Site icon Vistara News

Narendra Modi Live: ಕೆಲವೇ ಕ್ಷಣಗಳಲ್ಲಿ ಸಂಸತ್‌ನಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi

PM Narendra Modi's Motion of Thanks to President's address at 4 pm; Watch Live Here

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಕೊನೆಯ ಹಂತಕ್ಕೆ (Parliament Sessions) ಬಂದಿದೆ. ಬುಧವಾರ (ಜುಲೈ 3) ಸಂಸತ್‌ ವಿಶೇಷ ಅಧಿವೇಶನ ಮುಕ್ತಾಯವಾಗಲಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ 2) ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ನರೇಂದ್ರ ಮೋದಿ (Narendra Modi Live) ಅವರು ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಕುರಿತು ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ನರೇಂದ್ರ ಮೋದಿ ಅವರು ಮಾಡುವ ಭಾಷಣದ ಲೈವ್‌ಅನ್ನು ಇಲ್ಲಿ ವೀಕ್ಷಿಸಿ.

ಲೈವ್‌ ಇಲ್ಲಿ ವೀಕ್ಷಿಸಿ

ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ (NDA) ಸಂಸದರಿಗೆ ಸಲಹೆ ನೀಡಿದರು. ಸಂಸದೀಯ ನಿಯಮಗಳು ಮತ್ತು ನಡವಳಿಕೆಯನ್ನು ಅನುಸರಿಸುವಂತೆ ಮತ್ತು ಉತ್ತಮ ಅಭ್ಯಾಸಗಳನ್ನು ಹಿರಿಯ ಸದಸ್ಯರಿಂದ ಕಲಿಯುವಂತೆ ಸೂಚಿಸಿದರು. ಸತತ ಮೂರನೇ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಎನ್‌ಡಿಎ ಸಂಸದರನ್ನುದ್ದೇಶಿಸಿ ಮೋದಿ ಮಾತನಾಡಿದರು.

ಪ್ರತಿಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಬೇಜವಾಬ್ದಾರಿಯುತವಾಗಿ ಭಾಷಣ ಮಾಡಿದ್ದಾರೆ ಎಂದು ಆಡಳಿತರೂಢ ಎನ್‌ಡಿಎ ಆರೋಪಿಸಿದ ಒಂದು ದಿನದ ಬಳಿಕ ಪ್ರಧಾನಿ ಈ ರೀತಿಯ ಹೇಳಿಕೆ ನೀಡಿದರು. ಮೊದಲ ಬಾರಿಗೆ ಕಾಂಗ್ರೆಸೇತರ ನಾಯಕ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವುದರಿಂದ ಪ್ರತಿಪಕ್ಷಗಳು ಅಸಮಾಧಾನಗೊಂಡಿವೆ ಎಂದು ಅವರು ಸಂಸದರಿಗೆ ತಿಳಿಸಿದರು ಎಂದು ಮೂಲಗಳಿ ವರದಿ ಮಾಡಿವೆ.

ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಮೋದಿ ಹೊಸ ಸಂಸದರಿಗೆ ಸಲಹೆ ನೀಡಿದರು. ಸಂಸತ್ತಿಗಿಂತ ಕಲಿಯಲು ಉತ್ತಮ ಸ್ಥಳವಿಲ್ಲ ಮತ್ತು ಮಹಾನ್‌ ನಾಯಕರ ಬಗ್ಗೆ ತಿಳಿದುಕೊಳ್ಳಲು ಮತ್ತು ಅವರ ಅನುಭವವನ್ನು ಅರಿತುಕೊಳ್ಳಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ನೆರವಾಗುತ್ತದೆ ಎಂದು ತಿಳಿಸಿದರು.

ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವ ಮೊದಲು ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕು. ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು, ಸಂಸದರು ಕ್ಷೇತ್ರಗಳೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಮೋದಿ ಕಿವಿ ಮಾತು ಹೇಳಿದರು.

ಇದನ್ನೂ ಓದಿ: Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Exit mobile version