Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ! - Vistara News

ದೇಶ

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Radhika Khera: ಛತ್ತೀಸ್‌ಗಢ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರ ಅವರು ಪಕ್ಷವನ್ನು ತೊರೆದಿದ್ದಾರೆ. ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲಿಯೇ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Radhika Khera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರ (Radhika Khera) ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದ ಇವರೀಗ ರಾಜೀನಾಮೆ ನೀಡಿದ್ದಾರೆ. “ನಾನು ರಾಮಮಂದಿರಕ್ಕೆ (Ram Mandir) ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಹಾಗಾಗಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ” ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ.

“ಪ್ರತಿಯೊಬ್ಬ ಹಿಂದುವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ, ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22 ವರ್ಷದ ನಿಷ್ಠಾವಂತಳಾಗಿ ದುಡಿದಿದ್ದೇನೆ. ಆದರೆ, ನಾನು ಹಿಂದು ಆಗಿ ರಾಮಮಂದಿರಕ್ಕೆ ಭೇಟಿ ನೀಡುವುದನ್ನು ತಡೆಯಲು ನನಗೇ ಆಗಲಿಲ್ಲ. ಪಕ್ಷದಲ್ಲಿ ಮಾತ್ರ, ನಾನು ರಾಮಮಂದಿರಕ್ಕೆ ಹೋಗಿದ್ದೇ ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಇದಕ್ಕಾಗಿಯೇ ನನ್ನನ್ನು ಗುರಿಯಾಗಿಸಿ ಟೀಕಿಸಲಾಗಿದೆ. ಹಾಗಾಗಿ, ನಾನು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ ಕಾಂಗ್ರೆಸ್‌ನ ಪ್ರಮುಖ ನಾಯಕಿಯಾಗಿದ್ದ ರಾಧಿಕಾ ಖೇರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಧಿಕಾ ಖೇರ ಅವರು ಬಿಜೆಪಿ ಸೇರುತ್ತಾರೋ, ಇಲ್ಲವೇ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೋ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕಲ್ಕಿ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಕ್ಕೆ ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಶ್ರೀ ಕಲ್ಕಿ ಧಾಮ ನಿರ್ಮಾಣ ಟ್ರಸ್ಟ್‌ ಚೇರ್ಮನ್‌ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಇವರನ್ನು ಕೆಲ ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು.

ಇದರ ಕುರಿತು ನರೇಂದ್ರ ಮೋದಿ ಮಾತನಾಡಿದ್ದರು. “ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕಾಗಿ ಹೋರಾಡಿದರು. ಇದಕ್ಕೂ ಮೊದಲಿನ ಸರ್ಕಾರಗಳು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಅವಕಾಶ ಕೊಡಲಿಲ್ಲ. ಕಾನೂನು ಹೋರಾಟವನ್ನೂ ಪ್ರಮೋದ್‌ ಕೃಷ್ಣಂ ಅವರು ಮಾಡಬೇಕಾಯಿತು. ಕಲ್ಕಿ ಮಂದಿರ ನಿರ್ಮಾಣವಾದರೆ ಕಾನೂನು ಸುವ್ಯಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಲ್ಕಿ ಮಂದಿರ ನಿರ್ಮಾಣಕ್ಕೆ ಶಂಕುಸ್ತಾಪನೆ ನೆರವೇರಿಸಲಾಗುತ್ತದೆ” ಎಂದು ಪ್ರತಿಪಕ್ಷಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ: Keshav Maharaj: ರಾಮಮಂದಿರಕ್ಕೆ ಭೇಟಿ ನೀಡಿದ ಕೇಶವ್​ ಮಹರಾಜ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೋದಿ ನಾಳೆ ಕಾಶ್ಮೀರಕ್ಕೆ; ವ್ಯಾಪಕ ಕಟ್ಟೆಚ್ಚರ, ಡ್ರೋನ್ ಹಾರಾಟ ನಿಷೇಧ

