BRICS Summit: ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ದಕ್ಷಿಣ ಆಫ್ರಿಕಾಗೆ ತೆರಳಲಿರುವ ಮೋದಿ; ಭಾರತಕ್ಕೆ ಏಕೆ ಪ್ರಮುಖ? - Vistara News

ದೇಶ

BRICS Summit: ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ದಕ್ಷಿಣ ಆಫ್ರಿಕಾಗೆ ತೆರಳಲಿರುವ ಮೋದಿ; ಭಾರತಕ್ಕೆ ಏಕೆ ಪ್ರಮುಖ?

BRICS Summit: ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತದ ಮಟ್ಟಿಗೆ ಮೋದಿ ಅವರ ಭೇಟಿಯು ಹಲವು ದೃಷ್ಟಿಯಿಂದ ಮಹತ್ವ ಪಡೆದಿದೆ.

VISTARANEWS.COM


on

PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬ್ರಿಕ್ಸ್‌ ರಾಷ್ಟ್ರಗಳ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾಗೆ ತೆರಳಲಿದ್ದಾರೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಆಗಸ್ಟ್‌ 22ರಿಂದ 24ರವರೆಗೆ ಶೃಂಗಸಭೆ ನಡೆಯಲಿದ್ದು, ಮೋದಿ ಅವರು ಕೂಡ ಭಾಗವಹಿಸಲಿದ್ದಾರೆ. ಬ್ರಿಕ್ಸ್‌ ರಾಷ್ಟ್ರಗಳ ಶೃಂಗಸಭೆಯ (BRICS Summit) ನಿರ್ಣಯ, ಭಾರತದ ಅಭಿಪ್ರಾಯ ಮಂಡನೆ ಜತೆಗೆ ದ್ವಿಪಕ್ಷೀಯ ಮಾತುಕತೆ ಸೇರಿ ಹಲವು ದಿಸೆಯಲ್ಲಿ ಮೋದಿ ಅವರ ಭೇಟಿಯು ಪ್ರಾಮುಖ್ಯತೆ ಪಡೆದಿದೆ.

ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ ಅವರ ಜತೆ ದೂರವಾಣಿ ಮೂಲಕ ಮಾತನಾಡಿದ ನರೇಂದ್ರ ಮೋದಿ, ರಾಮಫೋಸಾ ಅವರ ಆಹ್ವಾನದ ಮೇರೆಗೆ ದಕ್ಷಿಣ ಆಫ್ರಿಕಾಗೆ ತೆರಳಲು ತೀರ್ಮಾನಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. “ದಕ್ಷಿಣ ಆಫ್ರಿಕಾ ಅಧ್ಯಕ್ಷರ ಆಹ್ವಾನವನ್ನು ನರೇಂದ್ರ ಮೋದಿ ಅವರು ಸ್ವೀಕರಿಸಿದ್ದಾರೆ. ಪ್ರಧಾನಿಯವರು ಶೃಂಗಸಭೆಯ ಹಿನ್ನೆಲೆಯಲ್ಲಿ ಜೊಹಾನ್ಸ್‌ಬರ್ಗ್‌ಗೆ ತೆರಳಲಿದ್ದಾರೆ” ಎಂದು ಸರ್ಕಾರ ತಿಳಿಸಿದೆ.

ನರೇಂದ್ರ ಮೋದಿ ಟ್ವೀಟ್

‌ರಾಮಫೋಸಾ ಜತೆ ಮಾತನಾಡಿದ ಕುರಿತು ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. “ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ ಅವರ ಜತೆ ಮಾತನಾಡಿರುವುದು ಖುಷಿ ತಂದಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧಕ್ಕೆ 30 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿ ಸೇರಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಇದೇ ತಿಂಗಳಲ್ಲಿ ನಡೆಯುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಭಾರತಕ್ಕೆ ಏಕೆ ಪ್ರಮುಖ?

