Site icon Vistara News

PM Narendra Modi: ಆಂಧ್ರದ ಲೇಪಾಕ್ಷಿ ದೇಗುಲಕ್ಕೆ ಮೋದಿ ಭೇಟಿ; ರಾಮಾಯಣದಲ್ಲಿ ಈ ಸ್ಥಳದ ಮಹತ್ವ ಏನು?

PM Narendra Modi visited to Lepakshi temple, Andhra Pradesh

ನವದೆಹಲಿ: ಅಯೋಧ್ಯಾ ರಾಮ ಮಂದಿರ (Ayodhya Ram Mandir) ಉದ್ಘಾಟನೆ ಮುಂದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಂಧ್ರ ಪ್ರದೇಶದ (Andhra Pradesh) ಲೇಪಾಕ್ಷಿಯಲ್ಲಿರುವ (Lepakshi) ವೀರಭದ್ರ ದೇಗುಲಕ್ಕೆ (Veerbhadra Temple) ಮಂಗಳವಾರ ಭೇಟಿ ನೀಡಿದರು. ಮಹಾಕಾವ್ಯ ರಾಮಾಯಣದಲ್ಲಿ ಈ ದೇಗಲಕ್ಕೆ ವಿಶೇಷ ಮಹತ್ವವಿದೆ.

ರಾವಣ ಸೀತಾದೇವಿಯನ್ನು ಅಪಹರಿಸಿದ ನಂತರ ಜಟಾಯು ಸೀತಾದೇವಿಯನ್ನು ಹಿಂಬಾಲಿಸಿದ ಸ್ಥಳ ಲೇಪಾಕ್ಷಿ ಎಂದು ನಂಬಲಾಗಿದೆ. ಸಾಯುತ್ತಿರುವ ಜಟಾಯು, ಸೀತಾ ಮಾತೆಯ ಸೆರೆಯ ಬಗ್ಗೆ ಮಾಹಿತಿಯನ್ನು ರಾಮನಿಗೆ ಇದೇ ಸ್ಥಳದಲ್ಲೇ ನೀಡುತ್ತದೆ ಮತ್ತು ರಾಮನ ಆಶೀರ್ವಾದಿಂದ ಮೋಕ್ಷ ಪಡೆದುಕೊಳ್ಳುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. ಅದಕ್ಕೂ ಮೊದಲು ಅವರು ದೇಗುಲಗಳನ್ನು ಸುತ್ತುತ್ತಿದ್ದಾರೆ. ಅದರ ಭಾಗವಾಗಿಯೇ ಅವರು ಮಂಗಳವಾರ ಆಂಧ್ರ ಪ್ರದೇಶದ ಲೇಪಾಕ್ಷಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮೋದಿ ಅವರು ಎರಡು ದಿನಗಳ ಕಾಲ ಆಂಧ್ರ ಪ್ರದೇಶ ಹಾಗೂ ಕೇರಳ ಪ್ರವಾಸದಲ್ಲಿದ್ದಾರೆ. ಕೊಚ್ಚಿನ್ ಶಿಫ್‌ಯಾರ್ಡ್‌ನ ಅಂತಾರಾಷ್ಟ್ರೀಯ ಹಡಗು ದುರಸ್ತಿ ಘಟಕ ಮತ್ತು ನ್ಯೂ ಡ್ರೈ ಡಾಕ್ ಸೇರಿದಂತೆ ಅನೇಕ ಅಭಿವೃದ್ಧಿಪರ ಯೋಜನೆಗಳಿಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. ಬುಧವಾರ ಕೇರಳಕ್ಕೆ ತೆರಳಿಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರು ಮತ್ತು ತ್ರಿಪಯಾರ್ ಶ್ರೀ ರಾಮಸ್ವಾಮಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆಂದು ಪ್ರಧಾನಿ ಕಾರ್ಯಾಲಯವು ತಿಳಿಸಿದೆ.

ಜನವರಿ 19ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ಶುಕ್ರವಾರ (ಜನವರಿ 19) ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಉದ್ದೇಶಿಸಿದ್ದು, ಪ್ರಮುಖರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಲೋಕಸಭಾ ಚುನಾವಣೆ (Lok Sabha Election 2024) ಸಮೀಪ ಇರುವ ಕಾರಣ, ಮೋದಿ ರೋಡ್‌ ಶೋ (Modi roadshow) ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದು, ಪ್ರಧಾನಿ ಕಾರ್ಯಾಲಯದಿಂದ ಒಪ್ಪಿಗೆಗೆ ಕಾಯಲಾಗುತ್ತಿದೆ ಎನ್ನಲಾಗಿದೆ.

ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಇದೇ 19ರಂದು ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು (BJP state executive meeting) ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಪಿ. ರಾಜೀವ್, ಬೆಂಗಳೂರಿನ ಏರೋಸ್ಪೇಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬರುವ ಕಾರಣ ಈ ಬದಲಾವಣೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: PM Narendra Modi: ‘ರಾಮ್ ಆಯೇಂಗೆ…’ ಭಜನೆಗೆ ಪ್ರಧಾನಿ ನರೇಂದ್ರ ಮೋದಿ ಫುಲ್ ಫಿದಾ!

Exit mobile version