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ (ಜೂನ್‌ 20) ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ತೆರಳಲಿದ್ದು, ಜೂನ್‌ 21ರಂದು ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್ ಸೆಂಟರ್‌ನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವ್ಯಾಪಕ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ಡ್ರೋನ್ ಮತ್ತು ಕ್ವಾಡ್‌ಕಾಪ್ಟರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

VISTARANEWS.COM


on

Narendra Modi
Koo

ಶ್ರೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ (ಜೂನ್‌ 20) ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ತೆರಳಲಿದ್ದು, ಜೂನ್‌ 21ರಂದು ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್ ಸೆಂಟರ್ (Sher-e-Kashmir International Conference Centre)ನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ (World Yoga Day) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆಯ ಬಳಿಕ ಮೋದಿ ಅವರ ಮೊದಲ ಕಾಶ್ಮೀರ ಪ್ರವಾಸವಾಗಿದ್ದು, ವ್ಯಾಪಕ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ಡ್ರೋನ್ ಮತ್ತು ಕ್ವಾಡ್‌ಕಾಪ್ಟರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಪೊಲೀಸರು ಆದೇಶ ಹೊರಡಿಸಿದ್ದಾರೆ. ಡ್ರೋನ್ ನಿಯಮಗಳು 2021ರ ನಿಬಂಧನೆಗಳ ಪ್ರಕಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲರೂ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಯೋಗ ದಿನಾಚರಣೆಯಲ್ಲಿ 9 ಸಾವಿರ ಮಂದಿ ಭಾಗಿ

ಸತತ ಮೂರನೇ ಬಾರಿಗೆ ಕೇಂದ್ರ ಸಚಿವರಾದ ನಂತರ ಜಮ್ಮು ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಜಿತೇಂದ್ರ ಸಿಂಗ್, ಜೂನ್ 21ರಂದು ಶ್ರೀನಗರದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ. ಇವರ ಜತೆ ಸುಮಾರು 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಮೂಲಗಳು ತಿಳಿಸಿವೆ.

“ಜೂನ್ 21ರಂದು ಶ್ರೀನಗರದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ, ಸುಮಾರು 9,000 ಜನರು ಅವರೊಂದಿಗೆ ಅವರು ಯೋಗ ಪ್ರದರ್ಶನ ನೀಡಲಿದ್ದಾರೆ” ಎಂದು ಜಿತೇಂದ್ರ ಸಿಂಗ್ ಅವರು ಸಿದ್ಧತೆ ಪರಿಶೀಲಿಸಿ ಸುದ್ದಿಗಾರರಿಗೆ ತಿಳಿಸಿದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳನ್ನು ವರ್ಚುವಲ್ ಆಗಿ ಸಂಪರ್ಕಿಸುವ ಯೋಜನೆ ಇದೆ. “ಪ್ರತಿ ಜಿಲ್ಲೆಯಿಂದ 2,000 ಜನರು ಸಂಪರ್ಕ ಸಾಧಿಸಿದರೂ, ಕಾರ್ಯಕ್ರಮದಲ್ಲಿ ಸುಮಾರು 50,000 ಭಾಗವಹಿಸಿದಂತಾಗುತ್ತದೆʼʼ ಎಂದು ಸಿಂಗ್ ಹೇಳಿದರು. ʼʼಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್ ಸೆಂಟರ್‌ನಲ್ಲಿ ಇಂತಹ ಬೃಹತ್‌ ಯೋಗ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಎಲ್ಲರಿಗೂ ಹೆಮ್ಮೆಯ ವಿಷಯʼʼ ಎಂದು ಅವರು ಅಭಿಪ್ರಾಯಪಟ್ಟರು.

ವಿಶೇಷತೆ

ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ಶಾಂತಿ ನೆಲೆಸುತ್ತಿದ್ದು, ಈ ಹಿಂದೆ ಜಿ-20 ಶೃಂಗಸಭೆಯನ್ನೂ ಆಯೋಜಿಸಲಾಗಿತ್ತು. ಯೋಗ ದಿನವನ್ನು ಆಚರಿಸುವ ಮೂಲಕ ಮೋದಿ ಅವರು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ ಎಂಬ ಸಂದೇಶ ಸಾರಲಿದ್ದಾರೆ.

