ರೇವಂತ್ ರೆಡ್ಡಿ ಅಂದು ಎಬಿವಿಪಿ ನಾಯಕ; ಇಂದು ಕಾಂಗ್ರೆಸ್‌ನಿಂದ ತೆಲಂಗಾಣ ಸಿಎಂ! - Vistara News

ದೇಶ

ರೇವಂತ್ ರೆಡ್ಡಿ ಅಂದು ಎಬಿವಿಪಿ ನಾಯಕ; ಇಂದು ಕಾಂಗ್ರೆಸ್‌ನಿಂದ ತೆಲಂಗಾಣ ಸಿಎಂ!

Revanth Reddy: ತೆಲಂಗಾಣದಲ್ಲಿ ಬಹುತೇಕ ನೆಲಕಚ್ಚಿದ್ದ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೇರುವಂತೆ ಮಾಡಿದ ರೇವಂತ್ ರೆಡ್ಡಿ ಅವರು ಮುಂದಿನ ಮುಖ್ಯಮಂತ್ರಿಯಾಗುತ್ತಿದ್ದಾರೆ.

VISTARANEWS.COM


on

Political Journey of to be chief minister telangana, Revanth Reddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರ್ನಾಟಕದ ನೆರೆಯ ರಾಜ್ಯದಲ್ಲಿ ಕಾಂಗ್ರೆಸ್‌ನ (Congress Party) ಹೊಸ ಪಯಣ ಶುರುವಾಗಿದೆ. ರೇವಂತ್ ರೆಡ್ಡಿ (Revanth Reddy) ಎಂಬ ಛಲಗಾರ ದಕ್ಷಿಣ ಭಾರತದಲ್ಲಿ (South India) ವಿಶೇಷವಾಗಿ ತೆಲಗು ರಾಜ್ಯಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮರು ಹುಟ್ಟು ನೀಡಿದ್ದಾರೆ. ಅದರ ಫಲವಾಗಿಯೇ ಅವರೀಗ ಮುಖ್ಯಮಂತ್ರಿಯಾಗುತ್ತಿದ್ದಾರೆ (Chief Minister of Telangana). ಚುನಾವಣಾ ಪ್ರಚಾರದಲ್ಲಿ ಅವರು ಆಡುತ್ತಿದ್ದ ಆತ್ಮವಿಶ್ವಾಸದ ನುಡಿಗಳು ಒಮ್ಮೊಮ್ಮೆ ಅತಿಯಾದ ವಿಶ್ವಾಸ ಪ್ರದರ್ಶಿಸುತ್ತಿದ್ದಾರೆ ಎನಿಸುತ್ತಿತ್ತು. ಆದರೆ ಭಾನುವಾರ ಫಲಿತಾಂಶ ಪ್ರಕಟವಾದವಾಗ ಮಾತ್ರ ರೇವಂತ್ ರೆಡ್ಡಿಯ ಮಾತುಗಳು ನಿಜವಾಗಿದ್ದವು. ಹತ್ತು ವರ್ಷ ಆಡಳಿತದಲ್ಲಿದ್ದ ಬಿಆರ್‌ಎಸ್ (BRS) ಪಕ್ಷವನ್ನು ಕಿತ್ತೊಗೆಯುವಲ್ಲಿ ಅವರ ಯಶಸ್ವಿಯಾಗಿದ್ದಾರೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ರಾಜ್ಯವನ್ನು ಗೆಲ್ಲಿಸಿ ಕೊಟ್ಟಿದ್ದಾರೆ. 119 ವಿಧಾನಸಭೆ ಬಲದ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು 64 ಸ್ಥಾನಗಳನ್ನು ಗೆದ್ದುಕೊಂಡಿದೆ.

