Site icon Vistara News

Rain News: ಗುಜರಾತ್‌, ಮಹಾರಾಷ್ಟ್ರ ಸೇರಿ ಹಲವೆಡೆ ವರುಣನ ಆರ್ಭಟ, ಮತ್ತೆ ಯಮುನೆ ಭೀತಿ; ರೆಡ್ ಅಲರ್ಟ್‌

Gujarat Rain Effect

Rain News: Red Alert in Gujarat, Cars Swept Away in Junagadh; Yamuna Crosses Danger Mark in Delhi

ಗಾಂಧಿನಗರ/ನವದೆಹಲಿ: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ ಆರ್ಭಟ ಶುರು (Rain News) ಮಾಡಿದ್ದಾನೆ. ಅದರಲ್ಲೂ, ಗುಜರಾತ್‌, ಮಹಾರಾಷ್ಟ್ರ, ದೆಹಲಿ ಹಾಗೂ ಉತ್ತರಾಖಂಡದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಗುಜರಾತ್‌ನಲ್ಲಂತೂ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಗುಜರಾತ್‌ನ ಜುನಾಗಢದಲ್ಲಿ ಕಾರುಗಳು ಕೊಚ್ಚಿಹೋಗಿದ್ದು, ಪ್ರವಾಹದಲ್ಲಿ ಸಿಲುಕಿದ ಸಾವಿರಾರು ಜನರನ್ನು ರಕ್ಷಿಸಲಾಗುತ್ತಿದೆ. ಹಾಗಾಗಿ, ಗುಜರಾತ್‌ನಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಗುಜರಾತ್‌ನಲ್ಲಿ ಕೊಚ್ಚಿಹೋದ ಕಾರುಗಳು

ಉತ್ತರಾಖಂಡದಲ್ಲಿ ಮೇಘಸ್ಫೋಟ

ಕೆಲ ದಿನಗಳ ಹಿಂದಷ್ಟೇ ಭಾರಿ ಮಳೆಗೆ ಸಂಕಷ್ಟ ಅನುಭವಿಸಿ, ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದ ಉತ್ತರಾಖಂಡದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದೆ. ಉತ್ತರಕಾಶಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತವಾದರೆ, ಮೇಘಸ್ಫೋಟ ಉಂಟಾಗಿ ಮನೆಗಳು ಉರುಳಿವೆ. ಆದರೆ, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನರ ರಕ್ಷಣೆಗೆ ಹರಸಾಹಸ

ಮಧ್ಯಪ್ರದೇಶದಲ್ಲಿ ಸಿಡಿಲಿಗೆ ಇಬ್ಬರು ಬಲಿ

ಮಧ್ಯಪ್ರದೇಶದಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ಛತ್ತರ್‌ಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಹಾಗೆಯೇ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹೈದರಾಬಾದ್‌ನಲ್ಲೂ ಭಾರಿ ಮಳೆಯಾಗಿದೆ. ಮುಂಬೈನಲ್ಲಿ ಕೂಡ ಭಾನುವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಉಕ್ಕಿ ಹರಿಯುತ್ತಿರುವ ಯಮುನೆ

ಇದನ್ನೂ ಓದಿ: Rain news : ಕೊಡಗಿನಲ್ಲಿ ಮುಂದುವರಿದ ಮಳೆ, ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ

ದೆಹಲಿ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲೂ ಭಾರಿ ಮಳೆಯಾಗುತ್ತಿದ್ದು, ಮತ್ತೆ ಯಮುನಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪ್ರವಾಹದಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ಜನರಿಗೆ ಈಗ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

Exit mobile version