ಯೋಗ ದಿನಾಚರಣೆಗೆ ಅಂತಾರಾಷ್ಟ್ರೀಯ ಮಾನ್ಯತೆ

ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಪ್ರಸ್ತಾಪವನ್ನು ಇಟ್ಟರು. ಯಾಕಾಗಿ ಇದನ್ನ ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಿಸಬೇಕು ಎಂಬುದಕ್ಕೆ ಸಮರ್ಥ ವಿವರಣೆಯನ್ನೂ ಭಾರತ ಕೊಟ್ಟಿತ್ತು. ಅದನ್ನು ವಿಶ್ವ ಸಂಸ್ಥೆ ಒಪ್ಪಿಕೊಂಡು, ಸದಸ್ಯ ರಾಷ್ಟ್ರಗಳು 2015ರಲ್ಲಿ ಅನುಮೋದಿಸಿವೆ. ಆಗಿನಿಂದ ಇಲ್ಲಿಯವರೆಗೆ ಭಾರತ, ಯೋಗಕ್ಕೆ ಸಂಬಂಧಪಟ್ಟ ಹಲವು ಕಾರ್ಯಕ್ರಗಳನ್ನು ಆಯೋಜಿಸುತ್ತಿದೆ. ವಿದೇಶಗಳಲ್ಲೂ ಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಅದರ ಮಹತ್ವವನ್ನು ಸಾರುತ್ತಿದೆ.

ಇದನ್ನೂ ಓದಿ: Narendra Modi: ಜೂನ್‌ 21ರ ಯೋಗ ದಿನದಂದು ವಿಶೇಷ ಸ್ಥಳದಲ್ಲಿ ಮೋದಿ ಯೋಗ; ಯಾವುದದು?

Continue Reading

ಪ್ರಮುಖ ಸುದ್ದಿ

MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

MLC By Election: ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದ ತಲಾ ಒಂದೊಂದು ಸ್ಥಾನಗಳಿಗೆ ಜುಲೈ 12ರಂದು ಮತದಾನ ನಡೆಯಲಿದೆ. ಅಂದೇ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

VISTARANEWS.COM


on

MLC by Election
Koo

ಬೆಂಗಳೂರು: ಜಗದೀಶ್ ಶೆಟ್ಟರ್ (jagadish shettar) ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ (Legislative council) ಸ್ಥಾನಗಳಿಗೆ ಜುಲೈ 12ರಂದು ಬೈ ಎಲೆಕ್ಷನ್‌ (By Election) ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ (Election commission) ಘೋಷಿಸಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದ ತಲಾ ಒಂದೊಂದು ಸ್ಥಾನಗಳಿಗೆ ಜುಲೈ 12ರಂದು ಮತದಾನ ನಡೆಯಲಿದೆ. ಅಂದೇ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಕರ್ನಾಟಕದಲ್ಲಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅವರ ಅವಧಿ 14 ಜೂನ್ 2028ರ ತನಕ ಇತ್ತು. ಅವರು 25 ಜನವರಿ 2024ರಂದು ಕಾಂಗ್ರೆಸ್ ಪಕ್ಷವನ್ನು ತೊರೆದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರವಾದ ಒಂದು ಸ್ಥಾನ ಭರ್ತಿ ಮಾಡಲು ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದೆ.

ಉಪ ಚುನಾವಣೆಗೆ 25 ಜೂನ್, ಮಂಗಳವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. 2 ಜುಲೈ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಜುಲೈ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜುಲೈ 5 ಕೊನೆಯ ದಿನ. ಜುಲೈ 12, ಶುಕ್ರವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಆರಂಭವಾಗಲಿದೆ. 16 ಜುಲೈ ಒಳಗೆ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ.

