Nirvair Singh | ಪಂಜಾಬ್​​ ಮೂಲದ ಗಾಯಕ ಆಸ್ಟ್ರೇಲಿಯಾದಲ್ಲಿ ಸಾವು; ಕಂಬನಿ ಮಿಡಿದ ಅಭಿಮಾನಿಗಳು - Vistara News

ದೇಶ

Nirvair Singh | ಪಂಜಾಬ್​​ ಮೂಲದ ಗಾಯಕ ಆಸ್ಟ್ರೇಲಿಯಾದಲ್ಲಿ ಸಾವು; ಕಂಬನಿ ಮಿಡಿದ ಅಭಿಮಾನಿಗಳು

ಪಂಜಾಬ್​​ನ ಗಾಯಕ ನಿರ್ವೈರ್​ ಸಿಂಗ್​ ಅವರು ಇಂದು ತಮ್ಮ ಕಚೇರಿಗೆ ತೆರಳುತ್ತಿದ್ದಾಗ ಮೃತಪಟ್ಟಿದ್ದಾರೆ. ಇವರು ಆಸ್ಟ್ರೇಲಿಯಾದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.

VISTARANEWS.COM


on

Punjabi Singer
ನಿರ್ವೈರ್​ ಸಿಂಗ್​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಂಜಾಬ್​ನ ಜನಪ್ರಿಯ ಗಾಯಕ ನಿರ್ವೈರ್​​ ಸಿಂಗ್ (42)​ ಅವರು ಆಸ್ಟ್ರೇಲಿಯಾದಲ್ಲಿ ಮೃತಪಟ್ಟಿದ್ದಾರೆ. ಇಲ್ಲಿನ ಮೆಲ್ಬೋರ್ನ್​​ನಲ್ಲಿ ಮೂರು ವಾಹನಗಳ ನಡುವೆ ಉಂಟಾದ ಭೀಕರ ಅಪಘಾತಕ್ಕೆ ನಿರ್ವೈರ್​ ಸಿಂಗ್ ಬಲಿಯಾಗಿದ್ದಾರೆ. ಆಸ್ಟ್ರೇಲಿಯಾದ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಡಿಗ್ಗರ್ಸ್​​ ರೆಸ್ಟ್​​ನ ಬುಲ್ಲಾ ಡಿಗ್ಗರ್ಸ್​ ರೆಸ್ಟ್​ ರೋಡ್​​​ನಲ್ಲಿ ಮೂರು ವಾಹನಗಳ ಮಧ್ಯೆ ಡಿಕ್ಕಿಯುಂಟಾಗಿದೆ. ಕಿಯಾ ಕಾರೊಂದರ ಅತಿಯಾದ ವೇಗವೇ ಘಟನೆಗೆ ಕಾರಣವಾಗಿದ್ದು, ಅದರ ಚಾಲಕ 23 ವರ್ಷದ ಯುವಕ ಮತ್ತು ಒಬ್ಬಳು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿರ್ವೈರ್​​ ಸಿಂಗ್​ ಮೂಲತಃ ಪಂಜಾಬ್​​ನ ಕುರಾಲಿಯವರಾಗಿದ್ದು, ತನ್ನ ಗಾಯನ ವೃತ್ತಿಯಲ್ಲಿ ಇನ್ನಷ್ಟು ಸಾಧನೆ ಮಾಡುವ ಸಲುವಾಗಿ, ಹೆಚ್ಚಿನ ಅವಕಾಶ ಪಡೆಯಲು ಕಳೆದ 9 ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಅವರಿಗೆ ಮದುವೆಯಾಗಿ, ಇಬ್ಬರು ಮಕ್ಕಳಿದ್ದಾರೆ. ಇಂದು ಅವರು ತಮ್ಮ ಕಚೇರಿಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದ ಭೀಕರತೆ ಎಷ್ಟಿತ್ತು ಎಂದರೆ, ಡಿಕ್ಕಿಯ ರಭಸಕ್ಕೆ ನಿರ್ವೈರ್ ಸಿಂಗ್​ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ನಿರ್ವೈರ್ ಸಿಂಗ್ ಸಾವಿಗೆ ಪಂಜಾಬ್​​ನಲ್ಲಿರುವ ಅವರ ಅಭಿಮಾನಿಗಳು, ಮೆಲ್ಬೋರ್ನ್​​ನಲ್ಲಿರುವ ಭಾರತೀಯ ಸಮುದಾಯದವರು ಸೇರಿ ಅವರ ಅನೇಕಾನೇಕ ಫಾಲೋವರ್ಸ್ ಕಂಬನಿ ಮಿಡಿದಿದ್ದಾರೆ. ಇವರು ಮೈ ಟರ್ನ್​ ಅಲ್ಬಮ್​ನ ‘ತೇರೆ ಬಿನಾ’ (Tere Bina from the album My Turn) ಹಾಡಿನಿಂದ ಫುಲ್ ಫೇಮಸ್​ ಆಗಿದ್ದರು. Darda a Dil, Je Russgi, Ferrari Dream and Hikk Thok Ke ಎಂಬಿತ್ಯಾದಿ ಹಿಟ್​ ಹಾಡುಗಳನ್ನೂ ಇವರು ಕೊಟ್ಟಿದ್ದಾರೆ.

