ಲಂಡನ್: ಬ್ರಿಟನ್ ರಾಜಧಾನಿ ಲಂಡನ್‌ನ ಲ್ಯಾಂಬೆತ್‌ನಲ್ಲಿರುವ ಥೇಮ್ಸ್ ನದಿ ತೀರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಬಸವಣ್ಣನವರ ಪುತ್ಥಳಿಗೆ (Rahul Gandhi In London) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೌರವ ಸಲ್ಲಿಸಿದ್ದಾರೆ. ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ಅಧ್ಯಕ್ಷ, ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಸೇರಿ ಹಲವರೊಂದಿಗೆ ತೆರಳಿ ಬಸವಣ್ಣನವರ ಪುತ್ಥಳಿಗೆ ರಾಹುಲ್ ಗಾಂಧಿ ಗೌರವ ನಮನ ಸಲ್ಲಿಸಿದರು.
“ದೇಶ ಕಂಡ ಅಪ್ರತಿಮ ಸಮಾಜ ಸುಧಾಕರು, ಜಗತ್ತಿಗೇ ಪ್ರಜಾಪ್ರಭುತ್ವದ ಕಲ್ಪನೆಯನ್ನು ನೀಡಿದ ಬಸವೇಶ್ವರರ ಪುತ್ಥಳಿಯನ್ನು ನೋಡುವುದೇ ಪ್ರತಿ ಭಾರತೀಯನಿಗೂ ಹೆಮ್ಮೆಯ ವಿಷಯ. ಪುತ್ಥಳಿ ಪ್ರತಿಷ್ಠಾಪನೆಗೆ ಶ್ರಮ ವಹಿಸಿದ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್‌ಗೆ ಧನ್ಯವಾದಗಳು” ಎಂದು ಪುತ್ಥಳಿಗೆ ನಮಿಸಿದ ಬಳಿಕ ರಾಹುಲ್ ಗಾಂಧಿ ಹೇಳಿದರು.
ಇದನ್ನೂ ಓದಿ: ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಸಚಿವ ರಾಜೀವ್ ಚಂದ್ರಶೇಖರ್ ನಮನ
ಥೇಮ್ಸ್ ನದಿ ತೀರದಲ್ಲಿ 2015ರಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಬಸವೇಶ್ವರರ ಪುತ್ಥಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದಾರೆ. ರಾಹುಲ್ ಗಾಂಧಿ ಅವರು ಕೆಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಬ್ರಿಟನ್ ಪ್ರವಾಸ ಕೈಗೊಂಡಿದ್ದಾರೆ.