Site icon Vistara News

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Rahul Gandhi

ಉತ್ತರಪ್ರದೇಶ: ಉತ್ತರಭಾರತದಲ್ಲಿ ಬಿಸಿಲ ಬೇಗೆ ದಿನೇ ದಿನೇ ಹಚ್ಚಾಗುತ್ತಿದೆ. ಜನ ಅಂತೂ ಸೆಖೆಗೆ ಬಳಲಿ ಬೆಂಡಾಗಿದ್ದಾರೆ. ಇದೀಗ ಬಿಸಿಲಿನ ಶಾಖ ಕಾಂಗ್ರೆಸ್‌ ನಾಯಕ(Congress Leader) ರಾಹುಲ್‌ ಗಾಂಧಿ(Rahul Gandhi) ಅವರಿಗೂ ತಟ್ಟಿದೆ. ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ನಾಯಕ ಎಂದರೆ ಅದು ರಾಹುಲ್‌ ಗಾಂಧಿ. ಅವರು ಎಲ್ಲೇ ಹೋದರೂ ಚಿತ್ರ ವಿಚಿತ್ರ ಕೆಲಸ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌(Viral Video) ಆಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

ಎರಡು ದಿನಗಳ ಹಿಂದೆಯಷ್ಟೇ ರಾಹುಲ್‌ ಗಾಂಧಿ ಭಾಗಿಯಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವೇದಿಕೆ ಕುಸಿದ ಘಟನೆ ವರದಿಯಾಗಿತ್ತು. ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದರು. ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಅವರು ಪಾರಾಗಿದ್ದರು.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


Exit mobile version