PM Narendra Modi: 4 ರಾಜ್ಯ, 6 ದಿನ, 8 ರ‍್ಯಾಲಿ; ಇಂದಿನಿಂದ ಚುನಾವಣಾ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಸುತ್ತಾಟ! - Vistara News

ದೇಶ

PM Narendra Modi: 4 ರಾಜ್ಯ, 6 ದಿನ, 8 ರ‍್ಯಾಲಿ; ಇಂದಿನಿಂದ ಚುನಾವಣಾ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಸುತ್ತಾಟ!

ತಮ್ಮ ಭೇಟಿಯ ಸಮಯದಲ್ಲಿ ಮೋದಿಯವರು (PM Narendra Modi) ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 6ರ ನಡುವೆ ಆರು ದಿನಗಳಲ್ಲಿ ಎಂಟು ರ‍್ಯಾಲಿಗಳನ್ನು ನಡೆಸಲಿದ್ದಾರೆ. ವಿವಿಧ ಯೋಜನೆಗಳು ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮುಂಬರುವ ತಿಂಗಳುಗಳಲ್ಲಿ ಚುನಾವಣೆಗೆ (vidhan sabha election) ಒಳಪಡುತ್ತಿರುವ ನಾಲ್ಕು ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಆರು ದಿನಗಳ ಕಾಲ ಮೆಗಾ ಚುನಾವಣಾ ಪ್ರಚಾರವನ್ನು (election campaign) ನಡೆಸಲಿದ್ದಾರೆ.

ತಮ್ಮ ಭೇಟಿಯ ಸಮಯದಲ್ಲಿ ಮೋದಿಯವರು ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 6ರ ನಡುವೆ ಆರು ದಿನಗಳಲ್ಲಿ ಎಂಟು ರ‍್ಯಾಲಿಗಳನ್ನು (election rally) ನಡೆಸಲಿದ್ದಾರೆ. ವಿವಿಧ ಯೋಜನೆಗಳು ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ.

ಛತ್ತೀಸ್‌ಗಢಕ್ಕೆ ಪ್ರಧಾನಿ ಭೇಟಿ

ಶನಿವಾರ ಪ್ರಧಾನಿ ಭಾರತೀಯ ಜನತಾ ಪಕ್ಷದ ಎರಡು ʻಪರಿವರ್ತನ್ ಯಾತ್ರೆ’ಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢದ ಬಿಲಾಸ್‌ಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಕಾಲೇಜು ಮೈದಾನದಲ್ಲಿ ‘ಪರಿವರ್ತನ್ ಮಹಾಸಂಕಲ್ಪ’ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಕ್ಟೋಬರ್ 3ರಂದು ಬಸ್ತಾರ್‌ನ ಜಗದಲ್‌ಪುರದಲ್ಲಿ ಸಾರ್ವಜನಿಕ ಸಭೆಗಳಿಗಾಗಿ ಅವರು ರಾಜ್ಯಕ್ಕೆ ಮರಳಲಿದ್ದಾರೆ.

ತೆಲಂಗಾಣದಲ್ಲಿ ಮೋದಿ

ಅಕ್ಟೋಬರ್ 1ರಂದು ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಗೆ ಭೇಟಿ ನೀಡಲಿರುವ ಮೋದಿ ಅಲ್ಲಿ ₹13,500 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ. ಪ್ರಧಾನಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ.