ಇದನ್ನೂ ಓದಿ: ಸಿಧು ಮೂಸೆ ವಾಲಾ ಹಂತಕರ ಎನ್‌ಕೌಂಟರ್‌; ಪಂಜಾಬ್‌ ಪೊಲೀಸರಿಂದ ಇಬ್ಬರ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Terror Attacks: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಕ್ಯಾಪ್ಟನ್ ಹುತಾತ್ಮ

Terror Attacks: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರರ ಗುಂಡಿನ ದಾಳಿಯಿಂದಾಗಿ ಓರ್ವ ನಾಗರಿಕನೂ ಗಾಯಗೊಂಡಿದ್ದಾನೆ.

VISTARANEWS.COM


on

Terror Attacks
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರರ ಗುಂಡಿನ ದಾಳಿಯಿಂದಾಗಿ ಓರ್ವ ನಾಗರಿಕನೂ ಗಾಯಗೊಂಡಿದ್ದಾನೆ (Terror Attacks).

ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದರು. ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕ ಗಾಯಗೊಂಡಿರುವುದಾಗಿ ಸೇನೆ ಮಾಹಿತಿ ನೀಡಿದೆ. ಉಗ್ರರ ಜತೆಗಿನ ಕಾಳಗದಲ್ಲಿ ಹುತಾತ್ಮರಾದವರು ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್‌ ಸಿಂಗ್‌ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಶಿವಘರ್ – ಅಸಾರ್ ವಲಯದಲ್ಲಿ ಈ ಕಾರ್ಯಾಚರಣೆ ನಡೆಯಿತು ಎಂದು ಭಾರತೀಯ ಸೇನೆಯ ಮೂಲಗಳು ಮಾಹಿತಿ ನೀಡಿವೆ.

ಅಮೆರಿಕ ಶಸ್ತ್ರಾಸ್ತ್ರ ಪತ್ತೆ

ಎನ್‌ಕೌಂಟರ್‌ ನಡೆದ ಸ್ಥಳದಿಂದ ಅಮೆರಿಕ ನಿರ್ಮಿತ ಎಂ 4 ಅಸಾಲ್ಟ್ ರೈಫಲ್, ವಿವಿಧ ಉಪಕರಣಗಳು ಹಾಗೂ ಲಾಜಿಸ್ಟಿಕ್ಸ್ ಹೊಂದಿರುವ ಮೂರು ರಕ್ತಸಿಕ್ತ ಚೀಲಗಳನ್ನು ವಶಪಡಿಸಿಕೊಳ್ಳುವಲ್ಲಿ ಸೇನೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಸಂಜೆ ಭಯೋತ್ಪಾದಕರ ಅಡಗುತಾಣದ ಬಗ್ಗೆ ಸೇನೆಗೆ ಸುಳಿವು ಲಭಿಸಿತ್ತು. ಹೀಗಾಗಿ ರಾತ್ರಿಯೇ ಸ್ವಲ್ಪ ಸಮಯ ಗುಂಡಿನ ಚಕಮಕಿ ನಡೆದಿತ್ತು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನರಾರಂಭಿಸಲಾಯಿತು.

ಜಮ್ಮು ಮತ್ತು ಕಾಶ್ಮೀಶರದಲ್ಲಿ ಇತ್ತೀಚೆಗೆ ಉಗ್ರರ ಚಟುವಟಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪ್ರಮುಖ ನಾಯಕರು ಭಾಗವಹಿಸಿದರು.