ಬ್ರಿಕ್ಸ್‌ ರಾಷ್ಟ್ರಗಳಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಅಭಿಪ್ರಾಯ ವ್ಯಕ್ತಪಡಿಸುವ ಜತೆಗೆ ಹಲವು ವಿಷಯಗಳಿಂದ ಮೋದಿ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಸದಸ್ಯ ರಾಷ್ಟ್ರಗಳ ಜತೆಗಿನ ದ್ವಿಪಕ್ಷೀಯ ಮಾತುಕತೆ ಜತೆಗೆ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನೂ ಭೇಟಿಯಾಗಲಿದ್ದಾರೆ. ಲಡಾಕ್‌ ಗಡಿ ತಂಟೆ, ಶಾಂತಿ ಸ್ಥಾಪನೆ ಸೇರಿ ಹಲವು ವಿಷಯಗಳ ಕುರಿತು ಜಿನ್‌ಪಿಂಗ್‌ ಜತೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: PM Narendra Modi: ನಾನೇಕೆ ನರೇಂದ್ರ ಮೋದಿಯವರ ಪಾದ ಸ್ಪರ್ಶಿಸಿದೆ? ಅಮೆರಿಕನ್‌ ಗಾಯಕಿ ಮೇರಿ ಮಿಲ್ಬೆನ್ ಸಂದರ್ಶನ

ಬ್ರೆಜಿಲ್‌, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳು ಸೇರಿ 2010ರಲ್ಲಿ ಬ್ರಿಕ್ಸ್‌ ಒಕ್ಕೂಟ ರಚಿಸಿವೆ. ಜೊಹಾನ್ಸ್‌ಬರ್ಗ್‌ನಲ್ಲಿ ನಡೆಯುವ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಆಗಮಿಸದೆ, ವರ್ಚ್ಯುವಲ್‌ ವೇದಿಕೆ ಮೂಲಕವೇ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಜೊಹಾನ್ಸ್‌ಬರ್ಗ್‌ಗೆ ತೆರಳದೆ, ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ, ಮೋದಿ ಅವರು ದಕ್ಷಿಣ ಆಫ್ರಿಕಾಗೆ ತೆರಳುವುದು ನಿಶ್ಚಿತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

US sanction:ಕೋಲ್ಕತಾದಲ್ಲಿ ಮಾತನಾಡಿದ ಜೈಶಂಕರ್‌, ಈ ಹಿಂದೆ ಚಬಾಹರ್‌ ಯೋಜನೆ ಬಗ್ಗೆ ಸ್ವತಃ ಅಮೆರಿಕವೇ ಪ್ರಶಂಸೆ ವ್ಯಕ್ತಪಡಿಸಿತ್ತು. ಈ ಯೋಜನೆ ಬಗ್ಗೆ ಅಮೆರಿಕ ನೀಡಿರುವ ಹೇಳಿಕೆಯನ್ನು ನಾನು ಕೇಳಿದ್ದೇನೆ. ಆ ಯೋಜನೆ ಎಲ್ಲರಿಗೂ ಅನುಕೂಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಜನ ಇದನ್ನು ಸಂಕುಚಿತ ಮನಸ್ಥಿತಿಯಿಂದ ನೋಡುವುದು ಸರಿಯಲ್ಲ. ಅಮೆರಿಕ ಈ ವಿಚಾರದ ಬಗ್ಗೆ ವಿಶಾಲ ಮನಸ್ಥಿತಿಯಿಂದ ಚಿಂತನೆ ನಡೆಸಬೇಕು ಎಂದು ಹೇಳಿದ್ದಾರೆ.