ಹಾಗೆ ನೋಡಿದರೆ ರೇವಂತ್ ರೆಡ್ಡಿ ಅವರು ಮೂಲ ಕಾಂಗ್ರೆಸಿಗರಲ್ಲ. ಅವರು ಒಂದು ಕಾಲದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (Akhila Bharatha Vidyarthi Parishat) ಅಗ್ರ ನಾಯಕ. ಅದೇ ನಾಯಕ ಇಂದು ತೆಲಂಗಾಣ ರಾಜ್ಯದಲ್ಲಿ (Telangana Elections 2023) ಕಾಂಗ್ರೆಸ್‌ನ್ನು ವಿಜಯದತ್ತ (Congress win) ಮುನ್ನುಗ್ಗಿಸಿ ಮುಖ್ಯಮಂತ್ರಿಯಾಗುತ್ತಿದ್ದಾರೆ.

ಹೌದು, ಆರೆಸ್ಸೆಸ್‌ ಮೂಲದ ಸಂಸ್ಥೆಯ ಮೂಲಕ ರಾಜಕೀಯ ಜೀವನವನ್ನು ಆರಂಭ ಮಾಡಿ, ಬಳಿಕ ಸ್ವತಂತ್ರವಾಗಿ ತಮ್ಮ ಚರಿಷ್ಮಾ ಬೆಳೆಸಿಕೊಂಡು ತೆಲುಗು ದೇಶಂ ಪಾರ್ಟಿಯಲ್ಲೂ ತಮ್ಮ ಕರಾಮತ್ತು ತೋರಿಸಿ ಈಗ ಕಾಂಗ್ರೆಸ್‌ನ ತೆಲಂಗಾಣ ರಾಜ್ಯಾಧ್ಯಕ್ಷರಾಗಿರುವ ರೇವಂತ ರೆಡ್ಡಿ ತಮ್ಮ 54ನೇ ವಯಸ್ಸಿನಲ್ಲೇ ಹಲವು ವಿಕ್ರಮಗಳನ್ನು ಸಾಧಿಸಿದವರು.

ತೆಲಂಗಾಣದಲ್ಲಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿಯನ್ನು ಮುಳುಗಿಸಿ ಕಾಂಗ್ರೆಸ್‌ ಧ್ವಜ ಹಾರಿಸಿದ ರೇವಂತ್‌ ರೆಡ್ಡಿ ಅವರು, ಕಾಮರೆಡ್ಡಿ ಕ್ಷೇತ್ರದಲ್ಲಿ ಕೆ. ಚಂದ್ರಶೇಖರ ರಾವ್‌ ಅವರನ್ನು ಸೋಲಿಸಿದ ಸಾಧನೆಯನ್ನೂ ಮಾಡಿದ್ದಾರೆ.

ಎನ್‌. ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿದ್ದ ಅವರು, ಈಗ ಮಲ್ಕಜ್‌ಗಿರಿ ಲೋಕಸಭಾ ಕ್ಷೇತ್ರದ ಸಂಸದರು. 2017ರಲ್ಲಿ ಕಾಂಗ್ರೆಸ್‌ ಸೇರಿದ್ದ ಅವರು 2021ರ ಜುಲೈ ತಿಂಗಳಲ್ಲಿ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲಿಂದ ಬಳಿಕ ಕಾಂಗ್ರೆಸ್‌ ನ್ನು ತಳಮಟ್ಟದಿಂದ ಮೇಲೆತ್ತಿ ಈಗ ಬಿಆರ್‌ಎಸ್‌ ಸೋಲಿಗೆ ಕಾರಣವಾಗಿದ್ದಾರೆ. ಅವರು ಅಧ್ಯಕ್ಷರಾದ ದಿನದಿಂದಲೇ ಬೀದಿ ಹೋರಾಟಗಳ ಮೂಲಕ ಸಂಘಟನೆಯನ್ನು ಬಲಗೊಳಿಸಲು ಆರಂಭಿಸಿದ್ದರು.

