PM Narendra Modi: ಮಹಿಳಾ ಮೀಸಲು ಜಾರಿ ಮಾಡಿದ್ದು ಯಾರು? ಮಹಿಳೆಯರು ನೆನಪಿಟ್ಟುಕೊಳ್ಳಬೇಕು ಎಂದ ಮೋದಿ Vistara News

ದೇಶ

PM Narendra Modi: ಮಹಿಳಾ ಮೀಸಲು ಜಾರಿ ಮಾಡಿದ್ದು ಯಾರು? ಮಹಿಳೆಯರು ನೆನಪಿಟ್ಟುಕೊಳ್ಳಬೇಕು ಎಂದ ಮೋದಿ

PM Narendra Modi: ವರ್ಷಾಂತ್ಯಕ್ಕೆ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈಗಿನಿಂದಲೇ ಪ್ರಚಾರ ಆರಂಭಿಸಿದ್ದಾರೆ.

VISTARANEWS.COM


on

built 4 crore pucca house but i havent one for me Says PM Narendra modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ (Rajasthan Assembly Election) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ಚುನಾವಣೆಯ ಕಹಳೆಯನ್ನು ಮೊಳಗಿಸಿದರು. ಭಾರತೀಯ ಜನತಾ ಪಾರ್ಟಿ (BJP) ಆಯೋಜಿಸಿರುವ ಪರಿವರ್ತನ್ ಸಂಕಲ್ಪ್ ಮಹಾಸಭಾ (Parivartan Sankalp Mahasabha) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೋದಿ, ತಮ್ಮ ಭಾಷಣದಲ್ಲಿ ಸನಾತನ ಧರ್ಮ(Sanatan Dharma), ಇಂಡಿಯಾ ಕೂಟ(INDIA Bloc), ಚಂದ್ರಯಾನ-3 (Chandrayaan 3), ಜಿ20 ಶೃಂಗಸಭೆ(G20 Summit) ಸೇರಿದಂತೆ ಅನೇಕ ವಿಷಯಗಳನ್ನು ಪ್ರಸ್ತಾಪಿಸಿದರು. ಮಾತನಾಡುತ್ತಲೇ, ”ಮಹಿಳಾ ಮೀಸಲು ವಿಧೇಯಕವನ್ನು ಯಾರು ಜಾರಿಗೆ (Women’s Reservation Bill) ತಂದರು” ಎಂದು ಪ್ರಶ್ನಿಸಿದರು. ಬಿಜೆಪಿ ಕಾರ್ಯಕರ್ತರು, ”ಮೋದಿ ಮೋದಿ ಮೋದಿ” ಎಂದು ಘೋಷಣೆ ಕೂಗಿದರು. ಆಗ ಮೋದಿ, ”ಇಲ್ಲ ನಿಮ್ಮ ಉತ್ತರ ತಪ್ಪು. ನಿಮ್ಮ ಒಂದು ವೋಟು ಮಹಿಳಾ ಮೀಸಲು ವಿಧೇಯಕವನ್ನು ಜಾರಿಗೆ ತಂದಿದೆ” ಎಂದು ಹೇಳಿದರು.

ಕಾಂಗ್ರೆಸ್ ಮನಸ್ಸು ಮಾಡಿದ್ದರೆ 30 ವರ್ಷಗಳ ಹಿಂದೆಯೇ ಮಹಿಳಾ ಮೀಸಲು ವಿಧೇಯಕವನ್ನು ಜಾರಿಗೆ ತರುತ್ತಿತ್ತು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಮೀಸಲು ಜಾರಿ ಮಾಡುವುದು ಬೇಕಾಗಿರಲಿಲ್ಲ. ಕಾಂಗ್ರೆಸ್ ಮತ್ತು ಘಮಂಡಿಯಾ ಒಕ್ಕೂಟವು ಮಹಿಳಾ ಮೀಸಲು ವಿರುದ್ಧವಿದೆ. ರಾಜಸ್ಥಾನದ ನನ್ನ ಸಹೋದರಿಯರೇ, ಈ ಸಂಗತಿಯನ್ನು ಯಾವಾಗಲೂ ನೆನಪಡಿ ಮತ್ತು ಎಚ್ಚರಿಕೆ ವಹಿಸಿ ಎಂದು ಮಹಿಳೆಯರಿಗೆ ಕರೆ ನೀಡಿದರು.

ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ

ರಾಜಸ್ಥಾನದ ಸನಾತನ ಪರಂಪರೆಯನ್ನು ನೆನಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಚುನಾವಣೆ ಮಾತ್ರವಲ್ಲ ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟಕ್ಕೆ ರಾಜಸ್ಥಾನವು ಪಾಠ ಕಲಿಸಲಿದೆ. ಅವರು ಬೇರು ಸಮೇತ ಕಿತ್ತು ಬೀಳಲಿದ್ದಾರೆ ಎಂದು ಹೇಳಿದರು.

ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮೋದಿ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕಣರವನ್ನು ಉಲ್ಲೇಖಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳ ವಿರುದ್ಧ ಗೆಹ್ಲೋಟ್ ಸರ್ಕಾರವು ಕ್ರಮ ಕೈಗೊಂಡಿಲ್ಲ. ಆದರೆ, ಬಿಜೆಪಿಯು ಶೀಘ್ರವೇ ಆಡಳಿತಕ್ಕೆ ಬರತ್ತದೆ ಮತ್ತು ಯುವಕರ ತೊಂದರೆಯನ್ನು ಪರಿಹರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಎಲ್ಲ ಗ್ಯಾರಂಟಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ

ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗ್ಯಾರಂಟಿ ಹೆಸರಿನಲ್ಲಿಯೇ ಕಾಂಗ್ರೆಸ್‌ಗೆ ತಿರುಗೇಟು ನೀಡುತ್ತಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಕಾರ್ಯಕರ್ತ ಮಹಾಕುಂಭದಲ್ಲಿ (Karyakarta Mahakumbh) ಪಾಲ್ಗೊಂಡ ಅವರು, “ದೇಶದಲ್ಲಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಲು ಮೋದಿಯೇ ಗ್ಯಾರಂಟಿ” ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ: Women’s Reservation Bill: ಅವಿರೋಧವಾಗಿ ‘ಮಹಿಳಾ ಮೀಸಲು ವಿಧೇಯಕ’ ಅಂಗೀಕರಿಸಿದ ರಾಜ್ಯಸಭೆ! ಇತಿಹಾಸ ಸೃಷ್ಟಿ

“ವರ್ಷಗಳವರೆಗೆ ದೇಶವನ್ನು ಆಳಿದ ಕಾಂಗ್ರೆಸ್‌ಗೆ ದೇಶಾದ್ಯಂತ ಶೌಚಾಲಯ ನಿರ್ಮಿಸಬೇಕು ಎಂಬ ಕನಿಷ್ಠ ಕಾಳಜಿಯೂ ಇರಲಿಲ್ಲ. ಮಹಿಳೆಯರಿಗೆ ಕನಿಷ್ಠ ಒಂದು ಬ್ಯಾಂಕ್‌ ಖಾತೆ ಇರಲಿಲ್ಲ. ದೇಶಾದ್ಯಂತ ಶೌಚಾಲಯಗಳನ್ನು ನಿರ್ಮಿಸಲು, ಬ್ಯಾಂಕ್‌ ಖಾತೆ ತೆರೆಯಲು ಮೋದಿಯೇ ಬರಬೇಕಾಯಿತು. ಏಕೆಂದರೆ, ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್‌ಗೆ ನಿಯತ್ತು ಇರಲಿಲ್ಲ” ಎಂದು ಹರಿಹಾಯ್ದರು. ಹಾಗೆಯೇ, ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು. ರಾಜ್ಯ, ದೇಶದ ಅಭಿವೃದ್ಧಿಗೆ ಕಾರಣರಾಗಬೇಕು ಎಂದರು. ಭಾಷಣದ ವೇಳೆ ಮೋದಿ ಅವರು ವಿಶ್ವಕರ್ಮ ಯೋಜನೆ, ಮುದ್ರಾ ಯೋಜನೆ, ಸನಾತನ ಧರ್ಮ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು.

ವರ್ಷಾಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ. ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು. “ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ವಿಧೇಯಕ ಮಂಡಿಸಿ, ಅಂಗೀಕಾರ ಪಡೆದಿದೆ. ಇದು ದೇಶದಲ್ಲಿಯೇ ಮಹಿಳಾ ಸಬಲೀಕರಣಕ್ಕಾಗಿ ತೆಗೆದುಕೊಂಡ ಐತಿಹಾಸಿಕ ತೀರ್ಮಾನವಾಗಿದೆ. ಆದರೆ, ಕಳೆದ 30 ವರ್ಷದಿಂದ ಮಹಿಳಾ ಮೀಸಲಾತಿ ಭರವಸೆ ನೀಡಿತೇ ಹೊರತು, ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಾವು ಮಾತ್ರ ಮಹಿಳಾ ಸಬಲೀಕರಣದ ಗ್ಯಾರಂಟಿ ಜಾರಿಗೆ ತಂದಿದ್ದೇವೆ” ಎಂದು ಹೇಳಿದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಒಳ ಚರಂಡಿ ಸ್ವಚ್ಛಗೊಳಿಸುವಾಗ 5 ವರ್ಷಗಳಲ್ಲಿ 443 ಕಾರ್ಮಿಕರ ಸಾವು!

Septic tanks and sewer: 5 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿಗಳನ್ನು ಸ್ವಚ್ಛಗೊಳಿಸುವ ವೇಳೆ 443 ಜನರು ಸಾವನ್ನಪ್ಪಿದ್ದಾರೆ.

VISTARANEWS.COM


on

cleaning
Koo

ನವದೆಹಲಿ: 2018ರಿಂದ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿಗಳನ್ನು (Septic tanks and sewers) ಸ್ವಚ್ಛಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಕಳವಳಕಾರಿ ಅಂಶ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ (Ministry of social justice and empowerment) ವರದಿಯಲ್ಲಿ ಬಹಿರಂಗಗೊಂಡಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯೆ ಅಪರೂಪ ಪೊದ್ದಾರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ, 2018 ಮತ್ತು ಈ ವರ್ಷದ ನವೆಂಬರ್ 20ರ ನಡುವೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ 443 ಜನರು ಸಾವನ್ನಪ್ಪಿದ್ದಾರೆ ಎಂದು ಲೋಕಸಭೆಗೆ ತಿಳಿಸಿದ್ದಾರೆ.

ಅಂಕಿ-ಅಂಶ

2018ರಲ್ಲಿ 76 ಮಂದಿ, 2019ರಲ್ಲಿ 133 ಮಂದಿ, 2020ರಲ್ಲಿ 35 ಜನರು, 2021ರಲ್ಲಿ 66 ಕಾರ್ಮಿಕರು, 2022ರಲ್ಲಿ 84 ಮಂದಿ ಮತ್ತು ಈ ವರ್ಷದ ನವೆಂಬರ್‌ 20ರ ತನಕ 49 ಮಂದಿ ಅಸುನೀಗಿದ್ದಾರೆ ಎಂದು ವರದಿ ಹೇಳಿದೆ. ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ ಸ್ವಚ್ಛತೆ ವೇಳೆ 5 ವರ್ಷಗಳ ಅವಧಿಯಲ್ಲಿ ಮೃತಪಟ್ಟವರ ರಾಜ್ಯವಾರು ಅಂಕಿ-ಅಂಶಗಳ ಬಗ್ಗೆಯೂ ಅಪರೂಪ ಪೊದ್ದಾರ್ ಪ್ರಶ್ನಿಸಿದ್ದಾರೆ.

ಯಾವ ರಾಜ್ಯದಲ್ಲಿ ಎಷ್ಟು?