ಅವರು ಹೈದರಾಬಾದ್ ವಿಶ್ವವಿದ್ಯಾನಿಲಯದ ಐದು ಹೊಸ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ – ಸ್ಕೂಲ್ ಆಫ್ ಎಕನಾಮಿಕ್ಸ್, ಸ್ಕೂಲ್ ಆಫ್ ಮ್ಯಾಥಮೆಟಿಕ್ಸ್ ಮತ್ತು ಸ್ಟ್ಯಾಟಿಸ್ಟಿಕ್ಸ್, ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಲೆಕ್ಚರ್ ಹಾಲ್ ಕಾಂಪ್ಲೆಕ್ಸ್ – III, ಮತ್ತು ಸರೋಜಿನಿ ನಾಯ್ಡು ಸ್ಕೂಲ್ ಆಫ್ ಆರ್ಟ್ಸ್ & ಕಮ್ಯುನಿಕೇಷನ್ (ಅನೆಕ್ಸ್). ಅಕ್ಟೋಬರ್ 3ರಂದು ನಿಜಾಮಾಬಾದ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಗಳಿಗಾಗಿ ಅವರು ರಾಜ್ಯಕ್ಕೆ ಮರಳಲಿದ್ದಾರೆ.

ಮಧ್ಯಪ್ರದೇಶದಲ್ಲಿ ಪ್ರಧಾನಿ ಸಭೆ

ಅಕ್ಟೋಬರ್ 2ರಂದು, ಮೋದಿಯವರು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಗ್ವಾಲಿಯರ್‌ನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ. ನಂತರ ಅಕ್ಟೋಬರ್ 6ರಂದು ಅವರು ಜೋಧ್‌ಪುರಕ್ಕೆ ಭೇಟಿ ನೀಡುತ್ತಾರೆ. ಇದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಅವರು ಸಾರ್ವಜನಿಕ ಸಭೆಗಳನ್ನು ನಡೆಸಲು ಜಬಲ್‌ಪುರ ಮತ್ತು ಜಗದಲ್‌ಪುರಕ್ಕೂ ಪ್ರಯಾಣಿಸುತ್ತಾರೆ ಎಂದು ವರದಿಯಾಗಿದೆ.

ರಾಜಸ್ಥಾನದಲ್ಲಿ ಪ್ರಧಾನಿ ರ‍್ಯಾಲಿ

ಅಕ್ಟೋಬರ್ 2ರಂದು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದ ಚಿತ್ತೋರಗಢದಲ್ಲಿ ಪ್ರಧಾನಿ ಸಾರ್ವಜನಿಕ ರ‍್ಯಾಲಿ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Patna Junction: ಮೋದಿಯ ಪ್ರಾಣ ಕಾಪಾಡಿದ್ದ ರೈಲು ನಿಲ್ದಾಣದ ಕೂಲಿ ರಕ್ಷಣೆಗೆ ಇಬ್ಬರು ಸಶಸ್ತ್ರ ಪೊಲೀಸರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

Kisan Samman Nidhi: ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸಿದೆ. ಈ ಕುರಿತು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ.

VISTARANEWS.COM


on

Kisan Samman Nidhi
Koo

ಜೈಪುರ: ರಾಜಸ್ಥಾನದ ರೈತರಿಗೆ (Rajasthan Farmers) ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Scheme) ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು ರಾಜ್ಯ ಸರ್ಕಾರವು 8 ಸಾವಿರ ರೂ.ಗೆ ಏರಿಕೆ ಮಾಡಿದೆ. ಕಿಸಾನ್‌ ಸಮ್ಮಾನ್‌ ನಿಧಿಗೆ ರಾಜ್ಯ ಸರ್ಕಾರವೂ 2 ಸಾವಿರ ರೂ. ಸೇರಿಸಿರುವ ಕಾರಣ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ (Bhajanlal Sharma) ಘೋಷಣೆ ಮಾಡಿದ್ದಾರೆ.

“ಅನ್ನದಾತರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರಾಜ್ಯ ಸರ್ಕಾರವು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು 2 ಸಾವಿರ ರೂ. ಹೆಚ್ಚಿಸಿದೆ. ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಬದಲು ಇನ್ನು 8 ಸಾವಿರ ರೂ. ಜಮೆಯಾಗಲಿದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಭಜನ್‌ಲಾಲ್‌ ಶರ್ಮಾ ಪೋಸ್ಟ್‌ ಮಾಡಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸಿದೆ.

