Rahul Gandhi: ಅನರ್ಹತೆ ರದ್ದು ಬಳಿಕ ಮೊದಲ ಬಾರಿ ಸಂಸತ್ತಲ್ಲಿ ರಾಹುಲ್‌ ಗಾಂಧಿ ಭಾಷಣ; ಕೇಂದ್ರಕ್ಕೆ ಚಾಟಿ Vistara News
Connect with us

ದೇಶ

Rahul Gandhi: ಅನರ್ಹತೆ ರದ್ದು ಬಳಿಕ ಮೊದಲ ಬಾರಿ ಸಂಸತ್ತಲ್ಲಿ ರಾಹುಲ್‌ ಗಾಂಧಿ ಭಾಷಣ; ಕೇಂದ್ರಕ್ಕೆ ಚಾಟಿ

Rahul Gandhi: ಮೋದಿ ಉಪನಾಮ ಪ್ರಕರಣದಲ್ಲಿ ಲೋಕಸಭೆ ಸದಸ್ಯತ್ವ ಅನರ್ಹಗೊಂಡು ಬಳಿಕ ಅನರ್ಹತೆ ರದ್ದಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಸಂಸತ್‌ ಅಧಿವೇಶನದಲ್ಲಿ ಪಾಲ್ಗೊಂಡರು. ಅವಿಶ್ವಾಸ ಗೊತ್ತುವಳಿ ನಿರ್ಣಯದ ಕುರಿತು ಮಾತನಾಡಿದ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು.

VISTARANEWS.COM


on

Rahul Gandhi On No Confidence Motion In Parliament
Koo

ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ಸಂಸತ್‌ನಿಂದ ಅನರ್ಹಗೊಂಡು ನಾಲ್ಕು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi), ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ನಿರ್ಣಯದ ಕುರಿತು ಮಾತನಾಡಿದರು. ಇದೇ ವೇಳೆ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದರು.

ಸಂಸತ್‌ನಲ್ಲಿ ಭಾಷಣ ಆರಂಭಿಸಿದ ರಾಹುಲ್‌ ಗಾಂಧಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಧನ್ಯವಾದ ತಿಳಿಸಿದರು. “ನನ್ನ ಅನರ್ಹತೆ ರದ್ದುಗೊಳಿಸಿ, ಸದಸ್ಯತ್ವ ಮರಳಿ ನೀಡಿರುವುದಕ್ಕೆ ನಿಮಗೆ ಧನ್ಯವಾದಗಳು. ಹಾಗೆಯೇ, ಕಳೆದ ಬಾರಿ ನಾನು ಗೌತಮ್‌ ಅದಾನಿ ಕುರಿತು ಜಾಸ್ತಿ ಮಾತನಾಡಿ ನಿಮಗೆ ಹಾಗೂ ಕೇಂದ್ರ ಸರ್ಕಾರಕ್ಕೆ ತುಂಬ ಕಷ್ಟ ನೀಡಿದೆ. ಅದಕ್ಕಾಗಿ ನಿಮಗೆ ಕ್ಷಮೆಯಾಚಿಸುತ್ತೇನೆ. ಹಾಗೆಯೇ, ನಿಮಗೆ ಇವತ್ತು ಅದಾನಿ ಬಗ್ಗೆ ಮಾತನಾಡಿ ಜಾಸ್ತಿ ತೊಂದರೆ ಕೊಡುವುದಿಲ್ಲ” ಎಂದು ಹೇಳಿದರು.

ನನ್ನ ಅಹಂಕಾರ ಮಾಯ

ಆಕ್ರಮಣಕಾರಿಯಾಗಿ ಮಾತನಾಡದೆ ಶಾಂತಚಿತ್ತದಿಂದಲೇ ರಾಹುಲ್‌ ಗಾಂಧಿ ಹಲವು ವಿಷಯ ಪ್ರಸ್ತಾಪಿಸಿದರು. ಭಾರತ್‌ ಜೋಡೋ ಯಾತ್ರೆ ಕುರಿತು ಮಾತನಾಡಿದ ಅವರು, “ನಾನು ಭಾರತ್‌ ಜೋಡೋ ಯಾತ್ರೆ ಕೈಗೊಂಡಾಗ ಮೊದಲಿಗೆ ಸುಸ್ತಾಗುತ್ತಿತ್ತು. ಕಾಲುಗಳಿಗೆ ನೋವಾಗುತ್ತಿತ್ತು. ಇದರಿಂದ ನನ್ನ ಅಹಂಕಾರವೂ ಇಳಿಯಿತು. ಆದರೆ, ಒಬ್ಬ ಬಾಲಕಿ ಬಂದು ನನಗೆ ಚೀಟಿಯೊಂದನ್ನು ನೀಡಿದ್ದಳು. ನಾನು ನಿಮ್ಮ ಜತೆ ನಡೆಯುತ್ತೇನೆ ರಾಹುಲ್‌ ಗಾಂಧಿ ಎಂದು ಬರೆದಿದ್ದಳು. ಇದು ನನಗೆ ಸ್ಫೂರ್ತಿ ನೀಡಿತು. ಭಾರತ್‌ ಜೋಡೋ ಯಾತ್ರೆ ಕೈಗೊಳ್ಳಲು ಸಹಕಾರಿಯಾಯಿತು. ಮುಂದೆಯೂ ಭಾರತ್‌ ಜೋಡೋ ಯಾತ್ರೆ ಮುಂದುವರಿಯಲಿದೆ” ಎಂದು ತಿಳಿಸಿದರು.

