ದೇಶ
10ನೇ ತರಗತಿ ಪುಸ್ತಕದಲ್ಲಿ ಪ್ರಕಟವಾದ ಸಂವಿಧಾನದ ಪೀಠಿಕೆಯಲ್ಲಿ ಪ್ರಮಾದ; ಆ ಎರಡು ಪ್ರಮುಖ ಶಬ್ದಗಳೇ ಇಲ್ಲ!
ಈ ತಪ್ಪನ್ನು ಸರಿಪಡಿಸಬೇಕು. ಕೂಡಲೆ ಸರಿಯಾದ ಪೀಠಿಕೆ ಪ್ರಕಟಿಸಿ, 10ನೇ ತರಗತಿ ಪುಸ್ತಕಗಳನ್ನು ಮರು ಮುದ್ರಣ ಮಾಡಬೇಕು ಎಂದು ಶಿಕ್ಷಕರ ಗುಂಪು ಆಗ್ರಹಿಸಿದೆ.
ತೆಲಂಗಾಣದಲ್ಲಿ 10 ನೇ ತರಗತಿ ಮಕ್ಕಳ ಸಮಾಜ ವಿಜ್ಞಾನ ಪುಸ್ತಕದ (Telangana Class 10 School Textbook) ಕವರ್ ಪೇಜ್ (ಮುಖಪುಟ) ನಲ್ಲಿ ಪ್ರಕಟಿಸಲಾದ ಸಂವಿಧಾನದ ಪೀಠಿಕೆಯಲ್ಲಿ (Preamble of the Constitution) ಎಡವಟ್ಟು ಆಗಿದೆ. ಸಂವಿಧಾನದ ಪೀಠಿಕೆಯಲ್ಲಿ ಇದ್ದ ಸಮಾಜವಾದಿ ಮತ್ತು ಜಾತ್ಯತೀತ (Socialist and Secular)ಎಂಬ ಎರಡು ಶಬ್ದಗಳನ್ನು ಕೈಬಿಡಲಾಗಿದೆ. ತೆಲಂಗಾಣ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಮಂಡಳಿ ಪ್ರಕಟಿಸಿದ ಪುಸ್ತಕದಲ್ಲಿ ಇವೆರಡೂ ಶಬ್ದಗಳನ್ನು ಕೈಬಿಟ್ಟಿದ್ದಕ್ಕೆ ತೆಲಂಗಾಣ ರಾಜ್ಯ ಸಂಘಟಿತ ಶಿಕ್ಷಕರ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಇದೊಂದು ಬಹುದೊಡ್ಡ ಪ್ರಮಾದ ಎಂದು ಹೇಳಿದೆ
ಸಮಾಜವಾದಿ ಮತ್ತು ಜಾತ್ಯತೀತ ಶಬ್ದಗಳು ಪ್ರಾರಂಭದಲ್ಲಿ ಸಂವಿಧಾನದ ಪೀಠಿಕೆಯಲ್ಲಿ ಇರಲಿಲ್ಲ. 1976ರ ಡಿಸೆಂಬರ್ ನಲ್ಲಿ ಮಾಡಲಾದ ತಿದ್ದುಪಡಿಯಲ್ಲಿ ಈ ಶಬ್ದಗಳನ್ನು ಸೇರಿಸಲಾಗಿತ್ತು. ಇದೀಗ ತೆಲಂಗಾಣ ಹತ್ತನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಹಳೇ ಪೀಠಿಕೆಯನ್ನೇ ಅಂದರೆ, ಜಾತ್ಯತೀತ ಮತ್ತು ಸಮಾಜವಾದಿ ಎಂಬ ಪದಗಳು ಇಲ್ಲದ, 1976ಕ್ಕೂ ಪೂರ್ವ ಇದ್ದ ಸಂವಿಧಾನದ ಪೀಠಿಕೆಯನ್ನು ಹಾಕಲಾಗಿದೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತೆಲಂಗಾಣ ರಾಜ್ಯ ಸಂಘಟಿತ ಶಿಕ್ಷಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಾವಾ ರವಿ ಅವರು ‘ನಮ್ಮದು ಜಾತ್ಯತೀತ ರಾಷ್ಟ್ರ. ಆದರೆ ನಮ್ಮಲ್ಲಿನ ಜಾತ್ಯತೀತತೆಗೆ ಅಪಾಯ ಉಂಟಾಗಿದೆ ಎಂಬ ಮಾತು ಇತ್ತೀಚೆಗೆ ವ್ಯಾಪಕವಾಗಿ ಕೇಳಿಬರುತ್ತಿದೆ. ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿ ಕೂಡ ಈ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ಹೀಗಿರುವಾ ತೆಲಂಗಾಣ ಶಿಕ್ಷಣ ಮಂಡಳಿ ಸಂವಿಧಾನದ ಪೀಠಿಕೆಯನ್ನು ಸಮಾಜವಾದಿ ಮತ್ತು ಜಾತ್ಯತೀತ ಶಬ್ದಗಳನ್ನು ಬಿಟ್ಟಿರುವುದು ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಚರ್ಚೆಗೆ ಗ್ರಾಸವಾಗುತ್ತದೆ ಎಂದು ಹೇಳಿದ್ದಾರೆ. ಹಾಗೇ, ಈ ತಪ್ಪನ್ನು ಸರಿಪಡಿಸಬೇಕು. ಕೂಡಲೆ ಸರಿಯಾದ ಪೀಠಿಕೆ ಪ್ರಕಟಿಸಿ, 10ನೇ ತರಗತಿ ಪುಸ್ತಕಗಳನ್ನು ಮರು ಮುದ್ರಣ ಮಾಡಬೇಕು ಎಂದೂ ಶಿಕ್ಷಕರ ಗುಂಪು ಆಗ್ರಹ ಮಾಡಿದೆ.
ಇದನ್ನೂ ಓದಿ: ಸಂಪುಟ ಸಭೆ ನಿರ್ಧಾರ: ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ನಿಶ್ಚಿತ; ʼಬಿಜೆಪಿʼ ಪಠ್ಯ ತೆಗೆಯುವುದು ಖಚಿತ
ಈ ವಿವಾದ ದೊಡ್ಡದಾಗುತ್ತಿದ್ದಂತೆ ತೆಲಂಗಾಣ ಶಿಕ್ಷಣ ಮಂಡಳಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ಇದು ಉದ್ದೇಶ ಪೂರ್ವಕವಾಗಿ ಮಾಡಿದ್ದಲ್ಲ. ಪುಸ್ತಕದ ಕವರ್ ಪೇಜ್ ಮಾಡುವ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳುವಾಗ, ಅಜಾಗರೂಕತೆಯಿಂದ ತಪ್ಪಾಗಿದೆ. ಪೀಠಿಕೆಯ ತಿದ್ದುಪಡಿ ಮಾಡಿದ, ಅಂದರೆ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳು ಇರುವ ಪೀಠಿಕೆಯನ್ನು ಡೌನ್ಲೋಡ್ ಮಾಡಿ, ಅದನ್ನು 10ನೇ ತರಗತಿ ಪುಸ್ತಕದ ಕವರ್ ಪೇಜ್ಗೆ ಅಂಟಿಸುವಂತೆ ಎಲ್ಲ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೂ ಸೂಚಿಸಲಾಗಿದೆ‘ ಎಂದು ತಿಳಿಸಿದೆ.
ದೇಶ
Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!
Stadium Row: ದೆಹಲಿಯ ಕ್ರೀಡಾಂಗಣದಲ್ಲಿ (Delhi’s Thyagraj Stadium) ಅಭ್ಯಾಸ ನಡೆಸುತ್ತಿದ್ದ ಕ್ರೀಡಾಳುಗಳನ್ನು ಹೊರಗೆ ಕಳುಹಿಸಿ ಅಲ್ಲಿ ತಮ್ಮ ನಾಯಿ ಜತೆಗೆ ಮಾಕಿಂಗ್ ಮಾಡುತ್ತಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ ಅವರಿಗೆ ಈಗ ಸರ್ಕಾರ ಕಡ್ಡಾಯ ನಿವೃತ್ತಿಯ ಸೂಚನೆ ನೀಡಿದೆ.