ಈ ವರ್ಷ ರಾಜಸ್ಥಾನದಲ್ಲಿ 10, ಗುಜರಾತ್‌ನಲ್ಲಿ 9 ಮತ್ತು ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ 7 ಮರಣ ಪ್ರಮಾಣ ದಾಖಲಾಗಿದೆ ಎಂದು ಸರ್ಕಾರ ತಿಳಿಸಿದೆ. ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅಠಾವಳೆ, ”ನೀತಿ ಆಯೋಗದ ಆದೇಶದ ಮೇರೆಗೆ 2018ರಲ್ಲಿ ನಡೆಸಿದ ಮ್ಯಾನ್ಯುವಲ್ ಸ್ಕಾವೆಂಜರ್‌ಗಳ ರಾಷ್ಟ್ರೀಯ ಸಮೀಕ್ಷೆ (National Survey of Manual Scavengers) ವೇಳೆ 44,217 ಮ್ಯಾನ್ಯುವಲ್ ಸ್ಕಾವೆಂಜರ್‌ಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದ್ದಾರೆ. ಸರ್ಕಾರವು ಮತ್ತೊಂದು ಸಮೀಕ್ಷೆಯನ್ನು ನಡೆಸಲಿದೆಯೇ ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ʼʼಸುಪ್ರೀಂ ಕೋರ್ಟ್ ಮ್ಯಾನ್ಯುವಲ್ ಸ್ಕಾವೆಂಜರ್‌ಗಳ ರಾಷ್ಟ್ರವ್ಯಾಪಿ ಸಮೀಕ್ಷೆಗೆ ನಿರ್ದೇಶನ ನೀಡಿದೆ. ಅದರಂತೆ ಸಮೀಕ್ಷೆ ನಡೆಸಲಿದ್ದೇವೆʼʼ ಎಂದು ವಿವರಿಸಿದ್ದಾರೆ.

ನಿಯಮ ಏನು ಹೇಳುತ್ತದೆ?

ಮ್ಯಾನ್ಯುವಲ್ ಸ್ಕಾವೆಂಜರ್ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಪ್ರಕಾರ ಮ್ಯಾನ್ಯುವಲ್ ಸ್ಕಾವೆಂಜಿಂಗ್ ಅನ್ನು ನಿಷೇಧಿಸಲಾಗಿದೆ. ಅಂದರೆ ಕೈಯಿಂದ ಮಲ ಸ್ವಚ್ಛಗೊಳಿಸುವ, ಹೊರುವ ಕೆಲಸವನ್ನು ಮಾಡುವಂತಿಲ್ಲ. ಒಳಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದು ಕೂಡ ಈ ನಿಷೇಧಿತ ಅಭ್ಯಾಸದ ಒಂದು ಭಾಗ ಎಂದು ತಜ್ಞರು ಹೇಳುತ್ತಾರೆ.

“ದೇಶದ 766 ಜಿಲ್ಲೆಗಳ ಪೈಕಿ 714 ಜಿಲ್ಲೆಗಳು ಈ ವರ್ಷದ ನವೆಂಬರ್‌ 29ರಂದು ತಮ್ಮನ್ನು ಮ್ಯಾನ್ಯುವಲ್ ಸ್ಕಾವೆಂಜಿಂಗ್ ಮುಕ್ತವೆಂದು ಘೋಷಿಸಿಕೊಂಡಿವೆʼʼ ಎಂದು ಸಚಿವರು ಹೇಳಿದ್ದಾರೆ. ಸರ್ಕಾರವು ಮ್ಯಾನ್‌ಹೋಲ್‌ ಸ್ವಚ್ಛಗೊಳಿಸಲು ರೋಬೋಟ್‌ಗಳನ್ನು ನಿಯೋಜಿಸಿದೆಯೇ ಎಂದು ಕೇಳಿದಾಗ, ಉತ್ತರಿಸಿದ ರಾಮದಾಸ್ ಅಠಾವಳೆ, ʼʼಅಂತಹ ರೋಬೋಟ್‌ಗಳ ಸಂಖ್ಯೆ ಅಥವಾ ಅವುಗಳನ್ನು ಎಲ್ಲಿ ಬಳಸಲಾಗುತ್ತಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

Continue Reading

ದೇಶ

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

ʼದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯೊಂದಿಗೆ, 2001ರ ಸಂಸತ್ತಿನ ದಾಳಿಯ ರೂವಾರಿ (Parliament Attack) ಭಯೋತ್ಪಾದಕ ಅಫ್ಜಲ್ ಗುರುವಿನ (Afjal Guru) ಪೋಸ್ಟರ್ ಅನ್ನು ಒಳಗೊಂಡಿರುವ ವಿಡಿಯೊವನ್ನು ಪನ್ನುನ್ (Khalistan Terrorist Gurpatwant Singh Pannun) ಹರಿಬಿಟ್ಟಿದ್ದಾನೆ.