ಮಣಿಪುರ ಹಿಂಸಾಚಾರ ಪ್ರಸ್ತಾಪ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಸಂಸತ್‌ನಲ್ಲಿ ಉಲ್ಲೇಖಿಸಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಾಟಿ ಬೀಸಿದರು. “ಮಣಿಪುರದಲ್ಲಿ ಹಿಂಸಾಚಾರದಲ್ಲಿ ಮಿತಿಮೀರಿದೆ. ಕೆಲವು ದಿನಗಳ ಹಿಂದಷ್ಟೇ ನಾನು ಮಣಿಪುರಕ್ಕೆ ಹೋಗಿ ಬಂದೆ. ಆದರೆ, ನರೇಂದ್ರ ಮೋದಿ ಅವರು ಇದುವರೆಗೆ ಮಣಿಪುರಕ್ಕೆ ಹೋಗಿಲ್ಲ. ಏಕೆಂದರೆ, ನರೇಂದ್ರ ಮೋದಿ ಅವರ ಪ್ರಕಾರ, ಮಣಿಪುರ ಭಾರತದಲ್ಲಿ ಇಲ್ಲ” ಎಂದು ಕುಟುಕಿದರು.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿಗೆ ದಿಲ್ಲಿಯ 12, ತುಘಲಕ್ ಲೇನ್ ಸರ್ಕಾರಿ ಬಂಗಲೆ ಮರು ಹಂಚಿಕೆ! ವಾಪಸ್ ಬರ್ತಾರಾ ರಾಗಾ?

ಸೇನೆಯಿಂದ ಒಂದೇ ದಿನದಲ್ಲಿ ಶಾಂತಿ ಸ್ಥಾಪನೆ

ಭಾರತೀಯ ಸೇನೆಯನ್ನು ಮಣಿಪುರಕ್ಕೆ ಕಳುಹಿಸಿದರೆ ಒಂದೇ ದಿನದಲ್ಲಿ ಶಾಂತಿ ಸ್ಥಾಪನೆ ಮಾಡಬಹುದು. ಆದರೆ, ಕೇಂದ್ರ ಸರ್ಕಾರವು ಶಾಂತಿ ಸ್ಥಾಪನೆಯ ಒಂದು ಸಣ್ಣ ಪ್ರಯತ್ನ ಮಾಡಿಲ್ಲ. ದೇಶದ ಜನರ ಧ್ವನಿಯನ್ನು ಮಣಿಪುರದ ಜನರ ಮೂಲಕ ಕೇಂದ್ರ ಸರ್ಕಾರ ಹುದುಗಿಸಿದೆ. ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆಯಾಗಿದೆ. ದೇಶಾದ್ಯಂತ ಭಾರತ ಮಾತೆಯ ಹತ್ಯೆ ಮಾಡಲಾಗುತ್ತಿದೆ” ಎಂದರು. ಇದಕ್ಕೆ ಬಿಜೆಪಿಯು ಆಕ್ರೋಶ ವ್ಯಕ್ತಪಡಿಸಿದ ಕಾರಣ ಸದನದಲ್ಲಿ ಗಲಾಟೆ ನಡೆಯಿತು. ಇದಾದ ಬಳಿಕ ರಾಹುಲ್‌ ಗಾಂಧಿ ಭಾಷಣ ಮುಗಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.

VISTARANEWS.COM


on

Edited by

savings
Koo

ಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).

ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….

1.ಉಳಿತಾಯ ಬೇಗ ಆರಂಭಿಸಿ

ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.

2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ

ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.

3.ರಿಟೈರ್‌ಮೆಂಟ್ ಬಜೆಟ್ ತಯಾರಿಸಿ

ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.

4.ರಿಟೈರ್‌ಮೆಂಟ್ ಅಕೌಂಟ್!

ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್‌ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.

5.ಹೂಡಿಕೆ ಮಾಡಿ

ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.

6.ಅನವಶ್ಯ ವೆಚ್ಚ ಬೇಡ

ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್‌ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.

7.ಪರ್ಯಾಯ ಉಳಿತಾಯ

ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.

8.ತೆರಿಗೆ ಮಾಹಿತಿ ಇರಲಿ

ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.

9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ

ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.

ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್‌, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್‌ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ

10.ತುರ್ತು ನಿಧಿ ಇರಲಿ

ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್‌ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.

Continue Reading

ಗ್ಯಾಜೆಟ್ಸ್

Reliance Jio: ಅಬ್ಬಬ್ಬಾ ಲಾಟರಿ..! ಐಫೋನ್ 15 ಖರೀದಿಸಿದರೆ 6 ತಿಂಗಳು ರಿಲಯನ್ಸ್ ಜಿಯೋ ಫ್ರೀ ಪ್ಲಾನ್

Reliance Jio: ಹೊಸದಾಗಿ ಲಾಂಚ್ ಆಗಿರುವ ಆ್ಯಪಲ್ ಐಫೋನ್ 15 ಖರೀದಿಯ ಮೇಲೆ ರಿಲಯನ್ಸ್ ಜಿಯೋ ಬಂಪರ್ ಆಫರ್ ಘೋಷಣೆ ಮಾಡಿದೆ.