ಕರ್ನಾಟಕ ವಿಧಾನಸಭೆಯ ಶಾಸಕರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದು, ವಿಧಾನಸೌಧದಲ್ಲಿ ಮತದಾನ ನಡೆಯಲಿದೆ. ವಿಧಾನ ಪರಿಷತ್ ಉಪ ಚುನಾವಣೆಗೆ ಆಡಳಿತ ಪಕ್ಷ ಕಾಂಗ್ರೆಸ್ ಈಗಾಗಲೇ ಬಸನಗೌಡ ಬಾದರ್ಲಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಳ್ಳಲಿದ್ದು, ಯಾರು ಮೈತ್ರಿ ಅಭ್ಯರ್ಥಿ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಶೆಟ್ಟರ್‌ ರಾಜಕೀಯ ಸರ್ಕಸ್

2023ರ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 60,775 ಮತಗಳನ್ನು ಪಡೆದು ಚುನಾವಣೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋಲು ಕಂಡರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್‌ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತು. ಆದರೆ ಅವರು 2024ರ ಲೋಕಸಭೆ ಚುನಾವಣೆಯ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು 7,62,029 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು 1,78,437 ಮತಗಳ ಅಂತರದಿಂದ ಸೋಲಿಸಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ 2024 ಮುಗಿದ ಬಳಿಕ ಒಟ್ಟು 17 ವಿಧಾನ ಪರಿಷತ್ ಸ್ಥಾನಗಳ ಚುನಾವಣೆ ನಡೆಯಿತು. ಆಡಳಿತ ಪಕ್ಷವಾದ ಕಾಂಗ್ರೆಸ್ 10 ಸ್ಥಾನಗಳಲ್ಲಿ, ಪ್ರತಿಪಕ್ಷ ಬಿಜೆಪಿ 4 ಮತ್ತು ಜೆಡಿಎಸ್‌ 3 ಸ್ಥಾನಗಳಲ್ಲಿ ಜಯ ಗಳಿಸಿವೆ. ವಿಧಾನ ಪರಿಷತ್‌ನ 3 ಶಿಕ್ಷಕ, 3 ಪದವೀಧರ ಕ್ಷೇತ್ರಕ್ಕೆ ಜೂನ್‌ 3ರಂದು ನಡೆದು, ಫಲಿತಾಂಶ ಜೂನ್ 6ರಂದು ಪ್ರಕಟವಾಗಿದೆ. ವಿಧಾನಸಭೆಯಿಂದ 11 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಘೋಷಣೆಯಾಗಿದ್ದ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading

ದೇಶ

Hit & Run: ಫುಟ್‌ಪಾತ್‌ ಮೇಲೆ ಮಲಗಿದ್ದವನ ಮೇಲೆ ಕಾರು ಹರಿಸಿ ಕೊಂದ ಸಂಸದನ ಮಗಳು; ಜಾಮೀನು ಮಂಜೂರು

Hit & Run: ತಮಿಳುನಾಡಿನ ಚೆನ್ನೈಯಲ್ಲಿ ರಾಜ್ಯಸಭಾ ಸದಸ್ಯರೊಬ್ಬರ ಮಗಳು ಬಿಎಂಡಬ್ಲ್ಯು ಕಾರು ಓಡಿಸಿ 24 ವರ್ಷದ ಯುವಕನನ್ನು ಕೊಂದಿದ್ದಾಳೆ. ಅದಾಗ್ಯೂ ಆಕೆಗೆ ಜಾಮೀನು ಲಭಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಸೋಮವಾರ ರಾತ್ರಿ ತನ್ನ ಸ್ನೇಹಿತೆಯೊಂದಿಗೆ ಬಿಎಂಡಬ್ಲ್ಯು ಕಾರನ್ನು ಓಡಿಸುತ್ತಿದ್ದಳು. ಈ ವೇಳೆ ಚೆನ್ನೈಯ ಬೆಸೆಂಟ್ ನಗರದ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ 24 ವರ್ಷದ ಪೇಂಟರ್ ಸೂರ್ಯ ಎಂಬಾತನ ಮೇಲೆ ಕಾರನ್ನು ಚಲಾಯಿಸಿ ಕೊಂದಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.