ಪಕ್ಷದೊಳಗೇ ಅವರಿಗೆ ವಿರೋಧವಿತ್ತು

ನಿಜವೆಂದರೆ, ರೇವಂತ್‌ ರೆಡ್ಡಿಗೆ ಪಕ್ಷದೊಳಗೆ ಎಲ್ಲವೂ ಸುಲಲಿತವಾಗಿರಲಿಲ್ಲ. ಬೇರೆ ಪಕ್ಷದಿಂದ ಬಂದವರು ಎಂಬ ಕಾರಣಕ್ಕಾಗಿ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕ ಮಾಡುವುದಕ್ಕೆ ವಿರೋಧವಿತ್ತು. ಆದರೆ, ಅದ್ಯಾವುದನ್ನೂ ತಲೆಗೆ ಹಾಕಿಕೊಳ್ಳದ ರೇವಂತ್‌ ರೆಡ್ಡಿ ಕರ್ನಾಟಕದ ಕಾಂಗ್ರೆಸ್‌ ನಾಯಕರಿಂದ‌ ಸ್ಫೂರ್ತಿ ಪಡೆದು ದೊಡ್ಡ ನಾಯಕರಾಗಿ ಬೆಳೆದರು. ಪಕ್ಷದ ರಾಷ್ಟ್ರೀಯ ನಾಯಕರ ಜತೆಗೆ ಕಾಣಿಸಿಕೊಂಡರು. ದೊಡ್ಡ ಮಟ್ಟದ ರ‍್ಯಾಲಿಗಳನ್ನು ನಡೆಸಿದರು. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು.

ರೇವಂತ್‌ ರೆಡ್ಡಿ ರಾಜಕೀಯ ಬದುಕಿನ ಹಾದಿ

  1. ರೇವಂತ್‌ ರೆಡ್ಡಿ ಅವರು ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿ ನಾಯಕನಾಗಿ ಬೆಳೆದಿದ್ದರು.
  2. 20೦6ರಲ್ಲಿ ಮಿಡ್ಜಿ ಮಂಡಲ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
  3. 2007ರಲ್ಲಿ ರೇವಂತ್‌ ರೆಡ್ಡಿ ಅವರು ಪಕ್ಷೇತರ ಸ್ಪರ್ಧಿಯಾಗಿ ನಿಂತು ವಿಧಾನ ಪರಿಷತ್‌ ಪ್ರವೇಶ ಮಾಡಿದರು.
    ಬಳಿಕ ತೆಲುಗು ದೇಶಂ ನಾಯಕ ಚಂದ್ರ ಬಾಬು ನಾಯ್ಡು ಅವರು ರೇವಂತ್‌ ಅವರನ್ನು ಸೆಳೆದುಕೊಂಡರು.
  4. 2009ರ ವಿಧಾನಸಭಾ ಚುನಾವಣೆಯಲ್ಲಿ ಕೋಡಂಗಲ್‌ ವಿಧಾನ ಸಭಾ ಕ್ಷೇತ್ರದಲ್ಲಿ ಟಿಡಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಅವರು ಸೋಲಿಸಿದ್ದು ಐದು ಬಾರಿ ಶಾಸಕರಾಗಿದ್ದ ಕಾಂಗ್ರೆಸ್‌ನ ಗುರುನಾಥ ರೆಡ್ಡಿ ಅವರನ್ನು.
  5. 2014ರ ಆಂಧ್ರ ಲೋಕಸಭಾ ಚುನಾವಣೆಯಲ್ಲಿ ಅದೇ ಕೋಡಂಗಲ್‌ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಮುಂದೆ ತೆಲುಗು ದೇಶಂನ ಸದನ ನಾಯಕರೇ ಆದರು.
  6. ಮುಂದೆ ರೇವಂತ್‌ ಅವರು ಕಾಂಗ್ರೆಸ್‌ ಜತೆ ಒಡನಾಟ ಮಾಡುವುದನ್ನು ಗಮನಿಸಿದ ತೆಲುಗು ದೇಶಂ ಪಕ್ಷ ಅವರನ್ನು ವಿಧಾನಸಭೆಯ ಪ್ರತಿ ಪಕ್ಷ ನಾಯಕನ ಸ್ಥಾನದಿಂದ ಕಿತ್ತು ಹಾಕಿತು. ಅವರು 2017ರ ಅಕ್ಟೋಬರ್‌ 31ರಂದು ಅವರು ಕಾಂಗ್ರೆಸ್‌ ಸೇರಿದರು.
  7. 2018ರಲ್ಲಿ ಅವರು ಮತ್ತೆ ಕೋಡಂಗಲ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಟಿಆರ್‌ಎಸ್‌ ಎದುರು ಸೋಲು ಕಂಡರು.
  8. 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರೇವಂತ್‌ ಈಗ ಲೋಕಸಭಾ ಸದಸ್ಯರೂ ಹೌದು. ಈ ಬಾರಿಯ ಚುನಾವಣೆಯಲ್ಲಿ ಕೋಡಂಗಲ್‌ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರ ವಿರುದ್ಧವೇ ಕಾಮರೆಡ್ಡಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

