Site icon Vistara News

Chandrayaan 3: ‘ಇಸ್ರೋ ಸಾಧನೆ’ ಹೊಗಳಿದ ಚಂದ್ರಯಾನ 3 ಮಿಷನ್ ವ್ಯಂಗ್ಯ ಮಾಡಿದ್ದ ನಟ ಪ್ರಕಾಶ್ ರಾಜ್!

Prakash Raj

ನವದೆಹಲಿ: ಇತ್ತೀಚೆಗೆ ಚಂದ್ರಯಾನ 3 (Chandrayaan 3) ಮಿಷನ್‌ ಕಳುಹಿಸಿದ ಫೋಟೊ ಎಂದು ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್‌ (K Sivan) ಅವರನ್ನು ಅಣಕ ಮಾಡಲು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ (X) ಫೋಟೊ ಹಂಚಿಕೊಂಡಿದ್ದ ನಟ ಪ್ರಕಾಶ್ ರಾಜ್ (Actor Prakash Raj), ಚಂದ್ರಯಾನ 3 ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ (Lander Soft Landing) ಯಶಸ್ವಿಯಾದ ಬೆನ್ನಲ್ಲೇ ಇಸ್ರೋಗೆ (ISRO) ಅಭಿವಂದಿಸಿ ಟ್ವೀಟ್ ಮಾಡಿದ್ದಾರೆ. ಈ ಮಧ್ಯೆ, ಪ್ರಕಾಶ್ ರಾಜ್ ಅವರನ್ನು ಅಣಕಿಸುವ ಸಾಕಷ್ಟು ಮೀಮ್ಸ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಭಾರತ ಮತ್ತು ಮಾನವಕುಲಕ್ಕೆ ಹೆಮ್ಮೆಯ ಕ್ಷಣ. ಇಸ್ರೋ ಮತ್ತು ಯಾರೆಲ್ಲ ಈ ಸಾಧನೆಗೆ ಕಾರಣವಾಗಿದ್ದಾರೋ ಅವರಿಗೆಲ್ಲ ಥ್ಯಾಂಕ್ ಯೂ. ನಮ್ಮ ಬ್ರಹ್ಮಾಂಡದ ರಹಸ್ಯವನ್ನು ಅನ್ವೇಷಿಸಲು ಮತ್ತು ಆಚರಿಸಲು ಇದು ನಮಗೆ ಮಾರ್ಗದರ್ಶನ ನೀಡಲಿ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

ಪ್ರಕಾಶ್ ರಾಜ್ ಏಕೆ ವಿವಾದಕ್ಕೆ ಮಾಡಿಕೊಂಡಿದ್ದರು?

ಕೆಲವು ದಿನಗಳ ಹಿಂದೆ ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್‌ ಅವರ ಕುರಿತ ವ್ಯಂಗ್ಯಚಿತ್ರವನ್ನು ಪ್ರಕಾಶ್‌ ರಾಜ್‌ ಹಂಚಿಕೊಂಡಿದ್ದು, ಇದರಲ್ಲಿ ಚಾಯ್‌ವಾಲಾ ಎಂಬುದಾಗಿ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ವ್ಯಂಗ್ಯ ಮಾಡಿದಂತಿತ್ತು. “ತಾಜಾ ಸುದ್ದಿ; ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಅವರು ಬರೆದುಕೊಂಡಿದ್ದರು. ಚಂದ್ರಯಾನ 3 ಮಿಷನ್‌ ಯಶಸ್ಸಿಗೆ ದೇಶವೇ ಪ್ರಾರ್ಥಿಸುವ ಹೊತ್ತಿನಲ್ಲಿ ಪ್ರಕಾಶ್‌ ರಾಜ್‌ ಅವರು ಇಂತಹ ಫೋಟೊ ಶೇರ್‌ ಮಾಡಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕಾಶ್‌ ರಾಜ್‌ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದರು.

ಈ ಸುದ್ದಿಯನನೂ ಓದಿ: Chandrayaan 3: ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ಚಂದ್ರಯಾನ 3 ಲ್ಯಾಂಡರ್!

ಪ್ರಕಾಶ್‌ ರಾಜ್‌ ಅವರನ್ನು ತರಾಟೆಗೆ ತೆಗೆದುಕೊಂಡ ವ್ಯಕ್ತಿಯೊಬ್ಬರು, “ಇದು ರೋಗಿಷ್ಟ ಮನಸ್ಥಿತಿಯ ಪರಮಾವಧಿ” ಎಂದಿದ್ದರು. ರಾಮ್‌ ಎಂಬುವವರು ಪ್ರತಿಕ್ರಿಯಿಸಿ, “ಇಸ್ರೋ ಉನ್ನತ ಭಾರತವನ್ನು ಪ್ರತಿನಿಧಿಸುತ್ತದೆ. ಸಂಪನ್ಮೂಲ ಕೊರತೆ, ಪ್ರತಿಕೂಲ ಪರಿಸ್ಥಿತಿಗಳ ಮಧ್ಯೆಯೂ ಇಸ್ರೋ ಮಹತ್ತರವಾದುದನ್ನು ಸಾಧಿಸಲು ಹೊರಟಿದೆ. ಆದರೆ, ಈ ವ್ಯಕ್ತಿಯು ಭಾರತದ ಬಗ್ಗೆ ಕೆಟ್ಟದ್ದನ್ನೇ ಹೇಳುತ್ತಾನೆ” ಎಂದು ಕುಟುಕಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version