ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ.
#WATCH | Prime Minister Narendra Modi offers prayers at the Ram Janmabhoomi Temple in Ayodhya, Uttar Pradesh. pic.twitter.com/MRQNcekI1h
— ANI (@ANI) May 5, 2024
ಮೋದಿ ಭರ್ಜರಿ ರೋಡ್ ಶೋ
ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್ ಶೋ ಕೈಗೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿತ್ತು. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ನರೇಂದ್ರ ಮೋದಿ ಅವರ ರೋಡ್ ಶೋನಲ್ಲಿ ಸಾಧು-ಸಂತರು ಕೂಡ ಭಾಗವಹಿಸಿರುವುದು ವಿಶೇಷವಾಗಿದೆ. ಇನ್ನು ರೋಡ್ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಸಾಥ್ ನೀಡಿದ್ದಾರೆ. ಇನ್ನು, ರೋಡ್ ಶೋ ಉದ್ದಕ್ಕೂ ಮೋದಿ ಅವರ ಮೇಲೆ ಜನ ಹೂಮಳೆ ಸುರಿಸುವ ಜತೆಗೆ ಜೈ ಶ್ರೀರಾಮ್ ಎಂಬ ಘೋಷಣೆಗಳು ಕೂಡ ಮೊಳಗಿದವು.
ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.
ಇದನ್ನೂ ಓದಿ: Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