VISTARANEWS.COM


on

Edited by

Reliance Jio offering free plan for 6 months on purchase of iPhone 15 through reliance
Koo

ಮುಂಬೈ, ಮಹಾರಾಷ್ಟ್ರ: ರಿಲಯನ್ಸ್ ರಿಟೇಲ್ ಸ್ಟೋರ್‌ಗಳು (Reliance Retail), ರಿಲಯನ್ಸ್ ಡಿಜಿಟಲ್ ಆನ್‌ಲೈನ್ (Reliance Digital Online) ಅಥವಾ ಜಿಯೋ‌ಮಾರ್ಟ್‌ನಲ್ಲಿ (Jio Mart) ಜಿಯೋ ಐಫೋನ್ 15 (iPhone 15) ಖರೀದಿ ಮಾಡಿದರೆ 2,394 ರೂ. ಮೌಲ್ಯದ ಆರು ತಿಂಗಳ ಪ್ಲಾನ್ (Reliance Jio) ಅನ್ನು ಉಚಿತವಾಗಿ ಬಳಕೆದಾರರಿಗೆ ನೀಡಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಳಕೆದಾರರ ನಾಡಿ ಮಿಡಿತವನ್ನು ಅರಿತು ಕೊಂಡಿರುವ ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ 399 ರೂ. ಪ್ಲಾನ್ ಅನ್ನು ಆರು ತಿಂಗಳುಗಳ ವರೆಗೆ ಉಚಿತವಾಗಿ ನೀಡಲಿದೆ. ಇದರ ಒಟ್ಟು ಮೌಲ್ಯ 2,394 ರೂ.ಗಳಾಗಲಿದ್ದು, ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ.

ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ ನೀಡುತ್ತಿರುವ ರೂ. 399 ಪ್ಲಾನ್ ನಲ್ಲಿ ಬಳಕೆದಾರರಿಗೆ ಪ್ರತಿ ನಿತ್ಯ 3 ಜಿಬಿ ಹೈ ಸ್ಪೀಡ್ ಡೇಟಾ ಬಳಕೆಗೆ ದೊರೆಯಲಿದ್ದು, ಜೊತೆಗೆ ಸಂಪೂರ್ಣ ಅನ್ ಲಿಮಿಟೆಡ್ ಕಾಲಿಂಗ್ ಸಹ ಸಿಗಲಿದೆ. ಅಲ್ಲದೇ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಸಹ ಉಚಿತವಾಗಿ ಕಳುಹಿಸಬಹುದಾಗಿದೆ.

ಆದರೆ ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ ಮಾತ್ರವೇ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಈ ಸುದ್ದಿಯನ್ನೂ ಓದಿ: Apple iPhone :‌ ಭಾರತದಲ್ಲಿ ಐಫೋನ್‌ 3ಜಿಯಿಂದ ಮೊದಲ ರಿಟೇಲ್‌ ಸ್ಟೋರ್ ತನಕ‌ ಆ್ಯಪಲ್‌ನ 15 ವರ್ಷಗಳ ಯಾತ್ರೆ ಹೇಗಿತ್ತು?

ಜಿಯೋ ಬಳಕೆದಾರರಲಲ್ಲದವರಿಗೂ ಈ ಯೋಜನೆಯ ಲಾಭವು ದೊರೆಯಲಿದ್ದು, ಇದಕ್ಕಾಗಿ ಅವರು ಹೊಸ ಜಿಯೋ ಸಿಮ್ ಖರೀದಿ ಮಾಡಬೇಕು ಇಲ್ಲವೇ ಮೊಬೈಲ್ ನಂಬರ್ ಪೊರ್ಟಬಲಿಟಿ ಆಯ್ಕೆಯನ್ನು ತಮ್ಮದಾಗಿಸಿಕೊಳ್ಳಬೇಕಾಗಿದೆ.

ಈ ಪ್ಲಾನ್ ಸೆಪ್ಟೆಂಬರ್ 22ರಿಂದ ಆರಂಭವಾಗಲಿದ್ದು, ಐಫೋನ್ 15 ಖರೀದಿ ಮಾಡಿ ಜಿಯೋ ಸಿಮ್ ಅನ್ನು ಆಕ್ಟಿವ್ ಮಾಡಿದರೆ ಈ ಹೊಸ ಯೋಜನೆಯು 72 ಗಂಟೆಗಳ ಒಳಗೆ ನಿಮ್ಮ ಬಳಕೆಗೆ ಲಭ್ಯವಾಗಲಿದೆ. ಈ ಯೋಜನಯೂ ಕೇವಲ ಐಫೋನ್ 15 ನಲ್ಲಿ ಮಾತ್ರವೇ ಕಾರ್ಯನಿರ್ವಹಿಸಲಿದೆ.

ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

Chandrayaan 3: ನಿದ್ದೆಯಿಂದ ಎಚ್ಚರವಾಗಲು ಒಲ್ಲೆ ಎನ್ನುತ್ತಿರುವ ಲ್ಯಾಂಡರ್, ಪ್ರಜ್ಞಾನ್! ನಾಳೆ ಮತ್ತೆ ಇಸ್ರೋ ಪ್ರಯತ್ನ

Chandrayaan 3: ಕಳೆದ ಹದಿನೈದು ದಿನಗಳಿಂದ ಸ್ಲೀಮ್ ಮೋಡ್‌ನಲ್ಲಿರುವ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್ ಸಕ್ರಿಯಗೊಳಿಸಿರುವ ಪ್ರಯತ್ನವನ್ನು ಇಸ್ರೋ ಮುಂದುವರಿಸಿದೆ.

VISTARANEWS.COM


on

Edited by

Chandrayaan 3
Koo

ನವದೆಹಲಿ: ಚಂದ್ರನ ಅಂಗಳದಲ್ಲಿ (Moon) ಸ್ಲೀಪ್ ಮೋಡ್‌ನಲ್ಲಿರುವ (Sleep Mode) ಚಂದ್ರಯಾನ-3 (Chandrayaan 3) ಪ್ರಜ್ಞಾನ್ ರೋವರ್ (Pragyan Rover) ಮತ್ತು ವಿಕ್ರಮ್ ಲ್ಯಾಂಡರ್ (Vikram Lander) ಎಚ್ಚರಗೊಳಿಸುವ ಪ್ರಯತ್ನವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಶುಕ್ರವಾರ ಸಂಜೆ ಮಾಡಲು ಮುಂದಾಗಿತ್ತು. ಆದರೆ, ಆಗ ಪ್ರಯತ್ನವನ್ನು ಒಂದು ದಿನದ ಮಟ್ಟಿಗೆ ಮುಂದೂಡಿದೆ ಎಂದು ತಿಳಿದು ಬಂದಿದೆ. ಅಂದರೆ, ಶನಿವಾರ ಸಂಜೆ ಚಂದ್ರಯಾನ-3 ಉಪಕರಣಗಳನ್ನು ಸಕ್ರಿಯಗೊಳಿಸುವ ಪ್ರಯತ್ನವನ್ನು ಇಸ್ರೋ ಮಾಡಲಿದೆ ಎಂದು ಸ್ಪೇಸ್ ಅಪ್ಲಿಕೇಷನ್ ಸೆಂಟರ್ ನಿರ್ದೇಶಕ ನಿಲೇಶ್ ದೇಸಾಯಿ ಅವರು ಹೇಳಿದ್ದರು. ಇಷ್ಟಾಗಿಯೂ, ಪ್ರಜ್ಞಾನ್ ರೋವರ್ ಮತ್ತು ವಿಕ್ರಮ್ ಲ್ಯಾಂಡರ್ ಅನ್ನು ಸಂಪರ್ಕಿಸುವ ಪ್ರಯತ್ನವನ್ನು ಶುಕ್ರವಾರ ಮಾಡಲಾಯಿತಾದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಇಸ್ರೋ ಟ್ವೀಟ್ ಮಾಡಿದೆ.

ಸೆಪ್ಟೆಂಬರ್ 22 ರ ಸಂಜೆ ರೋವರ್ ಮತ್ತು ಲ್ಯಾಂಡರ್ ಅನ್ನು ಮರುಸಕ್ರಿಯಗೊಳಿಸಲು ಯೋಜಿಸಿದ್ದೆವು. ಆದರೆ ಕೆಲವು ಕಾರಣಗಳಿಂದಾಗಿ ನಾವು ಅದನ್ನು ನಾಳೆ ಸೆಪ್ಟೆಂಬರ್ 23 ರಂದು ಮಾಡುತ್ತೇವೆ. ಲ್ಯಾಂಡರ್ ಮತ್ತು ರೋವರ್ ಅನ್ನು ಸ್ಲೀಪ್ ಮೋಡ್‌ನಿಂದ ಹೊರತೆಗೆದು ಅದನ್ನು ಪುನಃ ಸಕ್ರಿಯಗೊಳಿಸುವ ಯೋಜನೆಯನ್ನು ನಾವು ಹೊಂದಿದ್ದೇವೆ ಎಂದು ಸುದ್ದಿ ಸಂಸ್ಥೆ ನಿಲೇಶ್ ದೇಸಾಯಿ ಅವರು ತಿಳಿಸಿದ್ದಾರೆ.

