Site icon Vistara News

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

Porsche car accident ವಿಸ್ತಾರ ಸಂಪಾದಕೀಯ

ಪುಣೆ: ಪುಣೆ ನಗರದಲ್ಲಿ 17 ವರ್ಷದ ಬಾಲಕನ (juvenile) ಐಷಾರಾಮಿ ಪೋರ್ಷೆ ಕಾರನ್ನು (Pune Porsche accident) ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು (IT Engineers) ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಬಾಲಾಪರಾಧಿಯ ರಕ್ತದ ಮಾದರಿಯನ್ನು ಬದಲಾಯಿಸಿರುವುದು ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಅರೆಸ್ಟ್‌ ಮಾಡಲಾಗಿದೆ.

ಈ ಬಗ್ಗೆ ಪುಣೆ ಪೊಲೀಸ್‌ ಕಮಿಷನರ್‌ ಅಮಿತೇಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದು, ಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ ಆರೋಪಿಯ ರಕ್ತದ ಮಾದರಿಯನ್ನೇ ಬದಲಿಸಿದ್ದಾರೆ. ಆಮೂಲಕ ಈ ಪ್ರರಕಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವರಿಬ್ಬರನ್ನೂ ಇದೀಗ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಪ್ರರಕಣವನ್ನು ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದ ಎರವಾಡ ಪೊಲೀಸ್‌ ಠಾಣೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

ಕಳೆದ ಭಾನುವಾರ ಕಲ್ಯಾಣಿನಗರ ಪ್ರದೇಶದಲ್ಲಿ ಬಾರ್‌ನಲ್ಲಿ ಮದ್ಯ ಸೇವಿಸಿ ಪಾನಮತ್ತರಾಗಿದ್ದ 17 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪೋರ್ಶೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ಬಾಲಕನನ್ನು ಬಂಧಿಸಿ ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಬಳಿಕ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಎಲ್ಲೆಡೆ ಪೊಲೀಸರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಾಮೀನನ್ನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿತ್ತು. ಮೊದಲು ವಿಶಾಲ್ ಅಗರ್ವಾಲ್​ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು.ಇನ್ನು ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜೊತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಹಿಸಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಮದ್ಯಪಾನ ಮಾಡಿರಲಿಲ್ಲ ಎನ್ನುವ ವರದಿ ಆಸ್ಪತ್ರೆಯಿಂದ ಹೊರಬಿದ್ದಿತ್ತು. ಇದೀಗ ವೈದ್ಯರು ದುಡ್ಡಿನ ಆಸೆಗೆ ಬಿದ್ದು ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರಿತ ಪೊಲೀಸರು ರಕ್ತದ ಮಾದರಿಯನ್ನು ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕಾರು ಚಾಲಕನನ್ನು ಅಕ್ರಮವಾಗಿ ಮನೆಯಲ್ಲಿ ಕೂಡಿ ಹಾಕಿದ್ದಕ್ಕಾಗಿ ಆರೋಪಿ ಬಾಲಕನ ಅಜ್ಜನನ್ನು ಬಂಧಿಸಲಾಗಿತ್ತು. ಕುಟುಂಬದ ಚಾಲಕನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು, ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಬಾಲಕನ ಅಜ್ಜ ಸುರೇಂದ್ರ ಕುಮಾರ್ ಅಗರವಾಲ್ ಅವರನ್ನು ಬಂಧಿಸಲಾಗಿದೆ. ಅಜ್ಜನ ವಿರುದ್ಧ ಪೊಲೀಸರು ಅಪಹರಣ ಮತ್ತು ಅಕ್ರಮ ಬಂಧನದ ಆರೋಪದಲ್ಲಿ ಐಪಿಸಿ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಅವರ ಹೆಸರೂ ಇದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

ಬಾಲಕನ ಅಜ್ಜ ಮತ್ತು ತಂದೆ ಇಬ್ಬರೂ ಚಾಲಕನ ಫೋನ್ ಕಿತ್ತುಕೊಂಡಿದ್ದರು. ತಮ್ಮ ಬಂಗಲೆ ಆವರಣದಲ್ಲಿ ಇರುವ ಆತನ ಮನೆಯಲ್ಲಿ ಮೇ 19 ಮತ್ತು 20ರಂದು ಆತನನ್ನು ಕೂಡಿ ಹಾಕಿದ್ದರು. ಚಾಲಕನನ್ನು ಆತನ ಪತ್ನಿ ಬಂಧ ಮುಕ್ತಗೊಳಿಸಿದ್ದಳು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Exit mobile version