ಪುಲ್ವಾಮಾ: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಇಂದು ಜಮ್ಮು-ಕಾಶ್ಮೀರ ಪೊಲೀಸರು (Jammu Kashmir Police) ಬಂಧಿಸಿದ್ದಾರೆ (Terror Associate Arrested). ಪುಲ್ವಾಮಾದಲ್ಲಿ ಸಿಕ್ಕಿಬಿದ್ದ ಇವನ ಬಳಿ ಸುಮಾರು 5ಕೆಜಿಗಳಷ್ಟು ಸುಧಾರಿತ ಸ್ಫೋಟಕ ಸಾಧನ (IED) ಇತ್ತು. ಅದೆಲ್ಲವನ್ನೂ ಜಪ್ತಿ ಮಾಡಲಾಗಿದೆ. ಈ ಮೂಲಕ ದೊಡ್ಡದೊಂದು ದುರಂತವನ್ನು ತಪ್ಪಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಅಂದಹಾಗೇ, ಬಂಧಿತನ ಹೆಸರು ಇಶ್ಫಾಕ್ ಅಹ್ಮದ್ ವಾನಿ ಎಂದಾಗಿದ್ದು, ಆತ ಅರಿಗಮ್ ಪುಲ್ವಾಮಾದ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದೂ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಾದ್ಯಂತ ಹಲವು ಕಡೆಗಳಲ್ಲಿ ಸೇನಾ ಸಿಬ್ಬಂದಿ-ಪೊಲೀಸರು ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಪೂಂಚ್ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದ ಪರಿಣಾಮ ಐವರು ಯೋಧರು ಮೃತಪಟ್ಟಿದ್ದರು. ಅದರ ಬೆನ್ನಲ್ಲೇ ಉಗ್ರರ ವಿರುದ್ಧದ ಕಾರ್ಯಾಚರಣೆಯೂ ಚುರುಕುಗೊಂಡಿತ್ತು. ಬುಧವಾರ ಕುಪ್ವಾರಾದಲ್ಲಿ ಇಬ್ಬರು ಉಗ್ರರನ್ನು, ಗುರುವಾರ ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಸಿಬ್ಬಂದಿ ಹತ್ಯೆಗೈದಿದ್ದರು. ಹಾಗೇ, ರಾಜೌರಿಯಲ್ಲೂ ಎನ್ಕೌಂಟರ್ ನಡೆದಿತ್ತು. ಇಲ್ಲಿನ ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಭಾರತೀಯ ಸೇನಾ ಸಿಬ್ಬಂದಿ ಮತ್ತು ಸಿಆರ್ಪಿಎಫ್ ಸಿಬ್ಬಂದಿ ಸಂಪೂರ್ಣವಾಗಿ ಸುತ್ತುವರಿದಿದ್ದರು. ಆದರೆ ಇಲ್ಲಿ ಉಗ್ರರು ಅಡಗಿ ಕುಳಿತು ನಡೆಸಿದ ದಾಳಿಗೆ ಐವರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಹಾಗೇ, ಒಬ್ಬ ಉಗ್ರನನ್ನು ಕೊಂದಿದ್ದಾರೆ. ಇನ್ನೊಬ್ಬನಿಗೆ ಗಾಯವಾಗಿದ್ದಾಗಿ ವರದಿಯಾಗಿದೆ.
ಇದನ್ನೂ ಓದಿ: Army Jawans Died: ಪೂಂಚ್ನಲ್ಲಿ ಬೆಂಕಿಯಿಂದ ಹೊತ್ತಿ ಉರಿದ ಸೇನಾ ವಾಹನ; ನಾಲ್ವರು ಯೋಧರ ಸಜೀವ ದಹನ
ರಾಜೌರಿಯಲ್ಲಿ ಇಂದು ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಅಲ್ಲಿ ವಿಪರೀತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಗ್ರರ ಹುಡುಕಾಟಕ್ಕೆ ತೊಡಕಾಗುತ್ತಿದೆ. ಈ ಮಧ್ಯೆ ಶನಿವಾರ (ಮೇ 6)ದಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಜೌರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಗಡಿ ನಿಯಂತ್ರಣ ರೇಖೆ ಬಳಿಯ ಭದ್ರತಾ ಪರಿಸ್ಥಿತಿ ಮತ್ತು ಭಾರತೀಯ ಸೇನಾ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ರಾಜನಾಥ್ ಸಿಂಗ್ ಜತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ
ಭಾರತೀಯ ಸೇನೆಯ ಕಾರ್ಯಾಚರಣೆಯ ಸನ್ನದ್ಧತೆ ಮತ್ತು ಗಡಿ ನಿಯಂತ್ರಣ ರೇಖೆಯ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಅವರೊಂದಿಗೆ ಸೇನಾ ಮುಖ್ಯಸ್ಥರಾದ ಮನೋಜ್ ಪಾಂಡೆ ಮತ್ತು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇದ್ದರು. ಈ ವೇಳೆ ಅವರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಸೈನಿಕರು ಇಲ್ಲಿದ್ದುಕೊಂಡು ಇಡೀ ದೇಶವನ್ನು ಕಾಪಾಡುತ್ತಿದ್ದಾರೆ. ಅವರಿಂದಲೇ ನಾವು ಸುರಕ್ಷಿತವಾಗಿದ್ದೇವೆ ಎಂದು ಹೇಳಿದರು.