ಜಮ್ಮು ಮತ್ತು ಕಾಶ್ಮೀರ ಪೀರ್ ಪಂಜಾಲ್ ರೇಂಜ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಈ ವಲಯದಲ್ಲಿ ಸಾಕಷ್ಟು ಅರಣ್ಯ ಪ್ರದೇಶಗಳು ಹಾಗೂ ಬೆಟ್ಟ ಗುಡ್ಡಗಳು ಇದ್ದು, ಉಗ್ರರು ತಮ್ಮ ಅಡಗುತಾಣವನ್ನಾಗಿ ಮಾಡಿಕೊಳ್ಳಲು ಅನುಕೂಲವಾಗುವಂತಿದೆ. ಉಗ್ರರನ್ನು ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಭದ್ರತಾ ಮ್ಯಾಟ್ರಿಕ್ಸ್ ಅನ್ನು ರೂಪಿಸಲಾಗುತ್ತಿದೆ ಎಂದು ಈ ತಿಂಗಳ ಆರಂಭದಲ್ಲಿ ಸರ್ಕಾರ ಹೇಳಿತ್ತು. ಕಳೆದ ತಿಂಗಳು ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದರು.

ಜೂನ್‌ 16ರಂದು ಸಭೆ ನಡೆಸಿದ್ದ ಗೃಹ ಸಚಿವ ಅಮಿತ್‌ ಶಾ ಅವರು, “ಜಮ್ಮುವಿನಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿಗ್ರಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. “ಜಮ್ಮು-ಕಾಶ್ಮೀರದಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಕಾಶ್ಮೀರದಲ್ಲಿ ನಿಗ್ರಹಿಸಿದಂತೆ ಜಮ್ಮುವಿನಲ್ಲೂ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು. ಗಡಿಗಳನ್ನು ಇನ್ನಷ್ಟು ಭದ್ರಗೊಳಿಸಬೇಕು. ಒಳನುಸುಳುಕೋರರ ಮೇಲೆ ಹದ್ದಿನ ಕಣ್ಣಿಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಭದ್ರತಾ ಪಡೆಗಳಿಗೆ ಅಮಿತ್‌ ಶಾ ಸೂಚಿಸಿದ್ದರು. ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Continue Reading

ದೇಶ

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

Arvind Kejriwal: ಅಬಕಾರಿ ನೀತಿ ಹಗರಣದಲ್ಲಿ ತಿಹಾರ್ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಆಗಸ್ಟ್ 23ರವರೆಗೆ ಕೇಜ್ರಿವಾಲ್ ಜೈಲುವಾಸ ಮುಂದುವರಿಯಲಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ (Delhi Excise Policy Case) ತಿಹಾರ್ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal)‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ (Supreme Court) ಬುಧವಾರ (ಆಗಸ್ಟ್‌ 14) ನಿರಾಕರಿಸಿದೆ. ನ್ಯಾಯಾಲಯವು ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗೆ ನೋಟಿಸ್ ನೀಡಿದ್ದು, ಆಗಸ್ಟ್ 23ರವರೆಗೆ ಕೇಜ್ರಿವಾಲ್ ಜೈಲುವಾಸ ಮುಂದುವರಿಯಲಿದೆ.

ಸಿಬಿಐ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ. ಕೇಜ್ರಿವಾಲ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಮನವಿಯನ್ನು ಸೋಮವಾರ ಪರಿಗಣಿಸಿದ ಕೋರ್ಟ್‌ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತ್ತು.

ದೆಹಲಿ ಹೈಕೋರ್ಟ್ ಆಗಸ್ಟ್ 5ರಂದು ಕೇಜ್ರಿವಾಲ್‌ ಅವರ ಬಂಧನವನ್ನು ಕಾನೂನುಬದ್ಧ ಎಂದು ಹೇಳಿತ್ತು. ಅಲ್ಲದೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಸಿಬಿಐ ಪ್ರಕರಣದಲ್ಲಿ ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಬದಲಾಯಿಸಿದಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯ ಅನುಕೂಲಗಳನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

ಕೇಜ್ರಿವಾಲ್ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿದೆ. ತಿಹಾರ್‌ನಲ್ಲಿ ಕೇಜ್ರಿವಾಲ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದೇ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದೂ ಪಕ್ಷ ಗಂಭೀರ ಆರೋಪ ಮಾಡುತ್ತಲೇ ಇದೆ. ಕೆಲವು ದಿನಗಳ ಹಿಂದೆ ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ʼʼಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿʼʼ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

PM Narendra Modi: ಅಮೃತ ವಾಟಿಕಾ ಕಾರ್ಯಕ್ರಮದಡಿ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು 50 ಗಿಡಗಳನ್ನು ನೆಟ್ಟು ಪೋಷಿಸಿದ್ದಾರೆ. ಇದನ್ನು ಗಮನಿಸಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.