VISTARANEWS.COM


on

Hit & Run
Koo

ಚೆನ್ನೈ: ಮಹಾರಾಷ್ಟ್ರದ ಪುಣೆಯಲ್ಲಿ ಉದ್ಯಮಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಗ ಮದ್ಯ ಸೇವಿಸಿ ಐಷಾರಾಮಿ ಪೋರ್ಷೆ ಕಾರು (Pune Porsche accident) ಓಡಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ನಡೆದು ಒಂದು ತಿಂಗಳೊಳಗೆ ಅಂತಹದ್ದೇ ಮತ್ತೊಂದು ಪ್ರಕರಣ ತಮಿಳುನಾಡಿನ ಚೆನ್ನೈಯಲ್ಲಿ ನಡೆದಿದೆ. ರಾಜ್ಯಸಭಾ ಸದಸ್ಯರೊಬ್ಬರ ಮಗಳು ಬಿಎಂಡಬ್ಲ್ಯು (BMW) ಕಾರು ಓಡಿಸಿ 24 ವರ್ಷದ ಯುವಕನನ್ನು ಕೊಂದಿದ್ದಾಳೆ. ಅದಾಗ್ಯೂ ಆಕೆಗೆ ಜಾಮೀನು ಲಭಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ (Hit & Run).

ಚೆನ್ನೈಯ ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ ಯುವಕ ಮೇಲೆ ಮಹಿಳೆ ಕಾರು ಓಡಿಸಿದ್ದು, ಗಾಯಗೊಂಡ ಆತ ಮೃತಪಟ್ಟಿದ್ದಾನೆ.

ಘಟನೆ ವಿವರ

ವೈಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಸೋಮವಾರ ರಾತ್ರಿ ತನ್ನ ಸ್ನೇಹಿತೆಯೊಂದಿಗೆ ಬಿಎಂಡಬ್ಲ್ಯು ಕಾರನ್ನು ಓಡಿಸುತ್ತಿದ್ದಳು. ಈ ವೇಳೆ ಚೆನ್ನೈಯ ಬೆಸೆಂಟ್ ನಗರದ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ 24 ವರ್ಷದ ಪೈಂಟರ್‌ ಸೂರ್ಯ ಎಂಬಾತನ ಮೇಲೆ ಕಾರನ್ನು ಚಲಾಯಿಸಿ ಕೊಂದಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.

ಅಪಘಾತ ನಡೆದ ತಕ್ಷಣ ಮಾಧುರಿ ಸ್ಥಳದಿಂದ ಪರಾರಿಯಾಗಿದ್ದರೆ, ಆಕೆಯ ಸ್ನೇಹಿತೆ ಕಾರಿನಿಂದ ಇಳಿದು ಗುಂಪುಗೂಡಿದ್ದ ಸ್ಥಳೀಯರೊಂದಿಗೆ ವಾಗ್ವಾದ ನಡೆಸಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅವಳೂ ಹೊರಟು ಹೋದಳು. ಗಾಯಗೊಂಡಿದ್ದ ಸೂರ್ಯನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ಪ್ರತ್ಯಕ್ಷರ್ಶಿಗಳು ತಿಳಿಸಿದ್ದಾರೆ. ಬಳಿಕ ಪೊಲೀಸರು ಮಾಧುರಿಯನ್ನು ಬಂಧಿಸಿದರು. ಆದರೆ ಶೀಘ್ರವೇ ಆಕೆಗೆ ಜಾಮೀನು ಸಿಕ್ಕಿದೆ.

ಸಂಬಂಧಿಕರ ಆಕ್ರೋಶ

ಮೃತ ಸೂರ್ಯನಿಗೆ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಆತನ ಸಂಬಂಧಿಕರು ಮಾಧುರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಜೆ -5 ಶಾಸ್ತ್ರಿ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಾರು ಬಿಎಂಆರ್ (ಬೀಡಾ ಮಸ್ತಾನ್ ರಾವ್) ಗ್ರೂಪ್‌ಗೆ ಸೇರಿದ್ದು ಮತ್ತು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂಬುದು ತಿಳಿದು ಬಂತು. ಬಳಿಕ ಮಾಧುರಿಯನ್ನು ಬಂಧಿಸಲಾಯಿತು. ಆದರೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನನ್ನೂ ನೀಡಲಾಯಿತು. ಬೀಡಾ ಮಸ್ತಾನ್ ರಾವ್ ಅವರು 2022ರಲ್ಲಿ ರಾಜ್ಯಸಭಾ ಸಂಸದರಾದರು. ಈ ಹಿಂದೆ ಶಾಸಕರಾಗಿದ್ದರು. ಬಿಎಂಆರ್ ಗ್ರೂಪ್ ಮೀನು ಆಹಾರದ ಉದ್ಯಮದಲ್ಲಿ ಚಿರಪರಿಚಿತ ಹೆಸರು.