VISTARANEWS.COM


on

Khalistani Terrorist Pannun
Koo

ಹೊಸದಿಲ್ಲಿ: ಡಿಸೆಂಬರ್ 13ರಂದು ಭಾರತ ಹೊಸ ಸಂಸತ್‌ ಕಟ್ಟಡದ ಮೇಲೆ ಉಗ್ರ ದಾಳಿ (Parliament Attack) ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ (Khalistan Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ಹಾಕುವ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾನೆ. ತನ್ನನ್ನು ಕೊಲ್ಲಲು ʼಭಾರತ ನಡೆಸಿರುವ ಸಂಚಿಗೆ ಪ್ರತಿಯಾಗಿʼ ತಾನು ದಾಳಿ ನಡೆಸುವುದಾಗಿ ಈ ಬೆದರಿಕೆ ಹಾಕಿದ್ದಾನೆ. ಇದೇ ಡಿಸೆಂಬರ್ 13ಕ್ಕೆ ಭಾರತದ ಸಂಸತ್ ಭವನದ ಮೇಲೆ ಭಯೋತ್ಪಾದಕ ನಡೆದು 22 ವರ್ಷಗಳಾಗುತ್ತವೆ.

ʼದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯೊಂದಿಗೆ, 2001ರ ಸಂಸತ್ತಿನ ದಾಳಿಯ ರೂವಾರಿ ಭಯೋತ್ಪಾದಕ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವಿಡಿಯೊವನ್ನು ಪನ್ನುನ್ ಹರಿಬಿಟ್ಟಿದ್ದಾನೆ. ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವ ಮೂಲಕ ʼಭಾರತೀಯ ಏಜೆನ್ಸಿಗಳ ವಿಫಲ ಕೊಲೆ ಸಂಚಿಗೆʼ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾನೆ.

“ಡಿಸೆಂಬರ್ 13ರಂದು ನನ್ನ ಪ್ರತಿಕ್ರಿಯೆ ತೋರಿಸಲಿದ್ದೇನೆ. ಕಾಶ್ಮೀರಿಗಳ ಕಾನೂನುಬಾಹಿರ ಹತ್ಯೆಗಳ ವಿರುದ್ಧ 2001ರಲ್ಲಿ ಅಫ್ಜಲ್ ಗುರು ನಡೆಸಿದ ದಾಳಿಗೆ ಪೂರಕವಾಗಿ ನಾನು ನೀಡಲಿರುವ ಪ್ರತಿಕ್ರಿಯೆಯು ಭಾರತದ ಸಂಸತ್ತಿನ ಅಡಿಪಾಯವನ್ನು ಅಲುಗಾಡಿಸಲಿದೆ. ದೆಹಲಿ ಬನೇಗಾ ಖಲಿಸ್ತಾನ್” ಎಂದು ಪನ್ನುನ್ ಹೇಳಿದ್ದಾನೆ.

ಉನ್ನತ ಗುಪ್ತಚರ ಮೂಲಗಳ ಪ್ರಕಾರ, ಪನ್ನುನ್ ಬೆದರಿಕೆ ಹಾಕುತ್ತಿರುವುದು ಮಾತ್ರವಲ್ಲದೆ, ಭಾರತದ ಮೇಲಿನ ದಾಳಿಗಾಗಿ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾನೆ. ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಪನ್ನುನ್ ಬೆದರಿಕೆ ಬಂದಿದೆ. ಅಧಿವೇಶನವು ಡಿಸೆಂಬರ್ 22ರವರೆಗೆ ನಡೆಯಲಿದೆ. ಪನ್ನುನ್‌ನ ವೀಡಿಯೊ ಕಾಣಿಸಿಕೊಂಡ ನಂತರ ಭದ್ರತಾ ಏಜೆನ್ಸಿಗಳ ಮೂಲಕ ಹೆಚ್ಚಿನ ಎಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ.

