ನವದೆಹಲಿ: ಇಂಗ್ಲೆಂಡ್‌ನಲ್ಲಿ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿ(Rahul Gandhi) ಅವರು ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಹೇಳಿದ್ದಾರೆ. ಯಾರು ಈಗ ರಾಹುಲ್ ಗಾಂಧಿ ಅವರು ಕ್ಷಮೆಗೆ ಆಗ್ರಹಿಸುತ್ತಿದ್ದಾರೋ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದ್ದರ ಬಗ್ಗೆ ಉತ್ತರಿಸಬೇಕು ಎಂದು ಖರ್ಗೆ ಅವರು ಹೇಳಿದ್ದಾರೆ.
ಇಂಗ್ಲೆಂಡ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆಂದು ಆರೋಪಿಸಿರುವ ಬಿಜೆಪಿ ಹಾಗೂ ಕೆಲವು ಹಿರಿಯ ಸಚಿವರು ರಾಹುಲ್ ಗಾಂಧಿ ಅವರು ದೇಶದ ಜನರನ್ನು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಕ್ಷಮೆ ಕೇಳಬೇಕೆಂದು ಕೇಳುತ್ತಿದ್ದೀರಲ್ಲ, ಮೋದಿ ಅವರು ಐದಾರು ದೇಶಗಳಿಗೆ ಹೋಗಿ ಭಾರತದ ಜನರನ್ನು ಅವಮಾನಿಸಿದ್ದರು. ಭಾರತದಲ್ಲಿ ಹುಟ್ಟಿದ್ದಕ್ಕೆ ಪಾಪ ಎಂದು ಭಾರತವನ್ನು ಮೋದಿ ಅವಮಾನಿಸಿದ್ದರು ಎಂದು ಖರ್ಗೆ ಅವರು ಹೇಳಿದರು.
ಇದನ್ನೂ ಓದಿ: Budget Session 2023: ಕೇಂದ್ರ ಸರ್ಕಾರವು ರಾಹುಲ್ ಗಾಂಧಿಗೆ ಕ್ಷಮೆ ಕೇಳಲಿ: ಕಾಂಗ್ರೆಸ್
ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ಟಿವಿ ಚಾನೆಲ್‌ಗಳ ಮೇಲೆ ಒತ್ತಡವನ್ನು ಹಾಕಲಾಗುತ್ತಿದೆ. ಸತ್ಯವನ್ನು ಹೇಳುವ ಜನರನ್ನು ಜೈಲಿಗೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವನ್ನು ಕೊನೆಗಾಣಿಸುವ ಪ್ರಕ್ರಿಯೆ ಅಲ್ಲದಿದ್ದರೆ ಮತ್ತೇನು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನಿಸಿದರು. ಹಾಗಾಗಿ, ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.