ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಹೆಚ್ಚು ಫಲಪ್ರದವಾಗಲು ಎಲ್ಲ ಪಕ್ಷಗಳು ಪ್ರಯತ್ನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ. ಬುಧವಾರ ಚಳಿಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸತ್ ಕಲಾಪಗಳು ನಡೆಯದಂತೆ ಮಾಡುವುದು ಸರಿಯಲ್ಲ. ಇದರಿಂದ ಕಿರಿಯ ಸಂಸದರ ಕಲಿಕೆಗೆ ಅಡ್ಡಿಯನ್ನು ಉಂಟು ಮಾಡಿದಂತಾಗುತ್ತದೆ ಎಂದು ವಿಶೇಷವಾಗಿ ಪ್ರತಿಪಕ್ಷಗಳಿಗೆ ಕಿವಿಮಾತು ಹೇಳಿದರು.
ಇದೇ ವೇಳೆ, ಸಂಸತ್ತಿನ ಕಲಾಪದಲ್ಲಿ ಪಾಲ್ಗೊಳ್ಳಲು ಎಲ್ಲ ಪಕ್ಷಗಳು ಕಿರಿಯ ಸಂಸದರಿಗೆ ಅವಕಾಶವನ್ನು ಕಲ್ಪಿಸಿಕೊಡಬೇಕು. ಇದರಿಂದಾಗಿ ಮುಂದಿನ ತಲೆಮಾರನ್ನು ಪ್ರಜಾಪ್ರಭುತ್ವಕ್ಕೆ ಅಣಿಗೊಳಿಸಲು ಇದರಿಂದ ನೆರವಾಗಲಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ ಅವರು, ಮುಂದಿನ ವರ್ಷ ನಡೆಯಲಿರುವ ಜಿ20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ. ದೇಶದ ಸಾಮರ್ಥ್ಯವನ್ನು ವಿಶ್ವದೆದುರು ತೆರೆದಿಡಲು ದೊರೆತಿರುವ ದೊಡ್ಡ ಅವಕಾಶವೆಂದು ಅವರು ಬಣ್ಣಿಸಿದರು.
ಇತ್ತೀಚೆಗೆ ಜಿ 20 ರಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಿದ್ದೇನೆ ಮತ್ತು ಅದು ಸಂಸತ್ತಿನಲ್ಲಿಯೂ ಪ್ರತಿಫಲಿಸುತ್ತದೆ ಎಂಬ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ವ್ಯಕ್ತಪಡಿಸಿದರು.
ಇದನ್ನೂ ಓದಿ | Parliament Winter Session| ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