VISTARANEWS.COM


on

US sanction
Koo

ಕೋಲ್ಕತಾ: ಇರಾನ್‌(Iran) ಜೊತೆಗೆ ಭಾರತ ಚಬಾಹರ್‌ ಬಂದರು(Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌(S. Jaishankar) ರಿಯಾಕ್ಟ್‌ ಮಾಡಿದ್ದಾರೆ. ಈ ಯೋಜನೆ ಇಡೀ ಪ್ರಪಂಚಕ್ಕೆ ಉಪಯೋಗಕಾರಿಯಾಗಿದೆ. ಇದನ್ನು ಸಂಕುಚಿತ ಮನೋಭಾವದಿಂದ ನೋಡಬಾರದು ಎಂದು ಅಮೆರಿಕಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಕೋಲ್ಕತಾದಲ್ಲಿ ಮಾತನಾಡಿದ ಜೈಶಂಕರ್‌, ಈ ಹಿಂದೆ ಚಬಾಹರ್‌ ಯೋಜನೆ ಬಗ್ಗೆ ಸ್ವತಃ ಅಮೆರಿಕವೇ ಪ್ರಶಂಸೆ ವ್ಯಕ್ತಪಡಿಸಿತ್ತು. ಈ ಯೋಜನೆ ಬಗ್ಗೆ ಅಮೆರಿಕ ನೀಡಿರುವ ಹೇಳಿಕೆಯನ್ನು ನಾನು ಕೇಳಿದ್ದೇನೆ. ಆ ಯೋಜನೆ ಎಲ್ಲರಿಗೂ ಅನುಕೂಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಜನ ಇದನ್ನು ಸಂಕುಚಿತ ಮನಸ್ಥಿತಿಯಿಂದ ನೋಡುವುದು ಸರಿಯಲ್ಲ. ಅಮೆರಿಕ ಈ ವಿಚಾರದ ಬಗ್ಗೆ ವಿಶಾಲ ಮನಸ್ಥಿತಿಯಿಂದ ಚಿಂತನೆ ನಡೆಸಬೇಕು ಎಂದು ಹೇಳಿದ್ದಾರೆ.

ಚಬಾಹರ್‌ ಬಂದರು ಯೋಜನೆ ಇಂದು ನಿನ್ನೆಯದ್ದಲ್ಲ. ಹಲವು ವರ್ಷಗಳ ಯೋಜನೆಯಾಗಿದೆ. ಇದು ಭಾರತದಕ್ಕೆ ಬಹಳ ಮುಖ್ಯವಾದ ಯೋಜನೆಯಾಗಿದೆ. ಇರಾನ್‌ನಲ್ಲಿ ಅನೇಕ ಸಮಸ್ಯೆಗಳಿದ್ದವು. ಹೀಗಾಗಿ ನಾವು ದೀರ್ಘಾವಧಿ ಒಪ್ಪಂದ ಮಾಡಿಕೊಂಡಿರಲಿಲ್ಲ. ಈಗ ಆ ಸಮಸ್ಯೆಗಳು ಬಗೆಹರಿದಿರುವ ಹಿನ್ನೆಲೆ ಈ ದೀರ್ಘಾವಧಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ. ಏಕೆಂದರೆ ಈ ಯೋಜನೆ ಇಲ್ಲದ್ದಿದ್ದರೆ ಬಂದರು ಕಾರ್ಯಾಚರಣೆ ಸುಧಾರಿಸುವುದಿಲ್ಲ. ಇದು ಇಡೀ ಪ್ರಪಂಚಕ್ಕೆ ಉಪಯೋಗಕಾರಿ ಎಂದು ಹೇಳಿದ್ದಾರೆ.

ಇರಾನ್‌ ಜೊತೆಗೆ ಭಾರತ ಚಬಾಹರ್‌ ಬಂದರು ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ ಹೇರುವ ಎಚ್ಚರಿಕೆ ನೀಡಿದೆ. ಇರಾನ್‌ ಜೊತೆಗೆ ವ್ಯಾಪಾರ-ವಹಿವಾಟಿಗಳನ್ನು ಮುಂದುವರೆಸಿದರೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಅಮೆರಿಕ ಎಲ್ಲಾ ದೇಶಗಳಿಗೆ ಎಚ್ಚರಿಕೆ ನೀಡಿತ್ತು. ಸ್ಟೇಟ್‌ ಡಿಪಾರ್ಟ್‌ಮೆಂಟ್‌ ಉಪ ವಕ್ತಾರ ವೇದಾಂತ್‌ ಪಟೇಲ್‌(State Department Deputy Spokesperson Vedant Patel) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಚಬಾಹರ್‌ ಬಂದರಿಗೆ ಸಂಬಂಧಿಸಿದಂತೆ ಭಾರತ-ಇರಾನ್‌ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಇರಾನ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ತನ್ನದೇ ಆದ ವಿದೇಶಾಂಗ ನೀತಿ ಅನುಸರಿಸಲು ಭಾರತ ಮುಕ್ತವಾಗಿದೆ. ಆದರೆ ಇರಾನ್‌ ಮೇಲೆ ಅಮೆರಿಕ ನಿರ್ಬಂಧ ಹೇರಿರುವುದನ್ನು ಭಾರತ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದರು.

