ಹೊಸದಿಲ್ಲಿ: ಇಂದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ಕಾರ್ಗಿಲ್ ವಿಜಯ್ ದಿವಸ್(Kargil Vijay Diwas 2024). ಇಂದಿಗೆ ಕೆಣಕಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತ್ಯಾಗ ಬಲಿದಾನವನ್ನು ಲೆಕ್ಕಿಸದೇ ದಿಟ್ಟ ಉತ್ತರ ಕೊಟ್ಟು 25ವರ್ಷಗಳು ಸಂದಿವೆ. ಪಾಕಿಸ್ತಾನದೊಂದಿಗಿನ (india- pakistan war) 1999ರ ಸಂಘರ್ಷದಲ್ಲಿ ಭಾರತದ ವಿಜಯದ ಸ್ಮರಣಾರ್ಥವಾಗಿ ಜುಲೈ 26ರಂದು ಆಚರಿಸಲಾಗುತ್ತದೆ. ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ(PM Narendra Modi Live) ಅವರು ಲಡಾಕ್ ನಲ್ಲಿರುವ ಡ್ರಾಸ್ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಭೇಟಿಯ ಲೈವ್ ಇಲ್ಲಿ ವೀಕ್ಷಿಸಿ.
ಇನ್ನು ಇದೇ ಸಂದರ್ಭದಲ್ಲಿ ಅವರು ವರ್ಚುವಲ್ ಮೂಲಕ ಶಿಂಕುನ್ ಲಾ ಸುರಂಗ ಯೋಜನೆಯ ಮೊದಲ ಸ್ಫೋಟಕ ನಡೆಸಿಕೊಡಲಿದ್ದಾರೆ. ಇದಕ್ಕೂ ಮುನ್ನ ಲಡಾಖ್‌ನ ನಿವೃತ್ತ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ ಬಿ.ಡಿ. ಮಿಶ್ರಾ ಅವರು ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದ್ದಾರೆ. ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಬಿ. ಡಿ. ಮಿಶ್ರಾ ಅವರು ಲೆಫ್ಟಿನೆಂಟ್ ಗವರ್ನರ್ ಸೆಕ್ರೆಟರಿಯೇಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಗಿಲ್ ಯುದ್ಧ ಸ್ಮಾರಕ ಡ್ರಾಸ್‌ಗೆ ಭೇಟಿ ನೀಡುವ ಕುರಿತು ಚರ್ಚಿಸಿದ್ದಾರೆ. ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಎಲ್‌ಜಿ ಮಿಶ್ರಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
2022ರಲ್ಲಿ ಪ್ರಧಾನಿ ಮೋದಿ ಅವರು ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು. ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಸಮರ್ಪಿಸಿದ್ದರು. ಬಳಿಕ 1999ರಲ್ಲಿ ಇಲ್ಲಿ ಪ್ರಾಣ ಕಳೆದುಕೊಂಡ ಸೇನಾ ಸಿಬ್ಬಂದಿಗೆ ಗೌರವ ಸಲ್ಲಿಸಿದ್ದರು. ಭಾರತದಲ್ಲಿ ವಾರ್ಷಿಕವಾಗಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. 1999ರಲ್ಲಿ ಆಪರೇಷನ್ ವಿಜಯ್ ವಿಜಯವನ್ನು ಇದು ನೆನಪಿಸುತ್ತದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧದ ಮುಕ್ತಾಯವನ್ನು ಇದು ಸೂಚಿಸುತ್ತದೆ. ಈ ಯುದ್ಧ 1999ರ ಮೇ ತಿಂಗಳಲ್ಲಿ ಪ್ರಾರಂಭವಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಭಯೋತ್ಪಾದಕರು ಒಳನುಸುಳಿದ್ದು, ಅವರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೈನಿಕರು ಯಶಸ್ವಿಯಾಗಿದ್ದರು.
ಇದನ್ನೂ ಓದಿ: Kargil Vijay Diwas 2024: ಗುಂಡುಗಳು ದೇಹ ತೂರಿದ್ದರೂ ಹಿಂದೆ ಸರಿಯದೆ ಶತ್ರುಗಳನ್ನು ಹಿಮ್ಮೆಟ್ಟಿಸಿದರು!