ಭೂಮಿಯ 15 ದಿನಗಳು ಚಂದ್ರನ ಒಂದು ದಿನಕ್ಕೆ ಸಮ. ಹಾಗಾಗಿ, 15 ದಿನಗಳ ಹಿಂದೆ ಇಸ್ರೋ, ಚಂದ್ರನ ಅಂಗಳದಲ್ಲಿರುವ ಪ್ರಜ್ಞಾನ್ ರೋವರ್ ಮತ್ತು ವಿಕ್ರಮ್ ಲ್ಯಾಂಡರ್‌ ಅನ್ನು ಸ್ಲೀಮ್ ಮೋಡಿಗೆ ವರ್ಗಾಯಿಸಿತ್ತು. ಇದೀಗ ಚಂದ್ರನಲ್ಲಿ ಸೂರ್ಯೋದಯವಾಗಿದ್ದು, ಚಂದ್ರಯನಾ-3 ವೈಜ್ಞಾನಿಕ ಉಪಕರಣಗಳನ್ನು ಸಕ್ರಿಯಗೊಳಿಸುವ ಪ್ರಯತ್ನವನ್ನು ಇಸ್ರೋ ಮಾಡುತ್ತಿದೆ. ಯಶಸ್ವಿಯಾಗಿ ತಮ್ಮ ವೈಜ್ಞಾನಿಕ ಸಂಸೋಧನೆಗಳನ್ನು ಕೈಗೊಂಡ ವಿಕ್ರಮ್ ಲ್ಯಾಂಡರ್ ಅನ್ನು ಸೆಪ್ಟೆಂಬರ್ 4 ಮತ್ತು ಪ್ರಜ್ಞಾನ್ ರೋವರ್ ಅನ್ನು ಸೆಪ್ಟೆಂಬರ್ 2ರಂದು ಸ್ಲೀಮ್ ಮೋಡ್‌ಗೆ ತಳ್ಳಲಾಗಿತ್ತು.

ಈ ಸುದ್ದಿಯನ್ನೂ ಓದಿ: Chandrayaan 3: ಚಂದ್ರಯಾನ 3 ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ವಲರ್ಮತಿ ಇನ್ನಿಲ್ಲ; ದೇಶವೇ ಕೇಳಿದ್ದ ಧ್ವನಿ ಅದು

ಶುಕ್ರವಾರ ನಡೆಸಿದ ಪ್ರಯತ್ನ ವಿಫಲ

ಈ ಮಧ್ಯೆ, ಇಸ್ರೋ ಎಕ್ಸ್‌ ವೇದಿಕೆಯಲ್ಲಿ ಟ್ವೀಟ್ ಮಾಡಿದ್ದು, ಸ್ಲೀಮ್ ಮೋಡ್‌ನಲ್ಲಿರುವ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಅನ್ನು ಸಕ್ರಿಯಗೊಳಿಸುವುದಕ್ಕಾಗಿ ಸಂಪರ್ಕಿಸುತ್ತಿದ್ದೇವೆ. ಸದ್ಯದ ಮಟ್ಟಿಗೆ ರೋವರ್ ಮತ್ತು ಲ್ಯಾಂಡರ್‌ನಿಂದ ಕಮ್ಯುನಿಕೇಷನ್ ಸಾಧ್ಯವಾಗುತ್ತಿಲ್ಲ. ಅಲ್ಲಿಂದ ಯಾವುದೇ ಸಿಗ್ನಲ್‌ಗಳು ದೊರೆಯುತ್ತಿಲ್ಲ. ಆದರೆ, ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಸಕ್ರಿಯೊಳಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ಬರೆದುಕೊಂಡಿದೆ.

Continue Reading

ಕರ್ನಾಟಕ

BJP-JDS Alliance : ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭ!

BJP-JDS Alliance: ಕೊನೆಗೂ ಎಲ್ಲ ಊಹೆ ನಿಜವಾಗಿದೆ. ಜೆಡಿಎಸ್‌ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ಪ್ರವೇಶ ಮಾಡಿದೆ. ಇದರೊಂದಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ.

VISTARANEWS.COM


on

Edited by

BJP -JDS Alliance
ದಿಲ್ಲಿಯಲ್ಲಿ ನಡೆದ ಅಂತಿಮ ಮೈತ್ರಿ ಮಾತುಕತೆಯಲ್ಲಿ ಜೆ.ಡಿ. ನಡ್ಡಾ, ಎಚ್.ಡಿ ಕುಮಾರಸ್ವಾಮಿ ಮತ್ತು ಅಮಿತ್‌ ಶಾ
Koo
vistara-vishleshane-

ನವ ದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಮೂರನೇ ನಿರ್ಣಾಯಕ ಶಕ್ತಿಯಾಗಿರುವ ಜಾತ್ಯತೀತ ಜನತಾದಳ (Janata dal Secular) ಇದೀಗ ರಾಷ್ಟ್ರೀಯ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದೊಂದಿಗೆ ರಾಜಕೀಯ ಮೈತ್ರಿಯನ್ನು (BJP-JDS Alliance) ಅಧಿಕೃತವಾಡಿ ಮಾಡಿಕೊಳ್ಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭವಾಗುವ ಲಕ್ಷಣ ಕಾಣಿಸಿದೆ.

ಬಿಜೆಪಿಯ ಹಿರಿಯ ನಾಯಕ ಅಮಿತ್‌ ಶಾ (Amit shah) ಅವರ ದಿಲ್ಲಿಯ ನಿವಾಸದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರ ಸಮ್ಮುಖದಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಈ ಮೈತ್ರಿಗೆ ಅಧಿಕೃತವಾಗಿ ಒಪ್ಪಿಗೆ ನೀಡಿದ್ದಾರೆ. ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇದನ್ನು ಘೋಷಣೆ ಮಾಡಿದ್ದು ಇನ್ನು ಜೆಡಿಎಸ್‌ ಪಕ್ಷವು ಎನ್‌ಡಿಎ ಕೂಟದ ಮಿತ್ರ ಪಕ್ಷವಾಗಿರಲಿದೆ (JDS will be part of NDA) ಎಂದು ಪ್ರಕಟಿಸಿದ್ದಾರೆ.

ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಕೇಳಿಬರುತ್ತಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿಯ ಊಹಾಪೋಹ ಮತ್ತು ಚರ್ಚೆಗಳಿಗೆ ತೆರೆ ಬಿದ್ದಂತಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ (Parliament Election 2024) ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಜತೆಯಾಗಿ ಸೆಣಸಲು ವೇದಿಕೆ ಸಜ್ಜಾದಂತಾಗಿದೆ.

ಮೈತ್ರಿ ಮಾತುಕತೆಗಾಗಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಗುರುವಾರವೇ ದಿಲ್ಲಿಗೆ ತೆರಳಿದ್ದರು. ಗುರುವಾರ ಸಂಜೆ ಮಾಜಿ ಪ್ರಧಾನಿ ಎಚ್.‌ಡಿ ದೇವೇಗೌಡರ ನಿವಾಸದಲ್ಲಿ ಜೆಡಿಎಸ್‌ನ ಆಂತರಿಕ ಸಭೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ಮೈತ್ರಿಯ ಷರತ್ತಿನ ಬಗ್ಗೆ ಚರ್ಚೆಗಳು ನಡೆದಿದ್ದವು. ಬಳಿಕ ರಾತ್ರಿ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಬಿಜೆಪಿಯ ರಾಯಭಾರಿಯಾಗಿ ದೇವೇಗೌಡರ ಮನೆಗೆ ಬಂದು ಚರ್ಚೆ ನಡೆಸಿದ್ದರು. ಇದಾದ ಬಳಿಕ ಶುಕ್ರವಾರ ಮಧ್ಯಾಹ್ನ ಎಚ್‌.ಡಿ. ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಬಿಜೆಪಿ ನಾಯಕ ಅಮಿತ್‌ ಶಾ ಅವರ ನಿವಾಸಕ್ಕೆ ತೆರಳಿ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಮೈತ್ರಿಯ ಅಂತಿಮ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಮೈತ್ರಿಯನ್ನು ಘೋಷಣೆ ಮಾಡಲಾಗಿದೆ.

BJP-JDS alliance

ಜಾತ್ಯತೀತ ಜನತಾದಳವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ಬಯಸಿರುವುದು ನಮಗೆ ಖುಷಿ ತಂದಿದೆ. ನಾವು ಅವರನ್ನು ಅತ್ಯಂತ ಪ್ರೀತಿಯಿಂದ ಎನ್‌ಡಿಎ ಮಿತ್ರಕೂಟಕ್ಕೆ ಸ್ವಾಗತಿಸುತ್ತೇವೆ ಎಂದು ಜೆ.ಪಿ. ನಡ್ಡಾ ಅವರು ಟ್ವೀಟ್‌ ಮಾಡುವುದರೊಂದಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಧಿಕೃತಗೊಂಡಂತಾಗಿದೆ.

ಮೈತ್ರಿಯನ್ನು ಘೋಷಣೆ ಮಾಡಿದ ಕುಮಾರಸ್ವಾಮಿ

ಈ ನಡುವೆ, ಎಚ್‌.ಡಿ ಕುಮಾರಸ್ವಾಮಿ ಅವರು ಕೂಡಾ ಬಿಜೆಪಿ ಜತೆಗಿನ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಆದರೆ, ಮೈತ್ರಿಯ ಒಟ್ಟಾರೆ ಚೌಕಟ್ಟು, ಸೀಟು ಹಂಚಿಕೆ, ಇತರ ರಾಜಕೀಯ ಸ್ಥಾನಮಾನಗಳ ಬಗ್ಗೆ ಇನ್ನಷ್ಟೇ ಅಂತಿಮ ರೂಪ ಸಿಗಬೇಕಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಹಲವು ತಿಂಗಳ ಕುತೂಹಲಕ್ಕೆ ತೆರೆ, ಕಾಂಗ್ರೆಸ್‌ಗೆ ಠಕ್ಕರ್‌ ಕೊಡಲು ಮೈತ್ರಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವುದು ಬಿಜೆಪಿ ಮತ್ತು ಜಾತ್ಯತೀತ ಜನತಾ ದಳದಲ್ಲಿ ತಲ್ಲಣ ಉಂಟು ಮಾಡಿತ್ತು. ಆಗಿನಿಂದಲೇ ಬಿಜೆಪಿ ಹಾಗೂ ಜೆಡಿಎಸ್‌ಗಳು ಒಂದಾಗಿ ಕಾಂಗ್ರೆಸ್‌ನ್ನು ಎದುರಿಸುವ ಚರ್ಚೆಗಳು ಆರಂಭಗೊಂಡಿದ್ದವು.