ದೆಹಲಿ: ದೆಹಲಿಯ ತ್ಯಾಗರಾಜ ಕ್ರೀಡಾಂಗಣದಿಂದ (Delhi’s Thyagraj Stadium) ಕ್ರೀಡಾಳುಗಳನ್ನು ಹೊರಗಟ್ಟಿ ನಾಯಿಯೊಂದಿಗೆ ವಾಕಿಂಗ್ ಮಾಡಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ (54) ಅವರನ್ನು ಸರ್ಕಾರ ಕಡ್ಡಾಯ ನಿವೃತ್ತಿಗೊಳಿಸಿದೆ. 1994ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಿಂಕು ದುಗ್ಗ ಅರುಣಾಚಲ ಪ್ರದೇಶದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ರಿಂಕು ದುಗ್ಗ ಅವರ ಪತಿ ಸಂಜೀವ್ ಖೈರ್ವಾರ್ ಕೂಡ 1994ರ ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರನ್ನು ಕಳೆದ ವರ್ಷ ದೆಹಲಿಯಿಂದ ಲಡಾಕ್‌ಗೆ ವರ್ಗಾಯಿಸಲಾಗಿತ್ತು. ಇವರು ತಮ್ಮ ನಾಯಿಯ ಜತೆ ವಾಕಿಂಗ್‌ಗೆ ಹೋಗಲೆಂದು ದೆಹಲಿಯ ತ್ಯಾಗರಾಜ ಸ್ಟೇಡಿಯಂಅನ್ನು ಸಂಜೆ ಏಳು ಗಂಟೆಗೇ ಖಾಲಿ ಮಾಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ದೆಹಲಿಯಿಂದ ವರ್ಗಾಯಿಸಿ ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು.
ರಿಂಕು ದುಗ್ಗ ಅವರ ಕೆಲಸದ ದಾಖಲೆಗಳನ್ನು ಪರಿಶೀಲಿಸಿ ಕಡ್ಡಾಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸೆಂಟ್ರಲ್ ಸಿವಿಲ್ ಸರ್ವಿಸಸ್ (CCS) ಪೆನ್ಶನ್ ರೂಲ್ಸ್, 1972ರ ಫಂಡಮೆಂಟಲ್ ರೂಲ್ಸ್ (FR) 56(j), ರೂಲ್ 48 ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಒಮ್ಮತದ ಅಭಿಪ್ರಾಯ ಇದ್ದರೆ ಯಾವುದೇ ಸರ್ಕಾರಿ ಉದ್ಯೋಗಿಗೆ ಕಡ್ಡಾಯ ನಿವೃತ್ತಿ ಸೂಚಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಿಂಕು ದುಗ್ಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿವಾದವೇನು?
ದೆಹಲಿಯ ಕಂದಾಯ ವಿಭಾಗದ ಪ್ರಿನ್ರಿಪಾಲ್ ಸೆಕ್ರೆಟರಿ ಅಗಿದ್ದ ಖೈರ್ವಾರ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತ್ಯಾಗರಾಜ ಸ್ಟೇಡಿಯಂನಿಂದ ಎಲ್ಲ ಕ್ರೀಡಾಳುಗಳನ್ನು ಏಳು ಗಂಟೆಗೆ ಹೊರ ಹೋಗುವಂತೆ ನೋಡಿಕೊಂಡು ಬಳಿಕ ಅವರು ತಮ್ಮ ಪತ್ನಿ ರಿಂಕು ದುಗ್ಗ ಮತ್ತು ನಾಯಿ ಜತೆ ಅಲ್ಲಿ ವಾಕಿಂಗ್ ಮಾಡುತ್ತಿದ್ದರು! ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬಂದಿತ್ತು.
ಇದನ್ನೂ ಓದಿ: UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
ವಿವಾದದ ಬಳಿಕ 1994ರ ಬ್ಯಾಚ್‌ನ ಎಜಿಎಂಯುಟಿ ಕೇಡರ್‌ಗೆ ಸೇರಿದ ರಿಂಕು ದುಗ್ಗ ಅವರನ್ನು 2022ರ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಅವರನ್ನು ಈಶಾನ್ಯ ರಾಜ್ಯದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಇನ್ನಷ್ಟು ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ದೇಶ
Lok Sabha Election 2024: 2.5 ಲಕ್ಷ ಗ್ರಾಮಗಳಲ್ಲಿ ಬಿಜೆಪಿ ‘ರಥ’ಯಾತ್ರೆ; ‘ಲೋಕ’ ಸಮರಕ್ಕೆ ರಣತಂತ್ರ
Lok Sabha Election 2024: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಇದರ ಮಾಹಿತಿ ಇಲ್ಲಿದೆ.
