ನವದೆಹಲಿ: ಭಾರತ್ ಜೋಡೋ ಯಾತ್ರೆಯ ಆರಂಭವಾಗಿ ಮುಗಿಯೋವರೆಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ತಮ್ಮ ಗಡ್ಡಕ್ಕೆ ಕತ್ತರಿ ಹಾಕಿರಲಿಲ್ಲ. ಸುಮಾರು ನಾಲ್ಕು ತಿಂಗಳ ಕಾಲ ನಡೆದ ಈ ಯಾತ್ರೆಯ ವೇಳೆ, ಅವರು ತಮ್ಮ ಗಡ್ಡವನ್ನು ನೀಳವಾಗಿ ಬೆಳೆಸಿದ್ದರು. ಆದರೆ, ಈಗ ತಮ್ಮ ಗಡ್ಡಕ್ಕೆ ಕತ್ತರಿ ಹಾಕಿದ್ದಾರೆ. ಟ್ರಿಮ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಲಂಡನ್‌ಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು, ತಮ್ಮ ಉದ್ದನೆಯ ಗಡ್ಡವನ್ನು ಕತ್ತರಿಸಿ, ಹೊಸ ಲುಕ್‌ನಲ್ಲಿ ಮಿಂಚುತ್ತಿದ್ದಾರೆ(Haircut, Trimmed Beard).
ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ಜಡ್ಜ್ ಬಿಸಿನೆಸ್ ಸ್ಕೂಲ್‌ನಲ್ಲಿ ಲರ್ನಿಂಗ್ ಟು ಲಿಸನ್ ಇನ್ ದಿ 21 ಸೆಂಚೂರಿ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ರಾಹುಲ್ ಗಾಂಧಿ ಅವರು ಹೊಸ ಲುಕ್‌ನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಲಾಗಿದೆ. #NewLook ಹ್ಯಾಷ್‌ಟ್ಯಾಗ್‌ನಡಿ ಷೇರ್ ಮಾಡಲಾಗಿದೆ. 52 ವರ್ಷದ ರಾಹುಲ್ ಗಾಂಧಿ ಅವರು ಸುಮಾರು ನಾಲ್ಕು ಸಾವಿರ ಕಿ.ಮೀ.ವರೆಗೆ ಪಾದಯಾತ್ರೆ ಕೈಗೊಂಡಿದ್ದರು.
ರಾಹುಲ್ ಗಾಂಧಿ ಹೊಸ ಲುಕ್ ಫೋಟೋ ಷೇರ್ ಮಾಡಿದ ಸಂದೀಪ್ ಸಿಂಗ್
ರಾಹುಲ್ ಗಾಂಧಿ ಉಪನ್ಯಾಸ
ಈಗಾಗಲೇ ಲಂಡನ್‌ನಲ್ಲಿರುವ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇಂಗ್ಲೆಂಡ್ ಭೇಟಿಯ ವಿಚಾರವನ್ನು ರಾಹುಲ್ ಗಾಂಧಿ ಅವರು ಈ ಹಿಂದೆಯೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ನಾನು ಕಲಿತ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದೇನೆ. ಜಿಯೋಪಾಲಿಟಿಕ್ಸ್, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ಪ್ರಜಾಪ್ರಭುತ್ವ ಕುರಿತು ಹೊಸ ಮನಸ್ಸುಗಳೊಂದಿಗೆ ಸಂವಾದ ನಡೆಸಲು ಸಿದ್ಧವಿರುವುದಾಗಿ ಹೇಳಿದ್ದರು.
ಇದನ್ನೂ ಓದಿ: Congress Plenary Session: ಅದಾನಿಯ ಸತ್ಯ ಗೊತ್ತಾಗುವ ತನಕ ಪ್ರಶ್ನೆ ಕೇಳುತ್ತೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