Site icon Vistara News

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

PM Narendra Modi

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಕೃಪಾ ಶಂಕರ್‌ ಸಿಂಗ್‌ ಮತ್ತು ಬಿಪಿ ಸರೋಜ್‌ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಸಿಎಂ ಯೋಗಿ ಅವರ ಸಹಕಾರದೊಂದಿಗೆ ಇದೀ ಪೂರ್ವಾಂಚಲ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಈ ವೇಳೆ ಅವರು ಸಭೆಯ ನಡುವೆ ವಿಶೇಷ ಉಡುಗೆ ತೊಡುಗೆಯಲ್ಲಿ ಮಿಂಚುತ್ತಿದ್ದ ಇಬ್ಬರು ಬಾಲಕರನ್ನು ಗಮನಿಸಿ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದ ಮೋದಿ, “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

ಇದನ್ನೂ ಓದಿ:Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

Exit mobile version