ಇದನ್ನೂ ಓದಿ: Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

ಪುಣೆ: ಲಕ್ಷುರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯ ಸಾವು

ಪುಣೆಯಲ್ಲಿ ಮಂಗಳವಾರ ನಡೆದ ಮತ್ತೊಂದು ಘಟನೆಯಲ್ಲಿ ಐಷಾರಾಮಿ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರರೊಬ್ಬರು ಮೃತಪಟ್ಟಿದ್ದಾರೆ. ಪುಣೆ ನಗರದ ಯೆರವಾಡಾ ಪ್ರದೇಶದಲ್ಲಿ ಬೈಕ್‌ಗೆ ಐಷಾರಾಮಿ ಕಾರು ಡಿಕ್ಕಿ ಹೊಡೆದ ಪರಿಣಾಮ 41 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮೃತ ಕೇದಾರ್ ಚವಾಣ್ ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಡೆಲಿವರಿ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.

Continue Reading

ದೇಶ

Lucknow Airport: ವಿಮಾನ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ನಡೆಸಿದ ಮಹಿಳೆ; ಕಾರಣ ಏನು?

Lucknow Airport: ಮುಂಬೈಗೆ ತೆರಳಬೇಕಿದ್ದ ಮಹಿಳಾ ಪ್ರಯಾಣಿಕರೊಬ್ಬರು ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಚ್ಚಿ ಗಾಯಗೊಳಿಸಿದ ಘಟನೆ ಲಕ್ನೋ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಸರೋಜಿನಿ ನಗರ ಪೊಲೀಸ್‌ ಠಾಣೆಯಲ್ಲಿ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

VISTARANEWS.COM


on

Lucknow Airport
Koo

ಲಕ್ನೋ: ಮುಂಬೈಗೆ ತೆರಳಬೇಕಿದ್ದ ಮಹಿಳಾ ಪ್ರಯಾಣಿಕರೊಬ್ಬರು ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಚ್ಚಿ ಗಾಯಗೊಳಿಸಿದ ಘಟನೆ ಲಕ್ನೋ ವಿಮಾನ ನಿಲ್ದಾಣ (Lucknow airport)ದಲ್ಲಿ ನಡೆದಿದೆ. ಬಳಿಕ ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಕ್ಯುಪಿ 1525 (QP 1525) ವಿಮಾನ ಲಕ್ನೋ ವಿಮಾನ ನಿಲ್ದಾಣದಿಂದ ಸಂಜೆ 5:25ಕ್ಕೆ ಮುಂಬೈಗೆ ತೆರಳಲು ಸಜ್ಜಾಗಿತ್ತು. ಈ ವೇಳೆ ಮಹಿಳೆ ಅತಿರೇಕದ ವರ್ತನೆ ತೋರಿದ್ದಾರೆ. ಸದ್ಯ ಸರೋಜಿನಿ ನಗರ ಪೊಲೀಸ್‌ ಠಾಣೆಯಲ್ಲಿ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಘಟನೆ ವಿವರ

