Site icon Vistara News

Modi Roadshow In Delhi | ಮೋದಿ ಮೆಗಾ ರೋಡ್‌ ಶೋ, ಲೋಕಸಭೆ ಚುನಾವಣೆಗೆ ದೆಹಲಿಯಿಂದಲೇ ರಣಕಹಳೆ

Modi Roadshow In Delhi

ನವದೆಹಲಿ: ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದಲೇ ರಣಕಹಳೆಯೂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಮೆಗಾ ರೋಡ್‌ ಶೋ (Modi Roadshow In Delhi) ನಡೆಸಿದ್ದಾರೆ. ಆ ಮೂಲಕ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.

ಸರ್ದಾರ್‌ ಪಟೇಲ್‌ ಚೌಕ್‌ನಿಂದ ಸಂಸದ್‌ ಮಾರ್ಗದಲ್ಲಿರುವ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ಎನ್‌ಡಿಎಂಸಿ ಕನ್ವೆನ್ಶನ್‌ ಸೆಂಟರ್‌ವರೆಗೆ ರೋಡ್‌ ಶೋ ಸಾಗಿದೆ. ರೋಡ್‌ ಶೋ ಉದ್ದಕ್ಕೂ ಮೋದಿ ಮೋದಿ ಘೋಷಣೆ, ಪುಷ್ಪವೃಷ್ಟಿ ಮಾಡಲಾಯಿತು.

ಸಂಜೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ರೋಡ್‌ ಶೋ ಬಳಿಕ ಸೋಮವಾರ ಸಂಜೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರದ ಅವಧಿ ವಿಸ್ತರಣೆ ಸೇರಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿ ಮುಂತಾದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಆಡಳಿತದ 12 ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.

ಇದನ್ನೂ ಓದಿ | BJP National Executive Meeting | ಜನವರಿ 16ರಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ಬಿಎಸ್‌ವೈ, ಬೊಮ್ಮಾಯಿ ಭಾಗಿ

Exit mobile version