ಅಷ್ಟೇ ಅಲ್ಲ, ರಾಜಸ್ಥಾನದಲ್ಲಿ ಕಳೆದ ಐದು ವರ್ಷದಲ್ಲಿ ನಡೆದ ನೇಮಕಾತಿಗಳ ಕುರಿತು ತನಿಖೆಗೂ ಮುಖ್ಯಮಂತ್ರಿ ಆದೇಶಿಸಿದ್ದಾರೆ. ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕುರಿತು ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ನೇಮಕಾತಿ ಅಕ್ರಮ, ಭ್ರಷ್ಟಾಚಾರದ ಕುರಿತು ತನಿಖೆಯಾಗಬೇಕು ಎಂದು ಆಗ ಅಸ್ತಿತ್ವದಲ್ಲಿದ್ದ ತಮ್ಮದೇ ಸರ್ಕಾರಕ್ಕೆ ಆಗ್ರಹಿಸಿದ್ದರು.

3 ಕಂತುಗಳಲ್ಲಿ ಕೇಂದ್ರ ಸರ್ಕಾರ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ. ಕೇಂದ್ರ ಸರ್ಕಾರವು 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕಿದ್ದು, ಇದುವರೆಗೆ ದಿನಾಂಕ ನಿಗದಿ ಮಾಡಿಲ್ಲ.

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Continue Reading

ದೇಶ

ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ದುರ್ಗೇಶ್‌ ಪಾಂಡೆ ಎಂಬ 30 ವರ್ಷದ ವ್ಯಕ್ತಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದ ಹಿನ್ನೆಲೆಯಲ್ಲಿ ದೇವಾಲಯ ತೆರಳಿ, ಕಾಳಿ ದೇವಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಬೆರಳು ಕತ್ತರಿಸಿಕೊಂಡ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವ ಉಂಟಾದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಲೂ ಆತ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ರಾಯ್‌ಪುರ: ಜಗತ್ತಿನಲ್ಲೇ ರಾಜಕಾರಣಿಗಳಿಗೆ, ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ಅನುಯಾಯಿಗಳು, ಹಿಂಬಾಲಕರು ಭಾರತದಲ್ಲಿಯೇ ಇರಬಹುದೇನೋ! ಅದರಲ್ಲೂ, ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ, ಆರಾಧಿಸುವ, ಅವರ ಪರವಾಗಿ ವಾದ ಮಾಡುವ, ಸಮಯ ಬಂದರೆ ಜಗಳಕ್ಕೂ ನಿಲ್ಲುವ ‘ಭಕ್ತರು’ ಇದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಛತ್ತೀಸ್‌ಗಢದಲ್ಲಿ (Chhattisgarh) ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ದೇವರಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಆ ಮೂಲಕ ಆತ ಅಭಿಮಾನ ಮೆರೆದಿದ್ದಾನೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ದುರ್ಗೇಶ್‌ ಪಾಂಡೆ ಎಂಬ 30 ವರ್ಷದ ವ್ಯಕ್ತಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದ ಹಿನ್ನೆಲೆಯಲ್ಲಿ ದೇವಾಲಯ ತೆರಳಿ, ಕಾಳಿ ದೇವಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್‌ 4ರಂದೇ ಆತನು ಕಾಳಿ ದೇವಸ್ಥಾನಕ್ಕೆ ತೆರಳಿ, ತನ್ನ ಎಡಗೈ ಬೆರಳನ್ನು ಕತ್ತರಿಸಿ ದೇವತೆಗೆ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 290 ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರ ಖುಷಿ ತಾಳದೆ ಆತ ಬೆರಳು ಕತ್ತರಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾನೆ ಎಂದು ತಿಳಿದುಬಂದಿದೆ.

