Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ - Vistara News

ದೇಶ

Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Rahul Gandhi: ಉತ್ತರ ಪ್ರದೇಶದ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಯೊಂದಕ್ಕೆ ರಾಹುಲ್‌ ಗಾಂಧಿ ಅವರು ಭೇಟಿ ನೀಡಿದರು. ಇದೇ ವೇಳೆ, ಚಮ್ಮಾರರ ಸಮಸ್ಯೆಗಳನ್ನು ಆಲಿಸಿದ ಅವರು, ಚಪ್ಪಲಿಯನ್ನೂ ಹೊಲಿದರು. ಚಪ್ಪಲಿ ಹೊಲಿಯುವುದು ಹೇಗೆ ಎಂಬುದನ್ನು ಅಂಗಡಿ ಮಾಲೀಕ ಹೇಳಿಕೊಟ್ಟರು.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಲಖನೌ: ದೇಶಾದ್ಯಂತ ಸಂಚರಿಸುವ ಭಾರತ್‌ ಜೋಡೋ ಯಾತ್ರೆಯ (Bharat Jodo Yatra) ಹೊರತಾಗಿಯೂ ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಾಮಾನ್ಯ ಜನರೊಂದಿಗೆ ಬೆರೆಯುತ್ತಿದ್ದಾರೆ. ರೈತರು, ಕುಶಲಕರ್ಮಿಗಳು, ಯುವಕರೊಂದಿಗೆ ಬೆರೆಯುವ ಮೂಲಕ ಅವರ ಸಮಸ್ಯೆಗಳಿಗೆ ಕಿವಿಯಾಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ರಾಹುಲ್‌ ಗಾಂಧಿ ಅವರು ಶುಕ್ರವಾರ (ಜುಲೈ 26) ಉತ್ತರ ಪ್ರದೇಶದಲ್ಲಿ ಚಪ್ಪಲಿ ಅಂಗಡಿಯೊಂದಕ್ಕೆ (Cobbler Shop) ದಿಢೀರನೆ ಭೇಟಿ ನೀಡಿ, ಅಲ್ಲಿ ಚಪ್ಪಲಿ ಹೊಲಿಯುವ ಮೂಲಗ ಗಮನ ಸೆಳೆದಿದ್ದಾರೆ.

ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾದರು. ಕೋರ್ಟ್‌ಗೆ ಹಾಜರಾದ ಬಳಿಕ ಲಖನೌಗೆ ವಾಪಸಾಗುವ ವೇಳೆ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಗೆ ತೆರಳಿದ ಅವರು, ಮಾತುಕತೆ ನಡೆಸುವ ಜತೆಗೆ ಚಪ್ಪಲಿ ಹೊಲಿದರು. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

2023ರ ಸೆಪ್ಟೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕೀರ್ತಿ ನಗರ ಫರ್ನಿಚರ್‌ ಮಾರುಕಟ್ಟೆಗೆ ತೆರಳಿದ್ದರು. ಆಗ ಅವರು ಹಲವು ಮೇಜುಗಳನ್ನು ತಯಾರಿಸಿದ್ದರು. ಕಾರ್ಪೆಂಟರ್‌ಗಳ ಜತೆಗೂಡಿ ರಾಹುಲ್‌ ಗಾಂಧಿ ಅವರು ಮೇಜುಗಳನ್ನು ತಯಾರಿಸಿದ್ದರು. ಈ ಮೇಜುಗಳನ್ನು ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ಹಾಗೂ ಕಾರ್ಪೆಂಟರ್‌ಗಳು ಜತೆಗೂಡಿ ಪ್ರಮೀಳಾ ಬಾಯಿ ಚವ್ಹಾಣ್ ಶಾಲೆಗೆ ದೇಣಿಗೆಯಾಗಿ ನೀಡಿದ್ದರು. ಕಾರ್ಕರ್‌ಡೂಮಾದಲ್ಲಿರುವ ಶಾಲೆಗೆ ಮೇಜುಗಳನ್ನು ದೇಣಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಮಾಹಿತಿ ನೀಡಿತ್ತು.

ಬೈಕ್‌ ರಿಪೇರಿ ಮಾಡಿದ್ದ ರಾಹುಲ್‌ ಗಾಂಧಿ

2023ರ ಜೂನ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಜೋಲ್‌ಬಾಗ್‌ನಲ್ಲಿರುವ ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ ಬೈಕ್‌ ರಿಪೇರಿ ಮಾಡಿದ್ದರು. “ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ, ನಾನೂ ವ್ರೆಂಚ್‌ಗಳನ್ನು ತಿರುಗಿಸಿದೆ. ಅವರಿಂದ ಬೈಕ್‌ ರಿಪೇರಿ ಮಾಡುವುದನ್ನು ಕಲಿತೆ. ಬೈಕ್‌ ರಿಪೇರಿ ಮಾಡುವ ಇಂತಹ ಕೈಗಳೇ ಭಾರತವನ್ನು ನಿರ್ಮಿಸಿವೆ. ಇಲ್ಲಿಗೆ ಭೇಟಿ ನೀಡುವ ಮೂಲಕ ನಾನು ಮತ್ತೆ ಭಾರತ್‌ ಜೋಡೋ ಯಾತ್ರೆಯನ್ನು ಮುಂದುವರಿಸಿದ್ದೇನೆ” ಎಂದು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Acharya Pramod Krishnam: ರಾಹುಲ್‌ ಗಾಂಧಿಯನ್ನು ‘ರಾಷ್ಟ್ರೀಯ ಸಮಸ್ಯೆ’ ಎಂದ ಆಚಾರ್ಯ ಪ್ರಮೋದ್‌ ಕೃಷ್ಣಂ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
ಪ್ರಮುಖ ಸುದ್ದಿ4 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest4 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest2 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest2 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest3 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