ನವ ದೆಹಲಿ: ಭಾರತದ ೧೫ನೇ ರಾಷ್ಟ್ರಪತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ದ್ರೌಪದಿ ಮುರ್ಮು ಅವರು ಬೆಳಗ್ಗೆ ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸಿದರು. ಬೆಳಗ್ಗೆ ೧೦.೧೫ ಗಂಟೆಯ ವೇಳೆಗೆ ಅವರು ನೂತನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ಅವರು ೬,೭೬,೮೦೩ ಮೌಲ್ಯವಿರುವ ೨,೮೨೪ ಮತಗಳನ್ನು ಗಳಿಸಿ ಐತಿಹಾಸಿಕ ಗೆಲುವು ದಾಖಲಿಸಿದ್ದರು. ಪ್ರತಿಪಕ್ಷಗಳ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರು ೩,೮೦,೧೭೭ ಮೌಲ್ಯವಿರುವ ೧,೮೭೭ ಮತಗಳನ್ನು ಗಳಿಸಿದ್ದರು. ಒಟ್ಟು ೪,೮೦೯ ಸಂಸದರು, ಶಾಸಕರು ಜುಲೈ ೧೮ರಂದು ಮತ ಚಲಾಯಿಸಿದ್ದರು.
ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣ ವಚನದ ಪ್ರತಿಯನ್ನು ನಿಯೋಜಿತ ರಾಷ್ಟ್ರಪತಿಯವರಿಗೆ ಹಸ್ತಾಂತರಿಸಲಿದ್ದಾರೆ. ಬಳಿಕ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ೨೧ ಗನ್ ಸಲ್ಯೂಟ್ ಗೌರವ ಸಲ್ಲಿಕೆಯಾಗಲಿದೆ.
ಇದನ್ನೂ ಓದಿ: Draupadi Murmu Oath Ceremony| 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣವಚನ