Site icon Vistara News

Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

Rahul Gandhi

ಪುಣೆ: ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ(Controversial statement)ಗಳ ಮೂಲಕ ಬಿಜೆಪಿಗೆ ಆಹಾರವಾಗುವ ರಾಹುಲ್‌ ಗಾಂಧಿ(Rahul Gandhi) ಅವರ ಮತ್ತೊಂದು ಹೇಳಿಕೆ ವಿವಾದಕ್ಕೀಡಾಗಿದೆ. ಬಿಜೆಪಿಗರು ಅವರ ವಿರುದ್ಧ ಕಿಡಿ ಕಾರಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯ(Narendra Modi)ವರ ಇತ್ತೀಚಿನ ದ್ವಾರಕಾ ಪೂಜೆ(Dwaraka Pooje) ಬಗ್ಗೆ ಟೀಕಿಸಿದ್ದು, ಸನಾತನ ಧರ್ಮದ ಆಚರಣೆ ಪದ್ದತಿಯನ್ನು ಮತ್ತೊಮ್ಮೆ ಪ್ರಶ್ನಿಸಿದ್ದಾರೆ. ಪುಣೆಯಲ್ಲಿ ಮಾತನಾಡಿದ ಅವರು ಸಮುದ್ರದ ಒಳಗೆ ಹೋಗಿ ಪ್ರಧಾನಿ ಮೋದಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿಯವರು ಒಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಮತ್ತೊಮ್ಮೆ ಸಮುದ್ರ ಒಳಗೆ ಹೋಗಿ ಅಲ್ಲಿ ಡ್ರಾಮಾ ಮಾಡುತ್ತಾರೆ. ಸಮುದ್ರಕ್ಕೆ ಇಳಿಯುತ್ತಿದ್ದಂತೆ ಅವರು ದೇವರೇ ತಮಗೇನು ಆಗದೇ ಇದ್ದರೆ ಸಾಕಪ್ಪ ಅನ್ನೋ ಭೀತಿಯಲ್ಲಿದ್ದರು. ಅವರು ಇಂತಹ ಡ್ರಾಮಾಗಳನ್ನು ಮಾಡೋದಾದರೂ ಏಕೆ? ಅವರು ರಾಜಕೀಯವನ್ನು ತಮಾಷೆಯ ವಿಚಾರ ಎಂಬಂತೆ ಬಿಂಬಿಸಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿಗರು ಹರಿಹಾಯ್ದಿದ್ದಾರೆ. ರಾಹುಲ್‌ ಗಾಂಧಿಯವರು ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಸನಾತನ ಧರ್ಮದ ಅಸ್ತಿತ್ವವನ್ನು ಮತ್ತೆ ಪ್ರಶ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಫೆಬ್ರುವರಿ 25ರಂದು ಗುಜರಾತ್‌ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇನ್ನು ಶ್ರೀ ಕೃಷ್ಣನ ಮುಳುಗಿ ಹೋದ ನಗರವನ್ನು ಹುಡುಕುವ ಸಮುದ್ರದಾಳದ ತಮ್ಮ ಪಯಣದ ವೇಳೆ ಸ್ಕೂಬಾ ಸಾಧನಗಳನ್ನು ಧರಿಸಿರುವ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ. ಬೇಯ್ತ್ ದ್ವಾರಕಾ ದ್ವೀಪದ ಸಮೀಪದ ಕರಾವಳಿಯಲ್ಲಿ ಪ್ರಧಾನಿ ಮೋದಿ ಸ್ಕೂಬಾ ಡೈವಿಂಗ್ ನಡೆಸಿದ್ದರು. ಪುರತತ್ವ ಇಲಾಖೆ ಅಧಿಕಾರಿಗಳು ಈ ಭಾಗದಲ್ಲಿ ಪುರಾತನ ದ್ವಾರಕಾ ನಗರದ ಅವಶೇಷಗಳನ್ನು ಪತ್ತೆ ಮಾಡಿದ್ದು, ಜನರು ಅದನ್ನು ವೀಕ್ಷಿಸಲು ಅವಕಾಶವಿದೆ.

ಇದನ್ನೂ ಓದಿ: Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

ಕೆಲವು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಹಿಂದೂ ದೇವತೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದರು. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ್‌ ಅವರು ಸಾಕ್ಷತ್‌ ಶಿವನಂತೆ. ಅವರು ಬಹಳ ಸುಲಭವಾಗಿ ರಾಮ(ಬಿಜೆಪಿ)ನ ಜೊತೆ ಸ್ಪರ್ಧೆಗಿಳಿಯಬಹುದು. ನನ್ನ ಹೆಸರು ಕೂಡ ಮಲ್ಲಿಕಾರ್ಜುನ. ಅಂದರೆ ಶಿವ ಎಂದರ್ಥ. ನಾನು ಕೂಡ ಶಿವನೇ ಆಂಧ‍್ರ ಪ್ರದೇಶದ ಶ್ರೀಶೈಲಂ ಮಲ್ಲಿಕಾರ್ಜುನ ಎಂಬ ಹೆಸರಿನಲ್ಲಿ ಜ್ಯೋತಿರ್ಲಿಂಗ ಇದೆ ಎಂದು ಹೇಳಿದ್ದರು.

Exit mobile version