ನವದೆಹಲಿ/ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಹಿಂದುಗಳು ಪೂಜೆ ಸಲ್ಲಿಸಬಹುದು ಎಂದು ವಾರಾಣಸಿ ನ್ಯಾಯಾಲಯವು (Varanasi Court) ಅನುಮತಿ ನೀಡಿದ ಬೆನ್ನಲ್ಲೇ ಗುರುವಾರ (ಫೆಬ್ರವರಿ 1) ಮಸೀದಿಯಲ್ಲಿ ಹಿಂದುಗಳು ಪೂಜೆ ಸಲ್ಲಿಸಿದ್ದಾರೆ. ಮತ್ತೊಂದೆಡೆ, ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂಬುದಾಗಿ ಮುಸ್ಲಿಮರು ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಮಸೀದಿ ಆವರಣದಲ್ಲಿ ನಡೆಸಿದ ವೈಜ್ಞಾನಿಕ ಸಮೀಕ್ಷೆಯ ಸಮಯದಲ್ಲಿ ನೆಲಮಾಳಿಗೆಯನ್ನು ಸ್ವಚ್ಛಗೊಳಿಸಲಾಗಿದೆ. ಜನವರಿ 17 ರಂದು ವ್ಯಾಸ್ ಅವರ ನೆಲಮಾಳಿಗೆಯನ್ನು ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿತ್ತು. ಇದೀಗ ಕೋರ್ಟ್ ಆದೇಶ ಹಿಂದೂಗಳ ಪರ ಬಂದಿದೆ. ಹಾಗಾಗಿ, ಹಿಂದುಗಳು, ಹಿಂದು ಮಹಿಳೆಯರು ಗುರುವಾರ ಮಸೀದಿಯಲ್ಲಿ ಪೂಜೆ ಮಾಡಿ, ಆರತಿ ಬೆಳಗಿದ್ದಾರೆ.
ಮಸೀದಿ ಸಮಿತಿಯು ಕ್ಷಿಪ್ರವಾಗಿ ಅರ್ಜಿಯ ವಿಚಾರಣೆ ನಡೆಸಿ, ಪೂಜೆಗೆ ತಡೆಯಾಜ್ಞೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ, ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Hindus performed Puja at the Gyanvapi cellar after 3 decades.#GyanvapiMosque #GyanvapiMandir #Gyanvapi #GyanvapiASIReport #GyanvapiMosqueCase #Gyanvapi #Budget2024 #BreakingNews #NirmalaSitharaman 5.1% of GDP First Develop India pic.twitter.com/4KdwExc1Wr
— Neha Bisht (@neha_bisht12) February 1, 2024
ಮಸೀದಿ ನಿರ್ಮಾಣಕ್ಕೂ ಮೊದಲುಇಲ್ಲಿ ದೊಡ್ಡ ಹಿಂದೂ ದೇವಾಲಯ ಅಸ್ತಿತ್ವದಲ್ಲಿತ್ತು ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ವರದಿ ಹೇಳಿದ ನಂತರ ಮಸೀದಿಯ ಮುಚ್ಚಿದ ಭಾಗದಲ್ಲಿ ಉತ್ಖನನ ಮತ್ತು ವೈಜ್ಞಾನಿಕ ಸಮೀಕ್ಷೆ ಕೋರಿ ನಾಲ್ವರು ಹಿಂದೂ ಮಹಿಳೆಯರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದಾದ ಒಂದು ದಿನದ ನಂತರ ಜಿಲ್ಲಾ ನ್ಯಾಯಾಲಯದ ಆದೇಶ ಬಂದಿದೆ. ಮಸೀದಿ ಬಳಿ ವಿವಾದಿತ ರಚನೆಯಿದೆ. ಅದನ್ನು ಹಿಂದೂಗಳು ಶಿವಲಿಂಗ ಎಂದು ಹೇಳುತ್ತಿದ್ದಾರೆ. ಆದರೆ, ಇದು ಪ್ರಾರ್ಥನಾ ಕೊಳದ ಭಾಗವಾಗಿದೆ ಎಂದು ಮುಸ್ಲಿಂ ಸಮುದಾಯದವರು ಹೇಳುತ್ತಿದ್ದಾರೆ.
ಏನಿದು ಜ್ಞಾನವಾಪಿ ಮಸೀದಿ?
ಇದೊಂದು ಬಾವಿ. ವಾಪಿ ಎಂದರೆ ಸಂಸ್ಕೃತದಲ್ಲಿ ಬಾವಿ. ಜ್ಞಾನದ ಬಾವಿ ಎಂಬುದು ಇದರ ಅಕ್ಷರಾರ್ಥ. ಸಾಮಾನ್ಯವಾಗಿ ಶಿವ ದೇವಾಲಯಗಳಲ್ಲಿ ಒಂದು ಬಾವಿ ಕಡ್ಡಾಯವಾಗಿ ಇರುತ್ತದೆ. ಶಿವಲಿಂಗಕ್ಕೆ ನಿತ್ಯ ಅಭಿಷೇಕ ಮಾಡಲು ಈ ಬಾವಿಯ ನೀರನ್ನು ಬಳಸಲಾಗುತ್ತದೆ. ಸದ್ಯ ಈ ಬಾವಿಯನ್ನು ಮಂದಿರ ಹಾಗೂ ಮಸೀದಿಗಳು ಹಂಚಿಕೊಂಡಿವೆ. ಹಿಂದೆ ಮುಸ್ಲಿಂ ರಾಜರ ದಾಳಿಯಾದಾಗ ಕಾಶಿ ವಿಶ್ವನಾಥ ದೇವಾಲಯದ ಅರ್ಚಕರೊಬ್ಬರು ಶಿವಲಿಂಗ ಅಪವಿತ್ರವಾಗದಂತೆ ಅದನ್ನು ತೆಗೆದುಕೊಂಡು ಬಂದು ಈ ಬಾವಿಗೆ ಎಸೆದು ರಕ್ಷಿಸಿದರು ಎಂದು ಕತೆಯಿದೆ.
ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಜ್ಞಾನವಾಪಿ ಮಸೀದಿ ತಗಾದೆಗೆ ಅಂತಿಮ ತೆರೆ ಯಾವಾಗ?