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ ಸೇರಿ ಎಲ್ಲ ಪಕ್ಷಗಳು ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ. ಸುಮಾರು 26 ಪಕ್ಷಗಳನ್ನು ಒಗ್ಗೂಡಿಸಿಕೊಂಡು ಪ್ರತಿಪಕ್ಷಗಳು ಇಂಡಿಯಾ ಒಕ್ಕೂಟ (INDIA Bloc) ರಚಿಸಿದರೆ, ಬಿಜೆಪಿಯೂ ಎನ್‌ಡಿಎ (NDA) ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತಿದೆ. ಅದರಲ್ಲೂ, ಲೋಕಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದು, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹೊಸ ಮಾದರಿಯಲ್ಲಿ ರಥಯಾತ್ರೆ (Grameen Samvaad Yatra) ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಹೌದು, ಬಿಜೆಪಿಯು ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ‘ಗ್ರಾಮೀಣ ಸಂವಾದ ಯಾತ್ರೆ’ ಕೈಗೊಳ್ಳಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವುದು, ಕೇಂದ್ರದ ಸಾಧನೆ, ಪ್ರಮುಖ ತೀರ್ಮಾನಗಳನ್ನು ಜನರಿಗೆ ತಿಳಿಸುವುದು ಗ್ರಾಮೀಣ ಸಂವಾದ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರೊಂದಿಗೆ, ಲೋಕಸಭೆ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಜನರನ್ನು ತನ್ನತ್ತ ಸೆಳೆಯುವುದು ಬಿಜೆಪಿಯ ರಣತಂತ್ರವಾಗಿದೆ ಎನ್ನಲಾಗಿದೆ.
1,500 ರಥಗಳು ಸಜ್ಜು
ದೇಶದ ಸುಮಾರು 2.5 ಲಕ್ಷ ಗ್ರಾಮಗಳಲ್ಲಿ ರಥಗಳ ಮೂಲಕ ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳುವುದು ಬಿಜೆಪಿಯ ಯೋಜನೆಯಾಗಿದೆ. ಇದಕ್ಕಾಗಿ 1,500 ಅತ್ಯಾಧುನಿಕ ರಥಗಳನ್ನು ಕೂಡ ಸಿದ್ಧಪಡಿಸಲಾಗುತ್ತಿದೆ. ಜಿಪಿಎಸ್ ಅಳವಡಿಕೆ ಮಾಡಲಾದ, ಡ್ರೋನ್‌ಗಳ ನಿರ್ವಹಣೆ ಸೇರಿ ಹಲವು ರೀತಿಯಲ್ಲಿ ಜನರ ಜತೆ ಸಂವಾದ ನಡೆಸಲು ಸಾಧ್ಯವಾಗುವ ಅತ್ಯಾಧುನಿಕ ರಥಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್‌ಡಿಕೆ ಹೇಳಿದ್ದೇನು?
ಕೇಂದ್ರದ ಸಚಿವರು, ಸಂಸದರು, ಬಿಜೆಪಿ ನಾಯಕರು, ಶಾಸಕರು ಸೇರಿ ಹಲವರು ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಇದರ ಜತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನೂ ಇಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಭಾರಿ ಪ್ರಮಾಣದ ಪ್ರಚಾರಕ್ಕೂ ಬಿಜೆಪಿ ಎಲ್ಲ ರೀತಿಯಲ್ಲಿ ಸಜ್ಜಾಗುತ್ತಿದೆ.
ದೇಶ
Push Up Challenge: ಚಲಿಸುವ ಮೆಟ್ರೋದಲ್ಲೇ ಪುಶ್‌ಅಪ್ ಮಾಡಿದ ಅಂಕಲ್; ನಿಬ್ಬೆರಗಾದ ಯುವಕರು!