ಸರೀಜಿನಿ ನಗರದ ಸ್ಟೇಷನ್‌ ಹೌಸ್‌ ಆಫೀಸರ್‌ (SHO) ಶೈಲೇಂದ್ರ ಗಿರಿ ಈ ಬಗ್ಗೆ ಮಾಹಿತಿ ನೀಡಿ, ʼʼದಾಳಿ ನಡೆಸಿದ ಮಹಿಳೆ ಮಾನಸಿಕವಾಗಿ ಬಹಳ ಒತ್ತಡದಲ್ಲಿ ಇದ್ದಂತೆ ಕಾಣಿಸುತ್ತಿದ್ದರು. ಅವರು ಆರಂಭದಲ್ಲಿ ಸಹ ಪ್ರಯಾಣಿಕರೊಂದಗೆ ತಗಾದೆ ತೆಗೆದು ಜಗಳ ನಡೆಸಿದ್ದರು. ವಿಮಾನ ಸಿಬ್ಬಂದಿ ಮಧ್ಯೆ ಪ್ರವೇಶಿಸಿ ಮಹಿಳೆಯನ್ನು ಸಮಾಧಾನ ಪಡಿಸಲು ಮುಂದಾದಾಗ ಅವರೊಂದಿಗೂ ತಗಾದೆ ತೆಗೆದು ಜಗಳ ಆರಂಭಿಸಿದರು. ಬಳಿಕ ಮಹಿಳೆಯನ್ನು ಹೊರ ಕಳಿಸಲಾಯಿತುʼʼ ಎಂದು ತಿಳಿಸಿದ್ದಾರೆ.

ʼʼಮಹಿಳೆಯನ್ನು ಹೊರಗೆ ಕರೆತರುವಾಗ ಆಕೆ ಪುರುಷ ಸಿಬ್ಬಂದಿಯ ಮಣಿಕಟ್ಟಿಗೆ ಕಚ್ಚಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಆಕೆಯನ್ನು ಸರೋಜಿನಿ ನಗರ ಪೊಲೀಸ್‌ ಸ್ಟೇಷನ್‌ಗೆ ಕರೆತಂದು ದೂರು ದಾಖಲಿಸಿದ್ದಾರೆʼʼ ಎಂದು ಶೈಲೇಂದ್ರ ಗಿರಿ ವಿವರಿಸಿದ್ದಾರೆ.

ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್‌ 324 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 504 (ಶಾಂತಿ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗ್ರಾ ಮೂಲದ ಈ ಮಹಿಳೆ ಮುಂಬೈಯಲ್ಲಿ ವಾಸವಾಗಿದ್ದಾರೆ. ಲಕ್ನೋದಲ್ಲಿರುವ ತಮ್ಮ ಸಹೋದರಿಯನ್ನು ಭೇಟಿಯಾಗಲು ಆಗಮಿಸಿ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ. ಸದ್ಯ ಮಹಿಳೆಯನ್ನು ಸಂಬಂಧಿಕರ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ: Mumbai Airport: ವ್ಹೀಲ್‌ಚೇರ್‌ ದೊರೆಯದೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ವೃದ್ಧ

ವಿಮಾನದ ಸಿಬ್ಬಂದಿಯ ಮೂಗು ಮುರಿದ ಪ್ರಯಾಣಿಕ

ವಿಮಾನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಯುತ್ತಿರುವುದು ಇದು ಮೊದಲ ಸಲವೇನಲ್ಲ ಆಗಾಗ ಇಂತಹ ಪ್ರಕರಣ ವರದಿಯಾಗುತ್ತಲೇ ಇರುತ್ತದೆ. ಕೆಲವು ತಿಂಳ ಹಿಂದೆ ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಬ್ಯಾಂಕಾಂಕ್‌ನಿಂದ ಹೀಥ್ರೂಗೆ ತೆರಳುತ್ತಿದ್ದ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ 35 ವರ್ಷದ ಬ್ರಿಟನ್‌ ಪ್ರಯಾಣಿಕ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ಈ ವರ್ಷದ ಫೆಬ್ರವರಿ 7ರಂದು ಘಟನೆ ನಡೆದಿದ್ದು, ಬಳಿಕ ಆತನನ್ನು ಬಂಧಿಸಲಾಗಿತ್ತು. ವಿಮಾನ ಹಾರುವಾಗ ಟಾಯ್ಲೆಟ್‌ಗೆ ಹೋದ ಪ್ರಯಾಣಿಕನು ಒಳಗಡೆ ಕೂಗಾಡಲು ಶುರು ಮಾಡಿದ್ದ. ಕೂಗಿ, ಅತ್ತು, ಟಾಯ್ಲೆಟ್‌ನ ಬಾಗಿಲು ಮುರಿಯಲು ಯತ್ನಿಸಿದ್ದ.

