Site icon Vistara News

Bharat Jodo Nyay Yatra: ‘ಯುಪಿ ಕೆ ಲಡ್ಕೆ’ ರಾಹುಲ್-ಅಖಿಲೇಶ್ ಸೆಲ್ಫಿ ಸಖತ್ ವೈರಲ್!

Rahul Gandhi and Akhilesh yadav Selfie photo at Bharat Jodo Nyay Yatra

ಲಕ್ನೋ: 2024ರ ಲೋಕಸಭೆ ಚುನಾವಣೆಗೆ (Lok Sabha election) ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ (Uttar Pradesh) ಕಾಂಗ್ರೆಸ್ (Congress Party) ಮತ್ತು ಸಮಾಜವಾದಿ ಪಕ್ಷದ (Samajwadi Party) ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ (Bharat Jodo Nyay Yatra) ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಭಾನುವಾರ ಪಾಲ್ಗೊಂಡರು. ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರ ನಡುವಿನ ಆತ್ಮೀಯತೆಯನ್ನು ಎತ್ತಿ ತೋರಿಸುವ ಹಲವಾರು ಫೋಟೋಗಳನ್ನು ಅವರ ಮತ್ತು ಅವರ ಪಕ್ಷಗಳ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ಪೈಕಿ ರಾಹುಲ್ ಮತ್ತು ಅಖಿಲೇಶ್ ಅವರು ಸೆಲ್ಫಿ (Selfie Photo) ತೆಗೆದುಕೊಳ್ಳುತ್ತಿರುವ ಫೋಟೋ ಭಾರೀ ವೈರಲ್ ಆಗುತ್ತಿದೆ.

ಈ ಸೆಲ್ಫಿ ಫೋಟೋವನ್ನು ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ಷೇರ್ ಮಾಡಿದೆ. ಈ ಚಿತ್ರಕ್ಕೆ ಯಾವುದೇ ಕ್ಯಾಪ್ಷನ್ ನೀಡಿಲ್ಲ. ಬದಲಿಗೆ ಕ್ಯಾಮೆರಾ ಮತ್ತು ಸೆಲ್ಫಿ ಎಮೋಜಿಗಳನ್ನು ತೋರಿಸಲಾಗಿದೆ. ಈ ಫೋಟೋದಲ್ಲಿ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರು ಸೆಲ್ಫಿಗೆ ಫೋಸು ಕೊಡುತ್ತಿದ್ದಾರೆ.

ಯಾತ್ರೆಯ ವೇಳೆ, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕಾರ್ಯಕರ್ತರು ಯಾದವ್ ಮತ್ತು ಗಾಂಧಿ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು. ಇಬ್ಬರು ನಾಯಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಯಾತ್ರೆಗೆ ನೆರೆದಿದ್ದ ಜನರತ್ತ ಕೈ ಬೀಸಿದರು.

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಸೀಟ್ ಷೇರಿಂಗ್ ಫೈನಲ್ ಮಾಡಲು ನೆರವು ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೂ ಈ ವೇಳೆ ಕಾಣಿಸಿಕೊಂಡರು. ರಾಹುಲ್ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜನವರಿ 14ರಿಂದ ಮಣಿಪುರದಿಂದ ಆರಂಭವಾಗಿದ್ದು, ಈಗ ಉತ್ತರ ಪ್ರದೇಶದಲ್ಲಿದೆ. ಈಗಾಗಲೇ ರಾಯ್ ಬರೇಲಿ ಮತ್ತು ಅಮೇಠಿಯಲ್ಲಿ ಹಾದು ಹೋಗಿದೆ. ಮುಂಬೈನಲ್ಲಿ ಮಾರ್ಚ್ 20ರಂದು ಮುಕ್ತಾಯಗೊಳ್ಳಲಿರುವ ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ಮೊದಲ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಾಗಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯು ಪಶ್ಚಿಮ ಬಂಗಾಳದಲ್ಲಿ ಹಾದು ಹೋಗುವಾಗ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗಿತ್ತು. ಆದರೆ, ಅವರು ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಮಮತಾ ಬ್ಯಾನರ್ಜಿ ಅವರು ಹಿಂದೇಟು ಹಾಕಿದರು. ಇಂಡಿಯಾ ಕೂಟದ ಪ್ರಮುಖ ಪಕ್ಷಗಳಾಗಿದ್ದ ಕಾಂಗ್ರೆಸ್ ಮತ್ತು ಟಿಎಂಸಿ ನಡುವೆ ಸೀಟು ಹಂಚಿಕೆ ಸಂಬಂಧ ಒಡಕು ಮೂಡಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಜಂಟಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿವೆ. 80 ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದರೆ, ಉಳಿದ 63 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷವು ಸ್ಪರ್ಧಿಸಲಿದೆ.

ಈ ಸುದ್ದಿಯನ್ನೂ ಓದಿ: Lok Sabha Pre Poll Survey: ಬಿಹಾರದಲ್ಲಿ ಎನ್‌ಡಿಎಗೆ 32, ಇಂಡಿಯಾ ಕೂಟಕ್ಕೆ 8 ಸ್ಥಾನ ಎಂದ ಸಮೀಕ್ಷೆ

Exit mobile version