Site icon Vistara News

ಎಂತ ‘ಸಾವ್‌’ ಮರ‍್ರೆ; ‘ನಾನು ಸತ್ತಿಲ್ಲ’ ಎಂದ ಪೂನಂ ಪಾಂಡೆಯನ್ನು ಬಂಧಿಸಿ ಎಂದ ಜನ!

Poonam Pandey

Poonam Pandey Should Be Jailed: Netizens Angry With Actress' Death Prank

ನವದೆಹಲಿ: ಬಾಲಿವುಡ್‌ ನಟಿ, ಪೂನಂ ಪಾಂಡೆ (Poonam Pandey) ಅವರು ಗರ್ಭಕಂಠ ಕ್ಯಾನ್ಸರ್‌ನಿಂದ (Cervical Cancer) ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿ, ಮರುದಿನ ‘ಇಲ್ಲ ನಾನು ಸತ್ತಿಲ್ಲ’ ಎಂದು ವಿವಾದಾತ್ಮಕ ನಟಿ ನೀಡಿದ ಸ್ಪಷ್ಟನೆ ಕೂಡ ಭಾರಿ ಸುದ್ದಿಯಾಗಿದೆ. ಇದರ ಬೆನ್ನಲ್ಲೇ, ಸಾವಿನ ವಿಚಾರಕ್ಕೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸಿದ ಪೂನಂ ಪಾಂಡೆ ಅವರನ್ನು ಬಂಧಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಜನ ಆಗ್ರಹಿಸುತ್ತಿದ್ದಾರೆ. ನಾನು ಸತ್ತಿಲ್ಲ, ಜೀವಂತವಾಗಿದ್ದೇನೆ ಎಂದು ಪೂನಂ ಪಾಂಡೆ ಅವರು ವಿಡಿಯೊ ಅಪ್‌ಲೋಡ್‌ ಮಾಡಿದ ಬಳಿಕ ಆಕೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಪೂನಂ ಪಾಂಡೆ ಅವರು ಜೀವಂತವಾಗಿದ್ದಾರೆ. ಅವರು ಜಾಗೃತಿ ಮೂಡಿಸಲು ಹೀಗೆ ಮಾಡಿದ್ದಾರಂತೆ. ಇಂತಹ ಕೆಟ್ಟ ಅಪಸವ್ಯ ಮಾಡಿದ ಪೂನಂ ಪಾಂಡೆಯನ್ನು ಜೈಲಿಗೆ ಕಳುಹಿಸಿ” ಎಂದು ಯುವತಿಯೊಬ್ಬರು ಪೋಸ್ಟ್‌ ಮಾಡಿದ್ದಾರೆ. “ಗರ್ಭಕಂಠ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸಲು ಪೂನಂ ಪಾಂಡೆ ಇಂತಹ ಪ್ರಾಂಕ್‌ ಮಾಡಿದ್ದಾರಂತೆ. ಸಾವಿನ ವಿಚಾರದಲ್ಲಿ ಯಾರು ಹೀಗೆ ಮಾಡುತ್ತಾರೆ” ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗೆ, ಸಾವಿನ ವಿಚಾರದಲ್ಲಿ ಹುಡುಗಾಟ ಆಡಿದ, ಪ್ರಚಾರಕ್ಕಾಗಿ ಸ್ಟಂಟ್‌ ಮಾಡಿದ ಪೂನಂ ಪಾಂಡೆಯನ್ನು ಜನ ಹಲವು ರೀತಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಪೂನಂ ಪಾಂಡೆ ಅಪ್‌ಲೋಡ್‌ ಮಾಡಿದ ವಿಡಿಯೊದಲ್ಲಿ ʻʻನಿಮ್ಮೆಲ್ಲರೊಂದಿಗೆ ಮಹತ್ವದ ಸಂಗತಿಯೊಂದನ್ನು ಹೇಳಲೇಬೇಕಾಗಿದೆ. ನಾನು ಇನ್ನೂ ಇದ್ದೇನೆ. ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ನನ್ನನ್ನು ಬಲಿ ತೆಗೆದುಕೊಂಡಿಲ್ಲ, ದುರಂತವೆಂದರೆ, ಈ ರೋಗವನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಜ್ಞಾನದ ಕೊರತೆಯಿಂದಾಗಿ ಸಾವಿರಾರು ಮಹಿಳೆಯರು ಜೀವ ಕಳೆದುಕೊಂಡಿದ್ದಾರೆ. ಇತರ ಕೆಲವು ಕ್ಯಾನ್ಸರ್ ಗಳಿಗಿಂತ ಭಿನ್ನವಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಗಟ್ಟಬಹುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Poonam Pandey: ಪೂನಂ ಪಾಂಡೆ ಸತ್ತಿಲ್ಲ, ಇನ್​ಸ್ಟಾಗ್ರಾಮ್​ನಲ್ಲಿ ಪ್ರತ್ಯಕ್ಷ; ಎಲ್ಲ ಬರೀ ಓಳು!

“ಎಚ್​ಪಿವಿ ಲಸಿಕೆ ಮತ್ತು ಆರಂಭಿಕ ಪರೀಕ್ಷೆಗಳು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ರೋಗದಿಂದ ಯಾರೂ ಪ್ರಾಣ ಕಳೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಮಗೆ ಹಲವಾರು ಮಾರ್ಗಗಳಿವೆ. ವಿಮರ್ಶಾತ್ಮಕ ಜಾಗೃತಿಯೊಂದಿಗೆ ಪರಸ್ಪರರನ್ನು ಸಬಲೀಕರಣಗೊಳಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿಯೊಬ್ಬ ಮಹಿಳೆಗೆ ಮಾಹಿತಿ ನೀಡಬೇಕಾಗಿದೆ. ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೆ ನನ್ನ ಬಯೊದಲ್ಲಿರುವ ಲಿಂಕ್‌ಗೆ ಭೇಟಿ ನೀಡಿ. ಈ ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಒಟ್ಟಾಗಿ ಪ್ರಯತ್ನಿಸೋಣʼʼ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version