ವಿಮಾನದ ಶೌಚಾಲಯದಿಂದ ಆತ ಹೊರಗೆ ಬಂದ ಕೂಡಲೇ ವಿಮಾನದ ಸಿಬ್ಬಂದಿಯು ಆತನನ್ನು ನಿಯಂತ್ರಿಸಲು ಮುಂದಾಗಿದ್ದರು. ಇದೇ ವೇಳೆ ಪ್ರಯಾಣಿಕನು ಸಿಬ್ಬಂದಿಯ ಮೂಗಿಗೆ ಪಂಚ್‌ ಮಾಡಿದ್ದು, ಮೂಗು ಮುರಿದಿದೆ ಎಂದು ತಿಳಿದುಬಂದಿದೆ. ಗಗನಸಖಿಯೊಬ್ಬರು ಮಾಡಿದ ವಿಡಿಯೊಭಾರಿ ವೈರಲ್‌ ಆಗಿತ್ತು. 

Continue Reading
Advertisement
Hajj Pilgrims
ವಿದೇಶ5 mins ago

Hajj Pilgrims: ಪವಿತ್ರ ಹಜ್‌ ಯಾತ್ರೆಗೆ ತಟ್ಟಿದ ಬಿಸಿಲಿನ ತಾಪ; 550 ಯಾತ್ರಾರ್ಥಿಗಳ ಸಾವು

Virat Kohli
ಕ್ರೀಡೆ25 mins ago

Virat Kohli: 100 ಶತಕ ಬಾರಿಸುವಂತೆ ಕೊಹ್ಲಿಗೆ ಆಶೀರ್ವಾದ ಮಾಡಿದ ವಿಂಡೀಸ್​ ದಂತಕಥೆ ಸರ್ ವೆಸ್ಲಿ ಹಾಲ್

Actor Darshan case reaction by umapathy d boss Fans violent
ಸ್ಯಾಂಡಲ್ ವುಡ್31 mins ago

Actor Darshan: ʻಡಿ ಬಾಸ್ʼ ಹೊರ ಬಂದ್ಮೇಲೆ ಉತ್ತರ ಸಿಗೋ ರೀತಿಯಲ್ಲೇ ಸಿಗುತ್ತೆ; ಉಮಾಪತಿ ವಿರುದ್ಧ ದಚ್ಚು ಫ್ಯಾನ್ಸ್‌ ಕಿಡಿ!

viral video snake in amazon box
ವೈರಲ್ ನ್ಯೂಸ್40 mins ago

Viral video: ಅಮೆಜಾನ್‌ ಕಂಪನಿಯ ಪಾರ್ಸೆಲ್‌ನಲ್ಲಿ ಬಂತು ಜೀವಂತ ನಾಗರ! ಗೇಮಿಂಗ್‌ ಬಾಕ್ಸ್‌ ಜೊತೆ ಹಾವು ಫ್ರೀ!

Hardeep Singh Nijjar
ವಿದೇಶ54 mins ago

Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Virat Kohli
ಕ್ರೀಡೆ1 hour ago

Virat Kohli: ಶಾರುಖ್, ಸಲ್ಮಾನ್ ಹಿಂದಿಕ್ಕಿ ಮೌಲ್ಯಯುತ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ ಕಿಂಗ್​ ಕೊಹ್ಲಿ

Actor Darshan BP health update but pavithra Gowda In normal Condition
ಸ್ಯಾಂಡಲ್ ವುಡ್1 hour ago

Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

food safety cm siddaramaih
ಪ್ರಮುಖ ಸುದ್ದಿ1 hour ago

CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

Job News
ಉದ್ಯೋಗ2 hours ago

Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

Vaishnavi Gowda deep fake Photo viral
ಕಿರುತೆರೆ2 hours ago

Vaishnavi Gowda: ಸೀತಮ್ಮಗೆ ಕಿಡಿಗೇಡಿಗಳ ಕಾಟ; ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೊ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