Lok Sabha Election 2024 PM Narendra Modi roadshow on April 14 route map is ready

ದೇವಸ್ಥಾನದಲ್ಲಿ ಬೆರಳು ಕತ್ತರಿಸಿಕೊಂಡ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಕ್ಕೀಡಾದ ಕುಟುಂಬಸ್ಥರು ವ್ಯಕ್ತಿಯನ್ನು ಸಮಾರಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಕೂಡಲೇ ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಹೋಗಿ ಎಂದು ಸೂಚಿಸಿದ್ದಾರೆ. ಅದರಂತೆ, ದುರ್ಗೇಶ್‌ ಪಾಂಡೆ ಅವರನ್ನು ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ರಕ್ತಸ್ರಾವವನ್ನು ನಿಲ್ಲಿಸಿದ್ದಾರೆ. ಸದ್ಯ, ದುರ್ಗೇಶ್‌ ಪಾಂಡೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ನಾಳೆ ಮೋದಿ ಪ್ರಮಾಣವಚನ

ನರೇಂದ್ರ ಮೋದಿ ಅವರು ಭಾನುವಾರ (ಜೂನ್‌ 9) ಸಂಜೆ 7.15ಕ್ಕೆ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ದೇಶ

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Mamata Banerjee: ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ ಎಂದು ಪರೋಕ್ಷವಾಗಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂದು ಮಮತಾ ಬ್ಯಾನರ್ಜಿ ಸುಳಿವು ನೀಡಿದ್ದಾರೆ.

VISTARANEWS.COM


on

Mamata Banerjee
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಭಾನುವಾರ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಯಾವುದೇ ಸರ್ಕಾರವು 15 ದಿನಗಳಲ್ಲಿ ಬೇಕಾದರೂ ಪತನವಾಗಬಹುದು” ಎಂಬುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತೃಣಮೂಲ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ಮಾತನಾಡಿದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ್ದೇ ಸರ್ಕಾರ

ಕೇಂದ್ರದಲ್ಲಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕೊನೆಗೆ ಒಂದು ದಿನ ಇಂಡಿಯಾ ಒಕ್ಕೂಟವು ಸರ್ಕಾರ ರಚಿಸುತ್ತದೆ. ಕೆಲವು ದಿನಗಳವರೆಗೆ ಅವರು ಅಧಿಕಾರದಲ್ಲಿ ಇರಲಿ. ಆದರೆ, ಒಂದು ನೆನಪಿರಲಿ, ಒಂದೇ ದಿನದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು. ಏನು ಬೇಕಾದರೂ ಆಗಬಹುದು. ಯಾರಿಗೆ ಗೊತ್ತು, 15 ದಿನಗಳಲ್ಲಿ ಬೇಕಾದರೂ ಸರ್ಕಾರ ಪತನವಾಗಬಹುದು” ಎಂಬುದಾಗಿ ಎನ್‌ಡಿಎ ಸರ್ಕಾರದ ಪತನದ ಕುರಿತು ಮಮತಾ ಬ್ಯಾನರ್ಜಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು

ನರೇಂದ್ರ ಮೋದಿ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಟಿಎಂಸಿ ನಿರ್ಧರಿಸಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದರು. “ಕಾನೂನುಬಾಹಿರ ಹಾಗೂ ಪ್ರಜಾಸತ್ತಾತ್ಮಕವಲ್ಲದ ಮಾರ್ಗದ ಮೂಲಕ ಎನ್‌ಡಿಎ ಸರ್ಕಾರ ರಚಿಸುತ್ತಿದೆ. ಹಾಗಾಗಿ, ಪ್ರಮಾಣವಚನ ಕಾರ್ಯಕ್ರಮದಲ್ಲಿ ಟಿಎಂಸಿ ಭಾಗವಹಿಸಲ್ಲ” ಎಂದಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

Continue Reading

ದೇಶ

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

Sonia Gandhi: ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಸಭೆಯ ಬಳಿಕ ಸೋನಿಯಾ ಗಾಂಧಿ ಮರು ನೇಮಕದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದರು.