Push Up Challenge: ಮುಂಬೈ ಮೆಟ್ರೋ ರೈಲೊಂದರಲ್ಲಿ ಮಧ್ಯ ವಯಸ್ಕರೊಬ್ಬರು ಪುಶ್ ಅಪ್(pushup)ಮಾಡುತ್ತಿರುವ ವಿಡಿಯೊ ವೈರಲ್ ಆಗಿದೆ. ಲಕ್ಷಾಂತರ ಮಂದಿ ಇದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಂಬೈ: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲುಗಳು (metro train) ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿವೆ. ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ಯುವ ಜೋಡಿ ಅಶ್ಲೀಲವಾಗಿ ವರ್ತಿಸುವ ಮೂಲಕ ಸುದ್ದಿಯಾಗಿತ್ತು. ಇದೀಗ ವೈರಲ್ ಆಗಿರುವ ವಿಡಿಯೊ ಒಂದರಲ್ಲಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಪುಶ್ ಅಪ್ (Pushup)ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ವಯಸ್ಸು ಯಾವುದಾದರೇನು ಫಿಟ್ ಆಗಿರುವುದು ಮುಖ್ಯ ಎಂಬ ಪಾಠವನ್ನು ಅವರು ಈ ಮೂಲಕ ತಿಳಿಸಿ ಕೊಟ್ಟಿದ್ದಾರೆ.
ವಿಡಿಯೊ ವೈರಲ್
ಈ ವಿಡಿಯೊವನ್ನು ಕಂಟೆಂಟ್ ಕ್ರಿಯೇಟರ್ ಭರತ್ ರಗತಿ ತಮ್ಮ ಖಾತೆಯಯಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೆಟ್ರೋ ರೈಲೊಂದರ ಒಳಗೆ ಪ್ರಯಾಣಿಕರು ನೋಡುತ್ತಿದ್ದಂತೆ ಮೊದಲು ರಗತಿ ವಿವಿಧ ರೀತಿಯ ಪುಶ್ ಅಪ್ ಪ್ರಕಾರಗಳನ್ನು ಪ್ರದರ್ಶಿಸಿದರು. ಬಳಿಕ ಅಲ್ಲೇ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯೊಬ್ಬರ ಬಳಿ ಪ್ರಯತ್ನಿಸಲು ಹೇಳಿದರು. ಮೊದಲು ಅವರು ನಿರಾಕರಿಸಿದರು. ಬಳಿಕ ಪುಶ್ ಅಪ್ ಮಾಡುತ್ತ ತಮ್ಮ ಸಾಮರ್ಥ್ಯ ಪ್ರದರ್ಶಿಸತೊಡಗಿದರು. ಅವರ ಈ ಸಾಹಸವನ್ನು ಉಳಿದ ಪ್ರಯಾಣಿಕರು ನಿಬ್ಬೆರಗಾಗಿ ನೋಡುತ್ತಿದ್ದರು.
ಸ್ಟ್ರಾಂಗೆಸ್ಟ್ ಅಂಕಲ್
ಸ್ಟ್ರಾಂಗೆಸ್ಟ್ ಅಂಕಲ್ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೊ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈಗಾಗಲೇ ಈ ವಿಡಿಯೊವನ್ನು 3 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ʼಅಂಕಲ್ʼನ ಫಿಟ್ನೆಸ್‌ಗೆ ಅನೇಕರು ಫಿದಾ ಆಗಿದ್ದಾರೆ.