ಒಂದು ಹಂತದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎನ್ನುವಷ್ಟು ಪ್ರಖರವಾಗಿ ಮಿಂಚಿದ್ದರು. ಇನ್ನೂ ಸದನ ನಾಯಕನ ಆಯ್ಕೆಯೇ ಆಗಿಲ್ಲದೆ ಇರುವುದರಿಂದ ಬಿಜೆಪಿಯೂ ಅವರನ್ನೇ ಮುಂದಾಳುವಾಗಿ ಮುಂಚೂಣಿಯಲ್ಲಿ ನಿಲ್ಲಿಸಿತ್ತು. ಜಂಟಿ ಪತ್ರಿಕಾಗೋಷ್ಠಿಯ ಮೂಲಕವೂ ಗಮನ ಸೆಳೆದಿತ್ತು.

BJP-JDS alliance final

ಬಿ.ಎಸ್‌. ಯಡಿಯೂರಪ್ಪ ಘೋಷಣೆಯ ಮೂಲಕ ಮರುಚಾಲನೆ

ವಿಧಾನಸಭಾ ಅಧಿವೇಶನದಲ್ಲಿ ಹುಟ್ಟಿಕೊಂಡ ಮೈತ್ರಿಯ ಚರ್ಚೆ ಅದರ ಮುಕ್ತಾಯದ ಬಳಿಕ ತಣ್ಣಗಾಗಿತ್ತು. ಕೆಲವು ವಾರದ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್‌. ಯಡಿಯೂರಪ್ಪ ಅವರು ಸದ್ಯವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಘೋಷಣೆಯಾಗಲಿದೆ ಎಂದು ಪ್ರಕಟಿಸಿದರು. ಬಿಎಸ್‌ವೈ ಅವರ ಈ ಪ್ರಕಟಣೆಯನ್ನು ಬಿಜೆಪಿ ಮತ್ತು ಜೆಡಿಎಸ್‌ನ ಬಹುತೇಕ ಎಲ್ಲ ನಾಯಕರು ಸ್ವಾಗತಿಸಿದರು. ಈಗಿನ ಪರಿಸ್ಥಿತಿಯಲ್ಲಿ ಇದು ಅನಿವಾರ್ಯವಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಜೆಡಿಎಸ್‌ನಲ್ಲಿ ಕೆಲವು ನಾಯಕರು ಅದಕ್ಕೆ ಅಪಸ್ವರ ಹಾಡಿದ್ದರು. ಇದೀಗ ಜೆಡಿಎಸ್‌ ಮತ್ತು ಬಿಜೆಪಿ ನಡುವಿನ ಮೈತ್ರಿ ಅಧಿಕೃತ ಎನ್ನುವುದು ಘೋಷಣೆಯಾಗಿದೆ.

ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಅತ್ಯಂತ ಪ್ರಮುಖ ಮೈತ್ರಿ

ಜೆಡಿಎಸ್‌ನ ಕೆಲವು ನಾಯಕರು ಕಾಂಗ್ರೆಸ್‌ನ ಅಬ್ಬರದ ವಿರುದ್ಧ ಎದ್ದು ನಿಲ್ಲಲು ಬಿಜೆಪಿ ಜತೆ ಮೈತ್ರಿ ಅಗತ್ಯ ಎಂಬುದನ್ನು ಪ್ರತಿಪಾದಿಸಿದ್ದರು. ಆದರೆ ಬಿಜೆಪಿ ಪಾಲಿಗೂ ಈ ಮೈತ್ರಿ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯದ್ದಾಗಿತ್ತು.

2019ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 25+1ನ್ನು ಗೆದ್ದುಕೊಂಡಿದ್ದ ಬಿಜೆಪಿಗೆ ಈ ಬಾರಿಯೂ ಅದನ್ನೇ ಮರುಸೃಷ್ಟಿಸಿರುವ ಅನಿವಾರ್ಯತೆ ಇದೆ. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಪರ ನಿಂತಿರುವ ಹಿನ್ನೆಲೆಯಲ್ಲಿ ಕಳೆದ ಬಾರಿ ಫಲಿತಾಂಶದ ಮರು ಸೃಷ್ಟಿ ಕಷ್ಟವಾದೀತು ಎಂಬ ನೆಲೆಯಲ್ಲಿ ಅದು ಕೂಡಾ ಜೆಡಿಎಸ್‌ನ ಮೈತ್ರಿಯನ್ನು ಬಯಸಿದೆ. ಜೆಡಿಎಸ್‌ನ ಬೆಂಬಲವಿದ್ದರೆ ಬೆಂಗಳೂರು ಸೇರಿದಂತೆ ಹಳೆಮೈಸೂರು ಪ್ರಾಂತ್ಯದಲ್ಲಿ ಗೆಲ್ಲಬಹುದು ಎನ್ನುವುದು ಬಿಜೆಪಿ ಲೆಕ್ಕಾಚಾರ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರೆ ದೇಶದಲ್ಲಿ ಹಿಂದೆ ಗೆದ್ದ ಬಹುತೇಕ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ. ಇಲ್ಲವಾದರೆ ಇಂಡಿಯಾ ಮೈತ್ರಿಕೂಟದ ಮುಂದೆ ಮಂಡಿಯೂರಬೇಕಾದೀತು ಎಂಬ ಆತಂಕವಿದೆ. ಹೀಗಾಗಿ ಕರ್ನಾಟಕದ ಬಲವನ್ನು ಗಟ್ಟಿಗೊಳಿಸುವ ಪ್ರಯತ್ನವಾಗಿ ಮೈತ್ರಿಗೆ ಮುಂದಾಗಿದೆ.