ಇದನ್ನೂ ಓದಿ:Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿತ್ತು.

Continue Reading

ದೇಶ

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Narendra Modi: ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯಿಂದ ಸಂಪೂರ್ಣವಾಗಿ ಮುಕ್ತರಾಗುವಲ್ಲಿ ಏಕೆ ಯಶಸ್ವಿಯಾಗಿಲ್ಲ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಮೋದಿ, ಇದು ಮುಸ್ಲಿಂ ಎಂಬ ಪ್ರಶ್ನೆಯಲ್ಲ. 2002ರ ನಂತರ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆಯಿತು. ನಮ್ಮ ಮನೆಯ ಸುತ್ತಮುತ್ತ ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ನಮ್ಮ ಮನೆಯಲ್ಲೂ ಈದ್‌ ಆಚರಿಸಲಾಗುತ್ತಿತ್ತು. ಈದ್‌ ಸಂದರ್ಭದಲ್ಲಿ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ. ಎಲ್ಲಾ ಮುಸ್ಲಿಮರ ಮನೆಗಳಿಂದ ಆಹಾರ ಬರುತ್ತಿತ್ತು. ನಾನು ಅಂತಹ ವ್ಯವಸ್ಥೆಯಲ್ಲೇ ಬೆಳೆದಿದ್ದು ಎಂದು ಸ್ಪಷ್ಟನೆ ಕೊಟ್ಟರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮುಸ್ಲಿಂ ವಿರೋಧಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮೋದಿ ಟಾಂಗ್‌ ಕೊಟ್ಟಿದ್ದು, ಹಿಂದೂ ಮುಸ್ಲಿಂ ಅಂತ ತಾರತಮ್ಯ ಮಾಡಿದ ದಿನ ನಾನು ರಾಜಕೀಯ ಬದುಕಿಗೆ ಅನರ್ಹನಾಗುತ್ತೇನೆ. ನಾನು ನನ್ನ ಜೀವನದಲ್ಲಿ ಎಂದಿಗೂ ಹಿಂದೂ-ಮುಸ್ಲಿಂ(Hindu-Muslim) ಎಂದು ಬೇಧ ಮಾಡೋದಿಲ್ಲ ಎಂಬುದು ನನ್ನ ಬದುಕಿನ ಧ್ಯೇಯ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಎಂದಿಗೂ ಹಿಂದೂ ಮುಸ್ಲಿಂ ಎಂದು ಹೇಳುವುದಿಲ್ಲ. ಹಿಂದು ಮುಸ್ಲಿಂ ಅಂತ ಹೇಳಿಕೊಂಡು ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಜೀವಕ್ಕೆ ಅರ್ಹನಾದ ವ್ಯಕ್ತಿಯಾಗುವುದಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ ಎಂದರು. ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯಿಂದ ಸಂಪೂರ್ಣವಾಗಿ ಮುಕ್ತರಾಗುವಲ್ಲಿ ಏಕೆ ಯಶಸ್ವಿಯಾಗಿಲ್ಲ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಮುಸ್ಲಿಂ ಎಂಬ ಪ್ರಶ್ನೆಯಲ್ಲ. 2002ರ ನಂತರ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆಯಿತು. ನಮ್ಮ ಮನೆಯ ಸುತ್ತಮುತ್ತ ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ನಮ್ಮ ಮನೆಯಲ್ಲೂ ಈದ್‌ ಆಚರಿಸಲಾಗುತ್ತಿತ್ತು. ಈದ್‌ ಸಂದರ್ಭದಲ್ಲಿ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ. ಎಲ್ಲಾ ಮುಸ್ಲಿಮರ ಮನೆಗಳಿಂದ ಆಹಾರ ಬರುತ್ತಿತ್ತು. ನಾನು ಅಂತಹ ವ್ಯವಸ್ಥೆಯಲ್ಲೇ ಬೆಳೆದಿದ್ದು. ನನ್ನ ಅನೇಕ ಸ್ನೇಹಿತರು ಮುಸ್ಲಿಮರೇ ಆಗಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು.

ರಾಜಸ್ಥಾನದಲ್ಲಿ ಸಾರ್ವಜನಿಕ ಭಾಷಣದ ವೇಳೆ ರಾಹುಲ್‌ ಗಾಂಧಿಯವರ ಸಂಪತ್ತಿನ ಹಂಚಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, “ಮೊದಲು ಅವರ ಸರ್ಕಾರ ಇದ್ದಾಗ ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಹೇಳಿದ್ದರು. ಹಾಗಿದ್ದರೆ ನಿಮ್ಮ ಸಂಪತ್ತನ್ನು ಕಿತ್ತು ಯಾರಿಗೆ ನೀಡಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ತಿಳಿಯಿತೇ? ಯಾರಿಗೆ ಅಧಿಕ ಮಕ್ಕಳಿರುತ್ತಾರೋ, ಯಾರು ಒಳನುಸುಳುಕೋರರು ಆಗಿರುತ್ತಾರೋ ಅಂತವರಿಗೆ ಹಂಚುತ್ತಾರೆ. ನಿಮಗಿದು ಒಪ್ಪಿಗೆಯೇ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

ಕಾಂಗ್ರೆಸ್‌ನವರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು. ಇದಾದ ಬಳಿಕ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಮುಸ್ಲಿಮರ ವಿರುದ್ಧವಾಗಿದೆ ಎಂಬುದನ್ನು ಸಾಬೀತು ಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿತ್ತು.

Continue Reading

ಕ್ರೈಂ

Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

Road Accident: ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆಯಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಂಜಿ (35), ಉಪ್ಪುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55) ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಉಳಿದಿಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

VISTARANEWS.COM


on

Road Accident
Koo

ಅಮರಾವತಿ: ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆಯಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ (Road Accident). ಹಲವು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿರಾಲಾದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಚಾಲಕನ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆಯಿತು. ಬಳಿಕ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮೃತರನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಂಜಿ (35), ಉಪ್ಪುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55) ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಉಳಿದಿಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಘಟನೆಯಲ್ಲಿ ಗಾಯಗೊಂಡವರಿಗೆ ಆರಂಭದಲ್ಲಿ ಚಿಲಕಲೂರಿಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ಕಳುಹಿಸಲಾಗಿದೆ. ಸೋಮವಾರ (ಮೇ 13) ಮತ ಚಲಾಯಿಸಿದ ನಂತರ ಒಟ್ಟು 42 ಜನರು ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಬಸ್‌ನಲ್ಲಿ ಹೈದರಾಬಾದ್‌ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪೈಕಿ ಲಾರಿ ಚಾಲಕ, ಬಸ್ ಚಾಲಕ ಮತ್ತು ಇತರ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಚಿಲಕಲೂರಿಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ

ಉಡುಪಿ/ಮಂಡ್ಯ/ಚಿತ್ರದುರ್ಗ/ ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ನಾಲ್ಕು ಅಪಘಾತದಲ್ಲಿ ಪವಾಡ ಸದೃಶ್ಯದಂತೆ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿ ಸ್ಕೂಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಕಟ್ಟಡವೊಂದರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ನೇರವಾಗಿ ಹೋಗುತ್ತಿದ್ದರು. ಈ ವೇಳೆ ಲೆಫ್ಟ್ ಟರ್ನ್ ತೆಗೆದುಕೊಳ್ಳುವ ಧಾವಂತದಲ್ಲಿ ಟ್ರಕ್‌ ಸ್ಕೂಟಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಟ್ರಕ್ ಚಾಲಕ ತಕ್ಷಣ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ದುರಂತ ತಪ್ಪಿದೆ. ಒಂದು ತಿಂಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ ಇದೇ ರೀತಿಯ ಅಪಘಾತ ನಡೆದಿತ್ತು.

ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಕಾರೊಂದು ಗುದ್ದಿದೆ. ಮಂಡ್ಯದ ಹನಕೆರೆ ಗ್ರಾಮದ ಸಮೀಪದ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಅಪಘಾತ ನಡೆದಿದೆ. ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹೈವೆಯಲ್ಲಿ ಉರುಳಿಬಿದ್ದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Continue Reading

ದೇಶ

Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಸಿಖ್ ಉಗ್ರರ ಜತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

Terror Module Bust: ರಾಜ್ಯದಲ್ಲಿ ಸಕ್ರಿಯವಾಗಿದ್ದ ಉಗ್ರ ಸಂಘಟನೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಸಂಘಟನೆಯ ಮಾಸ್ಟರ್‌ ಮೈಂಡ್‌ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾನೆ. ವಿದೇಶದಲ್ಲಿ ನೆಲೆಸಿದ್ದ ಇಕ್ಬಾಲ್‌ಪ್ರಿತ್‌ ಸಿಂಗ್‌ ಅಲಿಯಾಸ್‌ ಬುಚಿ ಎಂಬಾತ ನಡೆಸುತ್ತಿದ್ದ ಉಗ್ರ ಸಂಘಟನೆಯ ಜೊತೆಗೆ ಬಂಧಿತ ನಾಲ್ವರು ನಂಟು ಹೊಂದಿದ್ದರು. ಬಂಧಿತ ಪ್ರಮುಖ ಆರೋಪಿಯನ್ನು ಗುರ್ವಿಂದರ್‌ ಸಿಂಗ್‌ ಅಲಿಯಾಸ್‌ ಶೆರಾ ಎಂದು ಗುರುತಿಸಲಾಗಿದೆ. ರಾಜಪುರದ ಲಿಬರ್ಟಿ ಚೌಕ್‌ನಲ್ಲಿ ಈ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

terror module
Koo

ಚಂಡೀಗಢ: ಪಂಜಾಬ್‌ನಲ್ಲಿ ದರೋಡೆಕೋರ ವಿರೋಧಿ ಕಾರ್ಯಪಡೆ(AGTF) ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ(Terror Module Bust) ಜೊತೆಗೆ ನಂಟು ಹೊಂದಿದ್ದ ನಾಲ್ವರನ್ನು ಹೆಡೆಮುರಿ ಕಟ್ಟಲಾಗಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌(Hardeep Singh Nijjar) ಆಪ್ತನ ನಿಯಂತ್ರಣದಲ್ಲಿದ್ದ ಉಗ್ರ ಸಂಘಟನೆ ಜೊತೆಗೆ ಈ ನಾಲ್ವರು ನಂಟು ಹೊಂದಿರುವವುದು ಖಚಿತವಾಗಿದೆ. ಇನ್ನು ಪ್ರಮುಖ ಆರೋಪಿ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರನ್ನು ಅರೆಸ್ಟ್‌ ಮಾಡಿದ್ದಾರೆ.