ಇವರ ಪತ್ನಿ ಯಾರು ಗೊತ್ತಾ?

ರೇವಂತ್‌ ರೆಡ್ಡಿ ಅವರು ಹುಟ್ಟಿದ್ದು ಮೆಹಬೂಬ್‌ ನಗರದ ಕೋದಂಡರೆಡ್ಡಿ ಪಳ್ಳಿಯಲ್ಲಿ. 1969ರ ನವೆಂಬರ್‌ 8ರಂದು. ಬಿೆ ಪದವೀಧರರಾಗಿರುವ ಅವರು, ಕಲಿತಿದ್ದು ಒಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ. ಇವರ ಪತ್ನಿ ಗೀತಾ ಅವರು ಜೈಪಾಲ್‌ ರೆಡ್ಡಿ ಅವರ ಸೊಸೆ. ಅವರಿಗೆ ಒಬ್ಬ ಮಗಳಿದ್ದಾಳೆ.

ಈ ಸುದ್ದಿಯನ್ನೂ ಓದಿ: Revanth Reddy: ರೇವಂತ್ ರೆಡ್ಡಿ ತೆಲಂಗಾಣ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ಬಾಲಕಿಯು ಗರ್ಭ ಧರಿಸಿದ್ದು, ಗರ್ಭಪಾತ ಮಾಡಿಸಲು ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬಯಲಾಗಿದೆ.

VISTARANEWS.COM


on

Mobile
Koo

ಮುಂಬೈ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಭಾರತ ಸೇರಿ ಜಗತ್ತು ಏಳಿಗೆ ಹೊಂದಲು ಕಾರಣವಾಗಿದೆ. ಆದರೆ, ಇದೇ ತಂತ್ರಜ್ಞಾನವು ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಅದರಲ್ಲೂ, ಸಣ್ಣ ಮಕ್ಕಳಿಂದ ಹಿಡಿದು, ಹಿರಿಯರವರೆಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳು (Smart Phones) ಅತ್ಯಾಚಾರ, ಲೈಂಗಿಕ ಕಿರುಕುಳ, ಕೊಲೆ, ಸುಲಿಗೆಗೆ ದಾರಿ ಮಾಡಿಕೊಡುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

ಹೌದು, ಬಾಲಕನು ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ ಪರಿಣಾಮ, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿರುವ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್‌ ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ, ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

physical Abuse

“ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಪೋಕ್ಸೊ, ಐಪಿಸಿಯ ಸೆಕ್ಷನ್‌ 376 ಸೇರಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಬಳಿಕ ಪ್ರಕರಣವನ್ನು ಖಂಡೇಶ್ವರ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಇಂತಹ ಪ್ರಕರಣಗಳು ಬೆಳಕಿಗೆ ಬರುವ ಕಾರಣದಿಂದಾಗಿಯೇ, ಮಕ್ಕಳಿಗೆ ಮೊಬೈಲ್‌ ಕೊಡಬಾರದು, ಕೊಟ್ಟರೂ ಅವರು ಏನು ಮಾಡುತ್ತಾರೆ ಎಂಬುದರ ಮೇಲೆ ಪೋಷಕರು ಗಮನ ಇಡಬೇಕು ಎಂದು ತಜ್ಞರು ಹೇಳುತ್ತಲೇ ಇರುತ್ತಾರೆ.

ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

Continue Reading

Lok Sabha Election 2024

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

ಮುಂಬೈನ ರಹೇಜಾ ಕಾಲೇಜಿಗೆ ತೆರಳಿದ 101 ವರ್ಷದ ನಿವೃತ್ತ ಯೋಧ ಕಾರ್ಖನೀಸ್‌ ಅವರು ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಇವರು ಮತದಾನ ಮಾಡಲು ತೆರಳಿದ ಫೋಟೊವನ್ನು ಮುಂಬೈ ಪೊಲೀಸರು ಪೋಸ್ಟ್‌ ಮಾಡಿದ್ದಾರೆ. ಸಾವಿರಾರು ಜನ ಪೋಸ್ಟ್‌ಗೆ ಲೈಕ್‌ ಒತ್ತುವ ಜತೆಗೆ, ಯೋಧರ ಉತ್ಸಾಹ, ಕರ್ತವ್ಯ ಪ್ರಜ್ಞೆಯನ್ನು ಕೊಂಡಾಡಿದ್ದಾರೆ.

VISTARANEWS.COM


on

Army Officer
Koo

ಮುಂಬೈ: ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ (ಮೇ 20) ಐದನೇ ಹಂತದ ಮತದಾನ (Lok Sabha Election) ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಮೂರನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ (Voter Turnout) ದಾಖಲಾಗಿದೆ. ಇದರ ಮಧ್ಯೆಯೇ, ಮುಂಬೈನಲ್ಲಿ 101ನೇ ವಯಸ್ಸಿನಲ್ಲೂ ನಿವೃತ್ತ ಯೋಧರೊಬ್ಬರು (Retired Army Officer) ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಅವರು ಮತದಾನ ಮಾಡಿದ ಫೋಟೊಗಳು ಈಗ ವೈರಲ್‌ ಆಗಿವೆ.

ಮುಂಬೈ ಪೊಲೀಸರು ನಿವೃತ್ತ ಯೋಧ ಮತದಾನ ಮಾಡಿದ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನೀವು ಮತದಾನವನ್ನು ತಪ್ಪಿಸಿಕೊಳ್ಳಲು 101 ಕಾರಣಗಳನ್ನು ಕೊಡಬಹುದು. ಆದರೆ, ನಿವೃತ್ತ ಯೋಧರಾದ ಕಾರ್ಖನೀಸ್‌ ಅವರು 101ನೇ ವಯಸ್ಸಿನಲ್ಲೂ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮಾದರಿ ಎನಿಸಿದ್ದಾರೆ. ಇವರು ಮುಂಬೈನ ರಹೇಜಾ ಕಾಲೇಜಿಗೆ ತೆರಳಿ ಮತದಾನ ಮಾಡಿದ್ದು, ನಮ್ಮ ಸಿಬ್ಬಂದಿಯು ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ನಿವೃತ್ತ ಯೋಧರ ಕರ್ತವ್ಯಪ್ರಜ್ಞೆಗೆ ಜಾಲತಾಣಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಳಿ ವಯಸ್ಸಿನಲ್ಲೂ ಮತದಾನ ಮಾಡಿದ ನಿವೃತ್ತ ಯೋಧನಿಗೆ ನನ್ನ ಸೆಲ್ಯೂಟ್‌” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ನಿಜವಾಗಿಯೂ ಇದು ಸ್ಫೂರ್ತಿದಾಯಕ. 98 ವರ್ಷದ ನನ್ನ‌ ಅಜ್ಜಿಯು ಕೂಡ ಇಂದು ಮತ ಚಲಾಯಿಸಿದ್ದಾರೆ. ಇನ್ನು ಯೋಧನಿಗೆ ಸಹಾಯ ಮಾಡಿದ ಪೊಲೀಸ್‌ ಸಿಬ್ಬಂದಿಗೂ ಧನ್ಯವಾದಗಳು” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್‌ಅನ್ನು ಸಾವಿರಾರು ಜನ ಲೈಕ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ಇದನ್ನೂ ಓದಿ: Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Continue Reading

ದೇಶ

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

Rahul Gandhi: ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಜತೆಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲೂ ಕಣಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಅವರಿಗೆ ಹಲವೆಡೆ ಜನ ಜೈ ಶ್ರೀರಾಮ್‌ (Jai Shri Ram) ಎಂದು ಘೋಷಣೆ ಕೂಗಿ ಸ್ವಾಗತಿಸುತ್ತಿದ್ದಾರೆ.

ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ರಾಯ್‌ಬರೇಲಿಯ ಮತ್ತೊಂದು ಕಡೆಯೂ ರಾಹುಲ್‌ ಗಾಂಧಿ ಅವರಿಗೆ ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗಿ ಜನ ಸ್ವಾಗತಿಸಿದ್ದಾರೆ. ಈ ಎರಡೂ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹನುಮಾನ್‌ ದೇಗುಲಕ್ಕೆ ಭೇಟಿ

ರಾಯ್‌ಬರೇಲಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿದ ರಾಹುಲ್‌ ಗಾಂಧಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೂ ಕೆಲವೊಬ್ಬರು, ಅವಸರ ಅವಸರದಲ್ಲಿ ಪೂಜೆ ಮಾಡುವುದು, ದೇವರ ಮೇಲೆ ಪೂಜಾ ಸಾಮಗ್ರಿಗಳನ್ನು ಎಸೆಯುವುದು ನೋಡಿದರೆ ಇವರು ಎಂತಹ ಹಿಂದು ಎಂಬುದು ಗೊತ್ತಾಗುತ್ತದೆ ಎಂಬುದಾಗಿ ಟೀಕಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಬಹಿಷ್ಕರಿಸಿದ ಕಾರಣ ಕಾಂಗ್ರೆಸ್‌ ನಾಯಕರ ಎದುರು ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗುತ್ತಾರೆ. ಅದೇ ರೀತಿ, ರಾಹುಲ್‌ ಗಾಂಧಿ ಅವರ ಎದುರು ಕೂಡ ಜನ ಜೈ ಶ್ರೀರಾಮ್‌ ಎಂಬುದಾಗಿ ಕೂಗಿದ್ದಾರೆ. 2004ರಿಂದ ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು. ಅವರೀಗ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಅವರ ಪುತ್ರ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ನಾಮಪತ್ರ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Continue Reading

ದೇಶ

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

AAP Funds: 2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಸೇರಿ ಹಲವು ದೇಶಗಳಿಂದ ನಿಯಮಗಳನ್ನು ಪಾಲಿಸದೆಯೇ ದೇಣಿಗೆ ಪಡೆಯಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಮಾಹಿತಿ ನೀಡಿದೆ.

VISTARANEWS.COM


on

AAP Funds
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿಗೆ (AAP) 2014ರಿಂದ 2022ರ ಅವಧಿಯಲ್ಲಿ ಬೇರೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ (AAP Funds) ಹರಿದುಬಂದಿದೆ. ಆದರೆ, ದೇಣಿಗೆ ಸ್ವೀಕರಿಸುವಾಗ ಆಮ್‌ ಆದ್ಮಿ ಪಕ್ಷವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಜಾರಿ ನಿರ್ದೇಶನಾಲಯವು (E.D) ಮಾಹಿತಿ ನೀಡಿದೆ. ಇದು ಈಗ ಪಕ್ಷ ಹಾಗೂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಸಂಕಷ್ಟ ತಂದಿದೆ.

ವಿದೇಶಿ ದೇಣಿಗೆ ನಿಯಮಗಳನ್ನು ಆಪ್‌ ಪಾಲಿಸದ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌, ಸೌದಿ ಅರೇಬಿಯಾ, ಕುವೈತ್‌, ಒಮಾನ್‌ ಸೇರಿ ಹಲವು ದೇಶಗಳಿಂದ ಆಪ್‌ ನಿಯಮ ಉಲ್ಲಂಘಿಸಿ ದೇಣಿಗೆ ಸ್ವೀಕರಿಸಿದೆ” ಎಂದು ತಿಳಿಸಿದ್ದಾರೆ.

2021ರಲ್ಲೇ ವಿಚಾರಣೆ ನಡೆದಿತ್ತು

ವಿದೇಶಗಳಿಂದ ದೇಣಿಗೆ ಪಡೆಯುವಾಗ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆಯೇ 2021ರ ಸೆಪ್ಟೆಂಬರ್‌ನಲ್ಲಿ ಆಪ್‌ ನಾಯಕ ಪಂಕಜ್‌ ಕುಮಾರ್‌ ಅವರ ವಿಚಾರಣೆ ನಡೆಸಲಾಗಿತ್ತು. ಈಗ, ಆಪ್‌ಗೆ ದೇಣಿಗೆ ನೀಡಿದವರ ಕುರಿತು ತಪ್ಪು ಮಾಹಿತಿ ನೀಡಲಾಗಿದೆ. ದೇಣಿಗೆ ನೀಡಿದವರ ಮಾಹಿತಿಯನ್ನು ಮರೆಮಾಚಲಾಗಿದೆ ಎಂಬುದು ಸೇರಿ ಹಲವು ಆರೋಪಗಳನ್ನು ಇ.ಡಿ ಮಾಡಿದೆ. ಇದರ ಕುರಿತು ಕೇಂದ್ರ ಗೃಹ ಸಚಿವಾಲಯವು ಯಾವ ತೀರ್ಮಾನ ತೆಗೆದುಕೊಳ್ಳಲಿದೆಯೋ ಕಾದು ನೋಡಬೇಕಿದೆ.

ದೆಹಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದರು. ಅವರೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಜೂನ್‌ 2ರಂದು ಮತ್ತೆ ಜೈಲು ಸೇರಲಿದ್ದಾರೆ. ಆಪ್‌ನ ಹಲವು ಸಚಿವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಕಾರಣ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಆಪ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಉದ್ಯಮಿಗಳಿಂದ 200 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಸುಕೇಶ್‌ ಚಂದ್ರಶೇಖರ್‌, ಆಮ್‌ ಆದ್ಮಿ ಪಕ್ಷಕ್ಕೆ 60 ಕೋಟಿ ರೂ.ಗಳನ್ನು ದೇಣಿಗೆ ನೀಡಿರುವುದಾಗಿ 2022ರಲ್ಲಿ ಹೇಳಿದ್ದ. ಸುಕೇಶ್‌ ಚಂದ್ರಶೇಖರ್‌ ಬಿಜೆಪಿಯ ವಕ್ತಾರನಂತೆ ಮಾತನಾಡುತ್ತಿದ್ದು, ಜೈಲಿನಿಂದ ಬಿಡುಗಡೆಯಾದ ಬಳಿಕ ಆ ಪಕ್ಷ ಸೇರಬಹುದು ಎಂದು ಆಮ್‌ ಆದ್ಮಿ ಈ ಹಿಂದೆ ಟೀಕಿಸಿತ್ತು.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading
Advertisement
Mobile
ದೇಶ2 mins ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 202422 mins ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ34 mins ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ56 mins ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ1 hour ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ2 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ2 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ2 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ3 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ3 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