Site icon Vistara News

Bharat Ratna: ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ

Posthumous award of Bharat Ratna to Karpoori Thakur

ನವದಹೆಲಿ: ಬಿಹಾರದ ಮಾಜಿ ಸಿಎಂ, ಜನ ನಾಯಕ (Jan Nayak) ಎಂದು ಖ್ಯಾತರಾಗಿದ್ದ ಕರ್ಪೂರಿ ಠಾಕೂರ್ (Karpoori Thakur) ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ(bharat ratna award). ಕರ್ಪೂರಿ ಠಾಕೂರ್ ಅವರು 1970ರಿಂದ 1971ರವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ಆಗ ಅವರು ಸಮಾಜವಾದಿ ಮತ್ತು ಭಾರತೀಯ ಕ್ರಾಂತಿ ದಳ ಪಕ್ಷದಲ್ಲಿದ್ದರು. ಮತ್ತೆ 1977ರಿಂದ 1979ರವರೆಗೆ ಎರಡನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿದ್ದರು. ಆಗ ಜನತಾ ಪಾರ್ಟಿಯಲ್ಲಿದ್ದರು.

ಕರ್ಪೂರಿ ಠಾಕೂರ್ ಅವರು ಉತ್ತರ ಭಾರತದಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿ ಗುರುತಿಸಿಕೊಂಡಿದ್ದರು. ಬಿಹಾರದ ರಾಜಕಾರಣದಲ್ಲಿ ಅಗ್ರಮಾನ್ಯರಾಗಿದ್ದರು. ನಾಯ್ (ಕ್ಷೌರಿಕ) ಸಮುದಾಯದಲ್ಲಿ ಗೋಕುಲ್ ಠಾಕೂರ್ ಮತ್ತು ರಾಮ್ದುಲಾರಿ ದೇವಿ ದಂಪತಿಗೆ ಜನಿಸಿದ ಕರ್ಪೂರಿ ಅವರು ಜನಿಸಿದರು. ಈಗ ಕರ್ಪುರಿ ಗ್ರಾಮ ಎಂದು ಕರೆಯಲಾಗುವ ಪಿತೌಂಜಿಯಾ ಗ್ರಾಮದಿಂದ ಹಿಡಿದು ಬಿಹಾರದ ಮುಖ್ಯಮಂತ್ರಿಯಾಗುವವರೆಗಿನ ಅವರ ಪಯಣವು ಸಮರ್ಪಣೆ, ಸಾರ್ವಜನಿಕ ಸೇವೆಗೆ ಸಾಕ್ಷಿಯಾಗಿದೆ.

1970 ರ ದಶಕದಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿ ಅವರ ಆಡಳಿತವು ವಿಶೇಷವಾಗಿ ಸಮಾಜದ ವಂಚಿತ ವರ್ಗಗಳಿಗೆ ನ್ಯಾಯ ಕಲ್ಪಿಸಲು ನಾಂದಿ ಹಾಡಿತು. ಹೃದಯವಂತ ಸಮಾಜವಾದಿ ಠಾಕೂರ್ ಅವರು ತಮ್ಮ ವಿದ್ಯಾರ್ಥಿ ದಿನಗಳಲ್ಲಿ ರಾಷ್ಟ್ರೀಯವಾದಿ ವಿಚಾರಗಳಿಂದ ಆಳವಾಗಿ ಪ್ರಭಾವಿತರಾಗಿದ್ದರು ಮತ್ತು ನಂತರ ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟವನ್ನು ಸೇರಿದರು. ಅವರ ರಾಜಕೀಯ ಸಿದ್ಧಾಂತವು ‘ಲೋಹಿಯಾ’ ಚಿಂತನೆಯ ಆಧಾರಿತವಾಗಿದ್ದು, ಇದು ಕೆಳಜಾತಿಗಳ ಸಬಲೀಕರಣಕ್ಕೆ ಒತ್ತು ನೀಡಿತು.

ಭಾರತ ರತ್ನ ಪ್ರಶಸ್ತಿಯನ್ನು ಗಣರಾಜ್ಯೋತ್ಸವ ದಿನ ಪ್ರದಾನ ಮಾಡಲಾಗುತ್ತದೆ.

ಈ ಸುದ್ದಿಯನ್ನೂ ಓದಿ: ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

Exit mobile version