VISTARANEWS.COM


on

Independence Day 2024 gadag students pm narendra modi
Koo

ಗದಗ: ಗದಗದ (Gadag news) ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ (NSS) ಘಟಕದ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿ ಕೆಂಪುಕೋಟೆಯಲ್ಲಿ (Red Fort) ನಡೆಯುವ ಸ್ವಾತಂತ್ರ್ಯೋತ್ಸವ (Independence Day 2024) ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಹ್ವಾನಿಸಿದ್ದಾರೆ.

ಕೇಂದ್ರ ಸರ್ಕಾರದ ʼಮೇರಿ ಮಾಟಿ, ಮೇರಾ ದೇಶ್’ ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‍ಎಸ್‍ಎಸ್ ಘಟಕ ಯಶಸ್ವಿಯಾಗಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು 50 ಗಿಡಗಳನ್ನು ನೆಟ್ಟು ಪೋಷಿಸಿದ್ದಾರೆ. ಇದನ್ನು ಗಮನಿಸಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.

ಕಾಲೇಜಿನ ವತಿಯಿಂದ ಒಂದು ವರ್ಷದಿಂದ ಅಮೃತ ವಾಟಿಕಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬರಲಾಗಿದೆ. ಎನ್‍ಎಸ್‍ಎಸ್ ಘಟಕದಿಂದ ಕಾಲೇಜಿನ ಮುಂದೆ 50 ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲಾಗಿದೆ. ಆ ಗಿಡಗಳ ಪೋಷಣೆಯನ್ನು ಕಾಲೇಜಿನ ವೆಬ್‍ಸೈಟ್‍ನಲ್ಲಿ ಅಪ್ಲೋಡ್ ಮಾಡಲಾಗಿದೆ. 100 ವಿದ್ಯಾರ್ಥಿಗಳ ಪೈಕಿ ಸತೀಶ್ ಹಾಗೂ ಆದಿತ್ಯ ಎಂಬ ವಿದ್ಯಾರ್ಥಿಗಳು ಬಹಳಷ್ಟು ಅಚ್ಚುಕಟ್ಟಾಗಿ ಗಿಡಗಳನ್ನು ಬೆಳೆಸಿದ್ದರು. ಇದನ್ನು ಗಮನಿಸಿ ಅವರಿಗೆ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಅಹ್ವಾನ ನೀಡಲಾಗಿದೆ.‌

ಈ ಬಗ್ಗೆ ಮಾತನಾಡಿರುವ ಎನ್‍ಎಸ್‍ಎಸ್ ಘಟಕದ ಶಿಕ್ಷಕರು, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಯದಲ್ಲಿ ವಿದ್ಯಾರ್ಥಿಗಳು ಮಹಾಗನಿ ಹಾಗೂ ತಬೀಬ್ ರೋಜಾ ಜಾತಿಯ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 24 ಜನರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ ಬಂದಿದೆ. ಆ ಪೈಕಿ ಗದಗ ಜಿಲ್ಲೆಯ ಸತೀಶ್ ಮತ್ತು ಆದಿತ್ಯ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ವಿಶೇಷ ಅತಿಥಿಗಳಾಗಿ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಸಂವಾದ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಹ್ವಾನ ಬಂದಿರುವುದು ಬಹಳ ಖುಷಿ ತಂದಿದೆ. ಇದು ನಮ್ಮ ಕಾಲೇಜಿಗೆ ಅಷ್ಟೇ ಅಲ್ಲ, ನಮ್ಮ ಜಿಲ್ಲೆಗೆ ಹೆಮ್ಮೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್‍ಎಸ್‍ಎಸ್ ಘಟಕದ ನೋಡಲ್ ಅಧಿಕಾರಿ ಶ್ರೀನಿವಾಸ ಬಡಿಗೇರ ಅವರು, ಅಧಿಕಾರಿಗಳನ್ನು, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಸಾಮಾನ್ಯ. ಆದರೆ ವಿದ್ಯಾರ್ಥಿಗಳ ಕೆಲಸ ಕಾರ್ಯವನ್ನು ಪ್ರಧಾನಿಗಳು ಮೆಚ್ಚಿ, ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಸಂತಸ ತಂದಿದೆ. ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದಿದ್ದಾರೆ.