ತರಹೇವಾರಿ ಕಮೆಂಟ್
ಅನೇಕರು ಈ ವಿಡಿಯೊ ನೋಡಿ ತಮ್ಮ ಕಣ್ಣನ್ನು ತಾವೇ ನಂಬಲಾರದ ಸ್ಥಿತಿ ತಲುಪಿದ್ದಾರೆ. ಬಳಿ ಷರ್ಟ್, ಕಪ್ಪು ಪ್ಯಾಂಟ್ ಧರಿಸಿ ಇನ್‌ಶರ್ಟ್ ಮಾಡಿಕೊಂಡಿದ್ದ ಆ ವ್ಯಕ್ತಿ ಈ ರೀತಿ ಎಲ್ಲರನ್ನೂ ಬೆರಗುಗೊಳಿಸುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಇದನ್ನೇ ಅನೇಕರು ಕಮೆಂಟ್ ಮೂಲಕ ತಿಳಿಸಿದ್ದಾರೆ. ʼʼಇವರು ಖಂಡಿತವಾಗಿ ಸೈನಿಕರಾಗಿದ್ದಿರಬೇಕುʼʼ ಎಂದು ಒಬ್ಬರು ಹೇಳಿದ್ದಾರೆ. ʼʼಈ ಅಂಕಲ್ ರೀತಿ ತಾಳ್ಮೆಯಿಂದ, ಪ್ರಬುದ್ಧರಾಗಿ, ಸರಳವಾಗಿ ಇರುವುದನ್ನು ಕಲಿಯಬೇಕುʼʼ ಎಂದು ಇನ್ನೊಬ್ಬರು ಸಲಹೆ ನೀಡಿದ್ದಾರೆ. ʼʼಆರಂಭದಲ್ಲಿ ಅವರು ಸ್ವಲ್ಪ ತಯಾರಿ ನಡೆಸಿಕೊಂಡು ಬಳಿಕ ಸರಾಗವಾಗಿ ಪುಶ್ ಅಪ್ ತೆಗೆದರುʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼಈ ಅಂಕಲ್ ಯುವ ಜನತೆಗೆ ಸ್ಫೂರ್ತಿʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ʼʼಕವರ್ ನೋಡಿ ಪುಸ್ತಕವನ್ನು ನಿರ್ಧರಿಸಬೇಡಿ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆʼʼ ಎಂದು ಕಮೆಂಟ್ ಮಾಡಿದ್ದಾರೆ ಇನ್ನೊಬ್ಬರು. ಅನೇಕರು ಬೆಂಕಿ ಮತ್ತು ಹೃದಯದ ಎಮೋಜಿ ಕಳುಹಿಸುವ ಮೂಲಕ ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ.
ಇದನ್ನೂ ಓದಿ: Viral News: ತುಂಬಿ ಹರಿವ ಹಳ್ಳದಲ್ಲಿ ಶಾಲಾ ಬಸ್ ಚಲಾಯಿಸಿ ಮಕ್ಕಳ ಜೀವದ ಜೊತೆಗೆ ಚಾಲಕನ ಚೆಲ್ಲಾಟ!
ಸದ್ಯ ಈ ಪುಶ್ ಅಪ್ ಚಾಲೆಂಜ್ ಮೊದಲೇ ಪ್ಲಾನ್ ಆಗಿತ್ತಾ ಅಥವಾ ಆಕಸ್ಮಿಕವಾಗಿ ಜರುಗಿದ್ದೇ ಎನ್ನುವುದು ಸ್ಪಷ್ಟವಾಗಿಲ್ಲ. ಅದೇನೇ ಇರಲಿ ಒಟ್ಟಿನಲ್ಲಿ ಅಂಕಲ್ ಪುಶ್ ಅಪ್ ಚಾಲೆಂಜ್ ಸ್ವೀಕರಿಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಹಲವರ ಮನಸ್ಸು ಬದಲಾಯಿಸಿದ್ದಂತೂ ಸುಳ್ಳಲ್ಲ.
ಕ್ರೈಂ
ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!