VISTARANEWS.COM


on

sonia gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದಲ್ಲಿ ಸಕಾರಾತ್ಮಕ ಮನೋಭಾವ ಮೂಡಿದೆ. ಹಾಗಾಗಿ, ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹೈಕಮಾಂಡ್‌ ತೀರ್ಮಾನಿಸಿದೆ. ಅಷ್ಟೇ ಅಲ್ಲ, ಮತ್ತೆ ಸೋನಿಯಾ ಗಾಂಧಿ (Sonia Gandhi) ಅವರ ನಾಯಕತ್ವಕ್ಕೆ ಮಣೆ ಹಾಕಲಾಗಿದೆ. ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರನ್ನು ಮರು ಆಯ್ಕೆ ಮಾಡಲಾಗಿದೆ.

ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ನಾಯಕರಾದ ಗೌರವ್‌ ಗೊಗೊಯ್‌, ತಾರಿಕ್‌ ಅನ್ವರ್‌, ಕೆ.ಸುಧಾಕರನ್‌ ಸೇರಿ ಹಲವು ನಾಯಕರು ಇದನ್ನೇ ಅನುಮೋದಿಸಿದರು.

ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. “ಸೋನಿಯಾ ಗಾಂಧಿ ಅವರನ್ನೇ ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಿರುವುದು ದೊಡ್ಡ ಸಂಗತಿಯಾಗಿದೆ. ಅವರು ನಮಗೆ ನೀಡುತ್ತಿರುವ ಮಾರ್ಗದರ್ಶವನ್ನು ಮುಂದುವರಿಸುತ್ತಾರೆ. ಅವರ ಸೇವೆಯು ಪಕ್ಷಕ್ಕಾಗಿ ಮುಂದುವರಿಯುತ್ತದೆ ಇದಕ್ಕಾಗಿ ನಾನು ಅವರಿಗೆ ಸೆಲ್ಯೂಟ್‌ ಹೊಡೆಯುತ್ತೇನೆʼ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದರು.

ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, “ಮೊದಲು, ಸಂಸದರಾಗಿ ಆಯ್ಕೆಯಾದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸವಾಲಿನ ಸಂದರ್ಭದಲ್ಲಿ ನೀವೆಲ್ಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೀರಿ. ಚುನಾವಣೆ ಪ್ರಚಾರದ ವೇಳೆ ಎದುರಾದ ಸಂಕಷ್ಟಗಳನ್ನು ಮೆಟ್ಟಿ ನೀವು ಜಯ ತಂದಿದ್ದೀರಿ. ಇದು ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಇನ್ನಷ್ಟು ಪ್ರಬಲವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ. ಇನ್ನು ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಕ್ಕೆ ಧನ್ಯವಾದಗಳು” ಎಂದಿದ್ದಾರೆ.

ಮತ್ತೊಂದೆಡೆ, ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲು ಸಿಡಬ್ಲ್ಯೂಸಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. “ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕ ಮಾಡುವ ದಿಸೆಯಲ್ಲಿ ಸಿಡಬ್ಲ್ಯೂಸಿಯು ಅವಿರೋಧವಾಗಿ ನಿರ್ಣಯ ತೆಗೆದುಕೊಂಡಿದೆ. ಸಂಸತ್‌ನಲ್ಲಿ ಪ್ರತಿಪಕ್ಷದ ನಾಯಕತ್ವ ವಹಿಸಲು ರಾಹುಲ್‌ ಗಾಂಧಿ ಅವರೇ ಸಮರ್ಥ ನಾಯಕರಾಗಿದ್ದಾರೆ. ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Continue Reading
Advertisement
Karnataka police
ಕರ್ನಾಟಕ14 mins ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ23 mins ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ40 mins ago

Govt Employees: ಪ್ರತಿ ಸೋಮವಾರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ58 mins ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ1 hour ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ1 hour ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ1 hour ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ1 hour ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ1 hour ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Narendra Modi
ದೇಶ2 hours ago

ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