ನವದೆಹಲಿ: ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ (Manpreet Singh Badal) ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಬಾದಲ್ ಅವರು ಬಿಜೆಪಿ ಸೇರ್ಪಡೆಯಾದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಾದಲ್ ಅವರು ರಾಜೀನಾಮೆ ಪತ್ರ ರವಾನಿಸಿದ್ದು, “ಪಕ್ಷದ ಆಂತರಿಕ ಚಟುವಟಿಕೆಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ” ಎಂಬುದಾಗಿ ತಿಳಿಸಿದ್ದಾರೆ. “ಕಳೆದ ಏಳು ವರ್ಷದಲ್ಲಿ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ಅದರಂತೆ ಪಕ್ಷವೂ ನನಗೆ ಹಲವು ಜವಾಬ್ದಾರಿ ನೀಡಿದೆ. ಆದರೆ, ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ” ಎಂದು ಉಲ್ಲೇಖಿಸಿದ್ದಾರೆ.
“ಕಳೆದ ಏಳು ವರ್ಷಗಳ ಹಿಂದೆ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಅನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸಿದೆ. ಇದಾದ ಬಳಿಕ ನಾನು ಹಲವು ಜವಾಬ್ದಾರಿಗಳನ್ನು ನಿಭಾಯಿಸಿದೆ. ಆದರೆ, ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ಸಂಸ್ಕೃತಿ ಕಂಡು ಬೇಸರಗೊಂಡಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ | Sumalatha Ambarish | ವರಿಷ್ಠರು ಮಾತಾಡಿದ್ದು ನಿಜ, ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧರಿಸಿಲ್ಲ ಎಂದ ಸುಮಲತಾ ಅಂಬರೀಶ್