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತೀಯ ಮೂಲದ ನಿಖಿಲ್ ಗುಪ್ತಾ ಎಂಬಾತ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಮೆರಿಕದ ಬೇಹುಗಾರಿಕೆ ಇಲಾಖೆ ಕೋರಿಕೆಯ ಮೇರೆಗೆ ಆತನನ್ನು ಜೆಕ್ ರಿಪಬ್ಲಿಕ್ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಗುಪ್ತಾ ಭಾರತದಿಂದ ಅಮೆರಿಕಕ್ಕೆ ಪ್ರಯಾಣಿಸುತ್ತಿದ್ದಾಗ ಬಂಧಿಸಲಾಯಿತು.

“ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಯುಎಸ್ ಪ್ರಜೆಯನ್ನು ಹತ್ಯೆ ಮಾಡಲು ವಿಫಲವಾದ ಸಂಚಿನಲ್ಲಿ ಭಾಗವಹಿಸಿದ್ದಾಗಿ” ಆತನ ಮೇಲೆ ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟೀಸ್ ಆರೋಪ ಮಾಡಿದೆ. ಆದರೆ ಭಾರತದ ನಾಯಕರ ಮೇಲೆ ಉಗ್ರ ದಾಳಿ ಬೆದರಿಕೆ ಹಾಕುತ್ತಿರುವ ಆತನ ಮೇಲೆ ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಪನ್ನುನ್‌ ಹತ್ಯೆಗೆ ಸ್ಕೆಚ್‌; ಅಮೆರಿಕ ಆರೋಪಕ್ಕೆ ಭಾರತ ಪ್ರತಿಕ್ರಿಯೆ, ಉನ್ನತ ಸಮಿತಿ ರಚನೆ

Continue Reading

ದೇಶ

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತಿದೆ. ಮೂರೂ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ.

VISTARANEWS.COM


on

narendra modi amit shah jp nadda
Koo

ಹೊಸದಿಲ್ಲಿ: ಇತ್ತೀಚೆಗೆ ತಾನು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೂರು ರಾಜ್ಯಗಳಲ್ಲಿ (Assembly Election 2023) ಮುಖ್ಯಮಂತ್ರಿಗಳನ್ನು (Chief minister) ಆಯ್ಕೆ ಮಾಡಲು ಬಿಜೆಪಿ ನಾಯಕತ್ವವು (BJP High command) ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದೆ. ಮೂರೂ ರಾಜ್ಯಗಳಲ್ಲೂ ಹೊಸ ಮುಖಗಳನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯು ಅಮೋಘ ಚುನಾವಣಾ ಗೆಲುವು ದಾಖಲಿಸಿರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತಿದೆ. ಮೂರೂ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಈ ವೇಳೆ ಮೂರು ರಾಜ್ಯಗಳ ಮುಂಚೂಣಿಯಲ್ಲಿರುವವರನ್ನು ಪರಿಗಣಿಸಲಾಗಿದೆ. ಸಭೆಯಲ್ಲಿ ಪ್ರಧಾನಿ, ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ (JP Nadda) ಉಪಸ್ಥಿತರಿದ್ದರು. ಈ ಮ್ಯಾರಥಾನ್ ಸಭೆಯಲ್ಲಿ ಈ ರಾಜ್ಯಗಳ ಬಿಜೆಪಿಯ ಉಸ್ತುವಾರಿಗಳೊಂದಿಗೆ ರಾಜ್ಯ ನಾಯಕರ ಪ್ರತಿಕ್ರಿಯೆಯನ್ನು ಸಂಗ್ರಹಿಸಲು ಸಭೆ ನಡೆಸಲು ನಿರ್ಧರಿಸಲಾಗಿದೆ.

ಬಿಜೆಪಿಯ ಕೇಂದ್ರ ನಾಯಕತ್ವವು ಮೂರು ರಾಜ್ಯಗಳಿಗೆ ವೀಕ್ಷಕರನ್ನು ಶೀಘ್ರದಲ್ಲೇ ನೇಮಿಸುವ ಸಾಧ್ಯತೆಯಿದೆ. ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರು ವಿಧಾನಸಭೆಯಲ್ಲಿ ತಮ್ಮ ನಾಯಕರನ್ನು ಆಯ್ಕೆ ಮಾಡಲು ನಡೆಸುವ ಸಭೆಗಳನ್ನು ಈ ವೀಕ್ಷಕರು ಮೇಲ್ವಿಚಾರಣೆ ಮಾಡುತ್ತಾರೆ.

