Site icon Vistara News

Rahul Gandhi: ಇಂಗ್ಲೆಂಡ್‌ನ ಕೇಂಬ್ರಿಡ್ಜ್ ಯುನಿವರ್ಸಿಟಿ ಬಿಸಿನೆಸ್ ಸ್ಕೂಲ್‌ಲ್ಲಿ ರಾಹುಲ್ ಗಾಂಧಿ ವಿಶೇಷ ಉಪನ್ಯಾಸ

Rahul Gandhi will deliver lecture at Cambridge university

ನವದೆಹಲಿ: ಮುಂದಿನ ತಿಂಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂಗ್ಲೆಂಡ್‌ಗೆ ಭೇಟಿ ನೀಡಲಿದ್ದು, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇಂಗ್ಲೆಂಡ್ ಭೇಟಿಯ ವಿಚಾರವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, ನಾನು ಕಲಿತ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದೇನೆ. ಜಿಯೋಪಾಲಿಟಿಕ್ಸ್, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ಪ್ರಜಾಪ್ರಭುತ್ವ ಕುರಿತು ಹೊಸ ಮನಸ್ಸುಗಳೊಂದಿಗೆ ಸಂವಾದ ನಡೆಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಜಡ್ಜ್ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸ ನೀಡಲಿದ್ದೇನೆ ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ಜಿಯೋಪಾಲಿಟಿಕ್ಸ್, ಅಂತಾರಾಷ್ಟ್ರೀಯ ಸಂಬಂಧಗಳು, ಬಿಗ್ ಡೇಟಾ ಮತ್ತು ಪ್ರಜಾಪ್ರಭುತ್ವ ಸೇರಿದಂತೆ ವಿವಿಧ ವಲಯಗಳಕ್ಕೆ ಸಂಬಂಧಿಸಿದಂತೆ ಹೊಸ ಮನಸ್ಸುಗಳೊಂದಿಗೆ ಸಂವಾದ ನಡೆಸುವುದನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:Rahul Gandhi : ಸ್ಕೈಯಿಂಗ್ ಮಾಡುತ್ತಾ ಎಂಜಾಯ್ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರ ಭೇಟಿಯ ಕುರಿತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಜಡ್ಡ್ ಬಿಸಿನೆಸ್ ಸ್ಕೂಲ್ ಕೂಡ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದೆ. ಅವರು ಸಾಕಷ್ಟು ವಿಷಯಗಳ ಮೇಲೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ತನ್ನ ಟ್ವೀಟ್‌ನಲ್ಲಿ ತಿಳಿಸಿದೆ. ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಭಾರತ್ ಜೋಡೋ ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ. ದಕ್ಷಿಣ ಕನ್ಯಾಕುಮಾರಿಯಿಂದ ಉತ್ತರ ಶ್ರೀನಗರದವರೆಗೆ ಅವರ ಪಾದಯಾತ್ರೆ ಕೈಗೊಂಡ, ದೇಶವನ್ನು ಒಂದುಗೂಡಿಸುವ ಕೆಲಸವನ್ನು ಮಾಡಿದ್ದರು.

Exit mobile version