ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು(Benjamin Netanyahu) ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಸರಿ ಸುಮಾರು ಒಂದು ವರ್ಷದಿಂದ ಭುಲೆದ್ದಿರುವ ಸಂಘರ್ಷವನ್ನು ಪರಸ್ಪರ ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಶೀಘ್ರ ಮತ್ತು ಶಾಂತಿಯುತವಾಗಿ ಪರಿಹರಿಸುವಂತೆ ಮೋದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಪಶ್ಚಿಮ ಏಷ್ಯಾದಲ್ಲಿ ಕಳೆದ ವರ್ಷ ಅಕ್ಟೋಬರ್ 7 ರಂದು ಪ್ಯಾಲೇಸ್ಟಿನಿಯನ್ ಮೂಲದ ಹಮಾಸ್ ಉಗ್ರರು ಇಸ್ರೇಲ್‌ಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು, ಸುಮಾರು 250 ಜನರನ್ನು ಅಪಹರಿಸಿ ಒತ್ತೆಯಾಳುಗಳನ್ನಾಗಿರಿಸಿಕೊಂಡ ನಂತರ ಈ ಸಂಘರ್ಷ ಶುರುವಾಗಿತ್ತು. ಇಸ್ರೇಲ್‌ನ ಸೇನಾ ಕಾರ್ಯಾಚರಣೆಯಲ್ಲಿ ಗಾಜಾಪಟ್ಟಿಯನ್ನು ಸಂಪೂರ್ಣವಾಗಿ ಪುಡಿಗಟ್ಟಲಾಗಿದೆ. ಅಲ್ಲದೇ 40,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರನ್ನು ಇಸ್ರೇಲ್ ಸೇನೆ ಕೊಂದಿದೆ. ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳ ಪ್ರಕಾರ. 17,000 ಹಮಾಸ್ ಉಗ್ರನ್ನು ಮಟ್ಟಹಾಕುವಲ್ಲಿ ಇಸ್ರೇಲ್ ಯಶಸ್ವಿಯಾಗಿದೆ. ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಮಾನವೀಯತೆ ತೋರುವಂತೆ ನೆತನ್ಯಾಹು ಜೊತೆಗಿನ ಮಾತುಕತೆ ವೇಳೆ ಪ್ರಧಾನಿ ಮೋದಿ ಪುನರುಚ್ಚರಿಸಿದರು.
ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ವಿವಿಧ ಅಂಶಗಳನ್ನು ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆಯೂ ಚರ್ಚಿಸಿದ್ದಾರೆ. ಅಲ್ಲದೇ ಸದಾ ಪರಸ್ಪರರ ಜೊತೆ ಸಂಪರ್ಕ ಕಾಪಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಥವಾ MEA ಹೇಳಿದೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಹೋರಾಟವನ್ನು ಕೊನೆಗೊಳಿಸಲು ಮತ್ತು ಉಳಿದ ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಇಂದು ದೋಹಾದಲ್ಲಿ ನಡೆಯಬೇಕಾಗಿದ್ದ ಗಾಜಾ ಕದನ ವಿರಾಮ ಮಾತುಕತೆಗಳನ್ನು ಶುಕ್ರವಾರ ರದ್ದುಗೊಂಡಿದೆ. ಇದುವರೆಗಿನ ಮಾತುಕತೆಯಲ್ಲಿ ಹಮಾಸ್ ಪ್ರತಿನಿಧಿಗಳು ನೇರವಾಗಿ ಔಆಗಿಯಾಗಿರಲೇ ಇಲ್ಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಅಂದರೆ ಗಾಜಾದಲ್ಲಿ ಯುದ್ಧ ಪ್ರಾರಂಭವಾದ ಎರಡು ತಿಂಗಳ ನಂತರ, ಪ್ರಧಾನಿ ಮೋದಿ ಅವರು ಬೆಂಜಮಿನ್ ನೆತನ್ಯಾಹು ಅವರಿಗೆ ಭಾರತದ “ಸ್ಥಿರ ನಿಲುವು” ಯನ್ನು ಪುನರುಚ್ಚರಿಸಿದ್ದಾರೆ. ಅಲ್ಲದೇ ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಸಂಘರ್ಷದಿಂದ ಬಾಧಿತರಾದವರಿಗೆ ಮಾನವೀಯ ನೆರವು ನೀಡಲು ಭಾರತ ಕರೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನು ಇಂದು ಪ್ರಧಾನಿ ನರೇಂದ್ರ ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್(Muhammad Yunus) ಕರೆ ಮಾಡಿ ಬಾಂಗ್ಲಾದೇಶ(Bangladesh Unrest)ದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ: Israel attack: ಗಾಜಾದ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಮಂದಿ ಸಾವು