ಮಧ್ಯಪ್ರದೇಶದಲ್ಲಿ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ, ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರೊಂದಿಗೆ ಉನ್ನತ ಹುದ್ದೆಗೆ ಆಕಾಂಕ್ಷಿಯಾಗಿದ್ದಾರೆ.

ರಾಜಸ್ಥಾನದ ಉನ್ನತ ಹುದ್ದೆಗೂ ಹಲವಾರು ಹೆಸರುಗಳು ಸುತ್ತು ಹಾಕುತ್ತಿವೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಶಾಸಕರಾಗಿ ಆಯ್ಕೆಯಾಗಿದ್ದರೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ರಾಮ್ ಮೇಘವಾಲ್, ಪಕ್ಷದ ರಾಜ್ಯಾಧ್ಯಕ್ಷ ಸಿಪಿ ಜೋಶಿ, ಪ್ರಮುಖ ನಾಯಕರಾದ ದಿಯಾ ಕುಮಾರಿ ಮತ್ತು ಮಹಂತ ಬಾಲಕನಾಥ್ ಅವರನ್ನು ಸಂಭಾವ್ಯ ಎಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸ್ಪರ್ಧಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ.ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಬಿಜೆಪಿ ನಾಯಕತ್ವ ಅಚ್ಚರಿದಾಯಕ ಆಯ್ಕೆಗಳಿಗೆ ಹೆಸರಾಗಿದೆ. ಹೀಗಾಗಿ ಈ ಪಟ್ಟಿಗಳಲ್ಲಿ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಿ ಶಾಕ್‌ ನೀಡಲೂ ಸಾಧ್ಯತೆಗಳಿವೆ.

ಇದನ್ನೂ ಓದಿ: Assembly election 2023: ಐದು ರಾಜ್ಯಗಳ ಎಲೆಕ್ಷನ್‌ನಲ್ಲಿ ಶೇ.18ರಷ್ಟು ಅಭ್ಯರ್ಥಿಗಳು ಕ್ರಿಮಿನಲ್!

Continue Reading

ಕ್ರಿಕೆಟ್

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Danish Kaneria: ರಾಹುಲ್‌ ಗಾಂಧಿ ವಿರುದ್ಧ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅವರೇನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

danish
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ (ICC Cricket World Cup 2023)ಗೆ ಅದ್ಧೂರಿಯಾಗಿ ತೆರೆ ಎಳೆಯಲಾಗಿದೆ. ನವೆಂಬರ್​ 19ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿ ಆಸ್ಟ್ರೇಲಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಫೈನಲ್‌ ಪಂದ್ಯ ವೀಕ್ಷಣೆಗೆ ಪ್ರಧಾನಮಂತ್ರಿ ನರೆಂದ್ರ ಮೋದಿ (Narendra Modi) ಸ್ಟೇಡಿಯಮ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರು. ಮೋದಿ ʼಪನೌತಿʼ (ದುರದೃಷ್ಟದ ವ್ಯಕ್ತಿ). ಇದರಿಂದಲೇ ಭಾರತ ಸೋಲು ಕಂಡಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಲೇವಡಿ ಮಾಡಿದ್ದರು. ಇದೀಗ ಈ ಚರ್ಚೆಗೆ ಪಾಕಿಸ್ತಾನದ ಮಾಜಿ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಎಂಟ್ರಿ ಕೊಟ್ಟಿದ್ದು, ಹೆಸರು ಹೇಳದೆ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಾನಿಶ್ ಕನೇರಿಯಾ ಹೇಳಿದ್ದೇನು?

