ದಿಸ್ಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಸ್ಸಾಂನಲ್ಲಿರುವ ವಿಶ್ವವಿಖ್ಯಾತ ಕಾಜಿರಂಗ ಅಭಯಾರಣ್ಯದಲ್ಲಿ ಶುಕ್ರವಾರ ರಾತ್ರಿ ಕಳೆದಿದ್ದು, ಶನಿವಾರ ಬೆಳಗ್ಗೆ ಅವರು ರಾಷ್ಟ್ರೀಯ ಉದ್ಯಾನದಲ್ಲಿ (Kaziranga National Park and Tiger Reserve) ಸಫಾರಿ ಕೈಗೊಂಡರು. ಅದರಲ್ಲೂ, ಪ್ರಧಾನಿಯವರು ಆನೆ ಮೇಲೆ ಕುಳಿತು ಸಫಾರಿ ಮಾಡಿದ್ದು, ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮೊದಲು ಆನೆ ಮೇಲೆ ಕುಳಿತು ಸವಾರಿ (Elephant Safari) ಮಾಡಿದ ಮೋದಿ, ಬಳಿಕ ಜೀಪ್‌ನಲ್ಲಿ ಸಫಾರಿ ಕೈಗೊಂಡರು ಎಂದು ತಿಳಿದುಬಂದಿದೆ.
Prime Minister Narendra Modi enjoys the beauty of Kaziranga on an elephant safari #narendermodi | #Kaziranga #BreakingNews pic.twitter.com/2kw1FqLDiL
— Ravi Pandey🇮🇳 (@ravipandey2643) March 9, 2024
ಕಾಜಿರಂಗ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಮಿಹಿಮುಖ್ ಪ್ರದೇಶದಲ್ಲಿ ಮೋದಿ ಅವರು ಸಫಾರಿ ಕೈಗೊಂಡರು. ಇಡೀ ರಾತ್ರಿಯನ್ನು ಪ್ರಧಾನಿಯು ರಾಷ್ಟ್ರೀಯ ಉದ್ಯಾನದಲ್ಲಿಯೇ ಕೈಗೊಳ್ಳುವ ಮೂಲಕ ಕಾಜಿರಂಗ ಅರಣ್ಯದಲ್ಲಿ ಒಂದು ರಾತ್ರಿ ಕಳೆದ ದೇಶದ ಮೊದಲ ಪ್ರಧಾನಿ ಎನಿಸಿದ್ದಾರೆ. ಇದುವರೆಗೆ ದೇಶದ ಯಾವ ಪ್ರಧಾನಿಯೂ ಕಾಜಿರಂಗ ಅರಣ್ಯದಲ್ಲಿ ಒಂದು ರಾತ್ರಿ ಕಳೆದಿರಲಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.
#WATCH | Prime Minister Narendra Modi visited Kaziranga National Park in Assam today. The PM also took an elephant safari here. pic.twitter.com/Kck92SKIhp
— ANI (@ANI) March 9, 2024
ಕಾಜಿರಂಗ ಸಫಾರಿ ಬಳಿಕ ಮೋದಿ ಅವರು ಜೊರ್ಹಾತ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿಯೇ ಸುಮಾರು 18 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ನಂತರ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Narendra Modi: ಪ್ರಧಾನಿ ಮೋದಿ ಹುಲಿ ಸಫಾರಿ
ಕಾಜಿರಂಗ ರಾಷ್ಟ್ರೀಯ ಉದ್ಯಾನವು ಒಂಟಿ ಕೊಂಬಿನ ಘೇಂಡಾಮೃಗಗಳಿಗೆ ಹೆಸರು ವಾಸಿಯಾಗಿದೆ. 429.69 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿರುವ ಇದು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿದೆ. ವಿಶ್ವದಲ್ಲಿರುವ ಒಂಟಿ ಕೊಂಬಿನ ಘೇಂಡಾಮೃಗಗಳಲ್ಲಿ ಮೂರನೇ ಎರಡು ಭಾಗದಷ್ಟು ಘೇಂಡಾಮೃಗಗಳು ಇದೇ ರಾಷ್ಟ್ರೀಯ ಉದ್ಯಾನದಲ್ಲಿವೆ. ಆನೆ, ಕರಡಿ ಹಾಗೂ ಚಿರತೆಗಳಿಗೂ ಕಾಜಿರಂಗ ಅಭಯಾರಣ್ಯವು ಆಶ್ರಯ ತಾಣವಾಗಿದೆ. ಈ ಉದ್ಯಾನದಲ್ಲಿ ಸಫಾರಿಗೆ ತೆರಳಲು 3,500-4,500 ರೂ. ಪಾವತಿಸಬೇಕಾಗುತ್ತದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