ಪಂಜಾಬ್‌ ಡಿಜಿಪಿ ಗೌರವ್‌ ಯಾದವ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸಕ್ರಿಯವಾಗಿದ್ದ ಉಗ್ರ ಸಂಘಟನೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಸಂಘಟನೆಯ ಮಾಸ್ಟರ್‌ ಮೈಂಡ್‌ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾನೆ. ವಿದೇಶದಲ್ಲಿ ನೆಲೆಸಿದ್ದ ಇಕ್ಬಾಲ್‌ಪ್ರಿತ್‌ ಸಿಂಗ್‌ ಅಲಿಯಾಸ್‌ ಬುಚಿ ಎಂಬಾತ ನಡೆಸುತ್ತಿದ್ದ ಉಗ್ರ ಸಂಘಟನೆಯ ಜೊತೆಗೆ ಬಂಧಿತ ನಾಲ್ವರು ನಂಟು ಹೊಂದಿದ್ದರು. ಬಂಧಿತ ಪ್ರಮುಖ ಆರೋಪಿಯನ್ನು ಗುರ್ವಿಂದರ್‌ ಸಿಂಗ್‌ ಅಲಿಯಾಸ್‌ ಶೆರಾ ಎಂದು ಗುರುತಿಸಲಾಗಿದೆ. ರಾಜಪುರದ ಲಿಬರ್ಟಿ ಚೌಕ್‌ನಲ್ಲಿ ಈ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ಆರೋಪಿಗಳು ತಂಗಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ AGTF ತಂಡ ಹೆಚ್ಚುವರಿ ಡಿಜಿಪಿ ಪ್ರಮೋದ್‌ ಬನ್‌ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಕಾರ್ಯಾಚರಣೆಗೆ ಪೊಲೀಸ್‌ ಅಧಿಕಾರಿಗಳಾದ ಗುರ್ಮಿತ್‌ ಸಿಂಗ್‌ ಚೌಹಾಣ್‌ ಮತ್ತು ಬ್ರಿಕಮ್‌ಜಿತ್‌ ಸಿಂಗ್‌ ಬ್ರಾರ್‌ ಸಾಥ್‌ ಕೊಟ್ಟಿದ್ದಾರೆ. ಪಂಜಾಬ್‌ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಎಸಗಲೆಂದೇ ಬುಚಿ ಈ ಗ್ಯಾಂಗ್‌ ಅನ್ನು ನಡೆಸುತ್ತಿದ್ದ ಎಂಬ ವಿಚಾರವನ್ನು ಬಂಧಿತ ಶೆರಾ ಬಾಯ್ಬಿಟ್ಟಿದ್ದಾನೆ. ಇನ್ನು ಬಂಧಿತರಿಂದ ಮೂರು ಪಿಸ್ತೂಲ್‌ ಮತ್ತು ಜೀವಂತ ಗುಂಡುಗಳು ಹಾಗೂ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಇತರ ಮೂವರನ್ನು ಪಟಿಯಾಲ ಮೂಲದ ಗುರುಪ್ರಿತ್‌ ಸಿಂಗ್‌, ರಂಜಿತ್‌ ಸಿಂಗ್‌ ಅಲಿಯಾಸ್‌ ಸೋನು ಮತ್ತು ಜಗಜಿತ್‌ ಸಿಂಗ್‌ ಅಲಿಯಾಸ್‌ ಜಶನ್‌ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

ಖಲಿಸ್ತಾನ ಪ್ರತ್ಯೇಕತಾವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ. 2016-2017ರಲ್ಲಿ ನಡೆದಿದ್ದ ಕೊಲೆ ಪ್ರಕರಣಗಳ ರೂವಾರಿ ರಮಣ್‌ದೀಪ್‌ ಬಗ್ಗಾ ಅಲಿಯಾಸ್‌ ಕೆನೇಡಿಯನ್‌ನ ಆಪ್ತ ಕೂಡ ಹೌದು. ಬಗ್ಗಾ 11 ಕ್ರಿಮಿನಲ್‌ ಕೇಸ್‌ಗಳಲ್ಲಿ ಅರೆಸ್ಟ್‌ ಆಗಿದ್ದು, ಸದ್ಯ ತಿಹಾರ್‌ ಜೈಲಿನಲ್ಲಿದ್ದಾನೆ.

Continue Reading
Advertisement
Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್8 mins ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

US sanction
ದೇಶ9 mins ago

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

Shehbaz Sharif
ವಿದೇಶ28 mins ago

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Rakhi Sawant Rushed to Hospital After Heart-Related Ailment
ಬಾಲಿವುಡ್41 mins ago

Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

physical abuse gadag crime
ಕ್ರೈಂ55 mins ago

Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

Narendra Modi
ದೇಶ57 mins ago

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Shamita Shetty Undergoes Surgery For Endometriosis
ಸಿನಿಮಾ1 hour ago

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Road Accident
ಕ್ರೈಂ1 hour ago

Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

Shrimad Ramayana udaya tv to telecasting kannada dubbing version
ಕಿರುತೆರೆ1 hour ago

Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

Dolly Dhananjay Kotie Cinema Kannada
ಸ್ಯಾಂಡಲ್ ವುಡ್2 hours ago

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ6 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ16 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202418 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202422 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ22 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು24 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