ಪೊಲೀಸ್ ಠಾಣೆಗೆ ದೂರು ನೀಡಲು ಬಂದ ದಲಿತ ಮಹಿಳೆ ಮೇಲೆಯೇ ಪಿಎಸ್‌ಐ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೀನ ಕೃತ್ಯ ಎಸಗಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಲಖನೌ: ಮಳೆ, ಚಳಿ, ಬಿಸಿಲು, ಹಗಲು, ರಾತ್ರಿ ಎನ್ನದೆ ಕಾರ್ಯನಿರ್ವಹಿಸುವ, ಜನರಿಗೆ ರಕ್ಷಣೆ ಒದಗಿಸುವ ಪೊಲೀಸರ ಬಗ್ಗೆ ಸಮಾಜದಲ್ಲಿ ಗೌರವ ಇದೆ. ಸೈನಿಕರು ಗಡಿ ರಕ್ಷಣೆ ಮಾಡಿದರೆ, ಪೊಲೀಸರು ದೇಶವನ್ನು ಆಂತರಿಕವಾಗಿ ರಕ್ಷಣೆ ಮಾಡುತ್ತಾರೆ. ಹೀಗೆ, ಜನರನ್ನು ಕಾಯಬೇಕಾದ, ಅವರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬ ಉತ್ತರ ಪ್ರದೇಶದಲ್ಲಿ (Uttar Pradesh) ಹೀನ ಕೃತ್ಯ ಎಸಗಿದ್ದಾನೆ. ದೂರು ನೀಡಲೆಂದು ಪೊಲೀಸ್ ಠಾಣೆಗೆ ಬಂದ ದಲಿತ ಮಹಿಳೆಯೊಬ್ಬರ (Dalit Woman) ಮೇಲೆಯೇ ಅತ್ಯಾಚಾರ ಎಸಗುವ ಮೂಲಕ ಪೊಲೀಸ್ ವೃತ್ತಿ ಮಾತ್ರವಲ್ಲ ಮನುಷ್ಯ ಕುಲಕ್ಕೇ ಕಂಟಕ ಎನಿಸುವ ಕೆಲಸ ಮಾಡಿದ್ದಾನೆ.
ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಝಂಘಾಯಿ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿರುವ ಸುಧೀರ್ ಕುಮಾರ್ ಎಂಬಾತನು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 21ರಂದು ಮಹಿಳೆಯೊ ಪೊಲೀಸ್ ಠಾಣೆಗೆ ಬಂದಿದ್ದಾರೆ. ಆಕೆಯ ದೂರು ದಾಖಲಿಸಿಕೊಂಡು, ನ್ಯಾಯ ಒದಗಿಸಬೇಕಾದ ಎಸ್‌ಐ, ಮಹಿಳೆಗೆ ಮತ್ತು ಬರುವ ಔಷಧ ಇರುವ ಪಾನೀಯ ನೀಡಿ, ಬಳಿಕ ಕಾರಿನಲ್ಲಿ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಇದಾದ ಬಳಿಕ ಮಹಿಳೆಯು ಸುಧೀರ್ ಕುಮಾರ್ ಪಾಂಡೆ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 376 (ಅತ್ಯಾಚಾರ), 120 ಬಿ (ಕ್ರಿಮಿನಲ್ ಪಿತೂರಿ) ಹಾಗೂ ಎಸ್‌ಸಿ, ಎಸ್‌ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಾಗೆಯೇ, ಕೂಡಲೇ ಸುಧೀರ್ ಕುಮಾರ್ ಪಾಂಡೆಯನ್ನು ಅಮಾನತುಗೊಳಿಸಲಾಗಿದೆ. ಕೃತ್ಯ ಎಸಗಿದ ಸುಧೀರ್ ಕುಮಾರ್ ಪಾಂಡೆ ಈಗ ತಲೆಮರಿಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: Physical Abuse : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ನೊಂದ ದಂಪತಿಯ ಆತ್ಮಹತ್ಯೆ
ದಲಿತ ಮಹಿಳೆಗೆ ಹಲವು ದಿನಗಳಿಂದ ಕೆಲವು ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದರು. ಹಾಗೆಯೇ, ಆಕೆಗೆ ಜೀವ ಬೆದರಿಕೆಯನ್ನೂ ಹಾಕಿದ್ದರು. ಇದರಿಂದ ವಿಚಲಿತರಾದ ಮಹಿಳೆಯು ಅವರ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, ಆ ಮಹಿಳೆ ಮೇಲೆಯೇ ಪೊಲೀಸ್ ಅಧಿಕಾರಿ ಅತ್ಯಾಚಾರ ಎಸಗಿರುವುದು ನೀಚ ಕೃತ್ಯವಾಗಿದೆ. ಇನ್ನುಮುಂದೆ ಹೆಣ್ಣುಮಕ್ಕಳು ಪೊಲೀಸ್ ಠಾಣೆಗೂ ಒಬ್ಬರೇ ಹೋಗಬಾರದು ಎಂಬ ಸಂದೇಶ ರವಾನೆಯಾದಂತಾಗಿದೆ.
-
ದೇಶ13 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
South Cinema24 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಸುವಚನ8 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಕರ್ನಾಟಕ24 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ದೇಶ14 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್20 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು