ನವ ದೆಹಲಿ: ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಪೊಲೀಸರು ಏಕಕಾಲಕ್ಕೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ, 170ಕ್ಕೂ ಅಧಿಕ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳವಾರ ಮುಂಜಾನೆ ಏಕಕಾಲಕ್ಕೆ ಈ ದಾಳಿಗಳು ನಡೆದವು. ಕಳೆದ ವಾರ ಎನ್‌ಐಎ, ಇಡಿ ಮತ್ತು ಸ್ಥಳೀಯ ಪೊಲೀಸರು ಸೇರಿ ಪಿಎಫ್‌ಐ ಮೇಲೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. ಇವರಲ್ಲಿ ಹಲವರ ವಿರುದ್ಧ ವಿಧ್ವಂಸಕ ಕೃತ್ಯದ ಸಂಚು ಆರೋಪವಿದೆ. ಈ ದಾಳಿ ಹಾಗೂ ಬಂಧನವನ್ನು ವಿರೋಧಿಸಿ ಪಿಎಫ್‌ಐ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಯೋಜಿಸಲು, ಸಾರ್ವಜನಿಕ ಶಾಂತಿಭಂಗ ಮಾಡಲು ಮುಂದಾಗಿದೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಅಸ್ಸಾಂ, ದೆಹಲಿ ಮತ್ತು ಮಹಾರಾಷ್ಟ್ರಗಳಲ್ಲಿ ರಾಜ್ಯ ಪೊಲೀಸರು ಶೋಧ ನಡೆಸಿದ್ದಾರೆ.
ಇದನ್ನೂ ಓದಿ | ರಾಜ್ಯಾದ್ಯಂತ ಹಲವೆಡೆ ಪೊಲೀಸ್ ದಾಳಿ, 40ಕ್ಕೂ ಹೆಚ್ಚು PFI ಮುಖಂಡರು ವಶಕ್ಕೆ