ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ ದೀರ್ಘದಂಡ ನಮಸ್ಕಾರ ಹಾಕಿದರು.
ಕಳೆದ ಜನವರಿ 22ರಂದು ನರೇಂದ್ರ ಮೋದಿ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿದ ಬಳಿಕ ಮಾಡಿದ ಬಳಿಕ ರಾಮಮಂದಿರಕ್ಕೆ ಮೊದಲ ಬಾರಿ ಭೇಟಿ ನೀಡಿದರು.
ರಾಮನಗರಿ ಅಯೋಧ್ಯೆಯಲ್ಲಿ ಭರ್ಜರಿ ರೋಡ್ ಶೋ ಕೈಗೊಳ್ಳುವ ಮೊದಲು ಮೋದಿ ಅವರು ರಾಮಲಲ್ಲಾನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಅಯೋಧ್ಯೆ ಭೇಟಿ ನೀಡುವ ಮೊದಲು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ದೌರಾಹ್ರ ಲೋಕಸಭೆ ಕ್ಷೇತ್ರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು.
ರಾಮಲಲ್ಲಾ ದರ್ಶನದ ಬಳಿಕ ಮೋದಿ ಅವರು ಅಯೋಧ್ಯೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ವರೆಗೆ ರೋಡ್ ಶೋ ನಡೆಸಿದರು. ಮಾರ್ಗದುದ್ದಕ್ಕೂ ನೆರೆದಿದ್ದ ಜನ ಹೂಮಳೆ ಸುರಿಸಿ ಅಭಿಮಾನ ಮೆರೆದರು.
ರೋಡ್ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಸಾಥ್ ನೀಡಿದ್ದಾರೆ. ಇನ್ನು, ರೋಡ್ ಶೋ ಉದ್ದಕ್ಕೂ ಜನ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.
ಇದನ್ನೂ ಓದಿ: Narendra Modi: ಮತಬ್ಯಾಂಕ್ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!