ಭುವನೇಶ್ವರಂ: ಒಡಿಶಾದ ಪುರಿ ಜಗನ್ನಾಥ ದೇಗುಲ(Puri Jagannath temple)ದ ರತ್ನ ಭಂಡಾರ(Ratna Bhandar)ದ ಕೋಣೆಗಖನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದ್ದು, ಆ ಮೂಲಕ ಹಲವು ವರ್ಷಗಳಿಂದ ಭಕ್ತರಲ್ಲಿ ಹಾಗೂ ದೇಗುಲದ ನಿಗೂಢ ಕೋಣೆಯಲ್ಲಿ ಅಡಗಿರುವ ಕುತೂಹಲಗಳಿಗೆ ತೆರೆ ಬೀಳಲಿವೆ. ಕೇರಳದ ಅನಂತ ಪದ್ಮನಾಭನ ಸಂಪತ್ತಿನ ರೀತಿಯಲ್ಲೇ ಪುರಿ ಜಗನ್ನಾಥ ದೇವಸ್ಥಾನದ ಸಂಪತ್ತು ಇದೆ ಎಂಬ ಮಾತಿದೆ. ಸೀಕ್ರೆಟ್ ಕೋಣೆಯಲ್ಲಿ ಸಾವಿರಾರು ಕೆಜಿ ಚಿನ್ನಾಭರಣ, ಮುತ್ತು, ರತ್ನ, ಹವಳ ಮತ್ತು ಬೆಳ್ಳಿ ಸಾಮಗ್ರಿಗಳಿವೆ ಎನ್ನಲಾಗಿದೆ.
Odisha | Ratna Bhandar of Sri Jagannath Temple in Puri re-opened today after being closed for 46 years. https://t.co/a5umQ8I7wz pic.twitter.com/BxgT8yDaxD
— ANI (@ANI) July 14, 2024
ಮಧ್ಯಾಹ್ನ 1:28ರ ಶುಭ ಲಗ್ನದಲ್ಲಿ ರತ್ನ ಭಂಡಾರದ ಬಾಗಿಲು ತೆರೆಯಲಾಗಿದೆ. ಬಳಿಕ ಅಲ್ಲಿದ್ದ ವಿಶೇಷ ಬಾಕ್ಸ್‌ಗಳನ್ನು ದೇಗುಲಕ್ಕೆ ತರಲಾಯಿತು. ಅದರ ಪೂಜ್ಯ ಭಂಡಾರವನ್ನು ಪುನಃ ತೆರೆಯಲು ದೇವಾಲಯವನ್ನು ಪ್ರವೇಶಿಸಿದ 11 ಜನರಲ್ಲಿ ಒರಿಸ್ಸಾದ ಮಾಜಿ ಎಚ್‌ಸಿ ನ್ಯಾಯಾಧೀಶ ಬಿಸ್ವನಾಥ್ ರಾತ್, ಶ್ರೀ ಜಗನ್ನಾಥ ದೇವಾಲಯದ ಆಡಳಿತ (ಎಸ್‌ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧಿ, ಎಎಸ್‌ಐ ಸೂಪರಿಂಟೆಂಡೆಂಟ್ ಡಿಬಿ ಗಡನಾಯಕ್ ಮತ್ತು ಪುರಿಯ ಪಟ್ಟದ ರಾಜ ಗಜಪತಿ ರಾಜನ ಪ್ರತಿನಿಧಿ ಸೇರಿದ್ದಾರೆ.
#WATCH | Puri, Odisha: Special boxes brought to Shri Jagannath Temple ahead of the re-opening of Ratna Bhandar.
— ANI (@ANI) July 14, 2024
The Ratna Bhandar of the Shri Jagannath Temple is to be opened today following Standard Operating Procedure issued by the state government. pic.twitter.com/xwRdtQe0Ml
ಒರಿಸ್ಸಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೆ. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP)ಸ್ಥಾಪಿಸಲಾಯಿತು. ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತವು (SJTA), ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ.
ಅನಂಗಭೀಮ ದೇವ ಕ್ರಿಶ 1238ರವರೆಗೆ ಒಡಿಶಾ ಪ್ರದೇಶದ ರಾಜನಾಗಿದ್ದ. ಈತನ ಅಧಿಕಾರದ ಅವಧಿಯಲ್ಲಿ ಪುರಿ ದೇವಾಲಯಕ್ಕೆ 1.25 ಲಕ್ಷ ತೊಲ ಚಿನ್ನವನ್ನು ದಾನವಾಗಿ ನೀಡಿದ್ದ ಎಂಬ ಇತಿಹಾಸ ಇದೆ. 1465ರಲ್ಲಿ ರಾಜ ಕಪಿಲೇಂದ್ರ ದೇವ್ ಕೂಡ ಸಾಕಷ್ಟು ಚಿನ್ನವನ್ನು ದಾನ ಮಾಡಿರುವ ಬಗ್ಗೆ ಉಲ್ಲೇಖ ಇದೆ.
ಅಂದು ಏನಾಗಿತ್ತು..?
1979ರಲ್ಲಿ ಬರೋಬ್ಬರಿ 70 ದಿನಗಳ ಕಾಲ ಸಂಪತ್ತಿನ ಮೌಲ್ಯವನ್ನು ಸಮಿತಿ ಲೆಕ್ಕ ಹಾಕಿತ್ತು. ಆದರೆ ಅದರ ಪೂರ್ತಿ ಮಾಹಿತಿಯನ್ನು ಸರ್ಕಾರ ಸಾರ್ವಜನಿಕಗೊಳಿಸಿರಲಿಲ್ಲ. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. 2018ರಲ್ಲಿ ಒಡಿಶಾ ಸರ್ಕಾರಕ್ಕೆ ದೇವಸ್ಥಾನದ ರತ್ನ ಭಂಡಾರದ ಕೋಣೆಯ ಬಾಗಿಲು ತೆರೆದು ನಿಧಿಯ ಮೌಲ್ಯ ಮಾಪನ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.
#WATCH | Odisha | Ratna Bhandar of Sri Jagannath Temple in Puri re-opened today after 46 years.
— ANI (@ANI) July 14, 2024
Visuals from outside Shri Jagannath Temple. pic.twitter.com/BzK3tfJgcA