ಇದನ್ನೂ ಓದಿ: President’s Medal: ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ

Continue Reading

ದೇಶ

Ram Path: ಬೀದಿ ದೀಪಗಳನ್ನೂ ಬಿಡದ ಕಳ್ಳರು; ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಲೈಟ್ಸ್‌ ನಾಪತ್ತೆ

Ram Path: ಅಯೋಧ್ಯೆ ರಾಮ ಮಂದಿರದ ರಾಮಪಥ ಮತ್ತು ಭಕ್ತಿಪಥದಲ್ಲಿರುವ ದೀಪಗಳನ್ನು ಕಳ್ಳರು ಎಗರಿಸಿದ್ದಾರೆ. 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದ್ದು, ಗುತ್ತಿಗೆದಾರರು ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ರಾಮಜನ್ಮಭೂಮಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Ram Path
Koo

ಲಖನೌ: ಅಯೋಧ್ಯೆ (Ayodhya)ಯ ರಾಮಪಥ (Ram Path) ಹಾಗೂ ಭಕ್ತಿಪಥ (Bhakti Path)ದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದ್ದು, ಗುತ್ತಿಗೆದಾರರು ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ʼʼರಾಮಪಥದ ಮರಗಳಿಗೆ ಅಳವಡಿಸಿದ್ದ 3,800 ಬಾಂಬೂ ಲೈಟ್‌ ಮತ್ತು ಭಕ್ತಿಪಥದಲ್ಲಿದ್ದ 36 ಗೋಬೊ ಪ್ರೊಜೆಕ್ಟರ್ ಲೈಟ್‌ಗಳನ್ನು ಕಳವು ಮಾಡಲಾಗಿದೆ. ಇದರ ಒಟ್ಟು ಮೌಲು ಸುಮಾರು 50 ಲಕ್ಷ ರೂ.ʼʼ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಅಳವಡಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ ಸಂಸ್ಥೆಯ ಪ್ರತಿನಿಧಿಗಳು ದೂರು ದಾಖಲಿಸಿದ್ದಾರೆ. ರಾಮಪಥದಲ್ಲಿ 6,400 ಬಾಂಬೂ ಲೈಟ್‌ ಮತ್ತು ಭಕ್ತಿಪಥದಲ್ಲಿ 96 ಗೋಬೊ ಪ್ರೊಜೆಕ್ಟರ್ ಲೈಟ್‌ಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಅರ್ಧದಷ್ಟನ್ನು ಕಳ್ಳರು ಎಗರಿಸಿದ್ದಾರೆ.

ʼʼರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ಲೈಟ್‌ಗಳನ್ನು ಅಳವಡಿಸಲಾಗಿದೆ. ಮಾರ್ಚ್ 19ರವರೆಗೆ ಎಲ್ಲ ದೀಪಗಳು ಇದ್ದವು. ಆದರೆ ಮೇ 9ರಂದು ಪರಿಶೀಲಿಸಿದಾಗ ಈ ಪೈಕಿ ಕೆಲವು ದೀಪಗಳು ನಾಪತ್ತೆಯಾಗಿದ್ದವು. ಇದುವರೆಗೆ ಒಟ್ಟು 3,800 ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳು ಕಾಣೆಯಾಗಿವೆʼʼ ಎಂದು ದೀಪ ಅವಳಡಿಸಿದ್ದ ಸಂಸ್ಥೆಯ ಪ್ರತಿನಿಧಿ ಶೇಖರ್ ಶರ್ಮಾ ಮಾಹಿತಿ ನೀಡಿದ್ದಾರೆ.

