಕೇದಾರನಾಥ ಗುಹೆಯಲ್ಲಿ ಇದೇ ರೀತಿಯ ಧ್ಯಾನ ಮಾಡಿದ್ದರು. ಆಗಲೂ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಜನರ ಪ್ರಾತಿನಿಧ್ಯ ಕಾಯಿದೆ, 1951 ರ ಸೆಕ್ಷನ್ 126, ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕ ಸಭೆಗಳು ಅಥವಾ ಪ್ರಚಾರ ಮತ್ತು ಸಾರ್ವಜನಿಕರಿಗೆ ಚುನಾವಣಾ ವಿಷಯ ಪ್ರದರ್ಶಿಸುವುದನ್ನು ನಿಷೇಧಿಸುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಅದಾಗ್ಯೂ, ಬಹು-ಹಂತದ ಚುನಾವಣೆಗಳ ಸಂದರ್ಭದಲ್ಲಿ ಇದು ಅನ್ವಯಿಸುವುದಿಲ್ಲ. ಚುನಾವಣೆ ನಡೆಯುವ ಕ್ಷೇತ್ರದಲ್ಲಿ ಇಂತಹ ಕಾರ್ಯಕ್ರಮ ಕೈಗೊಂಡರೆ ಅದರಿಂದ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

2000 ಪೊಲೀಸರನ್ನು ನಿಯೋಜನೆ

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ಯಾನ ಮಾಡಲಿದ್ದು ಇದಕ್ಕಾಗಿ ಭಾರೀ ಬಿಗಿ ಭದ್ರತೆ ಒದಗಿಸಲಾಗಿದೆ. ಸ್ಥಳದಲ್ಲಿ ಸುಮಾರು 2,000 ಪೊಲೀಸರ ಹೊರತಾಗಿ ವಿವಿಧ ಭದ್ರತಾ ಏಜೆನ್ಸಿಗಳು ಕಟ್ಟುನಿಟ್ಟಿನ ನಿಗಾ ವಹಿಸಲಿವೆ. ಅಷ್ಟೇ ಅಲ್ಲ, ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಕಡಲ ಗಡಿಗಳಲ್ಲಿ ಕಣ್ಗಾವಲು ನಡೆಸಲಿದೆ.

Exit mobile version