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ದಾನಿಶ್ ಕನೇರಿಯಾ “ಪನೌತಿ ಕೌನ್?” (ಈಗ ಯಾರು ದುರದೃಷ್ಟವಂತರು?) ಎಂದು ಪ್ರಶ್ನಿಸಿದ್ದಾರೆ. ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದು, ಇದನ್ನೇ ಮುಂದಿಟ್ಟುಕೊಂಡು ಅವರು ರಾಹುಲ್‌ ಗಾಂಧಿಯ ಕಾಲೆಳೆದಿದ್ದಾರೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಮಾಜಿ ಕ್ರಿಕೆಟಿಗ ತಮ್ಮ ಪೋಸ್ಟ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಆದರೂ ಬಹುತೇಕರು ಇದು ರಾಹುಲ್‌ ಗಾಂಧಿ ಅವರನ್ನು ಉದ್ದೇಶಿಸಿಯೇ ಹೇಳಿದ್ದು ಎಂದು ಊಹಿಸಿದ್ದಾರೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಈ ಮಧ್ಯೆ ತೆಲಂಗಾಣದಲ್ಲಿ ಗದ್ದುಗೆಗೆ ಏರಿದ್ದೊಂದೇ ಕೈ ಪಡೆಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಕೊಟ್ಟ ಯಶಸ್ಸು.

ರಾಹುಲ್‌ ಗಾಂಧಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಭಾರತ ತಂಡ ಸೋತಿದ್ದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ʼಪನೌತಿʼ (ದುರದೃಷ್ಟದ ವ್ಯಕ್ತಿ) ಎಂದು ಕರೆದಿದ್ದರು. ಮೋದಿ ಕ್ರೀಡಾಂಗಣಕ್ಕೆ ಪ್ರವೇಶಿಸಿದ್ದರಿಂದ ಪಂದ್ಯವನ್ನು ಭಾರತ ತಂಡ ಸೋತಿತು ಎಂದು ಆರೋಪಿಸಿದ್ದರು. 

ಈ ಮಧ್ಯೆ ಬಿಜೆಪಿ ನಾಯಕ ಸಿ.ಟಿ.ರವಿ ಕೂಡ ರಾಹುಲ್ ಗಾಂಧಿ ಹೇಳಿಕೆಗೆತಿರುಗೇಟು ನೀಡಿದ್ದಾರೆ. ‘ಅತಿ ದೊಡ್ಡ ಪನೌತಿ ಯಾರು?’ ಎಂದು ಪ್ರಶ್ನಿಸಿದ್ದಾರೆ. ಅವರು ಒಂದು ಹೆಜ್ಜು ಮುಂದೆ ಹೋಗಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿದ್ದರು. ಸದ್ಯ ದಾನಿಶ್ ಕನೇರಿಯಾ ಪೋಸ್ಟ್‌ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

ಇದನ್ನೂ ಓದಿ: ಇಲ್ಲ, ಆಕೆ ನನ್ನನ್ನು ಪಿಎಂ ಮಾಡಲ್ಲ! ಪ್ರಣಬ್ ಮುಖರ್ಜಿ ಹಾಗೇಕೆ ಹೇಳಿದ್ದು?

ಯಾರು ಈ ದಾನಿಶ್ ಕನೇರಿಯಾ?

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ 2000 ಮತ್ತು 2010ರ ನಡುವೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಪರವಾಗಿ ಆಡಿದ್ದಾರೆ. ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading
Advertisement
cleaning
ದೇಶ6 mins ago

ಒಳ ಚರಂಡಿ ಸ್ವಚ್ಛಗೊಳಿಸುವಾಗ 5 ವರ್ಷಗಳಲ್ಲಿ 443 ಕಾರ್ಮಿಕರ ಸಾವು!

Ajitabh Bachchan, Younger Brother Of Amitabh At The Archies Film Screening
ಬಾಲಿವುಡ್8 mins ago

The Archies Film: ನಿಮಗೆ ಅಮಿತಾಭ್‌ ತಮ್ಮ ಅಜಿತಾಭ್‌ ಗೊತ್ತಾ? ಅವರೇ ಇವರು!

MLA Basanagouda Patil Yatnal and CM Siddaramaiah
ಕರ್ನಾಟಕ10 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ23 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Khalistani Terrorist Pannun
ದೇಶ41 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema56 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ60 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ1 hour ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ2 hours ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್2 hours ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

MLA Basanagouda Patil Yatnal and CM Siddaramaiah
ಕರ್ನಾಟಕ10 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ23 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ60 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ9 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ18 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ18 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

ಟ್ರೆಂಡಿಂಗ್‌