ದೀಪಗಳು ಕಾಣೆಯಾಗುವ ಬಗ್ಗೆ ಕಂಪೆನಿಗೆ ಮೇ ತಿಂಗಳಿನಲ್ಲಿಯೇ ಗೊತ್ತಾಗಿದ್ದರೂ ಆಗಸ್ಟ್‌ 9ರಂದು ದೂರು ದಾಖಲಿಸಿದೆ. ಸದ್ಯ ಈ ಬಗ್ಗೆ ರಾಮಜನ್ಮಭೂಮಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಯಾವುದೇ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಭಕ್ತಿಪಥವು ರಾಮ ಮಂದಿರಕ್ಕೆ ಹೋಗುವ ರಸ್ತೆಯಾಗಿದ್ದು, ಶೃಂಗಾರ್ ಘಾಟ್ ಅನ್ನು ಹನುಮಾನ್ ಗರ್ಹಿ ಮತ್ತು ರಾಮಮಂದಿರಕ್ಕೆ ಸಂಪರ್ಕಿಸುತ್ತದೆ. 742 ಮೀಟರ್ ರಸ್ತೆಯ ಇಕ್ಕೆಲೆಗಳಲ್ಲಿ ಕೇಸರಿ ಬಣ್ಣ ಬಳಿಯಲಾದ ಅಂಗಡಿಗಳು ಮತ್ತು ನಿವಾಸಗಳಿದ್ದು, ಪ್ರವಾಸಿಗರ ಗಮನ ಸೆಳೆಯುತ್ತದೆ. ಕನಕ ಭವನ ಮತ್ತು ದಶರಥ ಮಹಲ್‌ನಂತಹ ಪ್ರಮುಖ ಕಟ್ಟಡಗಳು ಇದೇ ಮಾರ್ಗದಲ್ಲಿದೆ.

ಸಾದತ್ಗಂಜ್ ಮತ್ತು ನಯಾ ಘಾಟ್ ಅನ್ನು ಸಂಪರ್ಕಿಸುವ 13 ಕಿ.ಮೀ ಉದ್ದದ, ನಾಲ್ಕು ಪಥದ ಹೆದ್ದಾರಿಯನ್ನು ರಾಮಪಥ ಎಂದು ಕರೆಯಲಾಗುತ್ತದೆ. ಈ ವರ್ಷದ ಜನವರಿ 22ರಂದು ರಾಮ ಮಂದಿರಲ್ಲಿ ಬಾಲಕ ರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಸಮಾರಂಭ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಸಹಿತ ದೇಶದ ವಿವಿಧ ರಂಗಗಳ ಗಣ್ಯರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕೆಲವು ದಿನಗಳ ಹಿಂದೆ ಮಳೆಗಾಲ ಆರಂಭವಾದಾಗ ರಾಮ ಮಂದಿರದ ಒಳಗೆ ನೀರು ಸೋರಿಕೆಯಾಗುತ್ತದೆ ಎನ್ನುವ ವಿಚಾರ ಸಾಕಷ್ಟು ಸುದ್ದಿ ಮಾಡಿತ್ತು. ʼʼಮಂದಿರ ನಿರ್ಮಾಣದ ವೇಳೆ ಅನೇಕ ಎಂಜಿನಿಯರ್‌ಗಳು ಮೇಲ್ವಿಚಾರಣೆ ನಡೆಸಿದ್ದರು. ಅದರ ಹೊರತಾಗಿಯೂ, ಛಾವಣಿಯಿಂದ ನೀರು ಸೋರುತ್ತಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲʼʼ ಎಂದು ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅಚ್ಚರಿ ವ್ಯಕ್ತಪಡಿಸಿದ್ದರು.

Continue Reading
Advertisement
PR Sreejesh
ಕ್ರೀಡೆ5 mins ago

PR Sreejesh: ಶ್ರೀಜೇಶ್​ ಜೆರ್ಸಿ ಸಂಖ್ಯೆ 16ಕ್ಕೆ ವಿದಾಯ ಹೇಳಿದ ಹಾಕಿ ಇಂಡಿಯಾ

Terror Attacks
ದೇಶ10 mins ago

Terror Attacks: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಕ್ಯಾಪ್ಟನ್ ಹುತಾತ್ಮ

Bank Irregularities
ಕರ್ನಾಟಕ18 mins ago

Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Hardik Pandya
ಕ್ರೀಡೆ2 hours ago

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Bigg Boss Telugu 8 Confirmed Contestants nagarjuna akkineni host
ಬಿಗ್ ಬಾಸ್2 hours ago

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Arvind Kejriwal
ದೇಶ2 hours ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

Viral News
Latest2 hours ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest2 hours ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ2 hours ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ3 hours ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