Site icon Vistara News

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

CAA Certificate

Centre grants citizenship certificates under CAA to people from West Bengal

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಮಧ್ಯೆ ವಾಕ್ಸಮರ, ವಾಗ್ದಾಳಿ, ಟೀಕೆ, ವ್ಯಂಗ್ಯ ಚುರುಕಾಗಿವೆ. ಇದಕ್ಕೆ ನಿದರ್ಶನ ಎಂಬಂತೆ, “ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಎನ್‌ಡಿಟಿವಿಗೆ ನೀಡಿದ ಸಂದರ್ಶನದ ವೇಳೆ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್‌ 4ರಂದು ಲೋಕಸಭೆ ಅವಧಿ ಮುಗಿಯಲಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರ್ಕಾರ ರಚಿಸಲಿದೆ. ನಾನು ಕಾಶಿಯವ (ಅವರ ಲೋಕಸಭೆ ಕ್ಷೇತ್ರ), ನಾನು ಅವಿನಾಶಿ. ಕಾಶಿಯನ್ನು ಹೇಗೆ ನಾಶಪಡಿಸಲು ಆಗುವುದಿಲ್ಲವೋ, ಹಾಗೆಯೇ, ನನ್ನನ್ನು ಕೂಡ ಯಾರಿಂದಲೂ ನಾಶಪಡಿಸಲು ಆಗುವುದಿಲ್ಲ” ಎಂಬುದಾಗಿ ಹೇಳಿದರು.

ಬಿಜೆಪಿಯೇ ಅಧಿಕಾರಕ್ಕೆ ಎಂದ ಸಮೀಕ್ಷೆ

ಲೋಕಸಭೆ ಚುನಾವಣೆ ಕುರಿತು ಸಟ್ಟಾ ಬಜಾರ್‌ ಸಮೀಕ್ಷಾ ವರದಿ ತಯಾರಿಸಿದೆ. ಐದು ಹಂತದ ಮತದಾನದ ಮುಕ್ತಾಯದ ಬಳಿಕ ಸಟ್ಟಾ ಬಜಾರ್ ಸಮೀಕ್ಷಾ ವರದಿ ಪ್ರಕಟಿಸಿದಂತೆ, ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ. ತಮಿಳುನಾಡು ಹಾಗೂ ಒಡಿಶಾ ಕೂಡ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳನ್ನು ತಂದುಕೊಡಲಿವೆ ಎಂಬುದಾಗಿ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

Exit mobile version