ಇದು ಎರಡನೇ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ

ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವುದು ಇದು ಮೊದಲ ಸಲವೇನೂ ಅಲ್ಲ. ಹಿಂದೆ 2006ರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಧರಂ ಸಿಂಗ್‌ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್‌ ಪಡೆದು ಬಿಜೆಪಿಯೊಂದಿಗೆ ಮೈತ್ರಿ ಸರಕಾರವನ್ನು ನಡೆಸಿತ್ತು. 20-20 ಸರ್ಕಾರದ ಮೊದಲ ಅವಧಿಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ, ಅಧಿಕಾರ ಹಸ್ತಾಂತರ ಮಾಡದೆ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದರು. ಹಾಗೆ ಮೈತ್ರಿ ಮುರಿದುಬಿದ್ದಿತ್ತು. ಇದೀಗ ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಮೈತ್ರಿ ಇದಾಗಿದ್ದು, ಚುನಾವಣಾ ಪೂರ್ವ ಮೈತ್ರಿಯ ಮೂಲಕ ಜೆಡಿಎಸ್‌ ಅಧಿಕೃತವಾಗಿ ಎನ್‌ಡಿಎ ಕೂಟವನ್ನು ಸೇರಿಕೊಳ್ಳಲಿದೆ.

ಮೈತ್ರಿಯ ಬಳಿಕ ಸವಾಲುಗಳು

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಮೈತ್ರಿಯಲ್ಲಿ ಎರಡು ಪಕ್ಷಗಳ ನಡುವೆ ಸ್ಥಾನ ಹೊಂದಾಣಿಕೆ ಅತ್ಯಂತ ಮಹತ್ವದ ಹಂತದ್ದಾಗಿರುತ್ತದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಜೆಡಿಎಸ್‌ ಐದು ಲೋಕಸಭಾ ಕ್ಷೇತ್ರ (ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ), ಎರಡು ಎಂಎಲ್‌ಸಿ ಸ್ಥಾನ, ಒಂದು ಕೇಂದ್ರ ಮಂತ್ರಿ ಸ್ಥಾನವನ್ನು ಕೇಳಿದೆ ಎನ್ನಲಾಗುತ್ತಿದೆ. ಆದರೆ, ಬಿಜೆಪಿ ಇಷ್ಟು ಸ್ಥಾನಗಳನ್ನು ಕೊಡುತ್ತದೆಯೇ ಎನ್ನುವುದು ಕಾದು ನೋಡಬೇಕಾಗಿದೆ. ಇದರ ವಿಚಾರ ಮುಂದಿನ ಚುನಾವಣೆಯ ಹಂತದಲ್ಲಿ ಅಂತಿಮವಾಗಲಿದೆ.

ಅಂತಿಮವಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮಧ್ಯಸ್ಥಿಕೆಯಲ್ಲೇ ಜೆಡಿಎಸ್‌ ಈ ಬಾರಿ ಅಧಿಕೃತವಾಗಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಂತಾಗಿದೆ. ಜಾತ್ಯತೀತ ಎಂಬ ಹೆಸರಿನೊಂದಿಗೇ ಇರುವ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ರಾಜಕೀಯದಲ್ಲಿ ಯಾರೂ ಯಾರಿಗೂ ಅಸ್ಪೃಶ್ಯವಲ್ಲ ಎನ್ನುವುದು ಮತ್ತೆ ಋಜುವಾತಾಗಿದೆ.

Continue Reading
Advertisement
Ruturaj Gaikwad
ಕ್ರಿಕೆಟ್2 mins ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ16 mins ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

Dakshin Bharat Utsav
ಕರ್ನಾಟಕ19 mins ago

Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್‌.ಕೆ. ಪಾಟೀಲ್

savings
ದೇಶ25 mins ago

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Mohammed Shami
ಕ್ರಿಕೆಟ್38 mins ago

Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

Vijayanagara DC Diwakar MS Visit and inspection of hospital in Hagaribommanahalli
ವಿಜಯನಗರ48 mins ago

Vijayanagara News: ಹಗರಿಬೊಮ್ಮನಹಳ್ಳಿಯ ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಡಿಸಿ ದಿವಾಕರ್‌ ದಿಢೀರ್‌ ಭೇಟಿ

Neegilu Kavya Abhiyan programme at gubbi
ತುಮಕೂರು52 mins ago

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

T20 wordl cup venue
ಕ್ರಿಕೆಟ್59 mins ago

T20 World Cup : 2024 ಟಿ20 ವಿಶ್ವ ಕಪ್​ ಪಂದ್ಯಗಳು ಎಲ್ಲೆಲ್ಲಿ ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ

sugar factory representatives and sugarcane growers meeting at DC office Karwar
ಉತ್ತರ ಕನ್ನಡ1 hour ago

Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Vishwa Hindu Mahasabha Ganapati Utsav Committee Honorary President Sanjiva Achar spoke at the pressmeet
ಶಿವಮೊಗ್ಗ1 hour ago

Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ6 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